Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 16:21 - ಕನ್ನಡ ಸತ್ಯವೇದವು C.L. Bible (BSI)

21 ಗರ್ಭಿಣಿಯಾದ ಸ್ತ್ರೀಯು ಪ್ರಸವಿಸುವ ಗಳಿಗೆ ಬಂದಾಗ ವೇದನೆಪಡುತ್ತಾಳೆ; ಮಗುವನ್ನು ಹೆರುತ್ತಲೇ ಜಗದಲ್ಲಿ ಮಾನವನೊಬ್ಬನು ಜನಿಸಿದನೆಂಬ ಉಲ್ಲಾಸದಿಂದ ತಾನು ಪಟ್ಟ ವೇದನೆಯನ್ನು ಮರೆತುಬಿಡುತ್ತಾಳೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಒಬ್ಬ ಸ್ತ್ರೀ ಹೆರುವಾಗ ತನ್ನ ಬೇನೆಯ ಕಾಲವು ಬಂದಿತೆಂದು ತಿಳಿದು ಆಕೆಗೆ ದುಃಖವಾಗುತ್ತದೆ, ಆದರೆ ಆಕೆಯು ಕೂಸನ್ನು ಹೆತ್ತ ಮೇಲೆ, ಲೋಕದಲ್ಲಿ ಒಂದು ಮಗು ಹುಟ್ಟಿತೆಂದು ಆನಂದದಿಂದ ಆ ವೇದನೆಯನ್ನು ಪುನಃ ನೆನಸಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಒಬ್ಬ ಸ್ತ್ರೀ ಹೆರುವಾಗ ತನ್ನ ಬೇನೆಯ ಕಾಲ ಬಂತೆಂದು ಆಕೆಗೆ ದುಃಖವಾಗುತ್ತದೆ; ಆದರೆ ಕೂಸನ್ನು ಹೆತ್ತ ಮೇಲೆ ಲೋಕದಲ್ಲಿ ಒಬ್ಬ ಮನುಷ್ಯನು ಹುಟ್ಟಿದನೆಂಬ ಆನಂದದಿಂದ ಆ ಬೇನೆಯನ್ನು ನೆನಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ಗರ್ಭಿಣಿ ಸ್ತ್ರೀಯು ಪ್ರಸವಿಸುವ ಗಳಿಗೆ ಬಂದಾಗ ವೇದನೆಪಡುತ್ತಾಳೆ. ಮಗುವು ಜನಿಸಿದಾಗ, ಲೋಕದಲ್ಲಿ ಮಗುವೊಂದು ಜನಿಸಿತೆಂಬ ಸಂತೋಷದಿಂದ ಆಕೆ ಆ ವೇದನೆಯನ್ನು ಮರೆತುಬಿಡುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಒಬ್ಬ ಸ್ತ್ರೀಗೆ ಪ್ರಸವ ಗಳಿಗೆ ಬಂದಾಗ ದುಃಖವಿರುವುದು. ಆದರೆ ಆಕೆಯು ಮಗುವನ್ನು ಹೆತ್ತಾಗ ಈ ಲೋಕದೊಳಗೆ ಒಂದು ಮಗು ಹುಟ್ಟಿತೆಂದು ಆನಂದದಿಂದ ಆ ವೇದನೆಯನ್ನು ಆಕೆಯು ಇನ್ನು ನೆನಪಿಗೆ ತಂದುಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಎಕ್ ಪೊರಾಕ್ ಜಲಮ್ ದಿತಲೊ ಎಳ್ ಯೆಲ್ಲ್ಯಾ ತನ್ನಾ ಅಪ್ನಾಚೊ ಕಸ್ಟಾಚೊ ಎಳ್ ಯೆಲೊ ಮನುನ್ ಎಕ್ ಬಾಯ್ಕೊಮನ್ಸಿಕ್ ದುಕ್ ಹೊತಾ, ಖರೆ ಪೊರ್ ಉಪಾಜಲ್ಲ್ಯಾ ತನ್ನಾ ತಿ ತೊ ಸಗ್ಳೊ ಕಸ್ಟ್ ಇಸರ್‍ತಾ, ಕಶ್ಯಾಕ್ ಮಟ್ಲ್ಯಾರ್, ಹ್ಯಾ ಜಗಾತ್ ಎಕ್ ಪೊರ್ ಉಪಾಜ್ಲೊ ಮಟಲ್ಲ್ಯಾಸಾಟ್ನಿ ತಿ ಕುಶಿ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 16:21
18 ತಿಳಿವುಗಳ ಹೋಲಿಕೆ  

ಬಂಜೆಯಾದವಳನು ಮಕ್ಕಳ ತಾಯಾಗಿಸುವನು I ಆನಂದದಿಂದಾಕೆ ಬೆಳಗಿಸುವಳಾ ಮನೆಯನು II


ಭಯಭ್ರಾಂತರಾಗುವರು ಅವರೆಲ್ಲರು; ಆಕ್ರಮಿಸುವುವು ಅವರನ್ನು ಯಾತನೆ ವೇದನೆಗಳು. ಸಂಕಟಪಡುವರವರು ಹೆರುವ ಹೆಂಗಸಿನಂತೆ; ಒಬ್ಬರನ್ನೊಬ್ಬರು ನೋಡುವರು ದಿಗ್ಭ್ರಾಂತರಾದವರಂತೆ; ಅವರ ಮುಖಗಳು ಕೆಂಪೇರುವುವು ಬೆಂಕಿಯಂತೆ.


ಎಲ್ಲವೂ ಶಾಂತ, ಸುಭದ್ರವೆಂದು ಜನರು ಎಣಿಸುತ್ತಿರುವಾಗಲೇ, ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ, ವಿನಾಶವು ಫಕ್ಕನೆ ಅವರ ಮೇಲೆ ಬಂದೆರಗುವುದು. ಇದರಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ.


ಸಿಯೋನ್ ಕುವರಿಯೇ, ಪ್ರಸವವೇದನೆಯಿಂದ ನರಳಾಡು; ಪಟ್ಟಣವನ್ನು ಬಿಟ್ಟು, ಬಯಲಿನಲ್ಲಿ ವಾಸಮಾಡು. ಬಾಬಿಲೋನಿಗೆ ತೆರಳು. ಅಲ್ಲೇ ನಿನಗೆ ಉದ್ಧಾರವಾಗುವುದು. ಅಲ್ಲೇ ನಿನ್ನ ಶತ್ರುಗಳಿಂದ ಸರ್ವೇಶ್ವರ ಬಿಡುಗಡೆ ಮಾಡುವರು.


“ಸಂತಾನವಿಲ್ಲದ ಸ್ತ್ರೀಯೇ, ಸಂತೋಷಿಸು ಪ್ರಸವವೇದನೆಯನರಿಯದವಳೇ, ಹರ್ಷೋದ್ಗಾರಮಾಡು ಗಂಡನುಳ್ಳವಳಿಗಿಂತ ಕೈಬಿಟ್ಟವಳ ಸಂತಾನ ಹೆಚ್ಚು.” ಎಂದು ಪವಿತ್ರಗ್ರಂಥದಲ್ಲೇ ಲಿಖಿತವಾಗಿದೆ.


ಬಳಿಕ ಆ ಮಹಿಳೆಗೆ: “ಹೆಚ್ಚಿಸುವೆನು ಪ್ರಸವಕಾಲದ ನಿನ್ನ ವೇದನೆಯನ್ನು ಹೆರುವೆ ನೀನು ಸಂಕಷ್ಟದಿಂದಲೇ ಮಕ್ಕಳನ್ನು. ಆದರೂ ನಿನಗಿರುವುದು ಗಂಡನ ಬಯಕೆ ಒಳಗಾಗುವೆ ನೀನು ಆತನ ಒಡೆತನಕ್ಕೆ."


ನಾನು ಕಂಡ ಈ ಭೀಕರ ದರ್ಶನದಿಂದ ನನಗೆ ಸೊಂಟ ಮುರಿದಂತಾಗಿದೆ. ಹೆರಿಗೆಯಂಥ ಬೇನೆಯುಂಟಾಗಿದೆ. ಕಿವಿ ಕಿತ್ತುಹೋಗುವಂತಿದೆ. ಕಣ್ಣು ಕರುಡಾಗುವಂತಿದೆ.


“ ‘ಪ್ರಸವವೇದನೆಗೆ ಮುಂಚೆಯೇ ಹೆರಿಗೆಯಾಯಿತು; ಪ್ರಸವವೇದನೆ ಪಡುವುದರೊಳಗೆ ಗಂಡನ್ನು ಹೆತ್ತಳು’.


ನೀನೀಗ ರೋದಿಸುವುದೇಕೆ? ಪ್ರಸವವೇದನೆ ಪಡುವವಳಂತೆ ನರಳುವುದೇಕೆ? ನಿನಗೆ ರಾಜನಿಲ್ಲವೇ? ನಿನ್ನ ಸಲಹೆಗಾರ ಸತ್ತುಹೋದನೇ?


ಮರೆತುಬಿಡುವೆ ಆಗ ನಿನ್ನ ಕಷ್ಟದುಃಖವನ್ನು ನಿನ್ನ ನೆನಪಿಗೆ ಅದು ಹರಿದುಹೋದ ನೀರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು