Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 15:6 - ಕನ್ನಡ ಸತ್ಯವೇದವು C.L. Bible (BSI)

6 ನನ್ನಲ್ಲಿ ನೆಲಸದವನನ್ನು ಕವಲುಬಳ್ಳಿಯಂತೆ ಕತ್ತರಿಸಿ ಎಸೆಯಲಾಗುವುದು; ಅವನು ಒಣಗಿಹೋಗುವನು. ಒಣಗಿದ ಕವಲುಗಳನ್ನು ಒಟ್ಟುಗೂಡಿಸಿ ಬೆಂಕಿಯಲ್ಲಿ ಸುಟ್ಟುಹಾಕಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯಾವನು ನನ್ನಲ್ಲಿ ನೆಲೆಗೊಂಡಿರುವುದಿಲ್ಲವೋ ಅವನು ಹೊರಕ್ಕೆ ಬಿಸಾಡಲ್ಪಟ್ಟ ಕೊಂಬೆಯಂತೆ ಒಣಗಿಹೋಗುವನು. ಅಂಥ ಕೊಂಬೆಗಳನ್ನು ಕೂಡಿಸಿ ಬೆಂಕಿಯಲ್ಲಿ ಹಾಕುವರು. ಅವು ಸುಟ್ಟು ಹೋಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯಾವನು ನನ್ನಲ್ಲಿ ನೆಲೆಗೊಂಡಿರುವದಿಲ್ಲವೋ ಅವನು ಆ ಕೊಂಬೆಯಂತೆ ಹೊರಕ್ಕೆ ಬಿಸಾಡಲ್ಪಟ್ಟು ಒಣಗಿಹೋಗುವನು; ಅಂಥ ಕೊಂಬೆಗಳನ್ನು ಕೂಡಿಸಿ ಬೆಂಕಿಯಲ್ಲಿ ಹಾಕುತ್ತಾರೆ, ಅವು ಸುಟ್ಟುಹೋಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನನ್ನಲ್ಲಿ ನೆಲೆಗೊಂಡಿಲ್ಲದವನು ಹೊರಗೆ ಬಿಸಾಡಲ್ಪಟ್ಟ ಕವಲಿನಂತಿರುವನು. ಆ ಕವಲು ಸತ್ತುಹೋಗುವುದು. ಸತ್ತ ಕವಲುಗಳನ್ನು ಜನರು ಒಟ್ಟುಗೂಡಿಸಿ ಬೆಂಕಿಯೊಳಕ್ಕೆ ಎಸೆದು ಸುಟ್ಟುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನೀವು ನನ್ನಲ್ಲಿ ನೆಲೆಗೊಂಡಿರದಿದ್ದರೆ ನೀವು ಎಸೆಯಲಾದ ಕವಲುಬಳ್ಳಿಯಂತೆ ಒಣಗಿ ಹೋಗುವಿರಿ. ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು ಮತ್ತು ಅವುಗಳನ್ನು ಸುಟ್ಟುಹಾಕಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಜೊ ಕೊನ್ ಮಾಜ್ಯಾ ವಾಂಗ್ಡಾ ಎಕ್ ಹೊವ್ನ್ ರ್‍ಹಾಯ್ನಾ; ತೊ ಕಾತ್ರುನ್ ಕಾಡಲ್ಲ್ಯಾ ಫಾಟ್ಯಾ ಸರ್ಕೊ, ತೊ ಫಾಟೊ ವಾಳುನ್ ಜಾತಾ, ತಸ್ಲೆ ಫಾಟೆ ಗೊಳಾ ಕರುನ್ ಜಾಳ್ವುತಾತ್ ಮನುನ್ ಆಗಿತ್ ಟಾಕ್ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 15:6
20 ತಿಳಿವುಗಳ ಹೋಲಿಕೆ  

ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನೂ ಕಡಿದು ಬೆಂಕಿಯಲ್ಲಿ ಹಾಕಲಾಗುವುದು.


ನನ್ನಲ್ಲಿದ್ದೂ ಫಲಕೊಡದ ಕವಲುಬಳ್ಳಿಗಳನ್ನೆಲ್ಲಾ ಅವರು ಕತ್ತರಿಸಿಹಾಕುವರು. ಫಲಕೊಡುವ ಕವಲುಬಳ್ಳಿಗಳು ಮತ್ತಷ್ಟು ಫಲಕೊಡುವಂತೆ ಅವನ್ನು ಸವರಿ ಶುದ್ಧಗೊಳಿಸುವರು.


ನರಪುತ್ರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದಿಂದ ಪಾಪಕ್ಕೆ ಕಾರಣವಾದುದೆಲ್ಲವನ್ನೂ


ಈಗಾಗಲೇ ಮರದ ಬುಡಕ್ಕೆ ಕೊಡಲಿ ಬಿದ್ದಿದೆ; ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಗೆ ಹಾಕಲಾಗುವುದು.


ನಮ್ಮ ಪ್ರಭು ಹಾಗೂ ಉದ್ಧಾರಕರಾದ ಯೇಸುಕ್ರಿಸ್ತರನ್ನು ಕುರಿತ ಜ್ಞಾನದ ಮೂಲಕ ಕೆಲವರು ಲೋಕದ ಕಲ್ಮಶದಿಂದ ಪಾರಾಗಿ ನಿರ್ಮಲರಾಗುತ್ತಾರೆ. ಇಂಥವರು ಮರಳಿ ಅದರಲ್ಲೇ ಸಿಲುಕಿಕೊಂಡು ಅದಕ್ಕೆ ಗುಲಾಮರಾದರೆ ಅವರ ಅಂತಿಮ ಗತಿ ಮೊದಲ ಗತಿಗಿಂತಲೂ ಅಧೋಗತಿಯಾಗಿರುತ್ತದೆ.


ಬದಲಿಗೆ, ಅತ್ಯಂತ ಭಯದಿಂದ ಎದುರುನೋಡಬೇಕಾದ ದಂಡನಾತೀರ್ಪು ಹಾಗೂ ದೇವರ ಶತ್ರುಗಳನ್ನು ದಹಿಸುವ ಉಗ್ರಕೋಪಾಗ್ನಿ - ಇವುಗಳು ಮಾತ್ರ ನಮಗೆ ಉಳಿದಿರುತ್ತವೆ.


ಯಾರ ಯಾರ ಹೆಸರು ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ ಅಂಥವರನ್ನು ಅಗ್ನಿಸರೋವರಕ್ಕೆ ಎಸೆಯಲಾಯಿತು.


ಈ ಕ್ರಿಸ್ತವಿರೋಧಿಗಳು ನಮ್ಮವರಾಗಿರಲಿಲ್ಲ. ಆದಕಾರಣ, ಅವರು ನಮ್ಮನ್ನು ತೊರೆದರು. ಅವರು ನಮ್ಮವರೇ ಆಗಿದ್ದರೆ, ನಮ್ಮೊಂದಿಗೇ ಇರುತ್ತಿದ್ದರು. ಆದರೆ ಅವರು ನಮ್ಮನ್ನು ತೊರೆದು ಹೋದರು. ಇದರಿಂದ ಕ್ರೈಸ್ತರೆನಿಸಿಕೊಳ್ಳುವವರೆಲ್ಲರೂ ನಮ್ಮವರಲ್ಲ ಎಂಬುದು ಸ್ಪಷ್ಟವಾಗಿ ಕಂಡುಬರುತ್ತದೆ.


“ಈ ಮಾತನ್ನು ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅದು ಯಾವಾಗಲು ಸಮೃದ್ಧವಾಗಿಯೆ ಇರುವುದೇ? ಅದನ್ನು ನಾಟಿದ ಆ ಹದ್ದು ಅದರ ಬೇರುಗಳನ್ನು ಕಿತ್ತು ಅದರ ಫಲವನ್ನು ಕಡಿದುಬಿಡುವುದು . ಆಗ ಅದು ಒಣಗಿ ಅದರ ಹಸುರೆಲೆಗಳೆಲ್ಲಾ ಬಾಡುವುದಲ್ಲವೆ? ಅದನ್ನು ಬೇರುಸಹಿತ ಕೀಳಲು ಹೆಚ್ಚು ಬಲಬೇಕಾಗಿಲ್ಲ , ಬಹುಜನರ ಅಗತ್ಯವಿಲ್ಲ


ನಿನ್ನನ್ನಾದರೊ ಕೊಳೆತ ಕಡ್ಡಿಯಂತೆ ಬಿಸಾಡಿಹರು ಕೆಳಕೆ ಗೋರಿಯಿಲ್ಲದ ನಿನ್ನ ಶವ ಈಡಾಗಿದೆ ಪರರ ತುಳಿತಕ್ಕೆ, ಕತ್ತಿ ತಿವಿದ, ಕಲ್ಲುಗುಂಡಿಗೆ ಪಾಲಾದ ಹೆಣಗಳೇ ನಿನ್ನ ಹೊದಿಕೆ.


ಕಾಪಾಡು ನಿನ್ನ ಬಲಗೈ ನೆಟ್ಟು ಸಾಕಿದ ಸಸಿಯನು I ಕಾದಿರಿಸು ನಿನಗೆಂದೇ ನೀ ಬೆಳೆಸಿದಾ ಬಳ್ಳಿಯನು II


ಕತ್ತಲೊಳಗಿಂದ ಪಾರಾಗನವನು ಸುಡುವುದು ಕಿಚ್ಚು ಅವನ ಕೊಂಬೆಯನು ಬಡಿದೊಯ್ಯುವುದು ಗಾಳಿ ಅದರ ಫಲವನು.


ಆಗ ಅವನು ಆ ಹಣವನ್ನು ದೇವಾಲಯದಲ್ಲೇ ಎಸೆದು, ಹೊರಟುಹೋಗಿ ನೇಣುಹಾಕಿಕೊಂಡು ಸತ್ತನು.


ಕೋಟೆಕೊತ್ತಲಗಳಿಂದ ಕೂಡಿದ ಪಟ್ಟಣ ಪಾಳುಬಿದ್ದಿದೆ; ಕಾಡಿನಂತೆ ನಿರ್ಜನಪ್ರದೇಶವಾಗಿದೆ. ದನಕರುಗಳು ಮೇದು ಮಲಗುವ ಗೋಮಾಳವಾಗಿದೆ.


ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.


ಬಳಸಬೇಕು ಕಬ್ಬಿಣದಾಯುಧವನು, ಮೊನೆ ಭರ್ಜಿಯನು, ಇಲ್ಲವೆ ಸುಡಬೇಕು ಇದ್ದಲ್ಲೇ ಬೆಂಕಿಯಿಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು