ಯೋಹಾನ 15:19 - ಕನ್ನಡ ಸತ್ಯವೇದವು C.L. Bible (BSI)19 ನೀವು ಲೋಕದ ಕಡೆಯವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಮಮತೆಯಿಂದ ಕಾಣುತ್ತಿತ್ತು. ನೀವಾದರೋ ಲೋಕದ ಕಡೆಗೆ ಸೇರಿದವರಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿರುವುದರಿಂದ ನೀವು ಲೋಕದಿಂದ ಬೇರ್ಪಟ್ಟಿದ್ದೀರಿ ಎಂದೇ ಲೋಕಕ್ಕೆ ನಿಮ್ಮ ಮೇಲೆ ದ್ವೇಷವಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನೀವು ಲೋಕದವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಪ್ರೀತಿಸುತ್ತಿತ್ತು. ನೀವಾದರೋ ಲೋಕದ ಕಡೆಯವರಲ್ಲ, ನಾನು ನಿಮ್ಮನ್ನು ಆರಿಸಿಕೊಂಡಿದ್ದರಿಂದಲೇ ಲೋಕವು ನಿಮ್ಮನ್ನು ದ್ವೇಷ ಮಾಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನೀವು ಲೋಕದ ಕಡೆಯವರಾಗಿರುತ್ತಿದ್ದರೆ ಲೋಕವು ನಿಮ್ಮ ಮೇಲೆ ತನ್ನವರೆಂದು ಮಮತೆ ಇಡುತ್ತಿತ್ತು; ಆದರೆ ನೀವು ಲೋಕದ ಕಡೆಯವರಲ್ಲದೆ ಇರುವದರಿಂದಲೂ ನಾನು ನಿಮ್ಮನ್ನು ಲೋಕದೊಳಗಿಂದ ಆರಿಸಿ ತೆಗೆದುಕೊಂಡಿರುವದರಿಂದಲೂ ಲೋಕವು ನಿಮ್ಮ ಮೇಲೆ ದ್ವೇಷ ಮಾಡುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನೀವು ಈ ಲೋಕಕ್ಕೆ ಸೇರಿದವರಾಗಿದ್ದರೆ, ಈ ಲೋಕವು ತನ್ನ ಸ್ವಂತ ಜನರನ್ನು ಪ್ರೀತಿಸುವಂತೆ ನಿಮ್ಮನ್ನೂ ಪ್ರೀತಿಸುತ್ತಿತ್ತು. ಆದರೆ ನಾನು ನಿಮ್ಮನ್ನು ಈ ಲೋಕದೊಳಗಿಂದ ಆರಿಸಿಕೊಂಡಿದ್ದೇನೆ. ಆದ್ದರಿಂದ ನೀವು ಈ ಲೋಕಕ್ಕೆ ಸೇರಿದವರಲ್ಲ. ಆದಕಾರಣ ಈ ಲೋಕವು ನಿಮ್ಮನ್ನು ದ್ವೇಷಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನೀವು ಲೋಕದವರಾಗಿದ್ದರೆ ಲೋಕವು ನಿಮ್ಮನ್ನು ಪ್ರೀತಿಸುತ್ತಿತ್ತು. ಆದರೆ ನೀವು ಲೋಕದವರಲ್ಲದೆ ಇರುವುದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಿಸುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ತುಮಿ ಜಗಾಕ್ ಸಮಂದ್ ಪಡಲ್ಲೆ ಮನುನ್ ರ್‍ಹಾಲ್ಯಾರ್ ತೊ ತುಮಿ ತೆಚೆಚ್ ಮನುನ್ ತುಮ್ಚೊ ಪ್ರೆಮ್ ಕರಿ ಹೊತ್ತೊ. ಖರೆ ಮಿಯಾ ತುಮ್ಕಾ ಹ್ಯಾ ಜಗಾತ್ನಾ ಎಚುನ್ ಕಾಡ್ಲಾ, ಅನಿ ತುಮಿ ಹ್ಯಾ ಜಗಾಕ್ ಸಮಂದ್ ಪಡಲ್ಲೆ ನ್ಹಯ್ ,ತೆಚೆಸಾಟ್ನಿ ಹ್ಯೊ ಜಗ್ ತುಮ್ಚೊ ದ್ವೆಸ್ ಕರ್‍ತಾ. ಅಧ್ಯಾಯವನ್ನು ನೋಡಿ |