Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 14:28 - ಕನ್ನಡ ಸತ್ಯವೇದವು C.L. Bible (BSI)

28 ನಾನು ಹೊರಟುಹೋಗುತ್ತೇನೆಂದೂ ಮತ್ತೆ ನಿಮ್ಮ ಬಳಿಗೆ ಬರುತ್ತೇನೆಂದೂ ನಾನು ಹೇಳಿದ್ದನ್ನು ನೀವು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನಾನು ಪಿತನ ಬಳಿಗೆ ಹೋಗುತ್ತಿರುವುದನ್ನು ಕುರಿತು ಹಿಗ್ಗುತ್ತಿದ್ದಿರಿ. ಏಕೆಂದರೆ ಪಿತ ನನಗಿಂತಲೂ ಶ್ರೇಷ್ಠರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನಾನು ಹೋಗಿ ಪುನಃ ನಿಮ್ಮ ಬಳಿಗೆ ಬರುತ್ತೇನೆ ಎಂದು ನಿಮಗೆ ಹೇಳಿದ್ದನ್ನು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನಾನು ತಂದೆಯ ಬಳಿಗೆ ಹೋಗುತ್ತೇನೆಂದು ಹೇಳಿದ್ದಕ್ಕೆ ಸಂತೋಷಪಡುತ್ತಿದ್ದೀರಿ, ಏಕೆಂದರೆ ತಂದೆಯು ನನಗಿಂತಲೂ ದೊಡ್ಡವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನಾನು ಹೋಗಿ ತಿರಿಗಿ ನಿಮ್ಮ ಬಳಿಗೆ ಬರುತ್ತೇನೆಂದು ನಿಮಗೆ ಹೇಳಿದ್ದನ್ನು ಕೇಳಿದಿರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನಾನು ತಂದೆಯ ಬಳಿಗೆ ಹೋಗುವ ವಿಷಯದಲ್ಲಿ ಸಂತೋಷಪಡುತ್ತಿದ್ದಿರಿ; ಯಾಕಂದರೆ ತಂದೆಯು ನನಗಿಂತ ದೊಡ್ಡವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ‘ನಾನು ಹೊರಟುಹೋಗುತ್ತೇನೆ. ಆದರೆ ನಿಮ್ಮ ಬಳಿಗೆ ಹಿಂತಿರುಗಿ ಬರುತ್ತೇನೆ’ ಎಂದು ನಾನು ನಿಮಗೆ ಹೇಳಿದ್ದನ್ನು ನೀವು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ, ನಾನು ತಂದೆಯ ಬಳಿಗೆ ಮರಳಿಹೋಗುವುದರ ಬಗ್ಗೆ ಸಂತೋಷಪಡುತ್ತಿದ್ದಿರಿ. ಏಕೆಂದರೆ ತಂದೆಯು ನನಗಿಂತಲೂ ದೊಡ್ಡವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 “ ‘ನಾನು ಹೋಗಿ ತಿರುಗಿ ನಿಮ್ಮ ಬಳಿಗೆ ಬರುತ್ತೇನೆ,’ ಎಂದು ನಾನು ನಿಮಗೆ ಹೇಳಿದ್ದನ್ನು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ತಂದೆಯ ಬಳಿಗೆ ಹೋಗುತ್ತೇನೆಂದು ಹೇಳಿದ್ದಕ್ಕೆ ಸಂತೋಷ ಪಡುತ್ತಿದ್ದಿರಿ. ಏಕೆಂದರೆ ತಂದೆಯು ನನಗಿಂತಲೂ ದೊಡ್ಡವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಮಿಯಾ ತುಮ್ಕಾ ಸೊಡುನ್ ಜಾತಾ ಮನುನ್ ಸಾಂಗಲ್ಲೆ ತುಮಿ ಆಯಿಕ್ಲ್ಯಾಶಿ, ಖರೆ ಮಿಯಾ ಅನಿ ಪರ್ತುನ್ ಯೆತಾ. ತುಮಿ ಮಾಜೆ ಪ್ರೆಮ್ ಕರ್‍ತ್ಯಾಶಿ ಹೊಲ್ಯಾರ್ ಮಿಯಾ ಮಾಜ್ಯಾ ಬಾಬಾಕ್ಡೆ ಜಾವ್ಕ್ ಲಾಗ್ಲಾ ಮನ್ತಾನಾ ತುಮ್ಕಾ ಕುಶಿ ಹೊವ್ಕ್ ಪಾಜೆ, ಕಶ್ಯಾಕ್ ಮಟ್ಲ್ಯಾರ್ ತೊ ಮಾಜ್ಯಾನ್ಕಿ ಮೊಟೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 14:28
29 ತಿಳಿವುಗಳ ಹೋಲಿಕೆ  

ನಾನು ನಿಮ್ಮನ್ನು ಅನಾಥರನ್ನಾಗಿ ಬಿಟ್ಟುಹೋಗುವುದಿಲ್ಲ. ನಿಮ್ಮ ಬಳಿಗೆ ಪುನಃ ಬರುತ್ತೇನೆ.


ಯೇಸು ಪುನಃ, “ನಿಮಗೆ ಶಾಂತಿ, ಪಿತನು ನನ್ನನ್ನು ಕಳುಹಿಸಿದಂತೆಯೇ ನಾನೂ ನಿಮ್ಮನ್ನು ಕಳುಹಿಸುತ್ತೇನೆ,” ಎಂದರು.


ಯೇಸು ಆಕೆಗೆ, “ನನ್ನನ್ನು ಹಿಡಿದುಕೊಂಡಿರಬೇಡ, ನಾನು ಇನ್ನೂ ಪಿತನ ಬಳಿಗೆ ಏರಿಹೋಗಿಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ ನನ್ನ ಪಿತನೂ ನಿಮ್ಮ ಪಿತನೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನಲ್ಲಿಗೆ ನಾನು ಏರಿಹೋಗುತ್ತೇನೆಂದು ತಿಳಿಸು,” ಎಂದು ಹೇಳಿದರು.


ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ಧಣಿಗಿಂತ ದಾಸನು ದೊಡ್ಡವನಲ್ಲ. ಅಂತೆಯೇ ಕಳುಹಿಸಲಾದವನು ಕಳುಹಿಸುವವನಿಗಿಂತ ಶ್ರೇಷ್ಠನಲ್ಲ.


ಕ್ರಿಸ್ತಯೇಸುವನ್ನು ನೀವು ನೋಡದಿದ್ದರೂ ಅವರನ್ನು ಪ್ರೀತಿಸುತ್ತೀರಿ. ನೀವೀಗ ಕಣ್ಣಾರೆ ಕಾಣದಿದ್ದರೂ ಅವರನ್ನು ವಿಶ್ವಾಸಿಸುತ್ತೀರಿ.


ಒಂದು ವಿಷಯ ನಿಮಗೆ ತಿಳಿದಿರಲಿ. ಪ್ರತಿಯೊಬ್ಬ ವ್ಯಕ್ತಿಗೂ ಕ್ರಿಸ್ತಯೇಸುವೇ ಶಿರಸ್ಸು. ಪ್ರತಿಯೊಬ್ಬ ಸ್ತ್ರೀಗೂ ಪುರುಷನೇ ಶಿರಸ್ಸು. ಕ್ರಿಸ್ತೇಸುವಿಗೆ ದೇವರೇ ಶಿರಸ್ಸು.


ವಾಸ್ತವವಾಗಿ ಹೇಳುವುದಾದರೆ, ನಾನು ಹೋಗುವುದು ನಿಮ್ಮ ಹಿತಕ್ಕಾಗಿಯೇ. ನಾನು ಹೋಗದಿದ್ದರೆ, ಪೋಷಕ ನಿಮ್ಮಲ್ಲಿಗೆ ಬರುವುದಿಲ್ಲ. ನಾನು ಹೋದರೆ ಮಾತ್ರ ಅವರನ್ನು ನಿಮ್ಮಲ್ಲಿಗೆ ಕಳುಹಿಸಿಕೊಡಬಲ್ಲೆ.


ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನಲ್ಲಿವಿಶ್ವಾಸವುಳ್ಳವನು ನಾನು ಸಾಧಿಸುವ ಕಾರ್ಯಗಳನ್ನು ಆತನೂ ಸಾಧಿಸುವನು. ಅಷ್ಟೇ ಏಕೆ, ಅವುಗಳಿಗಿಂತಲೂ ಮಹತ್ತಾದುವುಗಳನ್ನು ಸಾಧಿಸುವನು. ಏಕೆಂದರೆ ನಾನು ಪಿತನ ಬಳಿಗೆ ಹೋಗುತ್ತೇನೆ.


ನಾನು ಹಾಗೆ ಮಾಡಿದ್ದೇ ಆದರೆ, ನನ್ನನ್ನು ನಂಬದೆಹೋದರೂ ನನ್ನ ಕಾರ್ಯಗಳನ್ನಾದರೂ ನಂಬಿರಿ. ಆಗ ಪಿತನು ನನ್ನಲ್ಲಿಯೂ ನಾನು ಪಿತನಲ್ಲಿಯೂ ಇರುವುದು ನಿಮಗೆ ಅರಿವಾಗುವುದು ಹಾಗೂ ಮನದಟ್ಟಾಗುವುದು,” ಎಂದರು.


ಯೇಸು ಸಬ್ಬತ್ತಿನ ನಿಯಮವನ್ನು ಮುರಿದುದೇ ಅಲ್ಲದೆ, ದೇವರನ್ನು ತನ್ನ ಪಿತನೆಂದು ಹೇಳಿಕೊಳ್ಳುತ್ತಾ, ತನ್ನನ್ನೇ ದೇವರಿಗೆ ಸರಿಸಮ ಮಾಡಿಕೊಳ್ಳುತ್ತಿದ್ದಾನೆಂದು ಯೆಹೂದ್ಯರು ಅವರನ್ನು ಕೊಲ್ಲಲು ಮತ್ತಷ್ಟು ಹವಣಿಸಿದರು.


“ಇದಿಗೋ, ನನ್ನ ದಾಸನು, ನನ್ನಿಂದಾಯ್ಕೆಯಾದವನು, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ನೆಲೆಗೊಳಿಸುವೆ ಇವನಲಿ ಎನ್ನಾತ್ಮವನು; ಸಾರುವನಿವನು ಜಗದಲಿ ನನ್ನ ಧರ್ಮವನು.


ತೃಪ್ತನಾಗುವನಾತ ಕಂಡು ತನ್ನ ಪ್ರಾಣಯಾತನೆಯ ಫಲವನು. ಸಜ್ಜನನಾದ ಆ ನನ್ನ ದಾಸ ತರುವನು ಸನ್ಮಾರ್ಗಕೆ ಬಹುಜನರನು. ತಾನೇ ಹೊತ್ತುಕೊಳ್ಳುವನು ಅವರ ಅಪರಾಧಗಳ ಹೊರೆಯನು.


ಅದು ಹೀಗೆಂದು ನುಡಿಯಿತು: “ನೀನು ಕಾಣುತ್ತಿರುವುದನ್ನು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ ಮತ್ತು ಲವೊದಿಕೀಯ ಎಂಬ ಪಟ್ಟಣಗಳಲ್ಲಿರುವ ಏಳು ಸಭೆಗಳಿಗೆ ಕಳುಹಿಸು.”


ಇಗೋ, ನನ್ನ ದಾಸನು ! ನನ್ನ ಆಧಾರ ಪಡೆದವನು ನನ್ನಿಂದ ಆಯ್ಕೆಯಾದವನು ನನಗೆ ಪರಮ ಪ್ರಿಯನು. ನೆಲೆಗೊಳಿಸಿರುವೆ ಇವನಲ್ಲಿ ನನ್ನ ಆತ್ಮವನು ಅನ್ಯರಾಷ್ಟ್ರಗಳಿಗೆ ಸಾರುವನಿವನು ಸದ್ಧರ್ಮವನು.


ಹೇ ದೇವಾ, ಹೇ ಪ್ರಭು, ನೀನೇರಿದೆ ಉನ್ನತ ಶಿಖರಕೆ I ಕರೆದೊಯ್ದೆ ಖೈದಿಗಳನೇಕರನು ನಿನ್ನ ನಿವಾಸಕೆ I ಸರಳರಿಂದಲೂ ದುರುಳರಿಂದಲೂ ಪಡೆದೆ ಕಪ್ಪಕಾಣಿಕೆ I ದೇವರಾದ ಪ್ರಭುವೇ, ಅಲ್ಲೇ ನೀ ವಾಸಿಸುವೆ II


ದೇವಾ, ಹೇರಳವಾಗಿ ನೀ ಸುರಿಮಳೆಗರೆದೆ I ಬತ್ತಿದ ನಿನ್ನ ಸೊತ್ತನ್ನು ಸಮೃದ್ಧಿಗೊಳಿಸಿದೆ II


ಆಗ ಯೇಸು, “ಇನ್ನು ತುಸುಕಾಲ ಮಾತ್ರ ನಾನು ನಿಮ್ಮೊಡನೆ ಇರುತ್ತೇನೆ. ಅನಂತರ ನನ್ನನ್ನು ಕಳುಹಿಸಿದಾತನ ಬಳಿಗೆ ಹೊರಟುಹೋಗುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು