Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 16:24 - ಕನ್ನಡ ಸತ್ಯವೇದವು C.L. Bible (BSI)

24 ಈ ತನಕ ನನ್ನ ಹೆಸರಿನಲ್ಲಿ ನೀವೇನನ್ನೂ ಕೇಳಲಿಲ್ಲ. ಕೇಳಿ, ನಿಮಗೆ ದೊರೆಯುವುದು. ಆಗ ನಿಮ್ಮ ಆನಂದವು ತುಂಬಿ ತುಳುಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೊಂದನ್ನೂ ಕೇಳಿಕೊಳ್ಳಲಿಲ್ಲ. ಕೇಳಿಕೊಳ್ಳಿರಿ, ಆಗ ನಿಮ್ಮ ಆನಂದವು ಪರಿಪೂರ್ಣವಾಗುವ ಹಾಗೆ ನಿಮಗೆ ದೊರೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನೀವು ಇದುವರೆಗೆ ನನ್ನ ಹೆಸರಿನ ಮೇಲೆ ಯಾವದೊಂದನ್ನೂ ಬೇಡಿಕೊಂಡಿಲ್ಲ; ಬೇಡಿಕೊಳ್ಳಿರಿ, ನಿಮಗೆ ಸಿಕ್ಕುವದು; ಆಗ ನಿಮ್ಮ ಆನಂದವು ಪರಿಪೂರ್ಣವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನೀವು ನನ್ನ ಹೆಸರಿನಲ್ಲಿ ಏನೂ ಕೇಳಿಕೊಳ್ಳಲಿಲ್ಲ. ಕೇಳಿರಿ, ಆಗ ನಿಮಗೆ ದೊರೆಯುವುದು ಮತ್ತು ನಿಮ್ಮ ಆನಂದವು ಪರಿಪೂರ್ಣವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೂ ಕೇಳಿಕೊಳ್ಳಲಿಲ್ಲ. ಕೇಳಿರಿ, ನೀವು ಪಡೆದುಕೊಳ್ಳುವಿರಿ. ಆಗ ನಿಮ್ಮ ಆನಂದವು ಪರಿಪೂರ್ಣವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಆಜ್ ಪತರ್ ತುಮಿ ಮಾಜ್ಯಾ ನಾವಾನ್ ಕಾಯ್ಬಿ ಮಾಗುಕ್‍ನ್ಯಾಶಿ; ಇಚಾರಾ ಅನಿ ತುಮ್ಕಾ ಗಾವ್ತಾ. ಅಶೆ ತುಮ್ಚೊ ಕುಶಿ ಪುರಾ ಹೊತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 16:24
17 ತಿಳಿವುಗಳ ಹೋಲಿಕೆ  

“ನನ್ನಲ್ಲಿರುವ ಆನಂದವು ನಿಮ್ಮಲ್ಲಿ ಇರಬೇಕೆಂತಲೂ ನಿಮ್ಮ ಆನಂದವು ತುಂಬಿ ತುಳುಕಬೇಕೆಂತಲೂ ಇದನ್ನೆಲ್ಲಾ ನಿಮಗೆ ಹೇಳುತ್ತಿದ್ದೇನೆ.


ಆ ದಿನದಂದು ನನ್ನಿಂದ ನೀವೇನನ್ನೂ ಕೇಳುವಂತಿಲ್ಲ. ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ಪಿತನಲ್ಲಿ ಏನನ್ನು ಬೇಡಿಕೊಂಡರೂ ನಿಮಗೆ ಅವರು ನನ್ನ ಹೆಸರಿನಲ್ಲಿ ಕೊಟ್ಟೇತೀರುವರು.


ನಾನು ನಿಮಗೆ ತಿಳಿಸಬೇಕಾದ ವಿಷಯಗಳು ಬಹಳಷ್ಟಿವೆ. ಆದರೆ ಅವುಗಳನ್ನು ಕಾಗದಪತ್ರಗಳ ಮೂಲಕ ತಿಳಿಸಲು ನನಗೆ ಇಷ್ಟವಿಲ್ಲ. ನಾನೇ ನಿಮ್ಮಲ್ಲಿಗೆ ಬಂದು ನಿಮ್ಮ ಸಂಗಡ ಮಾತನಾಡುವ ನಿರೀಕ್ಷೆ ಇದೆ. ಹೀಗೆ ಮುಖಾಮುಖಿಯಾಗಿ ಮಾತನಾಡುವುದರಿಂದ ಪೂರ್ಣಸಂತೋಷವೂ ಆಗುತ್ತದೆ.


ಆದುದರಿಂದ ಹೀಗೆಂದು ಪ್ರಾರ್ಥನೆಮಾಡಿ:


ಮದುಮಗಳು ಮದುಮಗನಿಗೆ ಸೇರಿದವಳು. ಮದುಮಗನ ಗೆಳೆಯನಾದರೋ ಪಕ್ಕದಲ್ಲಿದ್ದು ಮದುಮಗನ ಕರೆಗೆ ಕಿವಿಗೊಡುತ್ತಾನೆ; ಆತನ ಸ್ವರ ಕೇಳಿ ಹರ್ಷಿಸುತ್ತಾನೆ. ಇಂಥ ಆನಂದದಿಂದ ನಾನೀಗ ಭರಿತನಾಗಿದ್ದೇನೆ.


ಸಂಧ್ಯಾನೈವೇದ್ಯದ ಹೊತ್ತಿಗೆ, ಪ್ರವಾದಿ ಎಲೀಯನು ಪೀಠದ ಹತ್ತಿರ ಬಂದು, “ಅಬ್ರಹಾಮ್, ಇಸಾಕ್, ಇಸ್ರಯೇಲರ ದೇವರೇ, ಸರ್ವೇಶ್ವರಾ, ನೀವೊಬ್ಬರೇ ಇಸ್ರಯೇಲರ ದೇವರಾಗಿರುತ್ತೀರಿ ಎಂಬುದನ್ನು, ನಾನು ನಿನ್ನ ದಾಸನಾಗಿರುತ್ತೇನೆಂಬುದನ್ನು ಹಾಗು ಇದನ್ನೆಲ್ಲಾ ನಿಮ್ಮ ಅಪ್ಪಣೆಯ ಮೇರೆಗೆ ಮಾಡಿದೆನೆಂಬುದನ್ನು ಈ ದಿನ ತೋರಿಸಿಕೊಡಿ.


ತಂದೆಯಾದ ದೇವರ ಮತ್ತು ಪ್ರಭುವಾದ ಯೇಸುಕ್ರಿಸ್ತರ ಅನುಗ್ರಹವೂ ಶಾಂತಿಸಮಾಧಾನವೂ ನಿಮಗೆ ಲಭಿಸಲಿ!


ಇದಲ್ಲದೆ ಯಕೋಬನು ದೇವರನ್ನು ಹೀಗೆಂದು ಪ್ರಾರ್ಥಿಸಿದನು: “ಸ್ವಾಮಿ ಸರ್ವೇಶ್ವರಾ, ನನ್ನ ತಂದೆ ತಾತಂದಿರಾದ ಇಸಾಕ, ಅಬ್ರಹಾಮರ ದೇವರೇ, ಸ್ವಂತ ನಾಡಿಗೆ, ಬಂಧುಬಳಗದವರ ಬಳಿಗೆ ಹಿಂದಿರುಗಬೇಕೆಂದು ನನಗೆ ನೀವೇ ಆಜ್ಞಾಪಿಸಿದಿರಿ: 'ನಿನಗೆ ಒಳ್ಳೆಯದನ್ನೇ ಮಾಡುತ್ತೇನೆ' ಎಂದು ವಾಗ್ದಾನ ಮಾಡಿದವರು ನೀವೇ ಅಲ್ಲವೆ?


“ಇಸ್ರಯೇಲಿನ ದೇವರೇ, ಸರ್ವೇಶ್ವರಾ, ಕೆರೂಬಿಗಳ ಮೇಲೆ ಆಸೀನಾರೂಢರಾಗಿರುವವರೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀವೊಬ್ಬರೇ; ಪರಲೋಕ ಭೂಲೋಕಗಳನ್ನುಂಟುಮಾಡಿದವರು ನೀವೇ.


ಯೇಸು ಸ್ವಾಮಿ ತಮ್ಮ ಮಾತನ್ನು ಮುಂದುವರಿಸುತ್ತಾ ಶಿಷ್ಯರಿಗೆ, “ನೀವು ಹೃದಯದಲ್ಲಿ ಕಳವಳಗೊಳ್ಳದಿರಿ; ದೇವರಲ್ಲಿ ವಿಶ್ವಾಸವಿಡಿ; ನನ್ನಲ್ಲಿಯೂ ವಿಶ್ವಾಸವಿಡಿ.


ಹೌದು, ನನ್ನ ಹೆಸರಿನಲ್ಲಿ ನೀವು ಏನನ್ನು ಕೇಳಿದರೂ ನಾನು ಅದನ್ನು ಮಾಡಿಯೇ ತೀರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು