Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 15:10 - ಕನ್ನಡ ಸತ್ಯವೇದವು C.L. Bible (BSI)

10 ನನ್ನ ಪಿತನು ಕೊಟ್ಟ ಆಜ್ಞೆಗಳನ್ನು ಪಾಲಿಸಿ ಅವರ ಪ್ರೀತಿಯಲ್ಲಿ ನಾನು ನೆಲೆಗೊಂಡಿರುವ ಹಾಗೆ ನೀವು ಕೂಡ ನಾನು ಕೊಟ್ಟ ಆಜ್ಞೆಗಳನ್ನು ಪಾಲಿಸಿದರೆ ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಗೊಂಡು ಆತನ ಪ್ರೀತಿಯಲ್ಲಿ ನೆಲೆಗೊಂಡಿರುವ ಪ್ರಕಾರ, ನೀವು ನನ್ನ ಆಜ್ಞೆಗಳನ್ನು ಕೈಕೊಂಡು ನಡೆದರೆ, ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ನಡೆದು ಆತನ ಪ್ರೀತಿಯಲ್ಲಿ ನೆಲೆಗೊಂಡಿರುವ ಮೇರೆಗೆ ನೀವು ನನ್ನ ಆಜ್ಞೆಗಳನ್ನು ಕೈಕೊಂಡು ನಡೆದರೆ ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾನು ನನ್ನ ತಂದೆಯ ಆಜ್ಞೆಗಳಿಗೆ ವಿಧೇಯನಾಗಿದ್ದು ಆತನ ಪ್ರೀತಿಯಲ್ಲಿ ನೆಲೆಗೊಂಡಿದ್ದೇನೆ. ಅದೇ ರೀತಿಯಲ್ಲಿ, ನೀವು ನನ್ನ ಆಜ್ಞೆಗಳಿಗೆ ವಿಧೇಯರಾದರೆ, ನೀವು ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಾನು ನನ್ನ ತಂದೆಯ ಆಜ್ಞೆಗಳನ್ನು ಪಾಲಿಸಿ ಅವರ ಪ್ರೀತಿಯಲ್ಲಿ ನೆಲೆಗೊಂಡಿರುವಂತೆಯೇ ನೀವು ನನ್ನ ಆಜ್ಞೆಗಳನ್ನು ಪಾಲಿಸಿ ನಡೆದರೆ ನನ್ನ ಪ್ರೀತಿಯಲ್ಲಿ ನೆಲೆಗೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಕಶೆ ಮಿಯಾ ಮಾಜ್ಯಾ ಬಾಬಾಚ್ಯಾ ಗೊಸ್ಟಿಕ್ ಖಾಲ್ತಿ ಹೊವ್ನ್ ತೆಚ್ಯಾ ಪ್ರೆಮಾನ್ ಹಾಂವ್, ತಶೆ ತುಮಿ ಮಾಜ್ಯಾ ಗೊಸ್ಟಿಯಾ ಆಯಿಕ್ಲ್ಯಾರ್, ಮಾಜ್ಯಾ ಪ್ರೆಮಾತ್ ರ್‍ಹಾತ್ಯಾಶಿ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 15:10
28 ತಿಳಿವುಗಳ ಹೋಲಿಕೆ  

ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನನ್ನ ಆಜ್ಞೆಗಳನ್ನು ಕೈಗೊಂಡು ನಡೆಯುವಿರಿ.


ದೇವರನ್ನು ಪ್ರೀತಿಸುವುದು ಎಂದರೆ ಅವರು ಕೊಟ್ಟ ಆಜ್ಞೆಗಳನ್ನು ಅನುಸರಿಸಿ ನಡೆಯುವುದೇ. ಅವರ ಆಜ್ಞೆಗಳು ನಮಗೆ ಹೊರೆಯೇನೂ ಅಲ್ಲ.


ಆದರೆ ದೇವರ ವಾಕ್ಯವನ್ನು ಕೈಗೊಂಡು ನಡೆಯುವವನಲ್ಲಿ ಪ್ರೀತಿ ನಿಜಕ್ಕೂ ಸಿದ್ಧಿಗೆ ಬಂದಿರುತ್ತದೆ.


ಅವರು ನೀತಿಯ ಮಾರ್ಗವನ್ನು ಅರಿತುಕೊಂಡು ತಾವು ಸ್ವೀಕರಿಸಿದ ಪವಿತ್ರ ಆಜ್ಞೆಯನ್ನು ತಿರಸ್ಕರಿಸುವುದಕ್ಕಿಂತ ಅದನ್ನು ಅರಿಯದವರಾಗಿದ್ದರೆ ಒಳ್ಳೆಯದಾಗುತ್ತಿತ್ತು.


ನನ್ನನ್ನು ಕಳುಹಿಸಿದಾತನು ನನ್ನೊಡನಿದ್ದಾನೆ. ಆತನು ಮೆಚ್ಚುವುದನ್ನೇ ನಾನು ಸತತವೂ ಮಾಡುವುದರಿಂದ ಆತನು ನನ್ನನ್ನು ಏಕಾಕಿಯಾಗಿ ಬಿಟ್ಟಿಲ್ಲ.”


ಯೇಸು ಅವರಿಗೆ, “ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸುವುದೇ ನನಗೇ ಆಹಾರ. ಆತನು ಕೊಟ್ಟ ಕಾರ್ಯಗಳನ್ನು ಪೂರೈಸುವುದೇ ನನಗೆ ತಿಂಡಿತೀರ್ಥ.


ಕಡೆಯದಾಗಿ ಸಹೋದರರೇ, ನೀವು ಹೇಗೆ ಬಾಳಬೇಕು. ದೇವರು ಮೆಚ್ಚುವಂತೆ ಹೇಗೆ ನಡೆದುಕೊಳ್ಳಬೇಕು, ಎಂಬುದನ್ನು ನಮ್ಮಿಂದ ಕಲಿತುಕೊಂಡಿರಿ. ಅಂತೆಯೇ ಜೀವಿಸುತ್ತಿದ್ದೀರಿ. ನಿಮ್ಮ ನಡತೆ ಇನ್ನೂ ಉತ್ತಮಗೊಳ್ಳಬೇಕೆಂದು ಪ್ರಭು ಯೇಸುವಿನ ಹೆಸರಿನಲ್ಲಿ ನಾವು ನಿಮ್ಮನ್ನು ಕೇಳಿಕೊಳ್ಳುತ್ತೇವೆ ಹಾಗೂ ಪ್ರಬೋಧಿಸುತ್ತೇವೆ.


ನೀವು ನನಗೆ ಕೊಟ್ಟ ಕಾರ್ಯವನ್ನು ನಾನು ಮಾಡಿ ಮುಗಿಸಿ ನಿಮ್ಮ ಮಹಿಮೆಯನ್ನು ಜಗತ್ತಿಗೆಲ್ಲ ತೋರ್ಪಡಿಸಿದೆನು.


ಆದರೆ ನಾನು ಪಿತನನ್ನು ಪ್ರೀತಿಸುತ್ತೇನೆಂಬುದನ್ನೂ ಅವರು ವಿಧಿಸಿದಂತೆಯೇ ಮಾಡುತ್ತೇನೆ ಎಂಬುದನ್ನೂ ಲೋಕವು ತಿಳಿಯಬೇಕು. ಏಳಿ, ಇಲ್ಲಿಂದ ಹೋಗೋಣ,” ಎಂದರು.


ಅದು ಯಾವುದೆಂದರೆ ನಾನು ಆಡಿದ ಮಾತೇ. ಅಂತಿಮ ದಿನದಂದು ಅದೇ ಅವನಿಗೆ ತೀರ್ಪುಕೊಡುವುದು. ಏಕೆಂದರೆ, ನನ್ನಷ್ಟಕ್ಕೆ ನಾನೇ ಇದನ್ನೆಲ್ಲಾ ಮಾತನಾಡುತ್ತಿಲ್ಲ. ನನ್ನನ್ನು ಕಳುಹಿಸಿದ ಪಿತನೇ, ನಾನು ಏನು ಹೇಳಬೇಕು, ಯಾವ ಮಾತನ್ನು ಆಡಬೇಕು ಎಂದು ನನಗೆ ಆಜ್ಞೆಮಾಡಿದ್ದಾರೆ.


“ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರವಾಗಿಟ್ಟುಕೊಂಡಿರುವವರು ಭಾಗ್ಯವಂತರು. ಜೀವವೃಕ್ಷದ ಫಲವನ್ನು ಸವಿಯುವ ಹಕ್ಕು ಅವರಿಗಿರುತ್ತದೆ. ಹೆಬ್ಬಾಗಿಲಿನ ಮೂಲಕ ಅವರು ಆ ನಗರವನ್ನು ಸೇರುವರು.


ನನ್ನ ಆಜ್ಞೆಗಳನ್ನು ಅಂಗೀಕರಿಸಿ ಅವುಗಳ ಪ್ರಕಾರ ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ಪಿತನಿಗೂ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ನನ್ನನ್ನೇ ಅವನಿಗೆ ಸಾಕ್ಷಾತ್ಕರಿಸಿಕೊಡುವೆನು.”


ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ, ದೇವರ ಆಜ್ಞೆಗಳಿಗೆ ವಿಧೇಯನಾಗಿರುವುದೇ ಮುಖ್ಯ.


ನಮಗೆ ಬೇಕಾಗಿದ್ದ ಪ್ರಧಾನ ಯಾಜಕರು ಯೇಸುವೇ. ಇವರು ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರು, ಗಗನಮಂಡಲಗಳಿಗಿಂತಲೂ ಉನ್ನತದಲ್ಲಿರುವವರು.


ತೆರೆದಿಹನು ಸ್ವಾಮಿ ಸರ್ವೇಶ್ವರ ನನ್ನ ಕಿವಿಯನು ಎಂದೇ ವಿಮುಖನಾಗಲಿಲ್ಲ ನಾನು, ಪ್ರತಿಭಟಿಸಲಿಲ್ಲ ಆತನನು.


ಆದರೆ ಅವರ ಅರಿವು ನಿಮಗಿಲ್ಲ; ನನಗಿದೆ. ಅವರ ಅರಿವು ನನಗಿಲ್ಲವೆಂದು ನಾನು ಹೇಳಿದೆಯಾದರೆ ನಿಮ್ಮಂತೆ ನಾನೂ ಸುಳ್ಳುಗಾರನಾಗುತ್ತೇನೆ. ಅವರ ಅರಿವು ನನಗಿದೆ. ಅವರ ಮಾತನ್ನು ನಾನು ಪಾಲಿಸುತ್ತೇನೆ.


ನನ್ನ ಪ್ರಾಣವನ್ನು ಯಾರೂ ನನ್ನಿಂದ ಕಸಿದುಕೊಳ್ಳಲಾರರು; ನಾನಾಗಿಯೇ ಅದನ್ನು ಧಾರೆಯೆರೆಯುತ್ತೇನೆ. ಅದನ್ನು ಧಾರೆಯೆರೆಯುವ ಹಕ್ಕು ನನಗಿದೆ. ಅದನ್ನು ಪುನಃ ಪಡೆಯುವ ಹಕ್ಕು ಸಹ ನನಗಿದೆ. ಈ ಆಜ್ಞೆಯನ್ನು ನಾನು ನನ್ನ ಪಿತನಿಂದ ಪಡೆದಿದ್ದೇನೆ,” ಎಂದು ನುಡಿದರು.


ಆಗ ಯೇಸು, “ನನ್ನನ್ನು ಪ್ರೀತಿಸುವವನು ನನ್ನ ಮಾತನ್ನು ಕೈಗೊಂಡು ನಡೆಯುವನು. ಅವನನ್ನು ನನ್ನ ಪಿತನೂ ಪ್ರೀತಿಸುವರು ಮತ್ತು ನಾವಿಬ್ಬರೂ ಅವನ ಬಳಿ ಬಂದು ಅವನಲ್ಲಿ ನೆಲೆಸುವೆವು.


ನಾವು ದೇವರ ಆಜ್ಞೆಗಳನ್ನು ಕೈಗೊಂಡು ನಡೆದರೆ ಅದರಿಂದಲೇ ಅವರ ಅರಿವು ನಮಗಿದೆ ಎಂದು ಖಚಿತವಾಗುತ್ತದೆ.


ತಾನು ದೇವರಲ್ಲಿ ನೆಲೆಸಿದ್ದೇನೆಂದು ಹೇಳುವವನು ಕ್ರಿಸ್ತಯೇಸು ಜೀವಿಸಿದಂತೆಯೇ ಜೀವಿಸಬೇಕು. ಇದರಿಂದಲೇ ನಾವು ದೇವರಲ್ಲಿ ನೆಲೆಗೊಂಡಿದ್ದೇವೆಂದು ತಿಳಿದುಕೊಳ್ಳುತ್ತೇವೆ.


ಸರ್ವೇಶ್ವರ ಸ್ವಾಮಿಯ ಆಜ್ಞೆಯಂತೆಯೇ ಮೋಶೆ ಮತ್ತು ಆರೋನರು ಮಾಡಿದರು.


ದೇವರನು ತೊರೆದು ದುರುಳನಾಗದೆ ನಾನನುಸರಿಸಿದೆ ಸರ್ವೇಶ್ವರನ ಮಾರ್ಗವನೆ.


ಇದಲ್ಲದೆ, ಇವನು ಸರ್ವೇಶ್ವರನನ್ನೇ ಹೊಂದಿಕೊಂಡು ಅವರನ್ನು ಬಿಡದೆ ಅನುಸರಿಸುತ್ತಾ, ಅವರು ಮೋಶೆಯ ಮುಖಾಂತರ ಅನುಗ್ರಹಿಸಿದ ಆಜ್ಞೆಗಳನ್ನು ಕೈಗೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು