Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 16:3 - ಕನ್ನಡ ಸತ್ಯವೇದವು C.L. Bible (BSI)

3 ನನ್ನನ್ನಾಗಲಿ, ಪಿತನನ್ನಾಗಲಿ ಅವರು ಅರಿತಿಲ್ಲದ ಕಾರಣ ನಿಮಗೆ ಹೀಗೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರು ತಂದೆಯನ್ನಾದರೂ ನನ್ನನ್ನಾದರೂ ತಿಳಿಯದವರಾಗಿರುವುದರಿಂದ ಇವೆಲ್ಲವುಗಳನ್ನು ನಿಮಗೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರು ತಂದೆಯನ್ನಾದರೂ ನನ್ನನ್ನಾದರೂ ತಿಳಿಯದವರಾಗಿರುವದರಿಂದ ಇಂಥದನ್ನು ನಿಮಗೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಜನರು ತಂದೆಯನ್ನು ಮತ್ತು ನನ್ನನ್ನು ತಿಳಿದಿಲ್ಲದ ಕಾರಣ ಇವುಗಳನ್ನು ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವರು ತಂದೆಯನ್ನಾಗಲಿ ನನ್ನನ್ನಾಗಲಿ ತಿಳಿಯದ ಕಾರಣ ಇವೆಲ್ಲವುಗಳನ್ನು ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಲೊಕಾ ಬಾಬಾಕ್‍ ಹೊಂವ್ದಿ ಮಾಕಾ ಹೊಂವ್ದಿ ವಳ್ಕಿನ್ಯಾತ್, ತಸೆಮನುನ್ ತೆನಿ ಹೆ ಸಗ್ಳೆ ಕರ್‍ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 16:3
17 ತಿಳಿವುಗಳ ಹೋಲಿಕೆ  

ನೀವು ನನ್ನವರಾದುದರಿಂದ ಅವರು ನಿಮ್ಮನ್ನು ಹೀಗೆ ಕಾಣುವರು. ಏಕೆಂದರೆ ನನ್ನನ್ನು ಕಳುಹಿಸಿದಾತನನ್ನು ಅವರು ಅರಿಯರು.


ನೀತಿಸ್ವರೂಪಿಯಾದ ಪಿತನೇ, ಲೋಕವು ನಿಮ್ಮನ್ನು ಅರಿತುಕೊಳ್ಳಲಿಲ್ಲ. ಆದರೆ ನಾನು ಅರಿತಿದ್ದೇನೆ. ನನ್ನನ್ನು ಕಳುಹಿಸಿದವರು ನೀವೆಂದು ಇವರು ತಿಳಿದುಕೊಂಡಿದ್ದಾರೆ.


ಆದರೆ ಅವರ ಅರಿವು ನಿಮಗಿಲ್ಲ; ನನಗಿದೆ. ಅವರ ಅರಿವು ನನಗಿಲ್ಲವೆಂದು ನಾನು ಹೇಳಿದೆಯಾದರೆ ನಿಮ್ಮಂತೆ ನಾನೂ ಸುಳ್ಳುಗಾರನಾಗುತ್ತೇನೆ. ಅವರ ಅರಿವು ನನಗಿದೆ. ಅವರ ಮಾತನ್ನು ನಾನು ಪಾಲಿಸುತ್ತೇನೆ.


ಅದಕ್ಕೆ ಅವರು, “ನಿನ್ನ ಪಿತನೆಲ್ಲಿ?” ಎಂದು ಕೇಳಿದರು. ಯೇಸು, “ನೀವು ನನ್ನನ್ನು ಅರಿತಿಲ್ಲ, ನನ್ನ ಪಿತನನ್ನೂ ಅರಿತಿಲ್ಲ. ನೀವು ನನ್ನನ್ನು ಅರಿತಿದ್ದರೆ, ನನ್ನ ಪಿತನನ್ನೂ ಅರಿಯುತ್ತಿದ್ದಿರಿ,” ಎಂದರು.


ಪ್ರೀತಿಸದವನು ದೇವರನ್ನು ಬಲ್ಲವನಲ್ಲ. ಏಕೆಂದರೆ, ದೇವರು ಪ್ರೀತಿಸ್ವರೂಪಿ.


ನಾವು ದೇವರ ಮಕ್ಕಳು ಎನಿಸಿಕೊಂಡಿರಬೇಕಾದರೆ ಪಿತನು ನಮ್ಮನ್ನು ಎಷ್ಟಾಗಿ ಪ್ರೀತಿಸುತ್ತಾರೆಂಬುದನ್ನು ಗಮನಿಸಿರಿ. ನಿಜಕ್ಕೂ ನಾವು ದೇವರ ಮಕ್ಕಳೇ. ಲೋಕವು ಅವರನ್ನು ಅರಿತುಕೊಳ್ಳಲಿಲ್ಲವಾದ ಕಾರಣ ನಾವು ಎಂಥವರೆಂದು ಅದು ಅರಿತಿಲ್ಲ.


ಏಕೈಕ ನಿಜದೇವರಾದ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅರಿತುಕೊಳ್ಳುವುದೇ ನಿತ್ಯಜೀವ.


ದೇವರ ಪುತ್ರ ಆಗಮಿಸಿ, ಸತ್ಯಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲೆಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ. ನಿಜವಾದ ದೇವರೂ ನಿತ್ಯಜೀವವೂ ಇವರೇ.


ಲೋಕಾಧಿಪತಿಗಳಾರಿಗೂ ಇದರ ಅರಿವಿರಲಿಲ್ಲ. ಹಾಗೆ ಅರಿತಿದ್ದರೆ ಆ ಮಹಿಮಾನ್ವಿತ ಪ್ರಭುವನ್ನು ಅವರು ಶಿಲುಬೆಗೇರಿಸುತ್ತಿರಲಿಲ್ಲ.


ನನ್ನ ಮೇಲೆ ದ್ವೇಷ ಇದ್ದವನಿಗೆ ನನ್ನ ಪಿತನ ಮೇಲೆಯೂ ದ್ವೇಷ ಇದೆ.


ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ. ಪುತ್ರನು ಯಾರೆಂದು ಪಿತನ ಹೊರತು ಬೇರಾರೂ ಅರಿಯರು. ಪಿತನು ಯಾರೆಂದು ಪುತ್ರನು ಮತ್ತು ಯಾರಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ ಅವನೇ ಹೊರತು ಮತ್ತಾರೂ ಅರಿಯರು,” ಎಂದು ಹೇಳಿದರು.


ಹಿಂದೆ ನಾನು ಅವರನ್ನು ದೂಷಿಸಿದೆ, ಹಿಂಸಿಸಿದೆ, ಅವಮಾನಪಡಿಸಿದೆ. ಆದರೆ ದೇವರು ದಯಾಮಯಿ; ಆಗ ನಾನು ತಿಳಿಯದೆ ಅವಿಶ್ವಾಸಿಯಾಗಿ ಹಾಗೆ ಮಾಡಿದ್ದರಿಂದ ದೇವರು ನನಗೆ ಕರುಣೆತೋರಿದರು.


“ಸಹೋದರರೇ, ನೀವೂ ನಿಮ್ಮ ಅಧಿಕಾರಿಗಳೂ ತಿಳಿಯದೆ ಯೇಸುವಿಗೆ ಹೀಗೆ ಮಾಡಿದಿರೆಂದು ನಾನು ಬಲ್ಲೆ.


ಪುತ್ರನನ್ನು ತಿರಸ್ಕರಿಸುವವನು ಪಿತನನ್ನೂ ತಿರಸ್ಕರಿಸುತ್ತಾನೆ. ಪುತ್ರನನ್ನು ಅಂಗೀಕರಿಸುವವನು ಪಿತನನ್ನೂ ಅಂಗೀಕರಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು