Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 14:30 - ಕನ್ನಡ ಸತ್ಯವೇದವು C.L. Bible (BSI)

30 ಇಹದ ಲೋಕಾಧಿಪತಿ ಬರುವ ಸಮಯವಾಯಿತು. ಇನ್ನು ಬಹಳ ಹೊತ್ತು ನಾನು ನಿಮ್ಮೊಡನೆ ಮಾತನಾಡಲು ಕಾಲಾವಕಾಶವಿಲ್ಲ. ನನ್ನ ಮೇಲೆ ಅವನಿಗೆ ಯಾವ ಅಧಿಕಾರವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಇನ್ನು ಮೇಲೆ ನಾನು ನಿಮ್ಮ ಜೊತೆ ಹೆಚ್ಚು ವಿಷಯಗಳನ್ನು ಮಾತನಾಡುವುದಿಲ್ಲ. ಏಕೆಂದರೆ ಇಹಲೋಕಾಧಿಪತಿಯು ಬರಲಿದ್ದಾನೆ. ನನ್ನ ಮೇಲೆ ಅವನಿಗೆ ಯಾವ ಅಧಿಕಾರವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಇನ್ನು ನಾನು ನಿಮ್ಮ ಸಂಗಡ ಬಹಳ ಮಾತುಗಳನ್ನಾಡುವದಿಲ್ಲ, ಯಾಕಂದರೆ ಇಹಲೋಕಾಧಿಪತಿಯು ಬರುತ್ತಾನೆ. ಅವನಿಗೆ ಸಂಬಂಧಪಟ್ಟದ್ದು ಯಾವದೊಂದೂ ನನ್ನಲ್ಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 “ನಾನು ನಿಮ್ಮೊಂದಿಗೆ ಇನ್ನು ಬಹಳ ಹೊತ್ತು ಮಾತಾಡುವುದಿಲ್ಲ. ಈ ಲೋಕದ ಅಧಿಪತಿಯು (ಸೈತಾನನು) ಬರುತ್ತಿದ್ದಾನೆ. ಅವನಿಗೆ ನನ್ನ ಮೇಲೆ ಯಾವ ಅಧಿಕಾರವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಇನ್ನು ಮೇಲೆ ನಾನು ನಿಮ್ಮೊಂದಿಗೆ ಹೆಚ್ಚು ವಿಷಯಗಳನ್ನು ಮಾತನಾಡುವುದಿಲ್ಲ. ಏಕೆಂದರೆ ಇಹಲೋಕದ ಅಧಿಪತಿಯು ಬರಲಿದ್ದಾನೆ. ನನ್ನಲ್ಲಿ ಅವನಿಗೆ ಸೇರಿದ್ದು ಒಂದೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಲೈ ಎಳ್ ಮಿಯಾ ತುಮ್ಚ್ಯಾಕ್ಡೆ ಬೊಲಿನಾ, ಕಶ್ಯಾಕ್ ಮಟ್ಲ್ಯಾರ್ ಹ್ಯಾ ಜಗಾಚೊ ಅದಿಕಾರಿ ಯೆವ್‍ಲಾಲಾ, ಮಾಜೆ ವರ್ತಿ ತೆಕಾ ಕಸ್ಲೊಬಿ ಅದಿಕಾರ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 14:30
22 ತಿಳಿವುಗಳ ಹೋಲಿಕೆ  

ಇಡೀ ಲೋಕವು ಕೇಡಿಗನ ವಶದಲ್ಲಿ ಇದ್ದರು ಸಹ ನಾವು ದೇವರಿಗೆ ಸೇರಿದವರೆಂಬುದು ನಮಗೆ ತಿಳಿದಿದೆ.


ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರು. ಲೋಕದಲ್ಲಿರುವ ದುರಾತ್ಮಕ್ಕಿಂತಲೂ ನಿಮ್ಮಲ್ಲಿರುವ ಆತ್ಮವು ಶ್ರೇಷ್ಠವಾದುದು. ಆದ್ದರಿಂದಲೇ ಆ ಕಪಟ ಪ್ರವಾದಿಗಳನ್ನು ಜಯಿಸಿದ್ದೀರಿ.


ಸಮಸ್ತ ಜಗತ್ತನ್ನೂ ವಂಚಿಸುತ್ತಿದ್ದ ಆ ಮಹಾಘಟಸರ್ಪವನ್ನು ಭೂಮಿಗೆ ತಳ್ಳಲಾಯಿತು. ಈ ಪುರಾತನ ಸರ್ಪಕ್ಕೆ ‘ಪಿಶಾಚಿ’ ಎಂತಲೂ ‘ಸೈತಾನ’ ಎಂತಲೂ ಹೆಸರು. ಅದರ ದೂತರನ್ನು ಅದರೊಡನೆ ತಳ್ಳಲಾಯಿತು.


ಈಗ ಈ ಲೋಕವು ನ್ಯಾಯತೀರ್ಪಿಗೆ ಒಳಗಾಗುವುದು. ಇದೀಗಲೇ ಈ ಲೋಕಾಧಿಪತಿಯನ್ನು ಹೊರದೂಡಲಾಗುವುದು.


ನಮ್ಮ ಹೋರಾಟ ಕೇವಲ ನರಮಾನವರೊಂದಿಗಲ್ಲ, ದಿಗಂತದಲ್ಲಿರುವ ಅಧಿಕಾರಿಗಳ ಹಾಗೂ ಆಧಿಪತ್ಯಗಳ ವಿರುದ್ಧ; ಪ್ರಸ್ತುತ ಅಂಧಕಾರಲೋಕಾಧಿಪತಿಗಳ ಹಾಗೂ ಅಶರೀರ ದುಷ್ಟಗಣಗಳ ವಿರುದ್ಧ.


ಅವರು ಯಾವ ಪಾಪವನ್ನೂ ಮಾಡಲಿಲ್ಲ. ಅವರ ಬಾಯಿಂದ ಅಬದ್ಧವಾದ ಮಾತೊಂದೂ ಕೇಳಿಬರಲಿಲ್ಲ.


ಆಗ ನೀವು ಲೋಕದ ರೀತಿನೀತಿಗಳನ್ನು ಅನುಸರಿಸಿ ಬಾಳಿದಿರಿ. ವಾಯುಮಂಡಲದಲ್ಲಿನ ಅಶರೀರ ಶಕ್ತಿಗಳ ಅಧಿಪತಿಗೆ ಅಧೀನರಾಗಿದ್ದಿರಿ. ದುಷ್ಕರ್ಮಿಗಳನ್ನು ಪ್ರಚೋದಿಸುತ್ತಲಿರುವ ದುರಾತ್ಮನಿಗೆ ವಿಧೇಯರಾಗಿದ್ದಿರಿ.


ಇವರು ವಿಶ್ವಾಸಿಸುವುದಿಲ್ಲ. ಏಕೆಂದರೆ, ಪೃಥ್ವಿಯ ಮಿಥ್ಯ ದೈವವು ಇವರ ಮನಸ್ಸನ್ನು ಮಂಕಾಗಿಸಿದೆ; ದೇವರ ಪ್ರತಿರೂಪವಾಗಿರುವ ಕ್ರಿಸ್ತಯೇಸುವಿನ ಮಹಿಮೆಯನ್ನು ಸಾರುವ ಶುಭಸಂದೇಶದ ಬೆಳಕನ್ನು ಕಾಣದಂತೆ ಇವರನ್ನು ಕುರುಡಾಗಿಸಿದೆ.


ಈ ಪ್ರಧಾನಯಾಜಕ, ನಮ್ಮ ದೌರ್ಬಲ್ಯಗಳನ್ನು ಕಂಡು ಅನುಕಂಪ ತೋರದೆ ಇರುವವರಲ್ಲ. ಅವರು, ನಮ್ಮಂತೆಯೇ ಇದ್ದುಕೊಂಡು ಎಲ್ಲಾ ವಿಷಯಗಳಲ್ಲೂ ಶೋಧನೆ ಸಂಕಟಗಳನ್ನು ಅನುಭವಿಸಿದರು. ಆದರೆ ಪಾಪವನ್ನು ಮಾತ್ರ ಮಾಡಲಿಲ್ಲ.


ನಾನು ಪ್ರತಿದಿನವೂ ಮಹಾದೇವಾಲಯದಲ್ಲಿ ನಿಮ್ಮ ನಡುವೆಯೇ ಇದ್ದೆ. ಆಗ ನೀವು ನನ್ನ ಮೇಲೆ ಕೈಮಾಡಲಿಲ್ಲ; ಆದರೆ ಇದು ನಿಮ್ಮ ಕಾಲ; ಅಂಧಕಾರ ದೊರೆತನ ಮಾಡುವ ಕರಾಳಕಾಲ,” ಎಂದರು.


ದೇವರು ನಮ್ಮನ್ನು ಅಂಧಕಾರದ ಆಡಳಿತದಿಂದ ಬಿಡುಗಡೆಮಾಡಿ ತಮ್ಮ ಪುತ್ರನ ಸಾಮ್ರಾಜ್ಯಕ್ಕೆ ಸುರಕ್ಷಿತವಾಗಿ ತಂದಿದ್ದಾರೆ.


ನಮಗೆ ಬೇಕಾಗಿದ್ದ ಪ್ರಧಾನ ಯಾಜಕರು ಯೇಸುವೇ. ಇವರು ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರು, ಗಗನಮಂಡಲಗಳಿಗಿಂತಲೂ ಉನ್ನತದಲ್ಲಿರುವವರು.


ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸತ್ಸಂಬಂಧವನ್ನು ಪಡೆಯಲೆಂದೇ ಹೀಗೆ ಮಾಡಿದರು.


ತಮ್ಮ ಮರಣದ ನಂತರ ಅವರು ನಲವತ್ತು ದಿನಗಳವರೆಗೆ ಆ ಪ್ರೇಷಿತರಿಗೆ ಪ್ರತ್ಯಕ್ಷರಾದರು. ತಾವು ಜೀವಂತವಾಗಿರುವುದನ್ನು ವಿವಿಧ ರೀತಿಯಲ್ಲಿ ಸ್ಪಷ್ಟಪಡಿಸಿದರು. ದೇವರ ಸಾಮ್ರಾಜ್ಯವನ್ನು ಕುರಿತು ಅವರಿಗೆ ಬೋಧಿಸಿದರು.


ದೂತನು ಪ್ರತ್ಯುತ್ತರವಾಗಿ, “ಪವಿತ್ರಾತ್ಮ ನಿನ್ನ ಮೇಲೆ ಬರುವರು; ಪರಾತ್ಪರ ದೇವರ ಶಕ್ತಿ ನಿನ್ನನ್ನು ಆವರಿಸುವುದು; ಈ ಕಾರಣದಿಂದ, ನಿನ್ನಲ್ಲಿ ಹುಟ್ಟುವ ಆ ಪವಿತ್ರ ಶಿಶು ‘ದೇವರ ಪುತ್ರ’ ಎನಿಸಿಕೊಳ್ಳುವನು.


ಬದಲಿಗೆ, ಯಾವ ನ್ಯೂನತೆಯೂ ಇಲ್ಲದ, ಯಾವ ಕಳಂಕವೂ ಇಲ್ಲದ ಬಲಿಯ ಕುರಿಮರಿಯಂಥ ಕ್ರಿಸ್ತಯೇಸುವಿನ ಅಮೂಲ್ಯ ರಕ್ತವೇ ಆ ಬೆಲೆ.


ನಮಗೆ ತಿಳಿದಿರುವಂತೆ ದೇವರಿಂದ ಜನಿಸಿದವನು ಪಾಪಜೀವಿಯಾಗಿರುವುದಿಲ್ಲ. ಏಕೆಂದರೆ, ದೇವರ ಪುತ್ರನ ರಕ್ಷಣೆ ಅವನಿಗಿದೆ. ಕೇಡಿಗನ ಹಿಡಿತಕ್ಕೆ ಅವನು ಸಿಗನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು