Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 16:14 - ಕನ್ನಡ ಸತ್ಯವೇದವು C.L. Bible (BSI)

14 ಅವರು, ನಾನು ಹೇಳಿದವುಗಳಿಂದಲೇ ಆಯ್ದು ನಿಮಗೆ ತಿಳಿಯಪಡಿಸಿ ನನ್ನ ಮಹಿಮೆಯನ್ನು ಬೆಳಗಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆತನು ನನ್ನದನ್ನು ಸ್ವೀಕರಿಸಿ ನಿಮಗೆ ತಿಳಿಯಪಡಿಸುತ್ತಾನಾದ್ದರಿಂದ ನನ್ನನ್ನೇ ಮಹಿಮೆಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆತನು ನನ್ನದರೊಳಗಿಂದ ತೆಗೆದುಕೊಂಡು ನಿಮಗೆ ತಿಳಿಸುತ್ತಾ ನನ್ನನ್ನೇ ಮಹಿಮೆಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಸತ್ಯದ ಆತ್ಮನು ನನ್ನಿಂದಲೇ ವಿಷಯಗಳನ್ನು ತೆಗೆದುಕೊಂಡು ನಿಮಗೆ ತಿಳಿಸುವುದರ ಮೂಲಕ ನನ್ನನ್ನು ಮಹಿಮೆಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವರು ನನ್ನನ್ನು ಮಹಿಮೆಪಡಿಸುವರು. ಏಕೆಂದರೆ ಅವರು ನನ್ನದರೊಳಗಿಂದ ತೆಗೆದುಕೊಂಡು ನಿಮಗೆ ಪ್ರಕಟಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತೊ ಮಾಕಾ ಮಹಿಮಾ ದಿತಾ, ಕಶ್ಯಾಕ್ ಮಟ್ಲ್ಯಾರ್ ತೊ ಮಿಯಾ ಸಾಂಗಲ್ಲೆ ಘೆತಾ ಅನಿ ತುಮ್ಕಾ ಸಾಂಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 16:14
20 ತಿಳಿವುಗಳ ಹೋಲಿಕೆ  

ಪಿತನಿಂದ ಹೊರಡುವ ಸತ್ಯಸ್ವರೂಪಿಯಾದ ಪವಿತ್ರಾತ್ಮರನ್ನು ನಿಮ್ಮ ಪೋಷಕರನ್ನಾಗಿ ನಾನು ಪಿತನಿಂದಲೇ ಕಳುಹಿಸುವೆನು. ಅವರು ಬಂದು ನನ್ನ ಪರವಾಗಿ ಸಾಕ್ಷಿನೀಡುವರು.


ಕೂಡಲೇ ಆರಾಧಿಸಲೆಂದು ಆತನ ಪಾದಗಳಿಗೆ ಅಡ್ಡಬಿದ್ದೆ. ಆಗ ಆತನು, “ನೀನು ನನಗೆ ಅಡ್ಡಬೀಳಬಾರದು, ನಾನು ನಿನ್ನ ಹಾಗೂ ಕ್ರಿಸ್ತೇಸು ಶ್ರುತಪಡಿಸಿದ ಸತ್ಯವನ್ನು ಅಂಗೀಕರಿಸಿದ ನಿನ್ನ ಸಹೋದರರ ಸಹ ಸೇವಕನಷ್ಟೆ. ನೀನು ದೇವರನ್ನು ಆರಾಧಿಸು,” ಎಂದನು. ಯೇಸು ಶ್ರುತಪಡಿಸಿದ ಸತ್ಯವೇ ಪ್ರವಾದಿಗಳ ಜೀವಾಳ.


ನಾವಾದರೋ ಪವಿತ್ರಾತ್ಮರ ಮುಖಾಂತರ ವಿಶ್ವಾಸದಿಂದ ದೇವರೊಂದಿಗೆ ಸತ್ಸಂಬಂಧವನ್ನು ಹೊಂದುತ್ತೇವೆಂಬ ನಿರೀಕ್ಷೆ ಉಳ್ಳವರಾಗಿದ್ದೇವೆ; ಈ ನಿರೀಕ್ಷೆ ಸಫಲವಾಗುವುದನ್ನು ಎದುರುನೋಡುತ್ತಿದ್ದೇವೆ.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.


ಇಷ್ಟುಮಾತ್ರ ನಿಮಗೆ ಸ್ಪಷ್ಟವಾಗಿ ತಿಳಿದಿರಲಿ; ಪವಿತ್ರಾತ್ಮ ಪ್ರೇರಣೆಯಿಂದ ಮಾತನಾಡುವ ಯಾವಾತನೂ, “ಯೇಸುವಿಗೆ ಧಿಕ್ಕಾರ!” ಎನ್ನಲಾರನು. ಅಂತೆಯೇ, ಪವಿತ್ರಾತ್ಮ ಪ್ರೇರಣೆಯಿಂದಲ್ಲದೆ ಯಾವಾತನೂ, “ಯೇಸುವೇ ಪ್ರಭು,” ಎಂದು ಒಪ್ಪಿಕೊಳ್ಳಲಾರನು.


ದೇವರ ಪುತ್ರ ಆಗಮಿಸಿ, ಸತ್ಯಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲೆಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ. ನಿಜವಾದ ದೇವರೂ ನಿತ್ಯಜೀವವೂ ಇವರೇ.


ಕ್ರಿಸ್ತಯೇಸುವೇ ಜಲ ಮತ್ತು ರಕ್ತದಿಂದ ಸಾಕ್ಷಿಹೊಂದಿದವರು. ಜಲದಿಂದ ಮಾತ್ರವಲ್ಲ ಜಲ ಮತ್ತು ರಕ್ತದಿಂದ ಸಾಕ್ಷಿಹೊಂದಿದವರು.


ನಾವು ದೇವರ ಪುತ್ರ ಯೇಸುಕ್ರಿಸ್ತರ ನಾಮದಲ್ಲಿ ವಿಶ್ವಾಸವಿಟ್ಟು ಅವರು ವಿಧಿಸಿದಂತೆ ಒಬ್ಬರನ್ನೊಬ್ಬರು ಪ್ರೀತಿಸಬೇಕು. ಇದೇ ದೇವರ ಆಜ್ಞೆ.


ತಮ್ಮಲ್ಲಿ ವಿಶ್ವಾಸವಿಡುವವರು ಪಡೆಯಲಿದ್ದ ಪವಿತ್ರಾತ್ಮರನ್ನು ಕುರಿತೇ ಯೇಸು ಹೀಗೆ ಹೇಳಿದ್ದು. ಪವಿತ್ರ ಆತ್ಮ ಇನ್ನೂ ಬಂದಿರಲಿಲ್ಲ. ಏಕೆಂದರೆ, ಯೇಸು ಇನ್ನೂ ಮೇಲೇರಿ ಮಹಿಮೆಯನ್ನು ಪಡೆದಿರಲಿಲ್ಲ.


ವಿಶ್ವಾಸವಿಟ್ಟಿರುವ ನಿಮಗಂತೂ ಈ ಶಿಲೆ ಅತ್ಯಮೂಲ್ಯವಾದುದು. “ಮನೆಕಟ್ಟುವವರು ಬೇಡವೆಂದು ಮೂಲೆಗೆಸೆದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು.”


“ದಾವೀದನ ವಂಶಜರಲ್ಲೂ ಜೆರುಸಲೇಮಿನ ನಿವಾಸಿಗಳ ಮನದಲ್ಲೂ ಕರುಣಿಸುವ ಹಾಗೂ ಪ್ರಾರ್ಥಿಸುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನೇ ಅವರು ಆಗ ದಿಟ್ಟಿಸಿ ನೋಡುವರು. ಏಕೈಕ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಕಾಲವಾದ ಜ್ಯೇಷ್ಠ ಪುತ್ರನಿಗಾಗಿ ಎಂಬಂತೆ ಅತ್ತು ಪ್ರಲಾಪಿಸುವರು.


ನನ್ನ ಆಜ್ಞೆಗಳನ್ನು ಅಂಗೀಕರಿಸಿ ಅವುಗಳ ಪ್ರಕಾರ ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ಪಿತನಿಗೂ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ನನ್ನನ್ನೇ ಅವನಿಗೆ ಸಾಕ್ಷಾತ್ಕರಿಸಿಕೊಡುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು