Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 16:23 - ಕನ್ನಡ ಸತ್ಯವೇದವು C.L. Bible (BSI)

23 ಆ ದಿನದಂದು ನನ್ನಿಂದ ನೀವೇನನ್ನೂ ಕೇಳುವಂತಿಲ್ಲ. ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ಪಿತನಲ್ಲಿ ಏನನ್ನು ಬೇಡಿಕೊಂಡರೂ ನಿಮಗೆ ಅವರು ನನ್ನ ಹೆಸರಿನಲ್ಲಿ ಕೊಟ್ಟೇತೀರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವುದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆ ದಿನದಲ್ಲಿ ನೀವು ನನಗೆ ಯಾವ ಪ್ರಶ್ನೆಯನ್ನೂ ಮಾಡುವದಿಲ್ಲ. ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ತಂದೆಯನ್ನು ಏನಾದರೂ ಬೇಡಿಕೊಂಡರೆ ಅದನ್ನು ಆತನು ನನ್ನ ಹೆಸರಿನ ಮೇಲೆ ನಿಮಗೆ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆ ದಿನದಲ್ಲಿ ನೀವು ನನಗೆ ಯಾವ ಪ್ರಶ್ನೆಯನ್ನೂ ಕೇಳುವುದಿಲ್ಲ. ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ನನ್ನ ಹೆಸರಿನಲ್ಲಿ ಏನು ಕೇಳಿಕೊಂಡರೂ ತಂದೆಯು ಅದನ್ನು ನಿಮಗೆ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆ ದಿನದಲ್ಲಿ ನೀವು ನನ್ನನ್ನು ಏನೂ ಪ್ರಶ್ನಿಸುವುದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅವರು ನಿಮಗೆ ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 “ತೊ ದಿಸ್ ಯೆಲ್ಲ್ಯಾ ತನ್ನಾ ತುಮಿ ಮಾಜಾಕ್ಡೆ ಕಾಯ್ಬಿ ಮಾಗಿನ್ಯಾಶಿ, ಮಿಯಾ ತುಮ್ಕಾ ಖರೆ ಅಸಲ್ಲೆ ಸಾಂಗುಕ್ ಲಾಗ್ಲಾ. ಮಾಜ್ಯಾ ನಾವಾನ್ ತುಮಿ ಕಾಯ್ಬಿ ಮಾಗ್ಲ್ಯಾರ್‍ಬಿ ಮಾಜೊ ಬಾಬಾ ತೆ ತುಮ್ಕಾ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 16:23
22 ತಿಳಿವುಗಳ ಹೋಲಿಕೆ  

“ನೀವು ನನ್ನಲ್ಲಿಯೂ ನನ್ನ ವಾಕ್ಯವು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನು ಬೇಕಾದರೂ ಕೇಳಬಹುದು. ನಿಮಗದು ಸಿಗುವುದು.


ವಿಶ್ವಾಸವಿಟ್ಟು, ಏನನ್ನು ಪ್ರಾರ್ಥನೆಯಲ್ಲಿ ನೀವು ಬೇಡಿಕೊಳ್ಳುವಿರೋ, ಅದನ್ನೆಲ್ಲಾ ಪಡೆಯುವಿರಿ,” ಎಂದು ಉತ್ತರಿಸಿದರು.


ಅವರು ಮೊರೆಯಿಡುವುದಕ್ಕೆ ಮುಂಚೆಯೇ ನಾ ಕಿವಿಗೊಡುವೆನು; ಅವರು ಪ್ರಾರ್ಥಿಸುವಾಗಲೇ ನಾನು ಸದುತ್ತರ ನೀಡುವೆನು.


“ಕೇಳಿರಿ, ನಿಮಗೆ ಕೊಡಲಾಗುವುದು; ಹುಡುಕಿರಿ, ನಿಮಗೆ ಸಿಗುವುದು; ತಟ್ಟಿರಿ, ನಿಮಗೆ ಬಾಗಿಲು ತೆರೆಯಲಾಗುವುದು.


ಆ ಕಾಲವು ಬಂದಾಗ ನನ್ನ ಹೆಸರು ಹೇಳಿ ನೀವೇ ಪಿತನಲ್ಲಿ ಬೇಡುವಿರಿ. ನಿಮ್ಮ ಪರವಾಗಿ ನಾನು ಪಿತನಲ್ಲಿ ಬೇಡಿಕೊಳ್ಳುವೆನೆಂದು ನಾನು ಹೇಳುವುದಿಲ್ಲ.


ನಾನು ನನ್ನ ಪಿತನಲ್ಲಿ ಇರುವೆನು; ನೀವು ನನ್ನಲ್ಲಿ ಇರುವಿರಿ ಮತ್ತು ನಾನು ನಿಮ್ಮಲ್ಲಿ ಇರುವೆನು. ಇದನ್ನು ಆ ದಿನದಂದು ನೀವು ಅರಿತುಕೊಳ್ಳುವಿರಿ.


ಇದರ ಪರಿಣಾಮವಾಗಿ ಅವರ ಮುಖಾಂತರವೇ ಉಭಯತ್ರರು ಒಂದೇ ಪವಿತ್ರಾತ್ಮ ಅವರಲ್ಲಿ ಪಿತನ ಸಾನ್ನಿಧ್ಯವನ್ನು ಸೇರಲು ಮಾರ್ಗವಾಯಿತು.


ಪ್ರಿಯಮಕ್ಕಳೇ, ನೀವು ಪಾಪಮಾಡಬಾರದೆಂದೇ ನಾನಿದನ್ನು ನಿಮಗೆ ಬರೆಯುತ್ತಿದ್ದೇನೆ. ಒಂದು ವೇಳೆ ಯಾರಾದರೂ ಪಾಪಮಾಡಿದ್ದೇ ಆದರೆ ನಮ್ಮ ಪರವಾಗಿ ಪಿತನ ಬಳಿಯಲ್ಲಿ ಬಿನ್ನಯಿಸಲು ಒಬ್ಬರಿದ್ದಾರೆ. ಅವರೇ ಸತ್ಯಸ್ವರೂಪರಾದ ಯೇಸುಕ್ರಿಸ್ತರು.


ಆಗ ತೋಮನು, “ಪ್ರಭುವೇ, ನೀವು ಎಲ್ಲಿಗೆ ಹೋಗುತ್ತೀರೆಂದು ನಮಗೆ ತಿಳಿಯದು; ಅಂದಮೇಲೆ ಅಲ್ಲಿಗೆ ಹೋಗುವ ಮಾರ್ಗವು ಹೇಗೆ ತಿಳಿದೀತು?” ಎಂದು ಕೇಳಿದನು.


ಯೇಸು, ತಮ್ಮಲ್ಲಿ ಅವರು ವಿಚಾರಿಸಬೇಕೆಂದಿದ್ದಾರೆಂದು ತಿಳಿದುಕೊಂಡು, ‘ತುಸುಕಾಲದ ನಂತರ ನೀವು ನನ್ನನ್ನು ಕಾಣಲಾರಿರಿ. ಅನಂತರ ತುಸುಕಾಲ ಕಳೆಯುತ್ತಲೇ ನನ್ನನ್ನು ಪುನಃ ಕಾಣುವಿರಿ’ ಎಂದು ನಾನು ಹೇಳಿದ್ದನ್ನು ಕುರಿತು ನಿಮ್ಮನಿಮ್ಮಲ್ಲಿಯೇ ನೀವು ಚರ್ಚಿಸುತ್ತಿರುವುದೇನು?


ನೀವು ಎಲ್ಲವನ್ನೂ ಬಲ್ಲವರು. ಪ್ರಶ್ನೆಗಳಿಗಾಗಿ ನೀವು ಕಾಯಬೇಕಿಲ್ಲ ಎಂದು ನಮಗೀಗ ತಿಳಿಯಿತು. ಆದುದರಿಂದ ನೀವು ದೇವರಿಂದ ಬಂದವರೆಂದು ನಾವು ವಿಶ್ವಾಸಿಸುತ್ತೇವೆ,” ಎಂದರು.


ಆಗ ಯೂದನು, (ಈತ ಇಸ್ಕರಿಯೋತಿನ ಯೂದನಲ್ಲ) “ಪ್ರಭೂ, ನೀವು ಈ ಲೋಕಕ್ಕೆ ನಿಮ್ಮನ್ನು ಸಾಕ್ಷಾತ್ಕರಿಸಿಕೊಳ್ಳದೆ ನಮಗೆ ಮಾತ್ರ ಸಾಕ್ಷಾತ್ಕರಿಸಿಕೊಳ್ಳುತ್ತೀರಲ್ಲಾ, ಏಕೆ?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು