Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 15:25 - ಕನ್ನಡ ಸತ್ಯವೇದವು C.L. Bible (BSI)

25 “ನಿಷ್ಕಾರಣವಾಗಿ ಅವರು ನನ್ನನ್ನು ದ್ವೇಷಿಸಿದರು” ಎಂದು ಅವರ ಧರ್ಮಶಾಸ್ತ್ರದಲ್ಲೇ ಬರೆದಿರುವುದು ಹೀಗೆ ನೆರವೇರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು’ ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು’ ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನಿಜವಾಗಲೆಂದು ಹೀಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದರೆ, ‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಮಾಡಿದರು,’ ಎಂದು ಅವರ ನಿಯಮದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತೆಂಚ್ಯಾ ಖಾಯ್ದ್ಯಾತ್ನಿ ಕಾಯ್ಬಿ ಕಾರನ್ ನಸ್ತಾನಾ ತೆನಿ ಮಾಜೊ ದ್ವೆಸ್ ಕರ್ಲ್ಯಾನಿ. ಮನುನ್ ಲಿವಲ್ಲೆ ಖರೆ ಹೊವ್‍ಸಾಟ್ನಿ ಹೆ ಸಗ್ಳೆ ಅಶೆ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 15:25
16 ತಿಳಿವುಗಳ ಹೋಲಿಕೆ  

ಹಾಕಿಹರು ದ್ವೇಷತುಂಬಿದ ಮಾತುಗಳ ಮುತ್ತಿಗೆ I ನನ್ನ ಎದುರಿಸುತಿಹರು ನಿಷ್ಕಾರಣವಾಗಿಯೆ II


ತಲೆ ಕೂದಲಿಗಿಂತ ಮಿಗಿಲಿಹರು ನಿಷ್ಕಾರಣ ದ್ವೇಷಿಗಳು I ಬಲಿಷ್ಟರಿಹರು ನನ್ನ ಕೊಲೆಗಡುಕರು, ನಿರ್ನಿಮಿತ್ತ ಶತ್ರುಗಳು I ಕಳ್ಳನಾನಲ್ಲನಾದರೂ ದಂಡಕೋರುತಿಹರು ವೈರಿಗಳು II


ಕಳ್ಳ ವೈರಿಗಳೆನ್ನ ನೋಡಿ ಹಿಗ್ಗಲು ಬಿಡಬೇಡ I ಈ ಕಾರಣ ಶತ್ರುಗಳು ಕಣ್ಣು ಮಿಟುಕಿಸುವುದು ಬೇಡ II


ತರುವಾಯ ಯೇಸುಸ್ವಾಮಿ, “ನಾನು ನಿಮ್ಮೊಡನೆ ಇದ್ದಾಗಲೇ ನಿಮಗೆ ತಿಳಿಸಿದ ವಿಷಯ ಇದು: ಮೋಶೆಯ ನಿಯಮದಲ್ಲೂ ಪ್ರವಾದಿಗಳ ಗ್ರಂಥಗಳಲ್ಲೂ ಕೀರ್ತನೆಗಳಲ್ಲೂ ನನ್ನ ವಿಷಯವಾಗಿ ಬರೆದಿರುವುದೆಲ್ಲಾ ನೆರವೇರಲೇಬೇಕಾಗಿತ್ತು,” ಎಂದರು.


ನಿಮಗೆ ದೇವರ ಶುಭಸಂದೇಶವನ್ನು ಉಚಿತವಾಗಿಯೇ ಬೋಧಿಸಿದೆನು. ನಿಮ್ಮನ್ನು ಮೇಲಕ್ಕೇರಿಸಲು ನನ್ನನ್ನೇ ತಗ್ಗಸಿಕೊಂಡೆನು. ಹೀಗೆ ಮಾಡಿದ್ದು ತಪ್ಪಾಯಿತೇ?


ಸಿಂಹಾಸನಾರೂಢನಾಗಿದ್ದವನು ನನಗೆ ಮತ್ತೂ ಹೇಳಿದ್ದೇನೆಂದರೆ : ಮುಗಿಸಿದ್ದಾಯಿತು, ‘ಅ'ಕಾರವೂ ‘ಳ'ಕಾರವೂ ನಾನೇ; ಆದಿಯೂ ಅಂತ್ಯವೂ ನಾನೇ; ಬಾಯಾರಿದವರಿಗೆ ಕೊಡುವೆ, ಜೀವಜಲವನು ಉಚಿತವಾಗಿಯೇ.


ದೇವರಾತ್ಮ ಹಾಗು ಮದುವಣಗಿತ್ತಿ, ‘ಬಾ’ ಎಂದು ಆಹ್ವಾನಿಸುತ್ತಾರೆ. ಇದನ್ನು ಕೇಳಿಸಿಕೊಳ್ಳುವ ಪ್ರತಿಯೊಬ್ಬನೂ ‘ಬಾ’ ಎಂದು ಹೇಳಲಿ. ಬಾಯಾರಿದವನು ಬರಲಿ; ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ಪಡೆಯಲಿ.”


ಪುಕ್ಕಟೆಯಾಗಿ ನಾವು ಯಾರ ಅನ್ನವನ್ನೂ ಉಣ್ಣಲಿಲ್ಲ. ನಿಮ್ಮಲ್ಲಿ ಯಾರಿಗೂ ಹೊರೆಯಾಗಬಾರದೆಂದು ಹಗಲಿರುಳೂ ನಾವೇ ಕಷ್ಟಪಟ್ಟು ದುಡಿದಿದ್ದೇವೆ.


ದೇವರ ಅನುಗ್ರಹವನ್ನು ನಿರಾಕರಿಸುವಂಥವನು ನಾನಲ್ಲ. ಧರ್ಮಶಾಸ್ತ್ರದ ಮೂಲಕ ದೇವರೊಡನೆ ಸತ್ಸಂಬಂಧವು ದೊರಕುವುದಾದರೆ ಕ್ರಿಸ್ತಯೇಸು ಮರಣಕ್ಕೀಡಾದುದು ನಿರರ್ಥಕವೇ ಸರಿ.


ಆದರೆ ದೇವರು ಯೇಸುಕ್ರಿಸ್ತರ ಮುಖಾಂತರ ಅವರಿಗೆ ಪಾಪವಿಮೋಚನೆಯನ್ನು ದಯಪಾಲಿಸಿ, ತಮ್ಮ ಉಚಿತಾರ್ಥ ಅನುಗ್ರಹದಿಂದ ಅವರನ್ನು ತಮ್ಮ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ.


ಧರ್ಮಶಾಸ್ತ್ರದ ನೇಮನಿಯಮಗಳು ಆ ಶಾಸ್ತ್ರಕ್ಕೆ ಅಧೀನರಾದವರಿಗೆ ಮಾತ್ರ ಅನ್ವಯಿಸುತ್ತವೆಂದು ನಾವು ಬಲ್ಲೆವು. ಆದ್ದರಿಂದ ಯಾರೂ ಯಾವ ನೆಪವನ್ನು ಹೇಳಲೂ ಬಾಯಿ ತೆರೆಯುವಂತಿಲ್ಲ. ಜಗತ್ತೆಲ್ಲವೂ ದೇವರ ನ್ಯಾಯತೀರ್ಪಿಗೆ ಗುರಿಯಾಗಿದೆ.


ಆಗ ಯೇಸು, “ ‘ನೀವು ದೇವರುಗಳು’ ಎಂದು ದೇವರೇ ಹೇಳಿರುವ ಮಾತು ನಿಮ್ಮ ಧರ್ಮಶಾಸ್ತ್ರದಲ್ಲಿ ಬರೆದಿದೆಯಲ್ಲವೆ?


‘ಆತನ ಎಲುಬೊಂದನ್ನು ಮುರಿಯಕೂಡದು’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ. ಆ ವಾಕ್ಯ ನೆರವೇರುವಂತೆ ಹೀಗೆ ನಡೆಯಿತು.


ರೋಗಿಗಳನ್ನು ಗುಣಪಡಿಸಿರಿ, ಸತ್ತವರನ್ನು ಮತ್ತೆ ಬದುಕಿಸಿರಿ, ಕುಷ್ಠರೋಗಿಗಳನ್ನು ಸ್ವಸ್ಥಮಾಡಿರಿ. ದೆವ್ವಗಳನ್ನು ಬಿಡಿಸಿರಿ, ಉಚಿತವಾಗಿ ಪಡೆದಿರುವಿರಿ, ಉಚಿತವಾಗಿ ಕೊಡಿ.


“ನಾನು ನಿಮ್ಮೆಲ್ಲರನ್ನೂ ಕುರಿತು ಹೀಗೆ ಹೇಳುತ್ತಾ ಇಲ್ಲ. ಯಾರನ್ನು ನಾನು ಆರಿಸಿಕೊಂಡಿದ್ದೇನೆಂಬುದು ನನಗೆ ಗೊತ್ತು. ಆದರೆ ‘ನನ್ನೊಡನೆ ಉಂಡವನೇ ನನಗೆ ದ್ರೋಹ ಬಗೆದನು’ ಎಂಬುದಾಗಿ ಪವಿತ್ರಗ್ರಂಥದಲ್ಲಿ ಬರೆದಿದೆ. ಆ ಮಾತು ಈಡೇರಬೇಕಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು