ಯೋಹಾನ 16:13 - ಕನ್ನಡ ಸತ್ಯವೇದವು C.L. Bible (BSI)13 ಹೇಗೂ ಸತ್ಯಸ್ವರೂಪಿ ಆದ ಪವಿತ್ರಾತ್ಮ ಬಂದಮೇಲೆ ನಿಮ್ಮನ್ನು ಸಮಗ್ರ ಸತ್ಯದೆಡೆಗೆ ಕರೆದೊಯ್ಯುವರು. ಅವರು ತಮ್ಮಷ್ಟಕ್ಕೆ ತಾವೇ ಏನನ್ನೂ ಬೋಧಿಸದೆ ತಾವು ಕೇಳಿದುದನ್ನು ಕುರಿತೇ ಮಾತನಾಡುವರು; ಮುಂದೆ ನಡೆಯಲಿರುವುದನ್ನೂ ನಿಮಗೆ ತಿಳಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆದರೆ ಸತ್ಯದ ಆತ್ಮನು ಬರುವಾಗ ಆತನು ನಿಮ್ಮನ್ನು ಪೂರ್ಣ ಸತ್ಯದ ಕಡೆಗೆ ನಡೆಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ಕೇಳಿದ ಮಾತುಗಳನ್ನೇ ಆಡುವನು ಮತ್ತು ಮುಂದೆ ನಡೆಯುವ ಸಂಗತಿಗಳನ್ನು ನಿಮಗೆ ತಿಳಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ನಡಿಸಿಕೊಂಡು ಹೋಗಿ ಸಕಲ ವಿಷಯದಲ್ಲಿಯೂ ಸತ್ಯಕ್ಕೆ ಸೇರಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತಾಡದೆ ಕೇಳಿದ ಮಾತುಗಳನ್ನೇ ಆಡುವನು; ಮತ್ತು ಮುಂದಾಗುವ ಸಂಗತಿಗಳನ್ನು ನಿಮಗೆ ತಿಳಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆದರೆ ಸತ್ಯದ ಆತ್ಮನು ಬಂದಾಗ, ಆತನು ನಿಮ್ಮನ್ನು ಸಕಲ ವಿಷಯದಲ್ಲಿಯೂ ಸತ್ಯಕ್ಕೆ ನಡೆಸುವನು. ಸತ್ಯದ ಆತ್ಮನು ಹೇಳುವುದು ಆತನ ಸ್ವಂತ ಮಾತುಗಳಲ್ಲ. ತಾನು ಕೇಳಿದ್ದನ್ನು ಮಾತ್ರ ಆತನು ಹೇಳುತ್ತಾನೆ. ಸಂಭವಿಸಲಿರುವ ಸಂಗತಿಗಳನ್ನು ಆತನು ನಿಮಗೆ ತಿಳಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆದರೆ ಸತ್ಯದ ಆತ್ಮ ಬಂದಾಗ ಅವರು ನಿಮ್ಮನ್ನು ಎಲ್ಲಾ ಸತ್ಯದೊಳಗೆ ನಡೆಸುವರು. ಅವರು ತಮ್ಮಷ್ಟಕ್ಕೆ ತಾವೇ ಮಾತನಾಡದೆ ತಾವು ಕೇಳಿದವುಗಳನ್ನೇ ಮಾತನಾಡುವರು. ಮುಂದೆ ನಡೆಯಲಿರುವ ವಿಷಯಗಳನ್ನು ಅವರು ನಿಮಗೆ ಪ್ರಕಟಿಸುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಕಶೆಬಿ ಪವಿತ್ರ್ ಆತ್ಮೊ ಯೆಲ್ಲ್ಯಾ ತನ್ನಾ ತೊ ತುಮ್ಕಾ ದೆವಾಚ್ಯಾ ವಿಶಯಾತ್ಲೆ ಖರೆಪಾನ್ ದಾಕ್ವುನ್ ದಿತಾ, ತೊ ತುಮ್ಕಾ ಸಗ್ಳ್ಯಾ ಖರೆಪಾನಾತ್ ಚಾಲ್ವುನ್ ನ್ಹೆತಾ. ತೊ ಅಪ್ನಾಚ್ಯಾ ಸ್ವತಾಚ್ಯಾ ಅದಿಕಾರ್‍ಯಾನ್ ಬೊಲಿನಾ, ತೊ ಅಪ್ನಿ ಆಯ್ಕಲ್ಲೆಚ್ ಸಾಂಗ್ತಾ. ಅನಿ ಫಿಡೆ ಯೆತಲ್ಯಾ ವಿಶಯಾಂಚ್ಯಾ ವಿಶಯಾತ್ ತೊ ಸಾಂಗ್ತಾ. ಅಧ್ಯಾಯವನ್ನು ನೋಡಿ |