Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 15:26 - ಕನ್ನಡ ಸತ್ಯವೇದವು C.L. Bible (BSI)

26 ಪಿತನಿಂದ ಹೊರಡುವ ಸತ್ಯಸ್ವರೂಪಿಯಾದ ಪವಿತ್ರಾತ್ಮರನ್ನು ನಿಮ್ಮ ಪೋಷಕರನ್ನಾಗಿ ನಾನು ಪಿತನಿಂದಲೇ ಕಳುಹಿಸುವೆನು. ಅವರು ಬಂದು ನನ್ನ ಪರವಾಗಿ ಸಾಕ್ಷಿನೀಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಸಹಾಯಕನು, ಎಂದರೆ, ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ, ಆತನೇ ನನ್ನ ವಿಷಯವಾಗಿ ಸಾಕ್ಷಿ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಸಹಾಯಕನು, ಅಂದರೆ ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು, ಬಂದಾಗ ಆತನು ನನ್ನನ್ನು ಕುರಿತು ಸಾಕ್ಷಿಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 “ನಾನು ತಂದೆಯ ಬಳಿಯಿಂದ ಸಹಾಯಕನನ್ನು ನಿಮಗೆ ಕಳುಹಿಸಿಕೊಡುವೆನು. ತಂದೆಯ ಬಳಿಯಿಂದ ಬರುವ ಆ ಸಹಾಯಕನು ಸತ್ಯದ ಆತ್ಮನಾಗಿದ್ದಾನೆ. ಆತನು ಬಂದಾಗ ನನ್ನ ಬಗ್ಗೆ ನಿಮಗೆ ತಿಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 “ಆದರೂ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಆ ಸಹಾಯಕರೊಬ್ಬರು ನಿಮ್ಮ ಬಳಿಗೆ ಬರುವರು. ಆಗ ತಂದೆಯಿಂದ ಬರುವ ಆ ಸತ್ಯದ ಆತ್ಮವಾಗಿರುವವರೇ ನನ್ನ ವಿಷಯವಾಗಿ ಸಾಕ್ಷಿಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ದೆವಾಚ್ಯಾ ವಿಶಯಾತ್ಲೆ ಖರೆ ದಾಕ್ವುನ್ ದಿತಲೊ, ಮಜತ್ ಕರ್‍ತಲೊ ಪವಿತ್ರ್ ಆತ್ಮೊ ಬಾಬಾಕ್ನಾ ಯೆತಾ. ಮಿಯಾ ತೆಕಾ ಬಾಬಾಕ್ನಾ ತುಮ್ಚೆಕ್ಡೆ ಧಾಡುನ್ ದಿತಾ. ಅನಿ ತೊ ಮಾಜೆ ವಿಶಯಾತ್ ಸಾಕ್ಷಿ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 15:26
14 ತಿಳಿವುಗಳ ಹೋಲಿಕೆ  

ಆದರೆ ಪಿತನು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪೋಷಕರಾದ ಪವಿತ್ರಾತ್ಮ ನಿಮಗೆ ಎಲ್ಲವನ್ನೂ ಬೋಧಿಸಿ ನಾನು ಹೇಳಿರುವುದನ್ನೆಲ್ಲಾ ನಿಮ್ಮ ನೆನಪಿಗೆ ತರುವರು.


ಈ ಘಟನೆಗಳಿಗೆ ನಾವು ಸಾಕ್ಷಿಗಳು; ನಾವು ಮಾತ್ರವಲ್ಲ, ದೈವೇಚ್ಛೆಯಂತೆ ನಡೆಯುವವರಿಗೆ ದೇವರು ದಯಪಾಲಿಸುವ ಪವಿತ್ರಾತ್ಮ ಅವರು ಕೂಡ ಸಾಕ್ಷಿಯಾಗಿದ್ದಾರೆ,” ಎಂದನು.


ಮಾನವನ ಅಂತರಂಗವನ್ನು ಅರಿತ ದೇವರು ನಿಮಗೆ ಕೊಟ್ಟಂತೆಯೇ ಅವರಿಗೂ ಪವಿತ್ರಾತ್ಮ ಅವರನ್ನು ಕೊಟ್ಟರು. ಅವರೂ ತಮ್ಮವರೇ ಎಂದು ವ್ಯಕ್ತಪಡಿಸಿದರು.


ನನ್ನ ಪಿತ ವಾಗ್ದಾನ ಮಾಡಿದ ವ್ಯಕ್ತಿಯನ್ನು ನಾನೇ ನಿಮಗೆ ಕಳುಹಿಸಿಕೊಡುವೆನು. ಸ್ವರ್ಗದಿಂದ ಬರುವ ಶಕ್ತಿಯಿಂದ ನೀವು ಭೂಷಿತರಾಗುವ ತನಕ ಈ ಪಟ್ಟಣದಲ್ಲೇ ಕಾದಿರಿ,” ಎಂದು ಹೇಳಿದರು.


ಬಳಿಕ ಆ ದೇವದೂತನು ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ಸ್ಫಟಿಕದಂತೆ ಮಿನುಗುತ್ತಿತ್ತು. ಅದು ದೇವರ ಹಾಗೂ ಯಜ್ಞದ ಕುರಿಮರಿಯ ಸಿಂಹಾಸನದಲ್ಲಿ ಉಗಮಿಸಿ,


ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ಹಲವಾರು ಮಹತ್ಕಾರ್ಯಗಳಿಂದಲೂ ಮತ್ತು ತಮ್ಮ ಚಿತ್ತಾನುಸಾರ ಅನುಗ್ರಹಿಸಿದ ಪವಿತ್ರಾತ್ಮ ಅವರ ವರದಾನಗಳಿಂದಲೂ ದೇವರು ಆ ಪ್ರಮಾಣವನ್ನು ಪುಷ್ಟೀಕರಿಸಿದ್ದಾರೆ.


ಇದಲ್ಲದೆ, ಕ್ರಿಸ್ತಯೇಸುವನ್ನು ಕುರಿತ ಸಾಕ್ಷ್ಯವು ನಿಮ್ಮಲ್ಲಿ ನೆಲೆಗೊಂಡಿದೆ.


ವಾಸ್ತವವಾಗಿ ಹೇಳುವುದಾದರೆ, ನಾನು ಹೋಗುವುದು ನಿಮ್ಮ ಹಿತಕ್ಕಾಗಿಯೇ. ನಾನು ಹೋಗದಿದ್ದರೆ, ಪೋಷಕ ನಿಮ್ಮಲ್ಲಿಗೆ ಬರುವುದಿಲ್ಲ. ನಾನು ಹೋದರೆ ಮಾತ್ರ ಅವರನ್ನು ನಿಮ್ಮಲ್ಲಿಗೆ ಕಳುಹಿಸಿಕೊಡಬಲ್ಲೆ.


ಯೇಸು, ಅವರಿಗೆ, “ದೇವರೇ ನಿಮ್ಮ ತಂದೆಯಾಗಿದ್ದರೆ, ನನ್ನ ಮೇಲೆ ನಿಮಗೆ ಪ್ರೀತಿಯಿರುತ್ತಿತ್ತು. ಕಾರಣ, ನಾನು ದೇವರಿಂದಲೇ ಹೊರಟು ಇಲ್ಲಿಗೆ ಬಂದವನು. ನನ್ನಷ್ಟಕ್ಕೆ ನಾನೇ ಬರಲಿಲ್ಲ. ನನ್ನನ್ನು ಕಳುಹಿಸಿದ್ದು ದೇವರೇ.


ಒಮ್ಮೆ ಅವರೆಲ್ಲರೂ ಒಂದುಗೂಡಿದ್ದ ಸಂದರ್ಭದಲ್ಲಿ, “ನೀವು ಜೆರುಸಲೇಮನ್ನು ಬಿಟ್ಟು ಹೋಗಬೇಡಿ; ನಾನು ನಿಮಗೆ ತಿಳಿಸಿದಂತೆ ನನ್ನ ಪಿತನು ವಾಗ್ದಾನ ಮಾಡಿರುವ ವರಕ್ಕಾಗಿ ಕಾದುಕೊಂಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು