Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 15:4 - ಕನ್ನಡ ಸತ್ಯವೇದವು C.L. Bible (BSI)

4 ನೀವು ನನ್ನಲ್ಲಿ ನೆಲೆಗೊಂಡಿರಿ, ಆಗ ನಾನು ನಿಮ್ಮಲ್ಲಿ ನೆಲೆಗೊಂಡಿರುವೆನು. ಕವಲು ಮೂಲಬಳ್ಳಿಯಲ್ಲಿ ಒಂದಾಗಿ ನೆಲಸದಿದ್ದರೆ ತನ್ನಷ್ಟಕ್ಕೆ ತಾನೇ ಫಲಕೊಡಲಾಗದು. ಹಾಗೆಯೇ ನೀವು ಕೂಡ ನನ್ನಲ್ಲಿ ಒಂದಾಗಿ ನೆಲಸದಿದ್ದರೆ ಫಲಕೊಡಲಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀವು ನನ್ನಲ್ಲಿ ನೆಲೆಗೊಂಡಿರಿ, ನಾನೂ ನಿಮ್ಮಲ್ಲಿ ನೆಲೆಗೊಂಡಿರುವೆನು. ಕೊಂಬೆಯು ಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೇ ತಾನೇ ಫಲಕೊಡಲಾರದೋ, ಹಾಗೆಯೇ ನೀವು ನನ್ನಲ್ಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀವು ನನ್ನಲ್ಲಿ ನೆಲೆಗೊಂಡಿರ್ರಿ, ನಾನೂ ನಿಮ್ಮಲ್ಲಿ ನೆಲೆಗೊಂಡಿರುವೆನು. ಕೊಂಬೆಯು ಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲಕೊಡಲಾರದೋ ಹಾಗೆಯೇ ನೀವು ನನ್ನಲ್ಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೀವು ನನ್ನಲ್ಲಿ ನೆಲೆಗೊಂಡಿರಿ, ಆಗ ನಾನೂ ನಿಮ್ಮಲ್ಲಿ ನೆಲೆಗೊಂಡಿರುವೆನು. ಯಾವ ಕವಲೂ ತನ್ನಷ್ಟಕ್ಕೆ ತಾನೇ ಫಲಕೊಡಲಾರದು. ಅದು ದ್ರಾಕ್ಷಿಬಳ್ಳಿಯಲ್ಲಿ ನೆಲೆಗೊಂಡಿರಬೇಕು. ಇದು ನಿಮಗೂ ಅನ್ವಯಿಸುತ್ತದೆ. ನೀವು ನಿಮ್ಮಷ್ಟಕ್ಕೇ ಫಲಕೊಡಲಾರಿರಿ. ನೀವು ನನ್ನಲ್ಲಿ ನೆಲೆಗೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಾನು ನಿಮ್ಮಲ್ಲಿ ನೆಲೆಗೊಂಡಿರುವ ಹಾಗೇ ನನ್ನಲ್ಲಿ ನೆಲೆಗೊಂಡಿರಿ. ಕವಲುಬಳ್ಳಿಯು ದ್ರಾಕ್ಷಿಯ ಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲ ಕೊಡಲಾರದೋ ಹಾಗೆಯೇ ನೀವೂ ನನ್ನಲ್ಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತುಮಿ ಮಾಜ್ಯಾ ವಾಂಗ್ಡಾ ಎಕ್ ಹೊವ್ನ್ ರ್‍ಹಾವಾ ಅನಿ ಮಿಯಾ ತುಮ್ಚ್ಯಾ ವಾಂಗ್ಡಾ ಎಕ್ ಹೊವ್ನ್ ರ್‍ಹಾತಾ. ಖಲ್ಯಾಬಿ ಎಕ್ ಫಾಟ್ಯಾನ್ ಯೆಲಿಚ್ಯಾ ವಾಂಗ್ಡಾ ಎಕ್ ಹೊವ್ನ್ ರ್‍ಹಾಲ್ಯಾ ಶಿವಾಯ್ ಫಳಾ ದಿವ್ಕ್ ಹೊಯ್ನಾ. ತಶೆಚ್ ತುಮಿ ಮಾಜ್ಯಾ ವಾಂಗ್ಡಾ ಎಕ್ ಹೊವ್ನ್ ರ್‍ಹಾಲ್ಯಾ ಶಿವಾಯ್ ತುಮಿ ಫಳ್ ದಿವ್ಕ್ ಹೊಯ್ನಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 15:4
29 ತಿಳಿವುಗಳ ಹೋಲಿಕೆ  

ತಾನು ದೇವರಲ್ಲಿ ನೆಲೆಸಿದ್ದೇನೆಂದು ಹೇಳುವವನು ಕ್ರಿಸ್ತಯೇಸು ಜೀವಿಸಿದಂತೆಯೇ ಜೀವಿಸಬೇಕು. ಇದರಿಂದಲೇ ನಾವು ದೇವರಲ್ಲಿ ನೆಲೆಗೊಂಡಿದ್ದೇವೆಂದು ತಿಳಿದುಕೊಳ್ಳುತ್ತೇವೆ.


ಕ್ರಿಸ್ತಯೇಸುವಿನೊಂದಿಗೆ ನಾನೂ ಶಿಲುಬೆಗೇರಿಸಲಾದವನು. ಈಗ ಜೀವಿಸುವವನು ನಾನಲ್ಲ. ಕ್ರಿಸ್ತಯೇಸು ನನ್ನಲ್ಲಿ ಜೀವಿಸುತ್ತಾರೆ, ನನ್ನನ್ನು ಪ್ರೀತಿಸಿ ನನಗಾಗಿ ಪ್ರಾಣಾರ್ಪಣೆ ಮಾಡಿದ ದೇವರ ಪುತ್ರನಲ್ಲಿ ನಾನು ಇರಿಸಿರುವ ವಿಶ್ವಾಸದಿಂದಲೇ ನಾನೀಗ ಈ ದೇಹದಲ್ಲಿ ಜೀವಿಸುತ್ತಿದ್ದೇನೆ.


ಯೇಸು ಸ್ವಾಮಿ ತಮ್ಮಲ್ಲಿ ನಂಬಿಕೆ ಇಟ್ಟಿದ್ದ ಯೆಹೂದ್ಯರಿಗೆ ಹೀಗೆಂದರು: “ನನ್ನ ಮಾತಿಗೆ ನೀವು ಶರಣಾದರೆ ನಿಜವಾಗಿಯೂ ನೀವು ನನ್ನ ಶಿಷ್ಯರು.


ಕ್ರಿಸ್ತಯೇಸುವಿನ ಉಪದೇಶದಲ್ಲಿ ನೆಲೆಸದೆ ಅದರ ಎಲ್ಲೆಮೀರಿ ನಡೆಯುವವನಲ್ಲಿ ದೇವರು ಇರುವುದಿಲ್ಲ. ಆ ಉಪದೇಶದಲ್ಲಿ ನೆಲೆಸಿರುವವನಲ್ಲಿ ಪಿತ ಮತ್ತು ಪುತ್ರ ಇಬ್ಬರೂ ಇರುತ್ತಾರೆ.


ನನ್ನ ಮಾಂಸವನ್ನು ತಿಂದು, ನನ್ನ ರಕ್ತವನ್ನು ಕುಡಿಯುವವನು ನನ್ನಲ್ಲಿ ನೆಲೆಸಿರುತ್ತಾನೆ. ನಾನು ಅವನಲ್ಲಿ ನೆಲೆಸಿರುತ್ತೇನೆ.


ಯೇಸುಕ್ರಿಸ್ತರ ಮುಖಾಂತರ ಲಭಿಸುವ ಸತ್ಸಂಬಂಧದ ಫಲಗಳಿಂದ ತುಂಬಿದವರಾಗಿ ದೇವರಿಗೆ ಸ್ತುತಿಸಲ್ಲಿಸಿ, ಅವರ ಮಹಿಮೆ ಬೆಳಗುವಂತೆ ಮಾಡುವಿರಿ.


ನಾನು ನನ್ನ ಪಿತನಲ್ಲಿ ಇರುವೆನು; ನೀವು ನನ್ನಲ್ಲಿ ಇರುವಿರಿ ಮತ್ತು ನಾನು ನಿಮ್ಮಲ್ಲಿ ಇರುವೆನು. ಇದನ್ನು ಆ ದಿನದಂದು ನೀವು ಅರಿತುಕೊಳ್ಳುವಿರಿ.


ಹದವಾದ ಭೂಮಿಯ ಮೇಲೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿ ಅದನ್ನು ಸದ್ಗುಣಶೀಲ ಹಾಗೂ ಸಾತ್ವಿಕವಾದ ಹೃದಯದಲ್ಲಿಟ್ಟು ಸಹನೆಯಿಂದ ಫಲ ತರುವವರು.”


ನಿಮ್ಮ ಜೀವನ ವಿಶ್ವಾಸದಲ್ಲಿ ಬೇರೂರಿದೆಯೇ ಎಂಬುದನ್ನು ನೀವೇ ಪರೀಕ್ಷಿಸಿನೋಡಿ. ನಿಮ್ಮ ಅಂತರಂಗವನ್ನು ಪರಿಶೋಧಿಸಿ ನೋಡಿ. ಕ್ರಿಸ್ತಯೇಸು ನಿಮ್ಮಲ್ಲಿ ಇದ್ದಾರೆ ಎಂಬುದನ್ನು ಅರಿತಿದ್ದೀರಿ ಅಲ್ಲವೇ? ಅವರು ನಿಮ್ಮಲ್ಲಿ ಇಲ್ಲವಾದರೆ ನೀವು ಅಯೋಗ್ಯರೇ ಸರಿ.


ನೀವು ಕ್ರಿಸ್ತಯೇಸುವನ್ನು ಪ್ರಭುವಾಗಿ ಸ್ವೀಕರಿಸಿರುವುದರಿಂದ, ಅವರೊಡನೆ ಐಕ್ಯತೆಯಿಂದ ಬಾಳಿರಿ.


ಈ ರಹಸ್ಯ ಎಷ್ಟು ಶ್ರೀಮಂತವಾದುದು, ಎಷ್ಟು ಮಹಿಮಾನ್ವಿತವಾದುದು ಎಂಬುದನ್ನು ಎಲ್ಲಾ ಜನಾಂಗಗಳಿಗೂ ತಿಳಿಸಲು ದೇವರು ಇಚ್ಛಿಸಿದರು. ಕ್ರಿಸ್ತಯೇಸು ನಿಮ್ಮಲ್ಲಿದ್ದು ಮುಂದಿನ ಮಹಿಮೆಯ ನಿರೀಕ್ಷೆಗೆ ಆಧಾರವಾಗಿದ್ದಾರೆ ಎಂಬುದೇ ಈ ರಹಸ್ಯ.


ಅಲ್ಲಿ ಭಕ್ತಾದಿಗಳನ್ನು ದೃಢಪಡಿಸಿ ವಿಶ್ವಾಸದಲ್ಲಿ ನಿಷ್ಠರಾಗಿರುವಂತೆ ಪ್ರೋತ್ಸಾಹಿಸಿದರು. ‘ಕಷ್ಟಸಂಕಟಗಳ ಮೂಲಕ ನಾವು ದೇವರ ಸಾಮ್ರಾಜ್ಯವನ್ನು ಪ್ರವೇಶಿಸಬೇಕಾಗಿದೆ’ ಎಂದು ಬೋಧಿಸಿದರು.


ನಾನು ಇವರಲ್ಲಿಯೂ ನೀವು ನನ್ನಲ್ಲಿಯೂ ಇದ್ದು, ಇವರ ಐಕ್ಯಮತ್ಯವು ಪೂರ್ಣಸಿದ್ಧಿಗೆ ಬರಲಿ. ಆಗ ನೀವೇ ನನ್ನನ್ನು ಕಳುಹಿಸಿರುವಿರಿ ಎಂದೂ ನನ್ನನ್ನು ಪ್ರೀತಿಸಿದಂತೆಯೇ ಇವರನ್ನು ನೀವು ಪ್ರೀತಿಸಿರುವಿರಿ ಎಂದೂ ಲೋಕಕ್ಕೆ ಮನವರಿಕೆ ಆಗುವುದು.


ನುಡಿವುದು ಎಫ್ರಯಿಮ್, “ನನಗಿನ್ನು ಬೇಡ ವಿಗ್ರಹಗಳ ಗೊಡವೆ". ಅದಕ್ಕೆ ಒಲಿದು ಕಟಾಕ್ಷಿಸುವವನು ನಾನೇ ಅದಕ್ಕೆ ಹಚ್ಚಹಸಿರಾದ ತುರಾಯಿಮರದಂತಿರುವೆ ಅದಕ್ಕೆ ಫಲವನ್ನು ನೀಡುವವನು ನಾನೇ.”


ನಿಮ್ಮ ವಿಶ್ವಾಸದ ಫಲವಾಗಿ, ಯೇಸುಕ್ರಿಸ್ತರು ನಿಮ್ಮ ಹೃದಯಗಳಲ್ಲಿ ಸದಾ ವಾಸಿಸಲಿ ಮತ್ತು ನಿಮ್ಮ ಜೀವನವು ಪ್ರೀತಿಯಲ್ಲಿ ಬೇರೂರಿ ಸದೃಢವಾಗಿ ನಿಲ್ಲಲಿ.


ಬಾರ್ನಬನು ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ಕಂಡು ಸಂತೋಷಪಟ್ಟನು. ಪ್ರಭುವಿಗೆ ದೃಢಮನಸ್ಸಿನಿಂದ ಪ್ರಾಮಾಣಿಕರಾಗಿರುವಂತೆ ಪ್ರೋತ್ಸಾಹಿಸಿದನು.


ಇನ್ನು ನೀವು ವಿಶ್ವಾಸದಲ್ಲಿ ದೃಢವಾಗಿ ಮುನ್ನಡೆಯಬೇಕು. ಶುಭಸಂದೇಶವನ್ನು ಕೇಳಿದಾಗ ನೀವು ಹೊಂದಿದ ಭರವಸೆಯನ್ನು ಕಳೆದುಕೊಳ್ಳದಂತೆ ಜಾಗರೂಕರಾಗಿರಬೇಕು. ಪೌಲನಾದ ನಾನು ಇದೇ ಶುಭಸಂದೇಶದ ಪ್ರಚಾರಕ. ಈ ಶುಭಸಂದೇಶವನ್ನು ಜಗತ್ತಿನಲ್ಲಿರುವ ಸರ್ವಸೃಷ್ಟಿಗೂ ಸಾರಲಾಗುತ್ತಿದೆ.


ಆದುದರಿಂದ ನನಗೆ ಸಹಿಸಲು ಅಸಾಧ್ಯವಾಗಿ, ತಿಮೊಥೇಯನನ್ನು ನಿಮ್ಮ ಬಳಿಗೆ ಕಳುಹಿಸಬೇಕಾಯಿತು. ಏಕೆಂದರೆ, ನಿಮ್ಮ ವಿಶ್ವಾಸದ ಬಗ್ಗೆ ನನಗೆ ತಿಳಿಯಬೇಕಾಗಿತ್ತು; ಪ್ರಲೋಭಕನು ಒಡ್ಡುವ ಬಲೆಗೆ ನೀವು ಸಿಲುಕಿ ನಮ್ಮ ಶ್ರಮವೆಲ್ಲ ನಿಷ್ಪ್ರಯೋಜಕವಾಯಿತೋ ಏನೋ ಎಂಬ ದಿಗಿಲು ನನಗಿತ್ತು.


ನಲ್ಲನನ್ನು ಒರಗಿಕೊಂಡು ಅಡವಿಯಿಂದ ಬರುವ ಈಕೆ ಯಾರು? ನಲ್ಲೆ : ಎಬ್ಬಿಸಿದೆ ನಿನ್ನನ್ನು ಸೇಬುಮರದ ಅಡಿಯಲಿ ನಿನ್ನ ತಾಯಿ ಪ್ರಸವವೇದನೆಯಿಂದ ಹಡೆದಾ ಸ್ಥಳದಲಿ ನಿನ್ನನ್ನು ಆಕೆ ಗರ್ಭಧರಿಸಿದಾ ಜಾಗದಲಿ.


ಆದರೆ ನಾವು ಹಿಮ್ಮೆಟ್ಟಿ ಹಾಳಾಗುವ ಜನರಲ್ಲ; ವಿಶ್ವಾಸವುಳ್ಳವರಾಗಿ ಜೀವೋದ್ಧಾರವನ್ನು ಪಡೆಯುವವರು.


“ಒಳ್ಳೆಯ ಹಣ್ಣು ಬೇಕಾದರೆ ಮರ ಒಳ್ಳೆಯದಿರಬೇಕು. ಹುಳುಕು ಮರವಾದರೆ ಸಿಗುವುದು ಹುಳುಕು ಹಣ್ಣೇ. ಹಣ್ಣಿನ ರುಚಿಯಿಂದ ಮರವನ್ನು ಗುರುತಿಸಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು