30 ನೀನು ಸಮಸ್ತವನ್ನು ತಿಳಿದವನೆಂದೂ, ನಿನಗೆ ಪ್ರಶ್ನೆ ಮಾಡಬೇಕಾದ ಅಗತ್ಯವಿಲ್ಲವೆಂದೂ ಈಗ ನಮಗೆ ತಿಳಿಯಿತು. ಆದುದರಿಂದ ನಿನ್ನನ್ನು ದೇವರ ಬಳಿಯಿಂದ ಬಂದವನೇ ಎಂದು ನಾವು ನಂಬುತ್ತೇವೆ” ಎಂದರು.
30 ನಿನಗೆ ಎಲ್ಲಾ ಸಂಗತಿಗಳು ತಿಳಿದಿವೆಯೆಂದು ನಮಗೆ ಈಗ ತಿಳಿಯಿತು. ಒಬ್ಬನು ಪ್ರಶ್ನೆಯನ್ನು ಕೇಳುವುದಕ್ಕಿಂತ ಮೊದಲೇ ನೀನು ಅವನ ಪ್ರಶ್ನೆಗೆ ಉತ್ತರ ಕೊಡಬಲ್ಲೆ. ಇದರಿಂದಾಗಿ, ನೀನು ದೇವರಿಂದ ಬಂದವನೆಂದು ನಾವು ನಂಬುತ್ತೇವೆ” ಎಂದು ಹೇಳಿದರು.
30 ನೀವು ಎಲ್ಲಾ ತಿಳಿದವರೆಂದೂ ಯಾರೂ ನಿಮ್ಮನ್ನು ಪ್ರಶ್ನಿಸುವುದು ಅಗತ್ಯವಿಲ್ಲವೆಂದು ಈಗ ನಮಗೆ ತಿಳಿಯಿತು. ಆದ್ದರಿಂದ ನೀವು ದೇವರಿಂದ ಹೊರಟು ಬಂದವರೆಂದು ನಾವು ನಂಬುತ್ತೇವೆ,” ಎಂದರು.
ಮೂರನೇ ಬಾರಿಯೂ ಯೇಸು, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. “ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಯೇಸು ಮೂರನೇ ಬಾರಿ ಕೇಳಿದ್ದನ್ನು ಕಂಡು ಪೇತ್ರನು ನೊಂದುಕೊಂಡನು. “ಪ್ರಭುವೇ, ನಿಮಗೆ ಎಲ್ಲವು ತಿಳಿದೇ ಇದೆ. ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದೂ ನಿಮಗೆ ತಿಳಿದಿದೆ,” ಎಂದು ಹೇಳಿದನು. ಅದಕ್ಕೆ ಯೇಸು, “ನನ್ನ ಕುರಿಗಳನ್ನು ಮೇಯಿಸು;
ನಿಮ್ಮಿಂದ ನಾನು ಕಲಿತುದೆಲ್ಲವನ್ನೂ ಇವರಿಗೆ ತಿಳಿಯಪಡಿಸಿದ್ದೇನೆ. ಅವುಗಳನ್ನು ಇವರು ಅಂಗೀಕರಿಸಿ ನಿಮ್ಮಿಂದಲೇ ನಾನು ಬಂದುದು ನಿಜವೆಂದು ಅರಿತುಕೊಂಡಿದ್ದಾರೆ. ನನ್ನನ್ನು ಕಳುಹಿಸಿದ್ದು ನೀವೇ ಎಂದು ವಿಶ್ವಾಸಿಸಿದ್ದಾರೆ.
ಇದನ್ನು ಕೇಳಿದ ಕೆಲವು ಮಂದಿ ಶಿಷ್ಯರು, “ಇದೇನು ಇವರು ಹೇಳುತ್ತಿರುವುದು? ‘ತುಸು ಕಾಲವಾದ ನಂತರ ನೀವು ನನ್ನನ್ನು ಕಾಣಲಾರಿರಿ. ಅನಂತರ ತುಸುಕಾಲ ಕಳೆಯುತ್ತಲೇ ನೀವು ನನ್ನನ್ನು ಪುನಃ ಕಾಣುವಿರಿ ಮತ್ತು ಪಿತನಲ್ಲಿಗೆ ನಾನು ಹೋಗುತ್ತೇನೆ,’ ಎನ್ನುತ್ತಾರಲ್ಲ?
ಪುತ್ರನೆಂದರೆ ಪಿತನಿಗೆ ಪ್ರೀತಿ. ಆದುದರಿಂದ ತಾವು ಮಾಡುವುದನ್ನೆಲ್ಲಾ ಪುತ್ರನಿಗೆ ತೋರಿಸುತ್ತಾರೆ. ಇದಲ್ಲದೆ ಇನ್ನೂ ಎಷ್ಟೋ ಮಿಗಿಲಾದ ಕಾರ್ಯಗಳನ್ನು ಪುತ್ರನಿಗೆ ತೋರಿಸುತ್ತಾರೆ. ಅವುಗಳನ್ನು ಕಂಡು ನೀವು ಬೆರಗಾಗುವಿರಿ.
ಯೇಸು, ಅವರಿಗೆ, “ದೇವರೇ ನಿಮ್ಮ ತಂದೆಯಾಗಿದ್ದರೆ, ನನ್ನ ಮೇಲೆ ನಿಮಗೆ ಪ್ರೀತಿಯಿರುತ್ತಿತ್ತು. ಕಾರಣ, ನಾನು ದೇವರಿಂದಲೇ ಹೊರಟು ಇಲ್ಲಿಗೆ ಬಂದವನು. ನನ್ನಷ್ಟಕ್ಕೆ ನಾನೇ ಬರಲಿಲ್ಲ. ನನ್ನನ್ನು ಕಳುಹಿಸಿದ್ದು ದೇವರೇ.