Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 17:10 - ಕನ್ನಡ ಸತ್ಯವೇದವು C.L. Bible (BSI)

10 ಏಕೆಂದರೆ, ಇವರು ನಿಮ್ಮವರು; ಇವರಿಂದ ನನಗೆ ಮಹಿಮೆ ಉಂಟಾಗಿದೆ. ನನ್ನದೆಲ್ಲವೂ ನಿಮ್ಮದೇ; ನಿಮ್ಮದು ಎಲ್ಲವೂ ನನ್ನದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನನ್ನದೆಲ್ಲವೂ ನಿನ್ನದೇ ಮತ್ತು ನಿನ್ನದೆಲ್ಲವೂ ನನ್ನದೇ. ನಾನು ಇವರಲ್ಲಿ ಮಹಿಮೆಗೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನನ್ನದೆಲ್ಲಾ ನಿನ್ನದೇ, ನಿನ್ನದೆಲ್ಲಾ ನನ್ನದೇ; ಮತ್ತು ಇವರಿಂದ ನನಗೆ ಮಹಿಮೆ ಉಂಟಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನನ್ನಲ್ಲಿರುವುದೆಲ್ಲಾ ನಿನ್ನದೇ ಮತ್ತು ನಿನ್ನಲ್ಲಿರುವುದೆಲ್ಲಾ ನನ್ನದೇ. ಇವರಿಂದ ನನಗೆ ಮಹಿಮೆ ಉಂಟಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನನ್ನದೆಲ್ಲವೂ ನಿಮ್ಮದೇ. ನಿಮ್ಮದೆಲ್ಲವೂ ನನ್ನದೇ. ಇವರಿಂದ ನನಗೆ ಮಹಿಮೆ ಉಂಟಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಜೆ ಕಾಯ್ ಮಾಜೆ ಮನುನ್ ಹಾಯ್ ತೆ ಸಗ್ಳೆ ತುಜೆಚ್, ಅನಿ ತುಜೆ ಮನುನ್ ಹೊತ್ತೆ ಸಗ್ಳೆ ಮಾಜೆಚ್, ಅನಿ ಮಾಜಿ ಮಹಿಮಾ ತೆಂಚ್ಯಾ ವೈನಾ ದಿಸುನ್ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 17:10
16 ತಿಳಿವುಗಳ ಹೋಲಿಕೆ  

ನಾನೂ ಪಿತನೂ ಒಂದೇ ಆಗಿದ್ದೇವೆ,” ಎಂದರು.


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ಪ್ರಭು ತಮ್ಮ ಸದ್ಭಕ್ತರೆಲ್ಲರಿಂದ ಸನ್ಮಾನವನ್ನೂ ವಿಶ್ವಾಸಿಗಳೆಲ್ಲರಿಂದ ಗೌರವವನ್ನೂ ಪಡೆಯುವ ಆ ದಿನದಲ್ಲಿ ಇದೆಲ್ಲಾ ಸಂಭವಿಸುವುದು. ನಾವು ನಿಮಗಿತ್ತ ಸಾಕ್ಷಿಯನ್ನು ನಂಬಿದ ನೀವೆಲ್ಲರೂ ಅವರೊಂದಿಗಿರುವಿರಿ.


ದೈವತ್ವದ ಸಂಪೂರ್ಣತೆ ಸಶರೀರವಾಗಿ ಯೇಸುಕ್ರಿಸ್ತರಲ್ಲಿ ನೆಲೆಗೊಂಡಿದೆ.


ಹೀಗೆ ನಿಮ್ಮ ಮುಖಾಂತರ ಪ್ರಭು ಯೇಸುವಿನ ನಾಮಕ್ಕೂ ಮತ್ತು ಅವರಲ್ಲಿ ನಿಮಗೂ ಮಹಿಮೆಯುಂಟಾಗಲಿ. ನಮ್ಮ ದೇವರ ಹಾಗು ಪ್ರಭು ಯೇಸುಕ್ರಿಸ್ತರ ಅನುಗ್ರಹದಿಂದ ಇದು ನೆರವೇರಲಿ.


ನನ್ನ ಕರ್ತವ್ಯಪಾಲನೆಯಲ್ಲಿ ನಾಚುವಂಥ ಸಂದರ್ಭವು ನನಗೆಂದಿಗೂ ಬರದೆಂದು ಬಲ್ಲೆ; ನಾನು ಬದುಕಿದರೂ ಸರಿ, ಸತ್ತರೂ ಸರಿ; ನನ್ನ ದೇಹದ ಮೂಲಕ ಕ್ರಿಸ್ತಯೇಸುವಿಗೆ ಎಂದಿನಂತೆ ಈಗಲೂ ಮಹಿಮೆ ಉಂಟಾಗಬೇಕೆಂಬುದೇ ನನ್ನ ಉತ್ಕಟ ಆಕಾಂಕ್ಷೆ ಹಾಗೂ ನಿರೀಕ್ಷೆ.


ಎಫೆಸದಲ್ಲಿ ವಾಸಿಸುತ್ತಿದ್ದ ಯೆಹೂದ್ಯರೂ ಅನ್ಯಧರ್ಮೀಯರೂ ಈ ವಿಷಯವನ್ನು ಕೇಳಿ ಭಯಭೀತರಾದರು. ಪ್ರಭು ಯೇಸುವಿನ ನಾಮವನ್ನು ಸಂಕೀರ್ತಿಸಿದರು.


ಇದನ್ನು ಕೇಳಿದ ಯೇಸು, “ಈ ಕಾಯಿಲೆ ಮರಣಕ್ಕಾಗಿ ಬಂದುದಲ್ಲ, ದೇವರ ಮಹಿಮೆಗೋಸ್ಕರ ಬಂದಿದೆ. ಇದರ ಮೂಲಕ ದೇವರ ಪುತ್ರನಿಗೆ ಮಹಿಮೆ ಉಂಟಾಗಲಿದೆ,” ಎಂದು ನುಡಿದರು.


ಏಕೆಂದರೆ, ತಮ್ಮನ್ನು ಗೌರವಿಸುವಂತೆಯೇ ಜನರೆಲ್ಲರು ಪುತ್ರನನ್ನು ಗೌರವಿಸಬೇಕೆಂಬುದು ಅವರ ಬಯಕೆ. ಪುತ್ರನನ್ನು ಗೌರವಿಸದವನು ಆತನನ್ನು ಕಳುಹಿಸಿದ ಪಿತನನ್ನೂ ಗೌರವಿಸುವುದಿಲ್ಲ.


ಈ ಕಾರಣ ನನ್ನನ್ನು ಕುರಿತು ಅವರು ದೇವರನ್ನು ಕೊಂಡಾಡುತ್ತಿದ್ದರು.


ಅದಕ್ಕೆ ಯೇಸು, “ನರಪುತ್ರನು ಮಹಿಮೆಯನ್ನು ಹೊಂದುವ ಗಳಿಗೆ ಬಂದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು