Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 15:11 - ಕನ್ನಡ ಸತ್ಯವೇದವು C.L. Bible (BSI)

11 “ನನ್ನಲ್ಲಿರುವ ಆನಂದವು ನಿಮ್ಮಲ್ಲಿ ಇರಬೇಕೆಂತಲೂ ನಿಮ್ಮ ಆನಂದವು ತುಂಬಿ ತುಳುಕಬೇಕೆಂತಲೂ ಇದನ್ನೆಲ್ಲಾ ನಿಮಗೆ ಹೇಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನನ್ನಲ್ಲಿರುವ ಆನಂದವು ನಿಮ್ಮಲ್ಲಿಯೂ ಇರಬೇಕೆಂದೂ, ಆ ನಿಮ್ಮ ಆನಂದವು ಪರಿಪೂರ್ಣವಾಗಬೇಕೆಂದೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನನ್ನಲ್ಲಿರುವ ಆನಂದವು ನಿಮ್ಮಲ್ಲಿಯೂ ಇರಬೇಕೆಂತಲೂ ನಿಮ್ಮ ಆನಂದವು ಪರಿಪೂರ್ಣವಾಗಬೇಕೆಂತಲೂ ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನನಗಿರುವ ಆನಂದವನ್ನು ನೀವೂ ಹೊಂದಿಕೊಳ್ಳಬೇಕೆಂದು ನಾನು ನಿಮಗೆ ಈ ಸಂಗತಿಗಳನ್ನು ಹೇಳಿದ್ದೇನೆ. ನಿಮ್ಮ ಆನಂದವು ಪರಿಪೂರ್ಣವಾದ ಆನಂದವಾಗಿರಬೇಕೆಂದು ನಾನು ಬಯಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನನ್ನ ಆನಂದವು ನಿಮ್ಮಲ್ಲಿ ಇರುವಂತೆಯೂ ಆ ನಿಮ್ಮ ಆನಂದವು ಪರಿಪೂರ್ಣವಾಗುವಂತೆಯೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 “ಮಾಜೊ ಕುಶಿ ತುಮ್ಚ್ಯಾ ಮದ್ದಿ ರ್‍ಹಾವ್ನ್ ತುಮ್ಚೊ ಖುಶಿ ಪುರಾ ಹೊಂವ್ದಿ ಮನುನ್ ಮಿಯಾ ತುಮ್ಕಾ ಸಾಂಗುಕ್ ಲಾಗ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 15:11
21 ತಿಳಿವುಗಳ ಹೋಲಿಕೆ  

ಭರವಸೆಯ ಮೂಲವಾಗಿರುವ ದೇವರಲ್ಲಿರುವ ನಮ್ಮ ವಿಶ್ವಾಸದ ಮೂಲಕ ಲಭಿಸುವ ಆನಂದವನ್ನೂ ಶಾಂತಿಸಮಾಧಾನವನ್ನೂ ನಿಮಗೆ ಸಮೃದ್ಧಿಯಾಗಿ ದಯಪಾಲಿಸಲಿ. ನಿಮ್ಮ ಭರವಸೆ ಪವಿತ್ರಾತ್ಮ ಅವರ ಪ್ರಭಾವದಿಂದ ಪ್ರವರ್ಧಿಸುವಂತಾಗಲಿ.


ಈಗ ನಾನು ನಿಮ್ಮ ಬಳಿಗೆ ಬರುತ್ತಿದ್ದೇನೆ. ನನ್ನ ಆನಂದವು ಅವರ ಹೃದಯದಲ್ಲಿ ತುಂಬಿತುಳುಕುವಂತೆ ಈ ಲೋಕದಲ್ಲಿರುವಾಗಲೇ ಇವುಗಳನ್ನು ಹೇಳುತ್ತಿದ್ದೇನೆ.


ಈ ತನಕ ನನ್ನ ಹೆಸರಿನಲ್ಲಿ ನೀವೇನನ್ನೂ ಕೇಳಲಿಲ್ಲ. ಕೇಳಿ, ನಿಮಗೆ ದೊರೆಯುವುದು. ಆಗ ನಿಮ್ಮ ಆನಂದವು ತುಂಬಿ ತುಳುಕುವುದು.


ನಮ್ಮೆಲ್ಲರ ಆನಂದವು ಪರಿಪೂರ್ಣವಾಗುವಂತೆ ಇದನ್ನು ಬರೆಯುತ್ತಿದ್ದೇವೆ.


ಕ್ರಿಸ್ತಯೇಸುವನ್ನು ನೀವು ನೋಡದಿದ್ದರೂ ಅವರನ್ನು ಪ್ರೀತಿಸುತ್ತೀರಿ. ನೀವೀಗ ಕಣ್ಣಾರೆ ಕಾಣದಿದ್ದರೂ ಅವರನ್ನು ವಿಶ್ವಾಸಿಸುತ್ತೀರಿ.


ನಾನು ನಿಮಗೆ ತಿಳಿಸಬೇಕಾದ ವಿಷಯಗಳು ಬಹಳಷ್ಟಿವೆ. ಆದರೆ ಅವುಗಳನ್ನು ಕಾಗದಪತ್ರಗಳ ಮೂಲಕ ತಿಳಿಸಲು ನನಗೆ ಇಷ್ಟವಿಲ್ಲ. ನಾನೇ ನಿಮ್ಮಲ್ಲಿಗೆ ಬಂದು ನಿಮ್ಮ ಸಂಗಡ ಮಾತನಾಡುವ ನಿರೀಕ್ಷೆ ಇದೆ. ಹೀಗೆ ಮುಖಾಮುಖಿಯಾಗಿ ಮಾತನಾಡುವುದರಿಂದ ಪೂರ್ಣಸಂತೋಷವೂ ಆಗುತ್ತದೆ.


ನಿಮಗೆ ನನ್ನಲ್ಲಿ ಶಾಂತಿಸಮಾಧಾನ ಲಭಿಸಲೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಕಷ್ಟಸಂಕಟಗಳು ತಪ್ಪಿದ್ದಲ್ಲ, ಆದರೆ ಧೈರ್ಯವಾಗಿರಿ. ನಾನು ಲೋಕವನ್ನು ಜಯಿಸಿದ್ದೇನೆ,” ಎಂದು ಹೇಳಿದರು.


ನಿಮ್ಮ ವಿಶ್ವಾಸದ ಬಗ್ಗೆ ನಾವು ದಬ್ಬಾಳಿಕೆ ನಡೆಸುತ್ತಿದ್ದೇವೆಂದು ತಿಳಿಯಬೇಡಿ; ವಿಶ್ವಾಸದಲ್ಲಿ ನೀವು ದೃಢರಾಗಿಯೇ ಇದ್ದೀರಿ. ನಿಮ್ಮ ಸಂತೋಷಕ್ಕಾಗಿ ನಾವು ನಿಮ್ಮೊಡನೆ ಸಹಕರಿಸುತ್ತೇವೆ.


ಈ ನಿನ್ನ ತಮ್ಮ ನಮ್ಮ ಪಾಲಿಗೆ ಸತ್ತುಹೋಗಿದ್ದ. ಈಗ ಬದುಕಿಬಂದಿದ್ದಾನೆ. ತಪ್ಪಿಹೋಗಿದ್ದ; ಈಗ ಸಿಕ್ಕಿದ್ದಾನೆ. ಆದುದರಿಂದ ನಾವು ಹಬ್ಬಮಾಡಿ ಆನಂದಿಸುವುದು ಸಹಜವಲ್ಲವೆ?’ ಎಂದನು.”


ಅದು ಸಿಕ್ಕಿದಾಗ ತನ್ನ ಗೆಳತಿಯರನ್ನೂ ನೆರೆಯವರನ್ನೂ ಒಟ್ಟಿಗೆ ಕರೆದು, ‘ಕಳೆದುಹೋದ ನಾಣ್ಯ ಸಿಕ್ಕಿಬಿಟ್ಟಿತು; ನನ್ನೊಡನೆ ಸೇರಿ ಸಂತೋಷಪಡಿ,’ ಎನ್ನುತ್ತಾಳಲ್ಲವೆ?


ಇದರಲ್ಲಿ ನನಗೆ ಎಳ್ಳಷ್ಟೂ ಸಂದೇಹವಿಲ್ಲ. ಈ ಕಾರಣ, ನಾನು ಇಹದಲ್ಲಿ ಉಳಿಯುವೆನೆಂದು ಬಲ್ಲೆ. ನಿಮ್ಮೆಲ್ಲರೊಡನಿದ್ದು, ಕ್ರೈಸ್ತವಿಶ್ವಾಸದಲ್ಲಿ ನೀವು ವೃದ್ಧಿಯಾಗಿ ಆನಂದಿಸುವಂತೆ ನಿಮಗೆ ನೆರವಾಗುತ್ತೇನೆ.


ಮದ್ಯಪಾನಮಾಡಿ ಮತ್ತರಾಗಬೇಡಿ. ಅದು ಪಾಪಕೃತ್ಯಗಳಿಗೆ ಎಡೆಮಾಡುತ್ತದೆ. ಬದಲಿಗೆ ಪವಿತ್ರಾತ್ಮಭರಿತರಾಗಿರಿ.


ಮದುಮಗಳು ಮದುಮಗನಿಗೆ ಸೇರಿದವಳು. ಮದುಮಗನ ಗೆಳೆಯನಾದರೋ ಪಕ್ಕದಲ್ಲಿದ್ದು ಮದುಮಗನ ಕರೆಗೆ ಕಿವಿಗೊಡುತ್ತಾನೆ; ಆತನ ಸ್ವರ ಕೇಳಿ ಹರ್ಷಿಸುತ್ತಾನೆ. ಇಂಥ ಆನಂದದಿಂದ ನಾನೀಗ ಭರಿತನಾಗಿದ್ದೇನೆ.


ಅದು ಸಿಕ್ಕಿದಾಗ ಸಿಕ್ಕಿತೆಂಬ ಸಂತೋಷದಿಂದ ಅದನ್ನು ಹೆಗಲ ಮೇಲೆ ಎತ್ತಿಕೊಂಡು ಮನೆಗೆ ಬರುತ್ತಾನೆ;


ಕೊಬ್ಬಿಸಿದ ಪ್ರಾಣಿಯನ್ನು ತಂದು ಕೊಯ್ಯಿರಿ; ಹಬ್ಬಮಾಡೋಣ, ಆನಂದಿಸೋಣ.


ಅವರಿಗೆ ಒಳಿತನ್ನು ಮಾಡುವುದರಲ್ಲಿ ಸಂತೋಷಿಸುವೆನು.


ತೃಪ್ತನಾಗುವನಾತ ಕಂಡು ತನ್ನ ಪ್ರಾಣಯಾತನೆಯ ಫಲವನು. ಸಜ್ಜನನಾದ ಆ ನನ್ನ ದಾಸ ತರುವನು ಸನ್ಮಾರ್ಗಕೆ ಬಹುಜನರನು. ತಾನೇ ಹೊತ್ತುಕೊಳ್ಳುವನು ಅವರ ಅಪರಾಧಗಳ ಹೊರೆಯನು.


ಪ್ರಸನ್ನವಾಗಿಹನು ದೇವ, ಸರ್ವೇಶ ನಿನ್ನ ಮಧ್ಯೆ ಕೊಡುವನಾ ಶೂರ ನಿನಗೆ ರಕ್ಷಣೆ ಹರ್ಷಾನಂದಗೊಳ್ಳುವನು ನಿನ್ನ ವಿಷಯದಲಿ ಪುನಶ್ಚೇತನಗೊಳಿಸುವನು ನಿನ್ನನು ಪ್ರಶಾಂತ ಪ್ರೀತಿಯಲಿ ಗಾನಗೀತೆಗಳಿಂದ ತೋಷಿಸುವನು ನಿನ್ನಲಿ ಹಬ್ಬಹುಣ್ಣಿಮೆಗಳ ತರದಲಿ.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲ ಸೌಭಾಗ್ಯಗಳ ಸುದ್ದಿಯನ್ನು ಸಕಲ ಭೂರಾಜ್ಯಗಳು ಕೇಳುವರು. ಈ ನಗರಕ್ಕೆ ನಾನು ನೀಡುವ ಸುಖಸಮಾಧಾನಗಳನ್ನು ಅವರು ನೋಡುವರು ಹಾಗೂ ಹೆದರಿ ನಡುಗುವರು. ಇದರಿಂದಾಗಿ ಆ ಎಲ್ಲ ರಾಜ್ಯಗಳ ಮುಂದೆ ನನಗೆ ಅದು ಕೀರ್ತಿಯನ್ನು, ಮಹಿಮೆಯನ್ನು ಹಾಗೂ ಆನಂದವನ್ನು ತರುವುದು.”


“ಎನ್ನ ಮನದನ್ನೆ” ಎನಿಸಿಕೊಳ್ಳುವೆ ನೀನು “ಸುವಿವಾಹಿತೆ” ಎನಿಸಿಕೊಳ್ಳುವುದು ನಿನ್ನ ನಾಡು. ನಿನ್ನಲ್ಲಿದೆ ಉಲ್ಲಾಸ ಸರ್ವೇಶ್ವರನಿಗೆ ವಿವಾಹವಾಗುವುದಿದೆ ನಿನ್ನ ನಾಡಿಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು