ಯೋಹಾನ 16:19 - ಕನ್ನಡ ಸತ್ಯವೇದವು C.L. Bible (BSI)19 ಯೇಸು, ತಮ್ಮಲ್ಲಿ ಅವರು ವಿಚಾರಿಸಬೇಕೆಂದಿದ್ದಾರೆಂದು ತಿಳಿದುಕೊಂಡು, ‘ತುಸುಕಾಲದ ನಂತರ ನೀವು ನನ್ನನ್ನು ಕಾಣಲಾರಿರಿ. ಅನಂತರ ತುಸುಕಾಲ ಕಳೆಯುತ್ತಲೇ ನನ್ನನ್ನು ಪುನಃ ಕಾಣುವಿರಿ’ ಎಂದು ನಾನು ಹೇಳಿದ್ದನ್ನು ಕುರಿತು ನಿಮ್ಮನಿಮ್ಮಲ್ಲಿಯೇ ನೀವು ಚರ್ಚಿಸುತ್ತಿರುವುದೇನು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯೇಸುವು ಇದನ್ನು ಕುರಿತು ತನ್ನನ್ನು ಕೇಳಬೇಕೆಂದಿದ್ದಾರೆಂದು ತಿಳಿದು ಅವರಿಗೆ, “ಸ್ವಲ್ಪ ಕಾಲವಾದ ಮೇಲೆ ನಾನು ನಿಮಗೆ ಕಾಣಿಸುವುದಿಲ್ಲ, ಇನ್ನು ಸ್ವಲ್ಪ ಕಾಲವಾದ ಮೇಲೆ ನನ್ನನ್ನು ನೋಡುವಿರಿ, ಎಂದು ನಾನು ನಿಮಗೆ ಹೇಳಿದ್ದಕ್ಕೆ ನೀವು ನಿಮ್ಮನಿಮ್ಮೊಳಗೆ ವಿಚಾರಿಸಿಕೊಳ್ಳುತ್ತಿದ್ದೀರಾ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಯೇಸು ತನ್ನನ್ನು ಕೇಳಬೇಕೆಂದಿದ್ದಾರೆಂದು ತಿಳಿದು ಅವರಿಗೆ - ಸ್ವಲ್ಪಕಾಲವಾದ ಮೇಲೆ ನಾನು ನಿಮಗೆ ಕಾಣುವದಿಲ್ಲ, ಇನ್ನು ಸ್ವಲ್ಪಕಾಲವಾದ ಮೇಲೆ ನನ್ನನ್ನು ನೋಡುವಿರಿ ಎಂದು ನಾನು ಹೇಳಿದ್ದಕ್ಕೆ ನೀವು ನಿಮ್ಮನಿಮ್ಮೊಳಗೆ ವಿಚಾರಿಸಿಕೊಳ್ಳುತ್ತೀರಾ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಶಿಷ್ಯರು ಇದರ ಬಗ್ಗೆ ತನ್ನನ್ನು ಕೇಳಬೇಕೆಂದಿದ್ದಾರೆ ಎಂಬುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು, “‘ಸ್ವಲ್ಪಕಾಲವಾದ ಬಳಿಕ ನೀವು ನನ್ನನ್ನು ಕಾಣುವುದಿಲ್ಲ. ಆದರೆ ಅನಂತರ ಸ್ವಲ್ಪಕಾಲವಾದ ಬಳಿಕ ನನ್ನನ್ನು ನೋಡುವಿರಿ’ ಎಂದು ನಾನು ಹೇಳಿದ್ದರ ಅರ್ಥವೇನೆಂದು ನೀವು ಒಬ್ಬರನ್ನೊಬ್ಬರು ಕೇಳುತ್ತಿದ್ದೀರಾ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಶಿಷ್ಯರು ತಮ್ಮ ಬಗ್ಗೆ ಪ್ರಶ್ನಿಸಬಯಸುತ್ತಿದ್ದಾರೆಂದು ತಿಳಿದು ಯೇಸು, “ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ಕಾಣುವುದಿಲ್ಲ, ‘ಸ್ವಲ್ಪ ಕಾಲವಾದ ಮೇಲೆ ನೀವು ಪುನಃ ನನ್ನನ್ನು ಕಾಣುವಿರಿ ಎಂದು ನಾನು ನಿಮಗೆ ಹೇಳಿದ್ದರ ಕುರಿತಾಗಿ ನೀವು ಒಬ್ಬರಿಗೊಬ್ಬರು ವಿಚಾರಿಸಿಕೊಳ್ಳುತ್ತೀರೋ?’ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ತೆನಿ ತೆಕಾ ಕಾಯ್ಕಿ ಇಚಾರುಚೆ ಮನುನ್ ಹಾತ್ ಮನುನ್ ಜೆಜುಕ್ ಕಳ್ಳೆ, ತನ್ನಾ ತೆನಿ ತೆಂಕಾ, “ಉಲ್ಲ್ಯಾ ಎಳಾನ್ ಮಿಯಾ ಬಗುಕ್ ಗಾವಿನಾ, ಮಾನಾ ಅನಿ ಉಲ್ಲ್ಯಾ ಎಳಾನ್ ಬಗುಕ್ ಗಾವ್ತಾ ಮನ್ತಲ್ಯಾ ವಿಶಯಾತ್ ತುಮಿ ಎಕಾಮೆಕಾತ್ನಿ ಇಚಾರುಲಾಲ್ಯಾಶಿ ಕಾಯ್? ಅಧ್ಯಾಯವನ್ನು ನೋಡಿ |
ಮೂರನೇ ಬಾರಿಯೂ ಯೇಸು, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. “ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಯೇಸು ಮೂರನೇ ಬಾರಿ ಕೇಳಿದ್ದನ್ನು ಕಂಡು ಪೇತ್ರನು ನೊಂದುಕೊಂಡನು. “ಪ್ರಭುವೇ, ನಿಮಗೆ ಎಲ್ಲವು ತಿಳಿದೇ ಇದೆ. ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದೂ ನಿಮಗೆ ತಿಳಿದಿದೆ,” ಎಂದು ಹೇಳಿದನು. ಅದಕ್ಕೆ ಯೇಸು, “ನನ್ನ ಕುರಿಗಳನ್ನು ಮೇಯಿಸು;