Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 15:20 - ಕನ್ನಡ ಸತ್ಯವೇದವು C.L. Bible (BSI)

20 ಧಣಿಗಿಂತಲೂ ದಾಸನು ದೊಡ್ಡವನಲ್ಲವೆಂದು ನಾನು ನಿಮಗೆ ಹೇಳಿದ್ದನ್ನು ನೆನಪಿಗೆ ತಂದುಕೊಳ್ಳಿ. ಅವರು ನನ್ನನ್ನು ಹಿಂಸೆಗೆ ಗುರಿಮಾಡಿದಂತೆ ನಿಮ್ಮನ್ನೂ ಹಿಂಸೆಗೆ ಗುರಿಮಾಡುವರು. ನನ್ನ ಬೋಧನೆಯ ಮಾತನ್ನು ಅವರು ಅನುಸರಿಸಿ ನಡೆದರೆ ನಿಮ್ಮ ಬೋಧನೆಯ ಮಾತನ್ನು ಅನುಸರಿಸಿ ನಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ದಣಿಗಿಂತ ಆಳು ದೊಡ್ಡವನಲ್ಲವೆಂಬುದಾಗಿ ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕ ಮಾಡಿಕೊಳ್ಳಿರಿ. ಅವರು ನನ್ನನ್ನು ಹಿಂಸೆಪಡಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು. ಅವರು ನನ್ನ ಮಾತನ್ನು ಕೈಗೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಗೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ದಣಿಗಿಂತ ಆಳು ದೊಡ್ಡವನಲ್ಲವೆಂಬದಾಗಿ ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ. ಅವರು ನನ್ನನ್ನು ಹಿಂಸೆಪಡಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು; ಅವರು ನನ್ನ ಮಾತನ್ನು ಕೈಕೊಂಡು ನಡೆದರೆ ನಿಮ್ಮ ಮಾತನ್ನು ಸಹ ಕೈಕೊಂಡು ನಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಸೇವಕನು ತನ್ನ ಒಡೆಯನಿಗಿಂತ ದೊಡ್ಡವನಲ್ಲ ಎಂದು ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಿಸಿಕೊಳ್ಳಿ. ಜನರು ನನ್ನನ್ನು ಹಿಂಸಿಸಿದಂತೆ ನಿಮ್ಮನ್ನೂ ಹಿಂಸಿಸುವರು ಮತ್ತು ನನ್ನ ಉಪದೇಶಕ್ಕೆ ವಿಧೇಯರಾದರೆ ನಿಮ್ಮ ಉಪದೇಶಕ್ಕೂ ವಿಧೇಯರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ‘ಧಣಿಗಿಂತ ಆಳು ದೊಡ್ಡವನಲ್ಲ,’ ಎಂದು ನಾನು ನಿಮಗೆ ಹೇಳಿದ ಮಾತನ್ನು ನೆನಪಿಗೆ ತಂದುಕೊಳ್ಳಿರಿ. ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು. ಅವರು ನನ್ನ ಮಾತನ್ನು ಅನುಸರಿಸಿದರೆ ನಿಮ್ಮ ಮಾತನ್ನು ಸಹ ಅನುಸರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಮಿಯಾ ತುಮ್ಕಾ ಸಾಂಗಲ್ಲೆ ಯಾದ್ ಥವ್ನ್ ಘೆವಾ ಆಳ್ ಅಪ್ನಾಚ್ಯಾ ಧನಿಯಾಚ್ಯಾನ್ಕಿಬಿ ಮೊಟೊ ನ್ಹಯ್ ಜರ್ ತರ್ ಲೊಕಾ ಮಾಕಾ ತರಾಸ್ ದಿತ್ಯಾತ್ , ತರ್ ಲೊಕಾ ತುಮ್ಕಾಬಿ ತರಾಸ್ ದಿತ್ಯಾತುಚ್, ತೆನಿ ಮಾಜ್ಯಾ ಶಿಕಾಪಾಕ್ ಖಾಲ್ತಿ ಹೊಲ್ಯಾನಿತರ್, ತುಮ್ಚ್ಯಾಬಿ ಶಿಕಾಪಾಕ್ನಿ ಖಾಲ್ತಿ ಹೊತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 15:20
22 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸುವಿನ ಅನುಯಾಯಿಯಾಗಿ ಭಕ್ತಿಯಿಂದ ಬಾಳಲು ಆಶಿಸುವ ಪ್ರತಿಯೊಬ್ಬನೂ ಹಿಂಸೆಗೊಳಗಾಗುತ್ತಾನೆ.


ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ಧಣಿಗಿಂತ ದಾಸನು ದೊಡ್ಡವನಲ್ಲ. ಅಂತೆಯೇ ಕಳುಹಿಸಲಾದವನು ಕಳುಹಿಸುವವನಿಗಿಂತ ಶ್ರೇಷ್ಠನಲ್ಲ.


ಗುರುವಿಗಿಂತ ಶಿಷ್ಯನು ಶ್ರೇಷ್ಠನಲ್ಲ; ದಾಸನು ದಣಿಗಿಂತ ದೊಡ್ಡವನಲ್ಲ.


ಇಸ್ರಯೇಲ್ ವಂಶದವರೋ ನಿನಗೆ ಕಿವಿಗೊಡಲು ಸಿದ್ಧರಿಲ್ಲ; ನನಗೂ ಕಿವಿಗೊಡಲು ಸಿದ್ಧರಿಲ್ಲ; ಅವರೆಲ್ಲರು ಗರ್ವಿಗಳು ಹಾಗೂ ಹಟಮಾರಿಗಳು.


ಶತ್ರುಗಳು ಅನೇಕರಿದ್ದರೂ ಮಿತ್ರನೊಬ್ಬನು ಇಲ್ಲದಿರಲಿಲ್ಲ. ಪ್ರಾಣ ಹಿಂಸೆಗಳಿಗೀಡಾಗಿದ್ದರೂ ಪ್ರಾಣನಷ್ಟವನ್ನು ಅನುಭವಿಸಲಿಲ್ಲ.


ಸ್ವಂತ ದುಡಿಮೆಯಿಂದ ಜೀವಿಸುತ್ತೇವೆ; ನಮ್ಮನ್ನು ಶಪಿಸುವವರನ್ನು ಆಶೀರ್ವದಿಸುತ್ತೇವೆ; ಹಿಂಸೆಗೊಳಗಾದಾಗ ಸಹಿಸಿಕೊಳ್ಳುತ್ತೇವೆ.


ನನ್ನ ಮಾತಿಗೆ ಶರಣಾಗಿ ನಡೆಯುವವನು ನಿತ್ಯಮರಣಕ್ಕೆ ತುತ್ತಾಗನು, ಎಂದು ಸತ್ಯವಾಗಿ ನಿಮಗೆ ಹೇಳುತ್ತೇನೆ,” ಎಂದರು.


ಗುರುವಿಗಿಂತ ಶಿಷ್ಯನು ಶ್ರೇಷ್ಠನಲ್ಲ; ಆದರೂ ಪೂರ್ಣ ಶಿಕ್ಷಣ ಪಡೆದ ಪ್ರತಿಯೊಬ್ಬನೂ ಗುರುವಿನಂತೆ ಆಗುವನು.


ಆ ಯೆಹೂದ್ಯರೇ ಪ್ರಭು ಯೇಸುವನ್ನೂ ಪ್ರವಾದಿಗಳನ್ನೂ ಸಂಹರಿಸಿದವರು; ನಮ್ಮನ್ನೂ ಸಹ ಹೊರದಬ್ಬಿದರು. ಅವರು ದೇವರಿಗೆ ದ್ರೋಹವೆಸಗಿದರು; ಜನರೆಲ್ಲರಿಗೆ ವಿರೋಧಿಗಳಾದರು.


ಆಗ ಯೆಹೂದ್ಯರು, ಅವರತ್ತ ಬೀರಲು ಕಲ್ಲುಗಳನ್ನು ಆಯ್ದುಕೊಂಡರು.


ಯೇಸುವನ್ನು ಬಂಧಿಸುವ ಉದ್ದೇಶದಿಂದ ಮುಖ್ಯಯಾಜಕರೂ ಫರಿಸಾಯರೂ ಆತನ ಸುಳಿವು ಯಾರಿಗಾದರೂ ಸಿಕ್ಕಿದ್ದೇ ಆದರೆ ತಮಗೆ ತಿಳಿಸಬೇಕೆಂದು ಆಜ್ಞೆ ಹೊರಡಿಸಿದ್ದರು.


ಇದನ್ನು ಕೇಳಿದ್ದೇ ಆ ಯೆಹೂದ್ಯರು ಯೇಸುವಿನತ್ತ ಬೀರಲು ಕಲ್ಲುಗಳನ್ನು ಎತ್ತಿಕೊಂಡರು. ಯೇಸುವಾದರೋ ಮರೆಯಾಗಿ ಮಹಾದೇವಾಲಯದಿಂದ ಹೊರಟುಹೋದರು.


ಯೇಸು ಸ್ವಾಮಿಯನ್ನು ಕುರಿತು ಜನರು ಹೀಗೆ ಆಡುತ್ತಿದ್ದ ಗುಸುಗುಸು ಮಾತು ಫರಿಸಾಯರ ಕಿವಿಗೆ ಮುಟ್ಟಿತು. ಅವರೂ ಮುಖ್ಯಯಾಜಕರೂ ಯೇಸುವನ್ನು ಬಂಧಿಸಲು ಕಾಲಾಳುಗಳನ್ನು ಕಳುಹಿಸಿದರು.


ಯೇಸು ಇದನ್ನು ಸಬ್ಬತ್ ದಿನದಲ್ಲಿ ಮಾಡಿದ್ದರಿಂದ ಯೆಹೂದ್ಯರು ಅವರಿಗೆ ಕಿರುಕುಳಕೊಡಲು ತೊಡಗಿದರು.


ಅವರನ್ನು ಸಿಮೆಯೋನನು ಆಶೀರ್ವದಿಸಿದನು. ತಾಯಿ ಮರಿಯಳಿಗೆ, “ಇಗೋ, ಈ ಮಗು ಇಸ್ರಯೇಲರಲ್ಲಿ ಅನೇಕರ ಉನ್ನತಿಗೂ ಅನೇಕರ ಅವನತಿಗೂ ಕಾರಣನಾಗುವನು. ಅನೇಕರು ಪ್ರತಿಭಟಿಸುವ ದೈವಸಂಕೇತವಾಗುವನು. ಇದರಿಂದ ಅನೇಕರ ಹೃದಯದಾಳದ ಭಾವನೆಗಳು ಬಯಲಾಗುವುವು.


ಸರ್ವೇಶ್ವರ ಅವನಿಗೆ, “ಜನರು ಹೇಳಿದಂತೆಯೇ ಮಾಡು; ಅವರು ನಿನ್ನನ್ನಲ್ಲ, ನನ್ನನ್ನು ತಿರಸ್ಕರಿಸಿದ್ದಾರೆ. ನನ್ನ ಆಳ್ವಿಕೆ ಬೇಡವೆನ್ನುತ್ತಾರೆ.


“ನೀನು ದೆವ್ವಹಿಡಿದವನೆಂದು ಈಗ ನಮಗೆ ಸ್ಪಷ್ಟವಾಯಿತು. ಅಬ್ರಹಾಮನು ಸತ್ತುಹೋದನು; ಪ್ರವಾದಿಗಳೂ ಸತ್ತುಹೋದರು. ಆದರೂ ನೀನು, ‘ನನ್ನ ಮಾತಿಗೆ ಶರಣಾಗಿ ನಡೆಯುವವನು ಎಂದೆಂದಿಗೂ ಸಾವಿಗೆ ತುತ್ತಾಗನು,’ ಎಂದು ಹೇಳುತ್ತಿರುವೆ;


ಅಲ್ಲಿ ಭಕ್ತಾದಿಗಳನ್ನು ದೃಢಪಡಿಸಿ ವಿಶ್ವಾಸದಲ್ಲಿ ನಿಷ್ಠರಾಗಿರುವಂತೆ ಪ್ರೋತ್ಸಾಹಿಸಿದರು. ‘ಕಷ್ಟಸಂಕಟಗಳ ಮೂಲಕ ನಾವು ದೇವರ ಸಾಮ್ರಾಜ್ಯವನ್ನು ಪ್ರವೇಶಿಸಬೇಕಾಗಿದೆ’ ಎಂದು ಬೋಧಿಸಿದರು.


ಆಗ ಯೇಸು, “ನಾನು ಕುಡಿಯುವ ಪಾತ್ರೆಯಿಂದ ನೀವೂ ಕುಡಿಯುವಿರಿ; ನಾನು ಪಡೆಯಲಿರುವ ಸ್ನಾನವನ್ನು ನೀವೂ ಪಡೆಯುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು