Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 14:5 - ಕನ್ನಡ ಸತ್ಯವೇದವು C.L. Bible (BSI)

5 ಆಗ ತೋಮನು, “ಪ್ರಭುವೇ, ನೀವು ಎಲ್ಲಿಗೆ ಹೋಗುತ್ತೀರೆಂದು ನಮಗೆ ತಿಳಿಯದು; ಅಂದಮೇಲೆ ಅಲ್ಲಿಗೆ ಹೋಗುವ ಮಾರ್ಗವು ಹೇಗೆ ತಿಳಿದೀತು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ತೋಮನು ಆತನಿಗೆ, “ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ ಎಂಬುದೇ ನಮಗೆ ತಿಳಿಯದು, ಮತ್ತೆ ಮಾರ್ಗವು ಹೇಗೆ ತಿಳಿದೀತು?” ಎಂದು ಕೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ತೋಮನು ಆತನನ್ನು - ಸ್ವಾಮೀ, ನೀನು ಎಲ್ಲಿಗೆ ಹೋಗುತ್ತೀಯೋ ನಮಗೆ ತಿಳಿಯದು; ಮಾರ್ಗವು ಹೇಗೆ ತಿಳಿದೀತು ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ತೋಮನು ಯೇಸುವಿಗೆ, “ಪ್ರಭುವೇ, ನೀನು ಹೋಗುತ್ತಿರುವುದು ಎಲ್ಲಿಗೆಂಬುದೇ ನಮಗೆ ಗೊತ್ತಿಲ್ಲ. ಹೀಗಿರಲು, ಆ ದಾರಿಯನ್ನು ನಾವು ಹೇಗೆ ತಿಳಿದುಕೊಳ್ಳಲಾದೀತು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ತೋಮನು ಯೇಸುವಿಗೆ, “ಸ್ವಾಮೀ, ನೀವು ಎಲ್ಲಿಗೆ ಹೋಗುತ್ತೀರೋ ನಮಗೆ ತಿಳಿಯದು. ಆದ್ದರಿಂದ ನಮಗೆ ಮಾರ್ಗವು ಹೇಗೆ ತಿಳಿದೀತು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತನ್ನಾ ಥೊಮಸಾನ್ ತೆಕಾ “ಧನಿಯಾ ತಿಯಾ ಖೈ ಜಾವ್ಲೆ ಮನುನ್ ಅಮ್ಕಾ ಗೊತ್ತ್ ನಾ? ತಸೆ ಹೊಲ್ಯಾರ್ ಅಮ್ಕಾ ಥೈ ಜಾತಲಿ ವಾಟ್ ಕಶಿ ಕಳ್ನಾರ್?” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 14:5
10 ತಿಳಿವುಗಳ ಹೋಲಿಕೆ  

ಆಗ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ, “ನಾವು ಕೂಡ ಪ್ರಭುವಿನೊಡನೆ ಹೋಗಿ ಸಾಯೋಣ,” ಎಂದು ಹೇಳಿದನು.


ಇದನ್ನು ಕೇಳಿ ಯೇಸು, “ಅಯ್ಯೋ, ವಿಶ್ವಾಸವಿಲ್ಲದ ಪೀಳಿಗೆಯೇ, ಇನ್ನೆಷ್ಟು ಕಾಲ ನಿಮ್ಮೊಂದಿಗಿರಲಿ! ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ! ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿ,” ಎಂದರು.


ನಾನು ಕೊಡುವ ಆಜ್ಞೆ ಏನೆಂದರೆ: ನಾನು ನಿಮ್ಮನ್ನು ಪ್ರೀತಿಸಿದಂತೆಯೇ ನೀವು ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು.


ಆಗ ಯೇಸು, “ಎಂಥ ಮತಿಹೀನರು ನೀವು! ಪ್ರವಾದಿಗಳು ಹೇಳಿರುವುದೆಲ್ಲವನ್ನು ನಂಬುವುದರಲ್ಲಿ ಎಷ್ಟು ಮಂದಮತಿಗಳು ನೀವು!


ಫಿಲಿಪ್ಪ ಮತ್ತು ಬಾರ್ತೊಲೊಮಾಯ; ತೋಮ ಮತ್ತು ಸುಂಕ ವಸೂಲಿಗಾರ ಮತ್ತಾಯ; ಅಲ್ಫಾಯನ ಮಗ ಯಕೋಬ ಮತ್ತು ತದ್ದಾಯ;


ನಾನು ಹೋಗುವ ಎಡೆಗೆ ಮಾರ್ಗವು ನಿಮಗೆ ತಿಳಿದೇ ಇದೆ,” ಎಂದು ಹೇಳಿದರು.


“ನಾನು ನಿಮ್ಮ ಸಂಗಡ ಇದ್ದುದರಿಂದ ಇದನ್ನೆಲ್ಲಾ ಮೊದಲೇ ನಿಮಗೆ ತಿಳಿಸಲಿಲ್ಲ. ಈಗಲಾದರೋ ನನ್ನನ್ನು ಕಳುಹಿಸಿದಾತನಲ್ಲಿಗೆ ನಾನು ತೆರಳುತ್ತೇನೆ. ನಾನು ಹೋಗುವುದು ಎಲ್ಲಿಗೆ ಎಂದು ನೀವು ಯಾರೂ ಕೇಳುತ್ತಿಲ್ಲವಾದರೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು