Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 15:24 - ಕನ್ನಡ ಸತ್ಯವೇದವು C.L. Bible (BSI)

24 ಬೇರೆ ಯಾರೂ ಮಾಡದ ಮಹತ್ತಾದ ಕಾರ್ಯಗಳನ್ನು ನಾನು ಅವರ ನಡುವೆ ಮಾಡದೆಹೋಗಿದ್ದರೆ ಅವರು ಪಾಪದೋಷಿಗಳೆಂದು ಹೇಳಲಾಗುತ್ತಿರಲಿಲ್ಲ. ಆದರೆ ಅವರು ನನ್ನ ಕಾರ್ಯಗಳನ್ನು ನೋಡಿಯು ಸಹ ನನ್ನ ಮೇಲೆ ಹಾಗು ನನ್ನ ಪಿತನ ಮೇಲೆ ದ್ವೇಷ ಬೆಳೆಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರ ನಡುವೆ ಮಾಡದೆಹೋಗಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರು ನನ್ನ ಅದ್ಭುತಕಾರ್ಯಗಳನ್ನು ನೋಡಿದ್ದಾರೆ, ಆದರೂ ನನ್ನನ್ನೂ ನನ್ನ ತಂದೆಯನ್ನೂ ದ್ವೇಷಿಸಿದ್ದಾರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಮತ್ತಾರೂ ನಡಿಸದ ಕ್ರಿಯೆಗಳನ್ನು ನಾನು ಅವರಲ್ಲಿ ನಡಿಸದೆ ಇದ್ದರೆ ಅವರಿಗೆ ಪಾಪವು ಇರುತ್ತಿದ್ದಿಲ್ಲ; ಆದರೆ ಈಗ ಅವರು ನೋಡಿದ್ದಾರೆ, ಆದರೂ ನನ್ನ ಮೇಲೆಯೂ ನನ್ನ ತಂದೆಯ ಮೇಲೆಯೂ ದ್ವೇಷಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಬೇರೆ ಯಾವ ವ್ಯಕ್ತಿಯೂ ಹಿಂದೆಂದೂ ಮಾಡಿಲ್ಲದ ಕಾರ್ಯಗಳನ್ನು ಮಾಡಿಲ್ಲದಿದ್ದರೆ, ಅವರನ್ನು ಪಾಪದೋಷಿಗಳೆಂದು ಹೇಳಲಾಗುತ್ತಿರಲಿಲ್ಲ. ಆದರೆ ನಾನು ಮಾಡಿದ ಆ ಕಾರ್ಯಗಳನ್ನು ಅವರು ನೋಡಿದ್ದಾರೆ. ಹೀಗಿದ್ದರೂ ಅವರು ನನ್ನನ್ನೂ ನನ್ನ ತಂದೆಯನ್ನೂ ದ್ವೇಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಬೇರೆ ಯಾರೂ ಮಾಡದ ಕ್ರಿಯೆಗಳನ್ನು ನಾನು ಅವರ ನಡುವೆ ಮಾಡದೆ ಹೋಗಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರು ನನ್ನ ಕ್ರಿಯೆಗಳನ್ನು ಕಂಡೂ ನನ್ನನ್ನೂ ನನ್ನ ತಂದೆಯನ್ನೂ ದ್ವೇಷಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಮಿಯಾ ತೆಂಚ್ಯಾ ಮದ್ದಿ ಯೆವ್ನ್ ಕೊನ್ಬಿ ಕರುನಸಲ್ಲಿ ಕಾಮಾ ಕರುನ್‍ ದಾಕ್ವಿನಸ್ಲ್ಯಾರ್ ತೆಂಕಾ ತೆಂಚ್ಯಾ ಪಾಪಾಚ್ಯಾ ವಿಶಯಾತ್ ತೆಂಕಾ ಅಸಂಯ್ ದಿಶಿನಶಿ ಹೊತ್ತೆ, ತೆನಿ ತೆ ಸಗ್ಳೆ ಬಗಟ್ಲ್ಯಾನಿ ತೆಚೆಸಾಟ್ನಿ ತೆನಿ ಮಾಜೊ ಅನಿ ಮಾಜ್ಯಾ ಬಾಬಾಚೊ ದ್ವೆಸ್ ಕರ್‍ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 15:24
36 ತಿಳಿವುಗಳ ಹೋಲಿಕೆ  

ಅದಕ್ಕೆ ಉತ್ತರವಾಗಿ ಯೇಸು, “ನಾನು ಇಷ್ಟುಕಾಲ ನಿಮ್ಮೊಡನೆ ಇದ್ದರೂ ನಾನು ಯಾರೆಂಬುದನ್ನು ನೀನು ಅರಿತುಕೊಳ್ಳಲಿಲ್ಲವೆ? ನನ್ನನ್ನು ನೋಡಿದವನು ಪಿತನನ್ನೇ ನೋಡಿದವನಾಗಿದ್ದಾನೆ. ಹೀಗಿರುವಾಗ, ಫಿಲಿಪ್ಪನೇ, ‘ನಮಗೆ ಪಿತನನ್ನು ತೋರಿಸಿ’ ಎಂದು ಹೇಗೆ ಕೇಳುತ್ತೀ?


ಯೊವಾನ್ನನು ನೀಡಿದ ಸಾಕ್ಷ್ಯಕ್ಕಿಂತಲೂ ಮಿಗಿಲಾದ ಸಾಕ್ಷ್ಯ ನನಗುಂಟು; ನಾನು ಸಾಧಿಸುತ್ತಿರುವ ಸುಕೃತ್ಯಗಳೇ, ಅಂದರೆ, ಪಿತನು ನನಗೆ ಮಾಡಿಮುಗಿಸಲು ಕೊಟ್ಟ ಕಾರ್ಯಗಳೇ, ನಾನು ಪಿತನಿಂದ ಬಂದವನೆಂದು ನನ್ನ ಪರವಾಗಿ ಸಾಕ್ಷಿಕೊಡುತ್ತವೆ.


ನಾನು ನನ್ನ ಪಿತನ ಕಾರ್ಯಗಳನ್ನು ಮಾಡದಿದ್ದರೆ ನೀವು ನನ್ನನ್ನು ನಂಬಬೇಕಾಗಿಲ್ಲ.


ಅದಕ್ಕೆ ಯೇಸು, “ಪಿತನ ಹೆಸರಿನಲ್ಲಿ ನಾನು ಎಷ್ಟೋ ಸತ್ಕಾರ್ಯಗಳನ್ನು ನಿಮ್ಮ ಮುಂದೆ ಮಾಡಿದ್ದೇನೆ. ಇವುಗಳಲ್ಲಿ ಯಾವುದಕ್ಕಾಗಿ ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ?” ಎಂದರು.


ಹುಟ್ಟುಕುರುಡನಿಗೆ ಯಾರಾದರೂ ಕಣ್ಣುಕೊಟ್ಟ ಸುದ್ದಿಯನ್ನು ಲೋಕಸೃಷ್ಟಿಯಾದಾಗಿನಿಂದ ಒಬ್ಬರೂ ಕೇಳಿಲ್ಲ.


ಅಲ್ಲಿ ನೆರೆದಿದ್ದ ಹಲವರಿಗೆ ಯೇಸುವಿನಲ್ಲಿ ನಂಬಿಕೆ ಹುಟ್ಟಿತು. “ಲೋಕೋದ್ಧಾರಕ ಬಂದಾಗ ಈತನು ಮಾಡಿದ್ದಕ್ಕೂ ಮಿಗಿಲಾದ ಸೂಚಕಕಾರ್ಯಗಳನ್ನು ಮಾಡಿಯಾನೆ?” ಎಂದುಕೊಂಡರು.


ಅವನು ಯೆಹೂದ್ಯರ ನಾಯಕರಲ್ಲಿ ಒಬ್ಬನು. ಒಂದು ರಾತ್ರಿ ಅವನು ಯೇಸು ಸ್ವಾಮಿಯ ಬಳಿಗೆ ಬಂದು, “ಗುರುದೇವಾ, ತಾವು ದೇವರಿಂದ ಬಂದ ಬೋಧಕರೆಂದು ನಾವು ಬಲ್ಲೆವು. ದೇವರು ತನ್ನೊಡನೆ ಇಲ್ಲದ ಹೊರತು ಯಾರಿಂದಲೂ ತಾವು ಮಾಡುವ ಸೂಚಕಕಾರ್ಯಗಳನ್ನು ಮಾಡಲು ಆಗದು,” ಎಂದು ಹೇಳಿದನು.


ದೆವ್ವ ಬಿಡಿಸಿದ ಮೇಲೆ ಆ ಮೂಕನಿಗೆ ಮಾತು ಬಂದಿತು. ಜನರೆಲ್ಲರೂ ಆಶ್ಚರ್ಯಚಕಿತರಾದರು. “ಇಂತಹ ಕಾರ್ಯವನ್ನು ನಾವು ಇಸ್ರಯೇಲಿನಲ್ಲಿ ಕಂಡದ್ದೇ ಇಲ್ಲ!” ಎಂದುಕೊಂಡರು.


ಅವುಗಳಿಗೆ ಅಡ್ಡಬೀಳಬೇಡ. ಅವುಗಳನ್ನು ಆರಾಧಿಸಬೇಡ. ಏಕೆಂದರೆ ನಾನೇ ನಿನ್ನ ದೇವರಾದ ಸರ್ವೇಶ್ವರ, ನನಗೆ ಸಲ್ಲತಕ್ಕ ಗೌರವವನ್ನು ನಾನು ಮತ್ತೊಬ್ಬನಿಗೆ ಸಲ್ಲಗೊಡಿಸುವುದಿಲ್ಲ. ನನ್ನನ್ನು ದ್ವೇಷಿಸುವವರನ್ನು ದಂಡಿಸುತ್ತೇನೆ; ಹೆತ್ತವರ ದೋಷಫಲವನ್ನು ಅವರ ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುತ್ತೇನೆ.


ವಿಶ್ವಾಸದಲ್ಲಿ ವ್ಯಭಿಚಾರಿಗಳಂತೆ ಬಾಳುವವರೇ, ಲೋಕದೊಡನೆ ಗೆಳೆತನವೆಂದರೆ ದೇವರೊಡನೆ ಹಗೆತನವೆಂಬುದು ನಿಮಗೆ ತಿಳಿಯದೇ? ಲೋಕದೊಡನೆ ಗೆಳೆತನವನ್ನು ಬಯಸುವವನು ದೇವರೊಡನೆ ಹಗೆತನವನ್ನು ಬೆಳೆಸುತ್ತಾನೆ.


ನಂಬಿಕೆದ್ರೋಹಿಗಳೂ ದುಡುಕುವವರೂ ಮಹಾಗರ್ವಿಗಳೂ ಆಗುವರು. ದೇವರನ್ನು ಅರಸದೆ ಭೋಗಗಳನ್ನೇ ಬಯಸುವರು.


ಅವರು ಹರಟೆಮಲ್ಲರು, ಚಾಡಿಕೋರರು, ದೇವದ್ರೋಹಿಗಳು, ಗರ್ವಿಗಳು, ಅಹಂಕಾರಿಗಳು, ಜಂಭಕೊಚ್ಚಿಕೊಳ್ಳುವವರು, ಕೇಡುಬಗೆಯುವವರು, ತಂದೆತಾಯಿಗಳಿಗೆ ಅವಿಧೇಯರು ಆಗಿದ್ದಾರೆ.


ಇವು ನಜರೇತಿನ ಯೇಸುವಿಗೆ ಸಂಬಂಧಪಟ್ಟ ವಿಷಯಗಳು. ಸ್ನಾನದೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ಯೊವಾನ್ನನು ಬೋಧಿಸಿದ ನಂತರ, ಯೇಸು ತಮ್ಮ ಸೇವಾವೃತ್ತಿಯನ್ನು ಗಲಿಲೇಯದಲ್ಲಿ ಪ್ರಾರಂಭಿಸಿದರು. ಅವರು ಪವಿತ್ರಾತ್ಮರಿಂದಲೂ ದೈವಶಕ್ತಿಯಿಂದಲೂ ಅಭಿಷಿಕ್ತರಾಗಿದ್ದರು. ದೇವರು ತಮ್ಮೊಡನೆ ಇದ್ದುದರಿಂದ ಅವರು ಎಲ್ಲೆಡೆಯಲ್ಲೂ ಒಳಿತನ್ನು ಮಾಡುತ್ತಾ, ಪಿಶಾಚಿ ಪೀಡಿತರಾದವರನ್ನು ಸ್ವಸ್ಥಪಡಿಸುತ್ತಾ ಸಂಚರಿಸಿದರು.


“ಇಸ್ರಯೇಲ್‍ಬಾಂಧವರೇ, ನನ್ನ ಮಾತುಗಳನ್ನು ಆಲಿಸಿರಿ. ನಜರೇತಿನ ಯೇಸುಸ್ವಾಮಿ ದೈವನಿಯಮಿತ ವ್ಯಕ್ತಿ ಎಂಬುದನ್ನು ದೇವರೇ ಅವರ ಮುಖಾಂತರ ನಡೆಸಿದ ಅದ್ಭುತಕಾರ್ಯಗಳಿಂದ, ಮಹತ್ಕಾರ್ಯಗಳಿಂದ ಹಾಗೂ ಸೂಚಕಕಾರ್ಯಗಳಿಂದ ನಿಮಗೆ ಸ್ಪಷ್ಟಪಡಿಸಲಾಗಿದೆ. ಇದು ನಿಮಗೆ ತಿಳಿದಿರುವ ವಿಷಯ.


ನನ್ನನ್ನು ಕಾಣುವವನು ನನ್ನನ್ನು ಕಳುಹಿಸಿದಾತನನ್ನೇ ಕಾಣುತ್ತಾನೆ.


ಆದರೆ, ನಾನು ನಿಮಗೆ ಹೇಳಿದಂತೆ, ನೀವು ನನ್ನನ್ನು ನೋಡಿಯೂ ವಿಶ್ವಾಸಿಸದೆ ಇದ್ದೀರಿ.


“ಏನು ನಡೆಯಿತು?” ಎಂದು ಯೇಸು ಪುನಃ ಕೇಳಿದಾಗ ಆ ಶಿಷ್ಯರಿಬ್ಬರು, “ಇವು ನಜರೇತಿನ ಯೇಸುವಿಗೆ ಸಂಭವಿಸಿದ ಘಟನೆಗಳು. ಅವರು ನಡೆಯಲ್ಲೂ ನುಡಿಯಲ್ಲೂ ದೇವರ ಹಾಗೂ ಸಕಲ ಮಾನವರ ದೃಷ್ಟಿಯಲ್ಲಿ ಪ್ರವಾದಿಯಾಗಿದ್ದರು.


ಎಲ್ಲರೂ ನೋಡುತ್ತಿದ್ದ ಹಾಗೆ ಅವನು ಎದ್ದುನಿಂತನು; ತನ್ನ ಹಾಸಿಗೆಯನ್ನು ತಾನೇ ಎತ್ತಿಕೊಂಡು ಹೊರಟುಹೋದನು. ನೆರೆದಿದ್ದ ಎಲ್ಲರೂ ಆಶ್ಚರ್ಯಚಕಿತರಾಗಿ, “ಇಂಥ ಕಾರ್ಯವನ್ನು ನಾವು ನೋಡಿದ್ದೇ ಇಲ್ಲ!", ಎಂದು ದೇವರನ್ನು ಕೊಂಡಾಡಿದರು.


ಸ್ನಾನಿಕ ಯೊವಾನ್ನನು ಧರ್ಮಮಾರ್ಗವನ್ನು ತೋರಿಸಲು ಬಂದನು. ನೀವು ಆತನನ್ನು ನಂಬಲಿಲ್ಲ. ಆದರೆ ಸುಂಕದವರೂ ವೇಶ್ಯೆಯರೂ ಆತನನ್ನು ನಂಬಿದರು. ಇದನ್ನು ಕಂಡ ಮೇಲೂ ನೀವು ಪಶ್ಚಾತ್ತಾಪಪಡಲಿಲ್ಲ, ಯೊವಾನ್ನನನ್ನು ನಂಬಲೂ ಇಲ್ಲ.


ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಸ್ವಸ್ಥರಾಗುತ್ತಾರೆ. ಕಿವುಡರು ಕೇಳುತ್ತಾರೆ, ಸತ್ತವರು ಮತ್ತೆ ಜೀವ ಪಡೆಯುತ್ತಾರೆ. ದೀನದಲಿತರಿಗೆ ಶುಭಸಂದೇಶವನ್ನು ಪ್ರಕಟಿಸಲಾಗುತ್ತಿದೆ.


ನನಗೆ ತಪ್ಪುಮಾಡುವವನು ತನ್ನಾತ್ಮಕ್ಕೇ ಕೇಡುಮಾಡುತ್ತಾನೆ ನನ್ನನ್ನು ಹಗೆಮಾಡುವವರೆಲ್ಲರು ಮೃತ್ಯುವನ್ನು ಪ್ರೀತಿಸುತ್ತಾರೆ.


“ಮುದುರಿಕೊಳ್ಳುತ್ತಿದ್ದರಾ ಎದುರಾಳಿಗಳು ಅವರ ಮುಂದೆ I ಅಳಿಯದೆ ಉಳಿದುಕೊಳ್ಳುತ್ತಿತ್ತು ಅವರಿಗಾದ ದಂಡನೆ ಮುಗಿವಿಲ್ಲದೆ, II


ಅವುಗಳಿಗೆ ಅಡ್ಡಬೀಳಬೇಡ, ಅವುಗಳನ್ನು ಆರಾಧಿಸಬೇಡ. ಏಕೆಂದರೆ ನಾನೇ ನಿನ್ನ ದೇವರಾದ ಸರ್ವೇಶ್ವರ. ನನಗೆ ಸಲ್ಲತಕ್ಕ ಗೌರವವನ್ನು ನಾನು ಮತ್ತೊಬ್ಬರಿಗೆ ಸಲ್ಲಗೊಡಿಸುವುದಿಲ್ಲ. ನನ್ನನ್ನು ದ್ವೇಷಿಸುವವರನ್ನು ದಂಡಿಸುತ್ತೇನೆ; ಅವರ ದೋಷಫಲವನ್ನು ಅವರ ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುತ್ತೇನೆ.


ಲಾಸರನ ನಿಮಿತ್ತವಾಗಿ ಅನೇಕ ಯೆಹೂದ್ಯರು ತಮ್ಮನ್ನು ಬಿಟ್ಟು ಯೇಸುವಿನಲ್ಲಿ ನಂಬಿಕೆಯಿಟ್ಟ ಕಾರಣ ಲಾಸರನನ್ನು ಕೂಡ ಕೊಲ್ಲಬೇಕೆಂದು ಮುಖ್ಯಯಾಜಕರು ಆಲೋಚಿಸಿದರು.


ಯೇಸು, “ನೀವು ಕುರುಡರೇ ಆಗಿದ್ದರೆ ಪಾಪಿಗಳಾಗುತ್ತಿರಲಿಲ್ಲ. ಆದರೆ, ‘ನಮಗೆ ಕಣ್ಣು ಕಾಣುತ್ತದೆ,’ ಎಂದು ಹೇಳಿಕೊಳ್ಳುತ್ತೀರಿ; ಆದ್ದರಿಂದ ನೀವು ಪಾಪಿಗಳಾಗಿದ್ದೀರಿ,” ಎಂದರು.


ನೀವು ನನ್ನವರಾದುದರಿಂದ ಅವರು ನಿಮ್ಮನ್ನು ಹೀಗೆ ಕಾಣುವರು. ಏಕೆಂದರೆ ನನ್ನನ್ನು ಕಳುಹಿಸಿದಾತನನ್ನು ಅವರು ಅರಿಯರು.


ನಾನು ಬಂದು ಅವರಿಗೆ ಬೋಧನೆ ಮಾಡದೆಹೋಗಿದ್ದರೆ ಅವರು ಪಾಪದೋಷಿಗಳು ಎಂದು ಹೇಳಲಾಗುತ್ತಿರಲಿಲ್ಲ. ಆದರೆ ಈಗ ಅವರ ದೋಷಕ್ಕೆ ಯಾವ ನೆಪವನ್ನೂ ಒಡ್ಡುವಂತಿಲ್ಲ.


ನನ್ನ ಮೇಲೆ ದ್ವೇಷ ಇದ್ದವನಿಗೆ ನನ್ನ ಪಿತನ ಮೇಲೆಯೂ ದ್ವೇಷ ಇದೆ.


ಪಾಪದ ವಿಷಯವಾಗಿ ಅವರ ತಪ್ಪುಭಾವನೆಯನ್ನು ಮನವರಿಕೆ ಮಾಡಿಕೊಡುವರು. ಏಕೆಂದರೆ, ಅವರು ನನ್ನಲ್ಲಿ ವಿಶ್ವಾಸ ಇಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು