Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 16:20 - ಕನ್ನಡ ಸತ್ಯವೇದವು C.L. Bible (BSI)

20 ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ನೀವು ಅತ್ತುಗೋಳಾಡುವಿರಿ; ಲೋಕವಾದರೋ ನಕ್ಕು ನಲಿದಾಡುವುದು. ನೀವು ದುಃಖಪಡುವಿರಿ. ಆದರೆ ನಿಮ್ಮ ದುಃಖ ಆನಂದವಾಗಿ ಮಾರ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನೀವು ಅಳುತ್ತಾ ಗೋಳಾಡುತ್ತಾ ಇರುವಿರಿ. ಆದರೆ ಲೋಕವು ಸಂತೋಷಿಸುವುದು. ನಿಮಗೆ ದುಃಖವಾಗುವುದು ಆದರೆ ನಿಮ್ಮ ದುಃಖವು ಹೋಗಿ ಆನಂದ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ಅಳುತ್ತಾ ಗೋಳಾಡುತ್ತಾ ಇರುವಿರಿ, ಆದರೆ ಲೋಕವು ಸಂತೋಷಿಸುವದು; ನಿಮಗೆ ದುಃಖವಾಗುವದು, ಆದರೆ ನಿಮ್ಮ ದುಃಖವು ಹೋಗಿ ಆನಂದ ಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಅಳುವಿರಿ, ದುಃಖಪಡುವಿರಿ. ಆದರೆ ಲೋಕವು ಸಂತೋಷಪಡುವುದು. ನೀವು ದುಃಖಪಡುವಿರಿ, ಆದರೆ ನಿಮ್ಮ ದುಃಖವು ಆನಂದವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ಅತ್ತು ಗೋಳಾಡುವಿರಿ. ಆದರೆ ಲೋಕವು ಸಂತೋಷಿಸುವುದು; ನೀವು ದುಃಖಿಸುವಿರಿ ಆದರೆ ನಿಮ್ಮ ದುಃಖವು ಆನಂದವಾಗಿ ಮಾರ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಮಿಯಾ ತುಮ್ಕಾ ಖರೆ ಹೊತ್ತೆ ಸಾಂಗ್ತಾ, ತುಮಿ ಕಳ್ವಳ್ತ್ಯಾಶಿ ಅನಿ ರಡ್ತ್ಯಾಶಿ, ಖರೆ ಸಗ್ಳೊ ಜಗ್ ಖುಶಿ ಹೊತಾ, ತುಮಿ ದುಕ್ಕಾನ್ ರ್‍ಹಾತ್ಯಾಶಿ, ಖರೆ ತುಮ್ಚೊ ದುಕ್ ಕುಶಿ ಹೊವ್ನ್ ಬದಲ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 16:20
44 ತಿಳಿವುಗಳ ಹೋಲಿಕೆ  

ನನ್ನ ಪ್ರಿಯ ಸಹೋದರರೇ, ನಿಮಗೆ ವಿವಿಧ ಸಂಕಟ ಶೋಧನೆಗಳು ಬಂದೊದಗಿದಾಗ ಅವುಗಳನ್ನು ಸಂತೋಷದಿಂದ ಸಹಿಸಿಕೊಳ್ಳಿ.


ದುಃಖಿಗಳು ಭಾಗ್ಯವಂತರು; ದೇವರು ಅವರನ್ನು ಸಂತೈಸುವರು.


ದುಃಖಪಡುತ್ತಿದ್ದರೂ ಸದಾ ಸಂತೋಷದಿಂದ ಇದ್ದೇವೆ. ದರಿದ್ರರಾಗಿದ್ದರೂ ಅನೇಕರನ್ನು ಧನವಂತರನ್ನಾಗಿಸುತ್ತಿದ್ದೇವೆ; ನಾವು ಏನೂ ಇಲ್ಲದವರಾಗಿದ್ದರೂ ಎಲ್ಲವನ್ನೂ ಪಡೆದವರಂತೆ ಇದ್ದೇವೆ.


ಈಕೆ ಹೋಗಿ ತಾನು ಕಂಡದ್ದನ್ನು ಯೇಸುವಿನ ಸಂಗಡಿಗರಿಗೆ ತಿಳಿಸಿದಳು. ಅವರಾದರೋ ಇನ್ನೂ ಶೋಕಭರಿತರಾಗಿ ಅಳುತ್ತಾ ಕುಳಿತಿದ್ದರು.


ಬಳಲಿ ಬೆಂಡಾದವರೆಲ್ಲರನ್ನು ತಣಿಸುವೆನು ಹಾಗೂ ತೃಪ್ತಿಪಡಿಸುವೆನು.”


ಪಾಪದಲ್ಲಿ ಎಡವಿ ಬೀಳದಂತೆ ನಿಮ್ಮನ್ನು ಕಾಪಾಡುವ ತಮ್ಮ ಮಹಿಮಾಸನ್ನಿಧಿಯಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿಯೂ ಹರ್ಷಭರಿತರನ್ನಾಗಿಯೂ ನಿಲ್ಲಿಸಲು ಶಕ್ತರಾಗಿರುವ


ಇಸ್ರಯೇಲನ್ನು ಬಿಡುಗಡೆಮಾಡುವ ಉದ್ಧಾರಕ ಅವರೇ ಎಂದು ನಾವು ನಂಬಿಕೊಂಡಿದ್ದೆವು. ಇಷ್ಟುಮಾತ್ರವಲ್ಲ, ಇದೆಲ್ಲಾ ಸಂಭವಿಸಿ ಇಂದಿಗೆ ಮೂರು ದಿನಗಳು ಆಗಿವೆ.


ಎನ್ನ ಗೋಳಾಟವನು ನೀ ಕುಣಿದಾಟವಾಗಿಸಿದೆ I ಎನ್ನ ಗೋಣಿತಟ್ಟನು ಹರ್ಷಾಭರಣವಾಗಿಸಿದೆ II


ಆತನ ಕೋಪ ಕ್ಷಣಮಾತ್ರ I ಆತನ ಕೃಪೆ ಜೀವನ ಪರಿಯಂತ II ಇರುಳು ಬರಲು ಇರಬಹುದು ಅಳಲು I ನಲಿವು ಉಲಿವುದು ಹಗಲು ಹರಿಯಲು II


ಪವಿತ್ರಾತ್ಮದತ್ತವಾದ ಸತ್ಫಲಗಳು ಯಾವುವೆಂದರೆ: ಪ್ರೀತಿ, ಆನಂದ, ಶಾಂತಿಸಮಾಧಾನ, ಸಹನೆ, ದಯೆ, ಸದ್ಗುಣ, ಪ್ರಾಮಾಣಿಕತೆ, ಸೌಭಾಗ್ಯ, ಸಂಯಮ - ಇಂಥವುಗಳೇ.


ಅಷ್ಟೇ ಅಲ್ಲದೆ, ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ದೇವರು ನಮ್ಮನ್ನು ಮಿತ್ರರನ್ನಾಗಿಸಿರುವುದರಿಂದ ಅವರ ಮೂಲಕವೇ ನಾವು ದೇವರಲ್ಲಿ ಹೆಮ್ಮೆಪಡುತ್ತೇವೆ.


“ನೀವು ತರ್ಕಮಾಡಿಕೊಂಡು ಹೋಗುತ್ತಿರುವಿರಲ್ಲಾ, ಏನು ವಿಷಯ?” ಎಂದು ಯೇಸು ಕೇಳಿದರು. ಶಿಷ್ಯರು ಸಪ್ಪೆ ಮುಖಮಾಡಿ ನಿಂತರು.


ಜನರ ದೊಡ್ಡ ಗುಂಪು ಯೇಸುವಿನ ಹಿಂದೆ ಹೊರಟಿತು. ಕೆಲವು ಮಹಿಳೆಯರು ಯೇಸುವಿಗಾಗಿ ದುಃಖಪಟ್ಟು, ಎದೆಬಡಿದುಕೊಂಡು ಗೋಳಾಡುತ್ತಾ, ಹಿಂಬಾಲಿಸುತ್ತಿದ್ದರು.


ದುಃಖಿತರೆಲ್ಲರಿಗೆ ಸಾಂತ್ವನ ಸಾರಲೆಂದೇ ಕಳುಹಿಸಿದನಾತ ನನ್ನನು. ಸಿಯೋನಿನ ಶೋಕಾರ್ತರಿಗೆ ಬರಿಬೂದಿಗೆ ಬದಲು ಶಿರೋಭೂಷಣ, ದುಃಖತಾಪದ ಬದಲು ಆನಂದ ತೈಲ, ಸೊರಗಿದ್ದ ಮನಕೆ ಮೆಚ್ಚಿಕೆಯ ಮೇಲ್ವಸ್ತ್ರ ಒದಗಿಸಲೆಂದೇ ನನ್ನನ್ನು ಕಳುಹಿಸಿದನಾತ. ನೆಟ್ಟಿಹನು ಇವರನು ಸರ್ವೇಶ್ವರ ತನ್ನ ಮಹಿಮೆಯಾಗಿ ಹೆಸರ ಪಡೆವರಿವರು ‘ನೀತಿವೃಕ್ಷ’ಗಳೆಂಬುದಾಗಿ.


ಅಹಂಭಾವದಿಂದಾಕೆ ಮೆರೆದುದಕೆ ಪೀಡಿಸಿ ಕಾಡಿಸಿರಿ ಸರಿಯಾದ ಅಳತೆಯಲ್ಲೇ. ಹೃದಯದಲಿ ಹೇಳುತಿಹಳು ಅವಳಿಂತು : ರಾಣಿಯಂತೆ ನಾ ಕುಳಿತಿಹೆನು ವಿಧವೆಯಲ್ಲ ನಾನೇನು ಕಾಣೆನೆಂದಿಗೂ ದುಃಖವನು.


ಭೂನಿವಾಸಿಗಳನ್ನು ಪೀಡಿಸಿದ್ದ ಆ ಇಬ್ಬರು ಪ್ರವಾದಿಗಳು ಸತ್ತದ್ದಕ್ಕಾಗಿ ಲೋಕದ ಜನರು ಸಂತೋಷದಿಂದ ಸಂಭ್ರಮಿಸುವರು. ಒಬ್ಬರಿಗೊಬ್ಬರು ಬಹುಮಾನಗಳನ್ನು ಹಂಚಿಕೊಳ್ಳುವರು.


ಯೇಸುವಿನ ನಾಮಕ್ಕೋಸ್ಕರ ಅಪಮಾನವನ್ನು ಅನುಭವಿಸುವ ಅರ್ಹತೆಯನ್ನು ಪಡೆದೆವೆಂದು ಪ್ರೇಷಿತರು ಸಂತೋಷಭರಿತರಾಗಿ ನ್ಯಾಯಸಭೆಯಿಂದ ಹೊರಬಂದರು.


ನಿಮಗೆ ನನ್ನಲ್ಲಿ ಶಾಂತಿಸಮಾಧಾನ ಲಭಿಸಲೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಕಷ್ಟಸಂಕಟಗಳು ತಪ್ಪಿದ್ದಲ್ಲ, ಆದರೆ ಧೈರ್ಯವಾಗಿರಿ. ನಾನು ಲೋಕವನ್ನು ಜಯಿಸಿದ್ದೇನೆ,” ಎಂದು ಹೇಳಿದರು.


ಇದನ್ನೆಲ್ಲಾ ನಾನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯವು ದುಃಖಭರಿತವಾಗಿದೆ.


ಅವನು ಹೊರಗೆ ಹೋಗಿ ಬಹಳವಾಗಿ ವ್ಯಥೆಪಟ್ಟು ಅತ್ತನು.


ಯೇಸು ಪ್ರಾರ್ಥನೆಯಿಂದ ಎದ್ದು ಶಿಷ್ಯರ ಬಳಿಗೆ ಬಂದರು. ಶಿಷ್ಯರಾದರೋ ದುಃಖದಿಂದ ಬಳಲಿ ನಿದ್ರಿಸುತ್ತಿದ್ದರು.


ಈಗ ಹಸಿದಿರುವವರೇ, ನೀವು ಭಾಗ್ಯವಂತರು! ನಿಮಗೆ ಸಂತೃಪ್ತಿಯಾಗುವುದು. ಈಗ ಅತ್ತು ಗೋಳಾಡುವವರೇ, ನೀವು ಭಾಗ್ಯವಂತರು! ನೀವು ನಕ್ಕುನಲಿದಾಡುವಿರಿ!


“ಕೋಳಿ ಎರಡು ಸಾರಿ ಕೂಗುವ ಮೊದಲೇ ‘ಆತನನ್ನು ನಾನರಿಯೆ’ ಎಂದು ಮೂರು ಬಾರಿ ನನ್ನನ್ನು ನಿರಾಕರಿಸುವೆ” ಎಂದು ಯೇಸು ಹೇಳಿದ್ದ ಮಾತು ಪೇತ್ರನ ನೆನಪಿಗೆ ಬಂದಿತು. ದುಃಖದ ಕಟ್ಟೆಯೊಡೆದು ಆತನು ಬಿಕ್ಕಿಬಿಕ್ಕಿ ಅತ್ತನು.


ಸರ್ವೇಶ್ವರ ಸ್ವಾಮಿಯ ಮಾತಿನಲ್ಲಿ ಭಯಭಕ್ತಿಯುಳ್ಳವರೇ, ಕೇಳಿ ಸ್ವಾಮಿಯ ಈ ಮಾತನ್ನು ! “ನನ್ನ ನಾಮದ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಹೋದರರು, ‘ಸರ್ವೇಶ್ವರ ತನ್ನ ಮಹಿಮೆಯನ್ನು ಬೆಳಗಿಸಲಿ, ಆಗ ನಿಮಗಾಗುವ ಆನಂದವನ್ನು ನೋಡೋಣ,’ ಎಂದು ಜರೆದಿದ್ದಾರಲ್ಲವೆ? ಅವರೇ ನಾಚಿಕೆಪಡಬೇಕಾಗುವುದು !


ಆ ದಿನದಂದು ಹಾಡುವುದು ಜನತೆ ಹೀಗೆಂದು : “ಹೇ ಸರ್ವೇಶ್ವರಾ, ನಿನಗೆನ್ನ ವಂದನ; ನಿನಗಿತ್ತು ಎನ್ನ ಮೇಲೆ ಕೋಪ ಮನ. ಆದರೆ ಅದೀಗ ಆಗಿದೆ ಶಮನ, ಬಂದಿತೆನ್ನ ಮನಕೆ ಸಾಂತ್ವನ.


ಉದಯವಾಗುವುದು ಜ್ಯೋತಿ ಸಜ್ಜನರಿಗೆ I ಆನಂದವಿದೆ ಯಥಾರ್ಥ ಹೃದಯಿಗಳಿಗೆ II


ದುಷ್ಟನ ಜಯಘೋಷ ಅಲ್ಪಕಾಲದ್ದು ಭ್ರಷ್ಟನ ಉಲ್ಲಾಸ ಕ್ಷಣಿಕವಾದದ್ದು.


ನೀವು ನಮ್ಮನ್ನು ಹಾಗೂ ಪ್ರಭು ಯೇಸುವನ್ನು ಅನುಸರಿಸುವವರಾದಿರಿ. ಇದರಿಂದ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿ ಬಂದರೂ ಪವಿತ್ರಾತ್ಮ ಪ್ರೇರಿತ ಆನಂದದಿಂದ ದೇವರ ವಾಕ್ಯವನ್ನು ಅಂಗೀಕರಿಸಿದಿರಿ.


“ನಿಮಗೆ ಶಾಂತಿ” ಎಂದು ಹೇಳಿ ತಮ್ಮ ಕೈಗಳನ್ನು ಮತ್ತು ಪಕ್ಕೆಗಳನ್ನು ತೋರಿಸಿದರು. ಪ್ರಭುವನ್ನು ಕಂಡು ಶಿಷ್ಯರಿಗೆ ಮಹದಾನಂದವಾಯಿತು.


ಆದರೆ ಗೇಣಿದಾರರು ಮಗನನ್ನು ಕಂಡೊಡನೇ, ‘ಈ ತೋಟಕ್ಕೆ ಇವನೇ ಉತ್ತರಾಧಿಕಾರಿ; ಬನ್ನಿ ಇವನನ್ನು ಮುಗಿಸಿಬಿಡೋಣ. ಇವನಿಗೆ ಬರುವ ಸೊತ್ತನ್ನು ನಮ್ಮದಾಗಿಸಿಕೊಳ್ಳೋಣ,’ ಎಂದು ತಮ್ಮ ತಮ್ಮಲ್ಲೇ ಒಳಸಂಚು ಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು