Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 16:1 - ಕನ್ನಡ ಸತ್ಯವೇದವು C.L. Bible (BSI)

1 “ನಿಮ್ಮ ವಿಶ್ವಾಸ ಕುಸಿಯದಂತೆ ನೀವು ಎಚ್ಚರಿಕೆ ವಹಿಸಬೇಕೆಂದು ನಾನು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ನೀವು ನಂಬಿಕೆಯಿಂದ ಎಡವಿ ಬಿದ್ದು ಹೋಗಬಾರದೆಂದು ನಾನು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನೀವು ಧೈರ್ಯಗೆಟ್ಟು ಹಿಂಜರಿಯಬಾರದೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಜನರು ನಿಮ್ಮ ನಂಬಿಕೆಯನ್ನು ನಾಶಮಾಡಲಾಗದಂತೆ ನಾನು ಈ ಸಂಗತಿಗಳನ್ನೆಲ್ಲಾ ನಿಮಗೆ ಹೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ನೀವು ನಂಬಿಕೆಯಲ್ಲಿ ಎಡವಿಬಿದ್ದು ಹೋಗಬಾರದೆಂದು ನಾನು ಇವುಗಳನ್ನು ಹೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 “ತುಮ್ಚೊ ವಿಶ್ವಾಸ್ ಹಾಲುಚೆ ನ್ಹಯ್ ಮನುನ್ ಮಿಯಾ ಹೆ ಸಗ್ಳೆ ತುಮ್ಕಾ ಅದ್ದಿಚ್ ಸಾಂಗುಕ್ ಲಾಗ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 16:1
11 ತಿಳಿವುಗಳ ಹೋಲಿಕೆ  

“ಜನರು ಎಡವಿಬೀಳುವ ಕಲ್ಲಿದು; ಅವರು ಮುಗ್ಗರಿಸಿ ಬೀಳುವ ಬಂಡೆಯಿದು.” ವಿಶ್ವಾಸವಿಡದವರಿಗಾದರೋ ಮೇಲಿನ ವಾಕ್ಯಗಳು ಅನ್ವಯಿಸುತ್ತವೆ. ಜನರು ದೇವರ ವಾಕ್ಯದಲ್ಲಿ ವಿಶ್ವಾಸವಿಡದಿರುವುದರಿಂದಲೇ ಎಡವಿಬೀಳುತ್ತಾರೆ. ಅವರ ಬಗ್ಗೆ ದೈವಸಂಕಲ್ಪವೂ ಇದೇ ಆಗಿತ್ತು.


ಆದರೆ ಅದು ತನ್ನಲ್ಲಿ ಬೇರೂರದ ಕಾರಣ ಕೊಂಚಕಾಲ ಮಾತ್ರ ಇದ್ದು, ಸಂದೇಶದ ನಿಮಿತ್ತ ಕಷ್ಟಕೋಟಲೆಗಳು ಬಂದೊದಗಿದಾಗ ಕೂಡಲೇ ಎಡವಿಬೀಳುತ್ತಾನೆ. ಇವನು ಕಲ್ಲು ನೆಲದ ಮೇಲೆ ಬಿದ್ದ ಬೀಜವನ್ನು ಹೋಲುತ್ತಾನೆ.


ಅಂಥಕಾಲ ಬಂದಾಗ ಇದನ್ನೆಲ್ಲಾ ಕುರಿತು ನಾನು ನಿಮ್ಮನ್ನು ಮೊದಲೇ ಎಚ್ಚರಿಸಿದ್ದೇನೆಂದು ನೀವು ನೆನಸಿಕೊಳ್ಳುವಂತೆ ಇದನ್ನು ಹೇಳುತ್ತಿದ್ದೇನೆ.


ಆ ದಿನಗಳಲ್ಲಿ ಬಹುಮಂದಿ ವಿಶ್ವಾಸಭ್ರಷ್ಟರಾಗುವರು, ಒಬ್ಬರಿಗೊಬ್ಬರು ದ್ರೋಹ ಬಗೆಯುವರು. ಒಬ್ಬರನ್ನೊಬ್ಬರು ದ್ವೇಷಿಸುವರು.


ಮಾಂಸವನ್ನು ತಿನ್ನುವುದಾಗಲಿ, ದ್ರಾಕ್ಷಾರಸವನ್ನು ಕುಡಿಯುವುದಾಗಲಿ, ಅಥವಾ ಇನ್ನಾವುದೇ ಆಗಲಿ, ನಿನ್ನ ಸಹೋದರನಿಗೆ ಪಾಪಕ್ಕೆ ಕಾರಣವಾಗುವುದಾದರೆ ಅದನ್ನು ಬಿಟ್ಟುಬಿಡುವುದೇ ಲೇಸು.


ಅವರಿಗೆ ಯೇಸು, “ಪ್ರವಾದಿಗೆ ಬೇರೆ ಎಲ್ಲಿಯಾದರೂ ಗೌರವ ದೊರಕೀತು; ಆದರೆ ಸ್ವಗ್ರಾಮದಲ್ಲಿ ಹಾಗೂ ಸ್ವಗೃಹದಲ್ಲಿ ಮಾತ್ರ ಗೌರವ ದೊರಕದು,” ಎಂದು ಹೇಳಿದರು.


ನನ್ನಲ್ಲಿ ವಿಶ್ವಾಸ ಕಳೆದುಕೊಳ್ಳದವನು ಭಾಗ್ಯವಂತನು!” ಎಂದು ಹೇಳಿ ಕಳುಹಿಸಿದರು.


“ನನ್ನಲ್ಲಿರುವ ಆನಂದವು ನಿಮ್ಮಲ್ಲಿ ಇರಬೇಕೆಂತಲೂ ನಿಮ್ಮ ಆನಂದವು ತುಂಬಿ ತುಳುಕಬೇಕೆಂತಲೂ ಇದನ್ನೆಲ್ಲಾ ನಿಮಗೆ ಹೇಳುತ್ತಿದ್ದೇನೆ.


ಹೀಗೆ ನೀವು ಉತ್ತಮೋತ್ತಮವಾದುವುಗಳನ್ನೇ ಆರಿಸಿಕೊಂಡು, ಪ್ರಭು ಕ್ರಿಸ್ತರ ದಿನದಂದು ನಿರ್ದೋಷಿಗಳೂ ನಿಷ್ಕಳಂಕರೂ ಆಗಿ ಕಾಣಿಸಿಕೊಳ್ಳುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು