Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 15:7 - ಕನ್ನಡ ಸತ್ಯವೇದವು C.L. Bible (BSI)

7 “ನೀವು ನನ್ನಲ್ಲಿಯೂ ನನ್ನ ವಾಕ್ಯವು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನು ಬೇಕಾದರೂ ಕೇಳಬಹುದು. ನಿಮಗದು ಸಿಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನಾದರೂ ಬೇಡಿಕೊಳ್ಳಿರಿ ಅದು ನಿಮಗೆ ದೊರೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ಏನು ಬೇಕಾದರೂ ಬೇಡಿಕೊಳ್ಳಿರಿ, ಅದು ನಿಮಗೆ ದೊರೆಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ಏನು ಬೇಕಾದರೂ ಕೇಳಿಕೊಳ್ಳಿರಿ, ಅದು ನಿಮಗೆ ದೊರೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಬಯಸುವ ಯಾವುದನ್ನಾದರೂ ಬೇಡಿಕೊಳ್ಳಿರಿ. ಅದು ನಿಮ್ಮದಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತುಮಿ ಮಾಜ್ಯಾ ವಾಂಗ್ಡಾ ರ್‍ಹಾಲ್ಯಾರ್ ಅನಿ ಮಾಜ್ಯಾ ಗೊಸ್ಟಿಯಾ ತುಮ್ಚ್ಯಾ ಭುತ್ತುರ್ ರ್‍ಹಾಲ್ಯಾರ್ ತುಮಿ ತುಮ್ಕಾ ಕಾಯ್ ಪಾಜೆ ತೆ ಮಾಗಾ ತೆ ತುಮ್ಕಾ ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 15:7
24 ತಿಳಿವುಗಳ ಹೋಲಿಕೆ  

ಪ್ರಭುವಿನಿಂದಲೆ ಬಯಸು ನಿನ್ನಾನಂದವನು I ನೆರವೇರಿಸುವನಾತ ನಿನ್ನ ಮನದಾಸೆಯನು II


ದೇವರ ಚಿತ್ತಾನುಸಾರ ಏನನ್ನು ಬೇಡಿಕೊಂಡರೂ ಅವರು ನಮ್ಮ ವಿಜ್ಞಾಪನೆಗೆ ಕಿವಿಗೊಡುತ್ತಾರೆಂಬ ಭರವಸೆ ನಮಗಿದೆ.


ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಕೇಳಿಕೊಳ್ಳುವುದನ್ನೆಲ್ಲಾ ಮಾಡುತ್ತೇನೆ. ಹೀಗೆ ಪಿತನಿಗೆ ಪುತ್ರನಲ್ಲಿ ಮಹಿಮೆ ಉಂಟಾಗುವುದು.


ನಾವು ದೇವರ ಆಜ್ಞೆಗಳಿಗೆ ವಿಧೇಯರಾಗಿ ಅವರಿಗೆ ಮೆಚ್ಚುಗೆಯಾದವುಗಳನ್ನೇ ಮಾಡುವುದರಿಂದ ನಾವು ಕೋರುವುದೆಲ್ಲವನ್ನೂ ಅವರಿಂದ ಪಡೆಯುತ್ತೇವೆ.


ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ, ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಲೋಕಕ್ಕೆ ಹೋಗಬೇಕು, ಸಫಲರಾಗಬೇಕು; ಆ ಫಲ ಶಾಶ್ವತವಾಗಿರಬೇಕೆಂದೇ ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ಪಿತನಿಂದ ಏನು ಕೇಳಿದರೂ ನಿಮಗೆ ಅದು ಸಿಗುವುದು.


“ಕೇಳಿರಿ, ನಿಮಗೆ ಕೊಡಲಾಗುವುದು; ಹುಡುಕಿರಿ, ನಿಮಗೆ ಸಿಗುವುದು; ತಟ್ಟಿರಿ, ನಿಮಗೆ ಬಾಗಿಲು ತೆರೆಯಲಾಗುವುದು.


ಆ ದಿನದಂದು ನನ್ನಿಂದ ನೀವೇನನ್ನೂ ಕೇಳುವಂತಿಲ್ಲ. ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ಪಿತನಲ್ಲಿ ಏನನ್ನು ಬೇಡಿಕೊಂಡರೂ ನಿಮಗೆ ಅವರು ನನ್ನ ಹೆಸರಿನಲ್ಲಿ ಕೊಟ್ಟೇತೀರುವರು.


ನಾನು ಹೇಳುವುದೇನೆಂದರೆ: ನೀವು ಪವಿತ್ರಾತ್ಮರ ಪ್ರೇರಣೆಗನುಸಾರವಾಗಿ ನಡೆದುಕೊಳ್ಳಬೇಕು. ಆಗ, ದೈಹಿಕ ವ್ಯಾಮೋಹಕ್ಕೆ ನೀವು ಈಡಾಗಲಾರಿರಿ.


ನೀವು ಕ್ರಿಸ್ತಯೇಸುವಿನಿಂದ ಅಭಿಷಿಕ್ತರಾಗಿದ್ದೀರಿ. ಆ ಅಭಿಷೇಕವು ನಿಮ್ಮಲ್ಲಿ ನೆಲೆಸಿದೆ. ಆದ್ದರಿಂದ ಯಾರೂ ನಿಮಗೆ ಬೋಧಿಸುವ ಅವಶ್ಯಕತೆಯಿಲ್ಲ. ಆ ಅಭಿಷೇಕವೇ ನಿಮಗೆ ಎಲ್ಲವನ್ನೂ ಬೋಧಿಸುತ್ತಾ ಬರುತ್ತದೆ. ಈ ಬೋಧನೆ ಸತ್ಯವಾದುದು, ಮಿಥ್ಯವಾದುದಲ್ಲ. ಅದರ ಪ್ರಕಾರವೇ ಕ್ರಿಸ್ತಯೇಸುವಿನಲ್ಲಿ ನೆಲೆಸಿರಿ.


ನಿಮ್ಮ ವಚನಗಳು ನನಗೆ ದೊರೆತವು. ಅವುಗಳನ್ನು ಹಾಗೆಯೆ ನುಂಗಿಬಿಟ್ಟೆನು. ನಿಮ್ಮ ನುಡಿಗಳು ನನಗೆ ಹರ್ಷವನ್ನೂ ಹೃದಯಾನಂದವನ್ನೂ ತಂದವು. ಸರ್ವಶಕ್ತರಾದ ದೇವರೇ, ಸರ್ವೇಶ್ವರಾ, ನಾನು ನಿಮ್ಮ ನಾಮಧಾರಿಯಲ್ಲವೆ?


ದುರ್ಜನರು ಭಯಪಡುವುದೇ ಸಂಭವಿಸುವುದು; ಸಜ್ಜನರು ಇಷ್ಟಪಡುವುದೇ ಲಭಿಸುವುದು.


ನಿನಗೆ ವಿರುದ್ಧ ನಾ ಪಾಪಮಾಡದಂತೆ I ನಿನ್ನಾ ನುಡಿಯನು ನನ್ನೆದೆಯಲ್ಲಿರಿಸಿದೆ II


“ಇದನ್ನು ಆಚರಿಸುವಾಗ ನೀವು ಉದಯಕಾಲದ ಸೂರ್ಯನಂತೆ ಪ್ರಜ್ವಲಿಸುವಿರಿ. ಆರೋಗ್ಯಭಾಗ್ಯವು ನಿಮಗೆ ಬೇಗನೆ ದೊರಕುವುದು. ನಿಮ್ಮ ಸದಾಚಾರವೆ ನಿಮಗೆ ಮುಂಬಲವಾಗಿ ನಡೆಸುವುದು; ಸರ್ವೇಶ್ವರ ಸ್ವಾಮಿಯ ಮಹಿಮೆ ನಿಮಗೆ ಹಿಂಬಲವಾಗಿ ಇರುವುದು.


ಈ ದಿನ ನಾನು ನಿನಗೆ ತಿಳಿಸುವ ಮಾತುಗಳು ನಿಮ್ಮ ಹೃದಯದಲ್ಲಿ ನಾಟಿರಲಿ.


ಬರೆದಿಹೆನು ಮಕ್ಕಳಿರಾ, ಇದನ್ನು ಏಕೆನೆ, ಬಲ್ಲವರಾದಿರಿ ಪರಮ ಪಿತನನ್ನು. ಬರೆದಿಹೆನು‍ ಶಕ್ತಿಯುತ ಯುವಜನರಿರಾ, ಇದನ್ನು ಏಕೆನೆ, ನೆಲೆಗೊಳಿಸಿರುವಿರಿ ನಿಮ್ಮಲ್ಲಿ ದೈವವಾಕ್ಯವನ್ನು ಮಾತ್ರವಲ್ಲ, ನೀವು ಜಯಿಸಿದ್ದಾಯಿತು ಆ ಕಡುಗೇಡಿಗನನ್ನು.


ಕ್ರಿಸ್ತಯೇಸುವಿನ ವಾಕ್ಯ ನಿಮ್ಮಲ್ಲಿ ನೆಲೆಸಿ ಸಮೃದ್ಧಿಯಾಗಿ ಬೆಳೆಯಲಿ. ಜ್ಞಾನಸಂಪನ್ನರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿರಿ ಹಾಗೂ ಬುದ್ಧಿ ಹೇಳಿಕೊಳ್ಳಿರಿ. ಕೃತಜ್ಞತೆಯುಳ್ಳವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಭಕ್ತಿಗೀತೆಗಳಿಂದಲೂ ಹೃದಯಾಂತರಾಳದಿಂದ ದೇವರಿಗೆ ಹಾಡಿರಿ.


ತಂದೆ ನನಗೆ ಹೀಗೆಂದು ಬೋಧನೆ ಮಾಡಿದ: “ನನ್ನ ಮಾತುಗಳು ಭದ್ರವಾಗಿರಲಿ ನಿನ್ನ ಮನದಲ್ಲಿ; ನನ್ನ ಆಜ್ಞೆಗಳನ್ನು ಕೈಗೊಂಡು ಬಾಳು ಸುಖದಲ್ಲಿ.


ಆಗ ನೀನು ಸರ್ವಶಕ್ತನಲಿ ಆನಂದಿಸುವೆ ತಲೆಯೆತ್ತಿ ದೇವರಿಗೆ ಅಭಿಮುಖಿಯಾಗುವೆ.


ನೀವು ಅಬ್ರಹಾಮನ ವಂಶಜರೆಂದು ನಾನು ಬಲ್ಲೆ. ಆದರೆ ನನ್ನ ಮಾತು ಹಿಡಿಸದ ಕಾರಣ ನನ್ನನ್ನು ಕೊಲ್ಲಲು ಹವಣಿಸುತ್ತೀರಿ.


ನಾ ಬಿಟ್ಟಗಲಲಿಲ್ಲ ಆತನ ತುಟಿಯಿಂದ ಹೊರಟ ಆಜ್ಞೆಗಳನು ನನ್ನೆದೆಯಲಿ ನಿಧಿಯಾಗಿಟ್ಟೆ ಆತನ ಬಾಯಿಂದ ಬಂದ ಮಾತುಗಳನ್ನು.


ತಂದೆ ಗೊತ್ತುಮಾಡಿದ ದಿನದವರೆಗೂ ಅವನು ಪೋಷಕರ ಹಾಗೂ ಕಾರ್ಯನಿರ್ವಾಹಕರ ಕೈಕೆಳಗೆ ಇರುತ್ತಾನೆ.


ದೇವರಾದ ಸರ್ವೇಶ್ವರ ಆ ರಾತ್ರಿ ಕನಸಿನಲ್ಲಿ ಅವನಿಗೆ ಕಾಣಿಸಿಕೊಂಡರು; “ನಿನಗೆ ಯಾವ ವರಬೇಕು ಕೇಳಿಕೋ,” ಎಂದು ಹೇಳಿದರು.


ಯೇಸು ಸ್ವಾಮಿ ತಮ್ಮಲ್ಲಿ ನಂಬಿಕೆ ಇಟ್ಟಿದ್ದ ಯೆಹೂದ್ಯರಿಗೆ ಹೀಗೆಂದರು: “ನನ್ನ ಮಾತಿಗೆ ನೀವು ಶರಣಾದರೆ ನಿಜವಾಗಿಯೂ ನೀವು ನನ್ನ ಶಿಷ್ಯರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು