Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 14:7 - ಕನ್ನಡ ಸತ್ಯವೇದವು C.L. Bible (BSI)

7 ನೀವು ನನ್ನನ್ನು ಅರಿತವರಾಗಿದ್ದರೆ ನನ್ನ ಪಿತನನ್ನು ಕೂಡ ಅರಿಯುತ್ತಿದ್ದಿರಿ. ಈಗಿನಿಂದ ಅವರನ್ನು ನೀವು ಅರಿತವರಾಗಿದ್ದೀರಿ ಹಾಗೂ ಕಂಡೂ ಇದ್ದೀರಿ,” ಎಂದು ನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನೂ ಸಹ ತಿಳಿಯುತ್ತಿದ್ದಿರಿ. ಈಗಿನಿಂದ ನೀವು ಆತನನ್ನು ತಿಳಿದಿದ್ದೀರಿ ಮತ್ತು ಆತನನ್ನು ನೋಡಿದ್ದೀರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನೀವು ನನ್ನನ್ನು ಅರಿತಿದ್ದರೆ ನನ್ನ ತಂದೆಯನ್ನೂ ಅರಿಯುತ್ತಿದ್ದಿರಿ; ಈಗಿನಿಂದ ಆತನನ್ನು ಅರಿತುಕೊಂಡಿದ್ದೀರಿ; ಆತನನ್ನು ನೋಡಿದ್ದೀರಲ್ಲಾ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀವು ನನ್ನನ್ನು ನಿಜವಾಗಿಯೂ ತಿಳಿದಿದ್ದರೆ, ನನ್ನ ತಂದೆಯನ್ನು ಸಹ ತಿಳಿದುಕೊಳ್ಳುತ್ತಿದ್ದಿರಿ. ಆದರೆ ಈಗ ನೀವು ತಂದೆಯನ್ನು ತಿಳಿದಿದ್ದೀರಿ. ನೀವು ಆತನನ್ನು ನೋಡಿದ್ದೀರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನು ಸಹ ತಿಳಿಯುತ್ತಿದ್ದೀರಿ. ಈಗಿನಿಂದ ನೀವು ತಂದೆಯನ್ನು ತಿಳಿದಿದ್ದೀರಿ ಮತ್ತು ಅವರನ್ನು ಕಂಡಿದ್ದೀರಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಎಕ್ ಎಳಾರ್ ತುಮಿ ಮಾಕಾ ವಳಕ್ತ್ಯಾಶಿ, ಅನಿ ಅತ್ತಾಚ್ಯಾನ್ ತುಮಿ ತೆಕಾಬಿ ಬರೆ ಕರುನ್‍ ವಳಕ್ತ್ಯಾಶಿ ಅನಿ ಬಗಟ್ಲ್ಯಾಶಿ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 14:7
21 ತಿಳಿವುಗಳ ಹೋಲಿಕೆ  

ಅದಕ್ಕೆ ಅವರು, “ನಿನ್ನ ಪಿತನೆಲ್ಲಿ?” ಎಂದು ಕೇಳಿದರು. ಯೇಸು, “ನೀವು ನನ್ನನ್ನು ಅರಿತಿಲ್ಲ, ನನ್ನ ಪಿತನನ್ನೂ ಅರಿತಿಲ್ಲ. ನೀವು ನನ್ನನ್ನು ಅರಿತಿದ್ದರೆ, ನನ್ನ ಪಿತನನ್ನೂ ಅರಿಯುತ್ತಿದ್ದಿರಿ,” ಎಂದರು.


ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ. ಪುತ್ರನು ಯಾರೆಂದು ಪಿತನ ಹೊರತು ಬೇರಾರೂ ಅರಿಯರು. ಪಿತನು ಯಾರೆಂದು ಪುತ್ರನು ಮತ್ತು ಯಾರಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ ಅವನೇ ಹೊರತು ಮತ್ತಾರೂ ಅರಿಯರು,” ಎಂದು ಹೇಳಿದರು.


ನಿಮ್ಮಿಂದ ನಾನು ಕಲಿತುದೆಲ್ಲವನ್ನೂ ಇವರಿಗೆ ತಿಳಿಯಪಡಿಸಿದ್ದೇನೆ. ಅವುಗಳನ್ನು ಇವರು ಅಂಗೀಕರಿಸಿ ನಿಮ್ಮಿಂದಲೇ ನಾನು ಬಂದುದು ನಿಜವೆಂದು ಅರಿತುಕೊಂಡಿದ್ದಾರೆ. ನನ್ನನ್ನು ಕಳುಹಿಸಿದ್ದು ನೀವೇ ಎಂದು ವಿಶ್ವಾಸಿಸಿದ್ದಾರೆ.


“ನೀವು ಲೋಕದಿಂದ ಆರಿಸಿ ನನಗೆ ಕೊಟ್ಟ ಜನರಿಗೆ ನಿಮ್ಮ ನಾಮವನ್ನು ತಿಳಿಯಪಡಿಸಿದ್ದೇನೆ. ಇವರು ನಿಮ್ಮವರಾಗಿದ್ದರು. ಆದರೂ ಇವರನ್ನು ನನಗೆ ಕೊಟ್ಟಿರಿ. ನಿಮ್ಮ ಮಾತಿಗೆ ವಿಧೇಯರಾಗಿ ಇವರು ನಡೆದಿದ್ದಾರೆ.


ಬರೆಯುತಿಹೆನು ತಂದೆಗಳಿರಾ, ಇದನ್ನು ಏಕೆನೆ, ಬಲ್ಲವರಾದಿರಿ ಆದಿಯಿಂದಿರುವಾತನನ್ನು. ಬರೆಯುತಿಹೆನು ಯುವಜನರಿರಾ, ಇದನ್ನು ಏಕೆನೆ, ನೀವು ಜಯಿಸಿದ್ದಾಯಿತು ಆ ಕಡುಗೇಡಿಗನನ್ನು.


ನಿಮ್ಮ ನಾಮವನ್ನು ನಾನು ಇವರಿಗೆ ತಿಳಿಯಪಡಿಸಿದ್ದೇನೆ; ಇನ್ನೂ ತಿಳಿಯಪಡಿಸುತ್ತೇನೆ. ಹೀಗೆ ನೀವು ನನ್ನಲ್ಲಿಟ್ಟ ಪ್ರೀತಿಯು ಇವರಲ್ಲಿಯೂ ಇರುವಂತಾಗುವುದು; ನಾನೂ ಅವರಲ್ಲಿ ಇರುವಂತಾಗುವುದು,” ಎಂದು ಹೇಳಿದರು.


ನಾನು ಇವರಲ್ಲಿಯೂ ನೀವು ನನ್ನಲ್ಲಿಯೂ ಇದ್ದು, ಇವರ ಐಕ್ಯಮತ್ಯವು ಪೂರ್ಣಸಿದ್ಧಿಗೆ ಬರಲಿ. ಆಗ ನೀವೇ ನನ್ನನ್ನು ಕಳುಹಿಸಿರುವಿರಿ ಎಂದೂ ನನ್ನನ್ನು ಪ್ರೀತಿಸಿದಂತೆಯೇ ಇವರನ್ನು ನೀವು ಪ್ರೀತಿಸಿರುವಿರಿ ಎಂದೂ ಲೋಕಕ್ಕೆ ಮನವರಿಕೆ ಆಗುವುದು.


ಪಿತನೇ, ಇವರೆಲ್ಲಾ ಒಂದಾಗಿರಲಿ. ನೀವು ನನ್ನಲ್ಲಿ, ನಾನು ನಿಮ್ಮಲ್ಲಿ ಇರುವಂತೆಯೇ ಇವರೂ ನಮ್ಮಲ್ಲಿ ಒಂದಾಗಿರಲಿ. ಹೀಗೆ, ನನ್ನನ್ನು ಕಳುಹಿಸಿದವರು ನೀವೇ ಎಂದು ಲೋಕವು ವಿಶ್ವಾಸಿಸುವಂತಾಗಲಿ.


ನನ್ನನ್ನಾಗಲಿ, ಪಿತನನ್ನಾಗಲಿ ಅವರು ಅರಿತಿಲ್ಲದ ಕಾರಣ ನಿಮಗೆ ಹೀಗೆ ಮಾಡುವರು.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.


ಏಕೈಕ ನಿಜದೇವರಾದ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅರಿತುಕೊಳ್ಳುವುದೇ ನಿತ್ಯಜೀವ.


ಬೇರೆ ಯಾರೂ ಮಾಡದ ಮಹತ್ತಾದ ಕಾರ್ಯಗಳನ್ನು ನಾನು ಅವರ ನಡುವೆ ಮಾಡದೆಹೋಗಿದ್ದರೆ ಅವರು ಪಾಪದೋಷಿಗಳೆಂದು ಹೇಳಲಾಗುತ್ತಿರಲಿಲ್ಲ. ಆದರೆ ಅವರು ನನ್ನ ಕಾರ್ಯಗಳನ್ನು ನೋಡಿಯು ಸಹ ನನ್ನ ಮೇಲೆ ಹಾಗು ನನ್ನ ಪಿತನ ಮೇಲೆ ದ್ವೇಷ ಬೆಳೆಸಿದ್ದಾರೆ.


ಹಾಗೆಂದ ಮಾತ್ರಕ್ಕೆ ಪಿತನನ್ನು ಯಾರಾದರೂ ಕಣ್ಣಾರೆ ಕಂಡಿದ್ದಾರೆ ಎಂದಲ್ಲ, ದೇವರಿಂದ ಬಂದಿರುವ ಒಬ್ಬನು ಮಾತ್ರ ಪಿತನನ್ನು ಕಂಡಿದ್ದಾನೆ.


ಯಾರೂ ಎಂದೂ ದೇವರನ್ನು ಕಂಡಿಲ್ಲ; ಪಿತನ ವಕ್ಷಸ್ಥಲದಲ್ಲಿರುವ, ಸ್ವತಃ ದೇವರಾಗಿರುವ ಏಕೈಕ ಪುತ್ರನೇ ಅವರನ್ನು ತಿಳಿಯಪಡಿಸಿದ್ದಾರೆ.


“ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ; ಪುತ್ರನು ಯಾರೆಂಬುದನ್ನು ಪಿತನೇ ಹೊರತು ಬೇರಾರೂ ಅರಿಯರು. ಪಿತನು ಯಾರು ಎಂಬುದನ್ನು ಪುತ್ರನು ಮತ್ತು ಯಾವನಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ, ಅವರೇ ಹೊರತು ಮತ್ತಾರೂ ಅರಿಯರು.


ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು