ಯೋಹಾನ 14:9 - ಕನ್ನಡ ಸತ್ಯವೇದವು C.L. Bible (BSI)9 ಅದಕ್ಕೆ ಉತ್ತರವಾಗಿ ಯೇಸು, “ನಾನು ಇಷ್ಟುಕಾಲ ನಿಮ್ಮೊಡನೆ ಇದ್ದರೂ ನಾನು ಯಾರೆಂಬುದನ್ನು ನೀನು ಅರಿತುಕೊಳ್ಳಲಿಲ್ಲವೆ? ನನ್ನನ್ನು ನೋಡಿದವನು ಪಿತನನ್ನೇ ನೋಡಿದವನಾಗಿದ್ದಾನೆ. ಹೀಗಿರುವಾಗ, ಫಿಲಿಪ್ಪನೇ, ‘ನಮಗೆ ಪಿತನನ್ನು ತೋರಿಸಿ’ ಎಂದು ಹೇಗೆ ಕೇಳುತ್ತೀ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯೇಸು ಅವನಿಗೆ, “ಫಿಲಿಪ್ಪನೇ, ನಾನು ಇಷ್ಟು ಕಾಲ ನಿಮ್ಮ ಜೊತೆಯಲ್ಲಿಯೇ ಇದ್ದರೂ ಇನ್ನೂ ನೀನು ನನ್ನನ್ನು ತಿಳಿಯಲಿಲ್ಲವೇ! ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ, ಮತ್ತು ನಮಗೆ ತಂದೆಯನ್ನು ತೋರಿಸು ಎಂದು ನೀನು ಹೇಳುವುದಾದರು ಹೇಗೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಯೇಸು ಅವನಿಗೆ - ಫಿಲಿಪ್ಪನೇ, ನಾನು ಇಷ್ಟು ದಿವಸ ನಿಮ್ಮ ಸಂಗಡ ಇದ್ದರೂ ನೀನು ಇನ್ನೂ ನನ್ನನ್ನು ಅರಿತುಕೊಳ್ಳಲಿಲ್ಲವೇ. ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ. ನಮಗೆ ತಂದೆಯನ್ನು ತೋರಿಸೆಂದು ನೀನು ಹೇಳುವದು ಹೇಗೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಯೇಸು, “ಫಿಲಿಪ್ಪನೇ, ನಾನು ಇಷ್ಟು ಕಾಲದಿಂದ ನಿನ್ನೊಂದಿಗಿದ್ದರೂ ನೀನು ನನ್ನನ್ನು ತಿಳಿದುಕೊಳ್ಳಲಿಲ್ಲವೇ? ನನ್ನನ್ನು ನೋಡಿದವನು ತಂದೆಯನ್ನು ಸಹ ನೋಡಿದವನಾಗಿದ್ದಾನೆ. ಆದ್ದರಿಂದ, ‘ತಂದೆಯನ್ನು ನಮಗೆ ತೋರಿಸು’ ಎಂದು ಏಕೆ ಕೇಳುವಿರಿ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಯೇಸು ಅವನಿಗೆ, “ಫಿಲಿಪ್ಪನೇ, ನಾನು ಇಷ್ಟುಕಾಲ ನಿಮ್ಮೊಂದಿಗೆ ಇದ್ದರೂ ನೀನು ನನ್ನನ್ನು ತಿಳಿಯಲಿಲ್ಲ. ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ. ಹಾಗಾದರೆ, ‘ತಂದೆಯನ್ನು ನಮಗೆ ತೋರಿಸಿರಿ’ ಎಂದು ನೀನು ಕೇಳುವುದು ಹೇಗೆ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಜೆಜುನ್ ತೆಕಾ ಜಬಾಬ್ ದಿಲ್ಲ್ಯಾನ್ ಎವ್ಡಿ ಲೈ ದಿಸಾ ಮಿಯಾ ತುಮ್ಚ್ಯಾ ವಾಂಗ್ಡಾ ರ್‍ಹಾಲೊ, ಫಿಲಿಪಾ ತಿಯಾ ಅಜುನ್‍ಬಿ ಮಾಕಾ ವಳ್ಕುಕ್ ನೆ? ಜೆ ಕೊನ್ ಮಾಕಾ ಬಗಟ್ಲಾ, ತೆನಿ ಬಾಬಾಕ್ ಬಗಟ್ಲಾ, ಅಶೆ ರ್‍ಹಾತಾನಾ ತಿಯಾ ಅಮ್ಕಾ ಬಾಬಾಕ್ ದಾಕ್ವು? ಮನುನ್ ಕಶೆ ಇಚಾರುಕ್ ಹೊತಾ, ಅಧ್ಯಾಯವನ್ನು ನೋಡಿ |