Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 16:33 - ಕನ್ನಡ ಸತ್ಯವೇದವು C.L. Bible (BSI)

33 ನಿಮಗೆ ನನ್ನಲ್ಲಿ ಶಾಂತಿಸಮಾಧಾನ ಲಭಿಸಲೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಕಷ್ಟಸಂಕಟಗಳು ತಪ್ಪಿದ್ದಲ್ಲ, ಆದರೆ ಧೈರ್ಯವಾಗಿರಿ. ನಾನು ಲೋಕವನ್ನು ಜಯಿಸಿದ್ದೇನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ನೀವು ನನ್ನಲ್ಲಿದ್ದು ಮನಶ್ಶಾಂತಿಯನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟ ಉಂಟು; ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 “ನೀವು ನನ್ನಲ್ಲಿ ಶಾಂತಿಯನ್ನು ಹೊಂದಿದವರಾಗಿರಬೇಕೆಂದು ನಾನು ನಿಮಗೆ ಈ ಸಂಗತಿಗಳನ್ನೆಲ್ಲಾ ಹೇಳಿದ್ದೇನೆ. ಈ ಲೋಕದಲ್ಲಿ ನಿಮಗೆ ಸಂಕಟವಿದೆ. ಆದರೆ ಧೈರ್ಯದಿಂದಿರಿ! ನಾನು ಈ ಲೋಕವನ್ನು ಸೋಲಿಸಿದ್ದೇನೆ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 “ನನ್ನಲ್ಲಿ ನಿಮಗೆ ಸಮಾಧಾನ ಇರುವಂತೆ ಇವುಗಳನ್ನು ನಾನು ನಿಮ್ಮೊಂದಿಗೆ ಮಾತನಾಡಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟವಿರುವದು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ತುಮಿ ಸಗ್ಳೆ ಮಾಜ್ಯಾ ವಾಂಗ್ಡಾ ಎಕ್ ಹೊವ್ನ್ ರಾವ್ನ್ ಶಾಂತಿನ್ ರಾವ್ಚೆ ಮನುನ್ ಮಿಯಾ ಹೆ ಸಗ್ಳೆ ತುಮ್ಕಾ ಸಾಂಗಟ್ಲೊ, ಖರೆ ಧೈರೊ ಕರಾ! ಕಶ್ಯಾಕ್ ಮಟ್ಲ್ಯಾರ್ ಮಿಯಾ ಹ್ಯಾ ಜಗಾ ವರ್ತಿ ಜಿಕ್ಲಾ ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 16:33
46 ತಿಳಿವುಗಳ ಹೋಲಿಕೆ  

ನಾನು ಶಾಂತಿಸಮಾಧಾನವನ್ನು ನಿಮಗೆ ಬಿಟ್ಟುಹೋಗುತ್ತೇನೆ; ನನ್ನ ಶಾಂತಿಸಮಾಧಾನವನ್ನು ನಿಮಗೆ ಕೊಡುತ್ತೇನೆ. ಈ ಲೋಕವು ಕೊಡುವ ರೀತಿಯಲ್ಲಿ ನಾನದನ್ನು ನಿಮಗೆ ಕೊಡುವುದಿಲ್ಲ. ನೀವು ಹೃದಯದಲ್ಲಿ ಕಳವಳಗೊಳ್ಳದಿರಿ, ಭಯಪಡಬೇಡಿ.


ದೇವರಿಂದ ಜನಿಸಿದ ಪ್ರತಿ ಒಬ್ಬನೂ ಲೋಕವನ್ನು ಜಯಿಸುತ್ತಾನೆ. ಲೋಕವನ್ನು ಜಯಿಸುವಂಥದು ನಮ್ಮ ವಿಶ್ವಾಸವೇ.


ಶಾಂತಿದಾತರಾದ ಪ್ರಭು ಎಲ್ಲ ಕಾಲಕ್ಕೂ ಎಲ್ಲ ವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಪ್ರಭು ನಿಮ್ಮೆಲ್ಲರೊಡನೆ ಇರಲಿ!


ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರು. ಲೋಕದಲ್ಲಿರುವ ದುರಾತ್ಮಕ್ಕಿಂತಲೂ ನಿಮ್ಮಲ್ಲಿರುವ ಆತ್ಮವು ಶ್ರೇಷ್ಠವಾದುದು. ಆದ್ದರಿಂದಲೇ ಆ ಕಪಟ ಪ್ರವಾದಿಗಳನ್ನು ಜಯಿಸಿದ್ದೀರಿ.


ಆಗ ಮನುಷ್ಯಗ್ರಹಿಕೆಗೂ ಮೀರಿದ ದೈವಶಾಂತಿಯು ನಿಮ್ಮ ಹೃನ್ಮನಗಳನ್ನು ಕ್ರಿಸ್ತೇಸುವಿನ ಅನ್ಯೋನ್ಯತೆಯಲ್ಲಿ ಸುರಕ್ಷಿತವಾಗಿ ಕಾಪಾಡುವುದು.


ವಿಶ್ವಾಸದಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ. ನಿಮ್ಮ ಸಹ ವಿಶ್ವಾಸಿಗಳು ಜಗತ್ತಿನಲ್ಲೆಲ್ಲಾ ಇಂಥ ಹಿಂಸೆಬಾಧೆಗಳನ್ನೇ ಅನುಭವಿಸುತ್ತಿದ್ದಾರೆಂದು ನಿಮಗೆ ತಿಳಿದಿದೆ.


ಯೇಸು ಸ್ವಾಮಿ ತಮ್ಮ ಮಾತನ್ನು ಮುಂದುವರಿಸುತ್ತಾ ಶಿಷ್ಯರಿಗೆ, “ನೀವು ಹೃದಯದಲ್ಲಿ ಕಳವಳಗೊಳ್ಳದಿರಿ; ದೇವರಲ್ಲಿ ವಿಶ್ವಾಸವಿಡಿ; ನನ್ನಲ್ಲಿಯೂ ವಿಶ್ವಾಸವಿಡಿ.


ಕ್ರಿಸ್ತಯೇಸುವಿನ ಅನುಯಾಯಿಯಾಗಿ ಭಕ್ತಿಯಿಂದ ಬಾಳಲು ಆಶಿಸುವ ಪ್ರತಿಯೊಬ್ಬನೂ ಹಿಂಸೆಗೊಳಗಾಗುತ್ತಾನೆ.


ಅಲ್ಲಿ ಭಕ್ತಾದಿಗಳನ್ನು ದೃಢಪಡಿಸಿ ವಿಶ್ವಾಸದಲ್ಲಿ ನಿಷ್ಠರಾಗಿರುವಂತೆ ಪ್ರೋತ್ಸಾಹಿಸಿದರು. ‘ಕಷ್ಟಸಂಕಟಗಳ ಮೂಲಕ ನಾವು ದೇವರ ಸಾಮ್ರಾಜ್ಯವನ್ನು ಪ್ರವೇಶಿಸಬೇಕಾಗಿದೆ’ ಎಂದು ಬೋಧಿಸಿದರು.


ನಾನು ಜಯಗಳಿಸಿ ನನ್ನ ತಂದೆಯೊಡನೆ ಅವರ ಸಿಂಹಾಸನದಲ್ಲಿ ಕುಳಿತುಕೊಂಡಿದ್ದೇನೆ. ಅದೇ ಪ್ರಕಾರ ಜಯಹೊಂದಿದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.


ಕ್ಷಣಿಕ ಪಾಪಭೋಗಗಳನ್ನು ಸವಿಯುವುದಕ್ಕಿಂತಲೂ ದೇವಜನರೊಂದಿಗೆ ಕಷ್ಟಕ್ಕೆ ಈಡಾಗುವುದೇ ಲೇಸೆಂದು ಆತನು ತೀರ್ಮಾನಿಸಿಕೊಂಡನು.


ಅದಕ್ಕೆ ನಾನು, “ಸ್ವಾಮೀ ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ. ಆಗ ಆತನು ನನಗೆ ಹೀಗೆಂದನು : “ಇವರು ಆ ಭೀಕರ ಹಿಂಸೆಬಾಧೆಯನ್ನು ಅನುಭವಿಸಿ ಬಂದವರು. ತಮ್ಮ ನಿಲುವಂಗಿಗಳನ್ನು ಯಜ್ಞದ ಕುರಿಮರಿಯ ರಕ್ತದಿಂದ ತೊಳೆದು ಬಿಳುಪಾಗಿಸಿಕೊಂಡಿದ್ದಾರೆ.


ಸಹೋದರರೇ, ನಾವು ಕಷ್ಟಸಂಕಟಗಳನ್ನು ಅನುಭವಿಸುತ್ತಿದ್ದರೂ ನಿಮ್ಮ ವಿಶ್ವಾಸವನ್ನು ಕುರಿತು ಕೇಳಿ ನಮಗೆ ಸಮಾಧಾನವಾಯಿತು.


ಜಯಿಸಿದರು ಸೋದರರು ಆ ನಿಂದಕನನ್ನು ಯಜ್ಞದ ಕುರಿಮರಿಯ ರಕ್ತದಿಂದ ಸತ್ಯಕ್ಕೆ ಸಾಕ್ಷಿಯನ್ನಿತ್ತುದರಿಂದ ಜೀವದಾಶೆಯನು ತೊರೆದುದರಿಂದ ಮರಣದ ಭಯವನು ಬಿಸುಟುದರಿಂದ.


ಶಿಲುಬೆಯಿಂದಾತ ಹರಿಸಿದ ರಕುತದಿಂದ ಆಗುತಲಿದೆ ಶಾಂತಿಸಮಾಧಾನ, ನಡೆದಿದೆ ದೇವರೊಡನೆ ಸಂಧಾನ, ಇಹಪರಗಳೆಲ್ಲಕ್ಕೂ ಆತನ ಮುಖೇನ.


ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತೋತ್ರವಾಗಲಿ. ಅವರು ಕರುಣಾಭರಿತ ತಂದೆ; ಸಕಲ ಸಾಂತ್ವನವನ್ನೀಯುವ ದೇವರು.


ಕೊನೆಯದಾಗಿ ಪ್ರಿಯ ಸಹೋದರರೇ, ಸಂತೋಷದಿಂದಿರಿ, ಪರಿಪೂರ್ಣರಾಗಲು ಪ್ರಯತ್ನಿಸಿರಿ. ನನ್ನ ಬುದ್ಧಿಮಾತುಗಳಿಗೆ ಕಿವಿಗೊಡಿ; ಒಮ್ಮನಸ್ಸಿನಿಂದ ಬಾಳಿರಿ; ಸಮಾಧಾನದಿಂದ ಜೀವಿಸಿರಿ; ಆಗ ಪ್ರೀತಿ ಮತ್ತು ಶಾಂತಿ ಸ್ವರೂಪರಾದ ದೇವರು ನಿಮ್ಮೊಡನೆ ಇರುತ್ತಾರೆ.


ನಾವು ನಿಮ್ಮೊಂದಿಗಿದ್ದಾಗ, ಇಂಥ ವಿಪತ್ತುಗಳು ಖಂಡಿತವಾಗಿ ತಲೆದೋರುವುವೆಂದು ನಿಮಗೆ ಮೊದಲೇ ತಿಳಿಸಿದ್ದೆವು. ಈಗ ಹಾಗೆಯೇ ಸಂಭವಿಸಿದೆ; ನಿಮ್ಮ ಅನುಭವಕ್ಕೂ ಬಂದಿದೆ.


ನನಗಾದರೋ ನಮ್ಮ ಪ್ರಭು ಯೇಸುಕ್ರಿಸ್ತರ ಶಿಲುಬೆಯನ್ನು ಬಿಟ್ಟು ಬೇರಾವುದರಲ್ಲೂ ಹೆಚ್ಚಳಪಡುವುದು ಬೇಡವೇ ಬೇಡ. ಆ ಶಿಲುಬೆಯ ಮೂಲಕ. ನನ್ನ ಪಾಲಿಗೆ ಲೋಕವೇ ಶಿಲುಬೆಗೆ ಜಡಿಸಿಕೊಂಡು ಸತ್ತಿದೆ; ನಾನೂ ಸಹ ಲೋಕದ ಪಾಲಿಗೆ ಶಿಲುಬೆಗೆ ಜಡಿಸಿಕೊಂಡು ಸತ್ತಿದ್ದೇನೆ.


ನಿಮ್ಮಲ್ಲಿ ನನಗೆ ದೃಢವಾದ ಭರವಸೆಯುಂಟು. ಗಾಢವಾದ ಅಭಿಮಾನವುಂಟು. ನಮ್ಮೆಲ್ಲಾ ಸಂಕಟಗಳಲ್ಲೂ ನಾನು ಎದೆಗುಂದದೆ ಆನಂದಭರಿತನಾಗಿದ್ದೇನೆ.


ಆದುದರಿಂದ ಗೆಳೆಯರೇ, ಧೈರ್ಯದಿಂದಿರಿ. ನನಗೆ ದೇವರಲ್ಲಿ ವಿಶ್ವಾಸವಿದೆ; ನನಗೆ ತಿಳಿಸಿದಂತೆಯೇ ಎಲ್ಲವೂ ನಡೆದೇ ತೀರುವುದು.


ಆತನೇ ನಮಗೆ ಶಾಂತಿದಾತನು, ಅಸ್ಸೀರಿಯದವರು ನಮ್ಮ ಮೇಲೆ ದಾಳಿಮಾಡಿ ಆಕ್ರಮಣ ಮಾಡುವಾಗ, ಅವರಿಗೆ ವಿರುದ್ಧ ಏಳುಮಂದಿ ಪಾಲಕರನ್ನು ಹಾಗೂ ಎಂಟುಮಂದಿ ಪುರುಷೋತ್ತಮರನ್ನು ನೇಮಿಸುವೆನು.


ಹೇ ದೇವಾ, ಹೇ ಪ್ರಭು, ನೀನೇರಿದೆ ಉನ್ನತ ಶಿಖರಕೆ I ಕರೆದೊಯ್ದೆ ಖೈದಿಗಳನೇಕರನು ನಿನ್ನ ನಿವಾಸಕೆ I ಸರಳರಿಂದಲೂ ದುರುಳರಿಂದಲೂ ಪಡೆದೆ ಕಪ್ಪಕಾಣಿಕೆ I ದೇವರಾದ ಪ್ರಭುವೇ, ಅಲ್ಲೇ ನೀ ವಾಸಿಸುವೆ II


ಯೇಸುಕ್ರಿಸ್ತರು, ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ, ನಮ್ಮನ್ನು ಸದ್ಯದ ದುಷ್ಟಕಾಲದಿಂದ ಬಿಡುಗಡೆ ಮಾಡುವುದಕ್ಕಾಗಿ ಹಾಗು ನಮ್ಮ ಪಾಪಗಳ ಪರಿಹಾರಕ್ಕಾಗಿ ತಮ್ಮನ್ನೇ ಬಲಿಯಾಗಿ ಅರ್ಪಿಸಿದರು.


ಇಂತಿರಲು ಜುದೇಯ, ಗಲಿಲೇಯ ಮತ್ತು ಸಮಾರಿಯದ ಧರ್ಮಸಭೆಯಲ್ಲಿ ಶಾಂತಿ ನೆಲಸಿತು. ಸಭೆ ಬೆಳೆಯುತ್ತಾ ಪ್ರಭುವಿನ ಭಯಭಕ್ತಿಯಲ್ಲಿ ಬಾಳುತ್ತಾ ಪವಿತ್ರಾತ್ಮ ಅವರ ನೆರವಿನಿಂದ ಪ್ರವರ್ಧಿಸುತ್ತಾ ಇತ್ತು.


ಈಗ ಈ ಲೋಕವು ನ್ಯಾಯತೀರ್ಪಿಗೆ ಒಳಗಾಗುವುದು. ಇದೀಗಲೇ ಈ ಲೋಕಾಧಿಪತಿಯನ್ನು ಹೊರದೂಡಲಾಗುವುದು.


“ಮಹೋನ್ನತದಲ್ಲಿ ದೇವರಿಗೆ ಮಹಿಮೆ; ಭೂಲೋಕದಲ್ಲಿ ದೇವರೊಲಿದ ಮಾನವರಿಗೆ ಶಾಂತಿಸಮಾಧಾನ,” ಎಂದು ಸರ್ವೇಶ್ವರನ ಸ್ತುತಿ ಮಾಡಿತು.


ಈಗಲಾದರೂ ಧೈರ್ಯದಿಂದಿರಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ಹಡಗು ನಾಶವಾಗುವುದೇ ಹೊರತು, ನಿಮ್ಮಲ್ಲಿ ಯಾರಿಗೂ ಪ್ರಾಣಹಾನಿ ಆಗಲಾರದು.


“ಸರ್ವೇಶ್ವರನ ನಾಮದಲಿ ಬರುವ ಅರಸನಿಗೆ ಜಯಜಯವಾಗಲಿ! ಶಾಂತಿ ಸ್ವರ್ಗದಲಿ, ಮಹಿಮೆ ಮಹೋನ್ನತದಲಿ!” ಎಂದು ಜಯಘೋಷ ಮಾಡುತ್ತಿದ್ದರು.


ಪ್ರಭು ಅದೇ ರಾತ್ರಿ ಪೌಲನಿಗೆ ಹತ್ತಿರದಲ್ಲೇ ಕಾಣಿಸಿಕೊಂಡು, “ಧೈರ್ಯದಿಂದಿರು, ನೀನು ಜೆರುಸಲೇಮಿನಲ್ಲಿ ನನಗೆ ಸಾಕ್ಷಿಕೊಟ್ಟಂತೆ ರೋಮಿನಲ್ಲೂ ನನಗೆ ಸಾಕ್ಷಿಕೊಡಬೇಕಾಗಿದೆ,” ಎಂದರು.


ಆಗ ಅಬ್ರಹಾಮನು ತಾನು ಗೆದ್ದು ತಂದಿದ್ದ ಎಲ್ಲದರಲ್ಲೂ ದಶಮಾಂಶವನ್ನು ಆತನಿಗೆ ಕೊಟ್ಟು ಗೌರವಿಸಿದನು. ಮೆಲ್ಕಿಸದೇಕ ಎಂಬ ಹೆಸರಿನ ಮೂಲಾರ್ಥ, ‘ನ್ಯಾಯನೀತಿಯ ಅರಸ.’ ಅಲ್ಲದೆ, ಆತನು ಸಾಲೇಮಿನ ಅರಸನೂ ಆಗಿದ್ದನು. ಆದ್ದರಿಂದ ‘ಶಾಂತಿಸಮಾಧಾನದ ಅರಸ’ ಎಂಬ ಅರ್ಥವೂ ಉಂಟು.


ಅಂತಿಮ ತೀರ್ಪಿನ ವಿಷಯವಾಗಿ ಅವರ ತಪ್ಪುಭಾವನೆಯನ್ನು ಮನವರಿಕೆ ಮಾಡಿಕೊಡುವರು. ಏಕೆಂದರೆ, ಇಹದ ಲೋಕಾಧಿಪತಿಗೆ ಈಗಾಗಲೇ ನ್ಯಾಯತೀರ್ಪನ್ನು ಕೊಡಲಾಗಿದೆ.


ಆಗ ಜನರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯ ಸಮೇತ ಹೊತ್ತುಕೊಂಡು ಅವರ ಬಳಿಗೆ ತಂದರು. ಯೇಸು ಅವರ ವಿಶ್ವಾಸವನ್ನು ಮೆಚ್ಚಿ, ಆ ಪಾರ್ಶ್ವವಾಯು ರೋಗಿಗೆ, “ಮಗು, ಧೈರ್ಯದಿಂದಿರು. ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು.


ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿ ನಮ್ಮನ್ನು ಸದಾ ವಿಜಯೋತ್ಸವದತ್ತ ನಡೆಸುವ ಹಾಗು ಕ್ರಿಸ್ತಜ್ಞಾನವೆಂಬ ಪರಿಮಳವನ್ನು ಎಲ್ಲೆಡೆಯಲ್ಲೂ ನಮ್ಮ ಮೂಲಕ ಪಸರಿಸುವ ದೇವರಿಗೆ ವಂದನೆಗಳು.


ನಾವು ಇಂಥ ಆಧ್ಯಾತ್ಮಿಕ ಮಾಣಿಕ್ಯವನ್ನು ಪಡೆದಿದ್ದರೂ ಮಣ್ಣಿನ ಮಡಕೆಗಳಂತೆ ಇದ್ದೇವೆ. ಹೀಗೆ, ಈ ಪರಮೋನ್ನತ ಶಕ್ತಿ ನಮಗೆ ಸೇರಿದ್ದಲ್ಲ. ದೇವರಿಗೆ ಸೇರಿದ್ದೆಂದು ವ್ಯಕ್ತವಾಗುತ್ತದೆ.


ಬದಲಿಗೆ, ಎಲ್ಲ ವಿಷಯಗಳಲ್ಲೂ ದೇವರ ದಾಸರೆಂದು ತೋರಿಸಿಕೊಳ್ಳುತ್ತೇವೆ. ಕಷ್ಟಸಂಕಟಗಳಲ್ಲೂ ದುಃಖದುರಿತಗಳಲ್ಲೂ ತಾಳ್ಮೆಯಿಂದ ವರ್ತಿಸಿದ್ದೇವೆ.


ಬರೆಯುತಿಹೆನು ತಂದೆಗಳಿರಾ, ಇದನ್ನು ಏಕೆನೆ, ಬಲ್ಲವರಾದಿರಿ ಆದಿಯಿಂದಿರುವಾತನನ್ನು. ಬರೆಯುತಿಹೆನು ಯುವಜನರಿರಾ, ಇದನ್ನು ಏಕೆನೆ, ನೀವು ಜಯಿಸಿದ್ದಾಯಿತು ಆ ಕಡುಗೇಡಿಗನನ್ನು.


ಇಸ್ರಯೇಲ್ ಸಂತತಿಯವರಲ್ಲಿ ಯುದ್ಧವಿದ್ಯೆ ಅರಿಯದವರಿಗೆ ಅದನ್ನು ಕಲಿಸುವುದಕ್ಕೂ ಸರ್ವೇಶ್ವರ ಆ ನಾಡಿನಲ್ಲೇ ಉಳಿಸಿದ ಅನ್ಯಜನಾಂಗದವರು ಇವರು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು