Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 17:11 - ಕನ್ನಡ ಸತ್ಯವೇದವು C.L. Bible (BSI)

11 ನಾನಿನ್ನು ಲೋಕದಲ್ಲಿ ಇರುವುದಿಲ್ಲ. ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿಮ್ಮ ಬಳಿಗೆ ಬರುತ್ತಿದ್ದೇನೆ. ಪವಿತ್ರ ಪಿತನೇ, ನಾವು ಒಂದಾಗಿರುವಂತೆ ನೀವು ನನಗೆ ಕೊಟ್ಟಿರುವ ಇವರೂ ಒಂದಾಗಿರುವ ಹಾಗೆ ನಿಮ್ಮ ನಾಮದ ಶಕ್ತಿಯಿಂದ ಇವರನ್ನು ಸುರಕ್ಷಿತವಾಗಿರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇನ್ನು ಮೇಲೆ ನಾನು ಲೋಕದಲ್ಲಿ ಇರುವುದಿಲ್ಲ, ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ, ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರಬೇಕೆಂದು, ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇನ್ನು ನಾನು ಲೋಕದಲ್ಲಿ ಇರುವದಿಲ್ಲ, ಇವರು ಲೋಕದಲ್ಲಿ ಇರುತ್ತಾರೆ, ನಾನು ನಿನ್ನ ಬಳಿಗೆ ಬರುತ್ತೇನೆ. ಪವಿತ್ರನಾದ ತಂದೆಯೇ, ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರಬೇಕೆಂದು ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಈಗ ನಾನು ನಿನ್ನ ಬಳಿಗೆ ಬರುತ್ತಿದ್ದೇನೆ. ಇನ್ನು ನಾನು ಈ ಲೋಕದಲ್ಲಿರುವುದಿಲ್ಲ. ಆದರೆ ಇವರು ಇನ್ನೂ ಈ ಲೋಕದಲ್ಲಿರುತ್ತಾರೆ. ಪವಿತ್ರನಾದ ತಂದೆಯೇ, (ನೀನು ನನಗೆ ಕೊಟ್ಟ) ನಿನ್ನ ಹೆಸರಿನ ಶಕ್ತಿಯಿಂದ ಇವರನ್ನು ಕಾಯ್ದು ಕಾಪಾಡು. ನೀನೂ ನಾನೂ ಒಂದಾಗಿರುವಂತೆ ಇವರೂ ಒಂದಾಗಿರಲು ಆಗ ಸಾಧ್ಯವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇನ್ನು ಮೇಲೆ ನಾನು ಲೋಕದಲ್ಲಿ ಇರುವುದಿಲ್ಲ. ಇವರಾದರೋ ಲೋಕದಲ್ಲಿರುತ್ತಾರೆ. ನಾನು ನಿಮ್ಮ ಬಳಿಗೆ ಬರುತ್ತೇನೆ. ಪರಿಶುದ್ಧ ತಂದೆಯೇ, ನಾವು ಒಂದಾಗಿರುವಂತೆಯೇ ಇವರೂ ಒಂದಾಗಿರಬೇಕೆಂದು ನೀವು ನನಗೆ ಕೊಟ್ಟ ನಿಮ್ಮ ಹೆಸರಿನ ಶಕ್ತಿಯಿಂದ ಇವರನ್ನು ಕಾಪಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಅತ್ತಾ ಮಿಯಾ ತುಜೆಕ್ಡೆ ಯೆವ್ಲಾಲಾ, ಅನಿ ಲೈ ಎಳ್ ಮಿಯಾ ಹ್ಯಾ ಜಗಾತ್ ರ್‍ಹಾಯ್ನಾ, ಖರೆ ತೆನಿ ಹ್ಯಾ ಜಗಾತುಚ್ ರ್‍ಹಾತ್ಯಾತ್. ಪವಿತ್ರ್ ಬಾಬಾ! ತುಜ್ಯಾ ನಾವಾಚ್ಯಾ ಬಳಾನ್ ತೆಂಕಾ ತಿಯಾ ರಾಕ್, ತೆಚ್ ನಾವ್ ತಿಯಾ ಮಾಕಾಬಿ ದಿಲ್ಲೆ. ಅಸೆ, ಕಶೆ ಮಿಯಾ ಅನಿ ತಿಯಾ ಎಕ್ ಹೊವ್ನ್ ಹಾಂವ್, ತಸೆ ತೆನಿಬಿ ಎಕ್ ಹೊವ್ನ್ ರ್‍ಹಾಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 17:11
48 ತಿಳಿವುಗಳ ಹೋಲಿಕೆ  

ಆದುದರಿಂದ ಹೀಗೆಂದು ಪ್ರಾರ್ಥನೆಮಾಡಿ:


ಸರ್ವೇಶ್ವರನ ನಾಮ ಬಲವಾದ ಗೋಪುರ; ಅದರೊಳಗೆ ಓಡಿ ಆಶ್ರಯ ಪಡೆದರೆ ಸುಭದ್ರ.


ಕ್ರಿಸ್ತಯೇಸು ಪ್ರವೇಶಿಸಿದ್ದು ನೈಜದೇವಾಲಯದ ಛಾಯೆಯಂತಿರುವ ಮಾನವನಿರ್ಮಿತ ಗರ್ಭಗುಡಿಯನ್ನಲ್ಲ, ನಮ್ಮ ಪರವಾಗಿ ದೇವರ ಸಮ್ಮುಖದಲ್ಲಿ ಉಪಸ್ಥಿತರಾಗಲು ಸಾಕ್ಷಾತ್ ಸ್ವರ್ಗವನ್ನೇ ಅವರು ಪ್ರವೇಶಿಸಿದರು.


ನೀವೆಲ್ಲರೂ ಒಂದೇ ಶರೀರಕ್ಕೆ ಸೇರಿದವರು; ಒಬ್ಬರೇ ಪವಿತ್ರಾತ್ಮರನ್ನು ಪಡೆದವರು; ಒಂದೇ ನಿರೀಕ್ಷೆಗಾಗಿ ಕರೆಹೊಂದಿದವರು.


ಎಂತಲೇ ಪರಮೋನ್ನತ ಸ್ಥಾನಕ್ಕೇರಿಸಿದನಾತನನು ಇತ್ತನು ಹೆಸರುಗಳೊಳುತ್ತಮ ಹೆಸರನು ದೇವಪರಮನು.


ನೀತಿಸ್ವರೂಪಿಯಾದ ಪಿತನೇ, ಲೋಕವು ನಿಮ್ಮನ್ನು ಅರಿತುಕೊಳ್ಳಲಿಲ್ಲ. ಆದರೆ ನಾನು ಅರಿತಿದ್ದೇನೆ. ನನ್ನನ್ನು ಕಳುಹಿಸಿದವರು ನೀವೆಂದು ಇವರು ತಿಳಿದುಕೊಂಡಿದ್ದಾರೆ.


ಅಂದು ಪಾಸ್ಕಹಬ್ಬದ ಹಿಂದಿನ ದಿನ. ತಾವು ಈ ಲೋಕವನ್ನು ಬಿಟ್ಟು ಪಿತನ ಬಳಿಗೆ ಹೋಗಬೇಕಾದ ಗಳಿಗೆ ಬಂದಿರುವುದು ಎಂದು ಯೇಸು ಸ್ವಾಮಿಗೆ ತಿಳಿದಿತ್ತು. ಈ ಲೋಕದಲ್ಲಿದ್ದ ತಮ್ಮವರನ್ನು ಯಾವಾಗಲೂ ಪ್ರೀತಿಸುತ್ತಿದ್ದ ಅವರು ಆ ಪ್ರೀತಿಯ ಪರಮಾವಧಿಯನ್ನು ಈಗ ತೋರಿಸಲಿದ್ದರು.


ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ.


ನಿಮಗೆ ನನ್ನಲ್ಲಿ ಶಾಂತಿಸಮಾಧಾನ ಲಭಿಸಲೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಕಷ್ಟಸಂಕಟಗಳು ತಪ್ಪಿದ್ದಲ್ಲ, ಆದರೆ ಧೈರ್ಯವಾಗಿರಿ. ನಾನು ಲೋಕವನ್ನು ಜಯಿಸಿದ್ದೇನೆ,” ಎಂದು ಹೇಳಿದರು.


ನಾನು ನನ್ನ ಪಿತನಲ್ಲಿ ಇರುವೆನು; ನೀವು ನನ್ನಲ್ಲಿ ಇರುವಿರಿ ಮತ್ತು ನಾನು ನಿಮ್ಮಲ್ಲಿ ಇರುವೆನು. ಇದನ್ನು ಆ ದಿನದಂದು ನೀವು ಅರಿತುಕೊಳ್ಳುವಿರಿ.


ಪಿತನಾದ ದೇವರ ಪ್ರೀತಿಯಲ್ಲೂ ಯೇಸುಕ್ರಿಸ್ತರ ಆಶ್ರಯದಲ್ಲೂ ಬಾಳುತ್ತಿರುವ ಭಕ್ತರಿಗೆ - ಯೇಸುಕ್ರಿಸ್ತರ ದಾಸನೂ ಯಕೋಬನ ಸಹೋದರನೂ ಆದ ಯೂದನು ಬರೆಯುವ ಪತ್ರ.


ಇಡೀ ಲೋಕವು ಕೇಡಿಗನ ವಶದಲ್ಲಿ ಇದ್ದರು ಸಹ ನಾವು ದೇವರಿಗೆ ಸೇರಿದವರೆಂಬುದು ನಮಗೆ ತಿಳಿದಿದೆ.


ವಿಶ್ವಾಸದಲ್ಲಿ ವ್ಯಭಿಚಾರಿಗಳಂತೆ ಬಾಳುವವರೇ, ಲೋಕದೊಡನೆ ಗೆಳೆತನವೆಂದರೆ ದೇವರೊಡನೆ ಹಗೆತನವೆಂಬುದು ನಿಮಗೆ ತಿಳಿಯದೇ? ಲೋಕದೊಡನೆ ಗೆಳೆತನವನ್ನು ಬಯಸುವವನು ದೇವರೊಡನೆ ಹಗೆತನವನ್ನು ಬೆಳೆಸುತ್ತಾನೆ.


ಸಮಸ್ತವನ್ನೂ ಪುನರ್‍ಸ್ಥಾಪನೆಗೊಳಿಸುವವರೆಗೆ ಕ್ರಿಸ್ತಯೇಸು ಸ್ವರ್ಗದಲ್ಲಿಯೇ ಇರಬೇಕಾಗಿದೆ. ಇದನ್ನು ದೇವರು ಪವಿತ್ರ ಪ್ರವಾದಿಗಳ ಮುಖಾಂತರ ಬಹುಕಾಲಕ್ಕೆ ಹಿಂದೆಯೇ ಪ್ರಕಟಿಸಿದ್ದಾರೆ.


ಊಟಕ್ಕೆ ಎಲ್ಲರೂ ಕುಳಿತಿದ್ದರು. ಪಿತನು ಎಲ್ಲವನ್ನೂ ತಮ್ಮ ಕೈಗೆ ಒಪ್ಪಿಸಿರುವರೆಂದೂ ತಾವು ದೇವರ ಬಳಿಯಿಂದ ಬಂದಿದ್ದು, ಈಗ ದೇವರ ಬಳಿಗೇ ಮರಳುತ್ತಿದ್ದೆನೆಂದೂ ಯೇಸುವಿಗೆ ತಿಳಿದಿತ್ತು.


ಒಣಗಿಡಕ್ಕೆ ಹಚ್ಚುವ ಕಿಚ್ಚಿನಂತೆ, ನೀರನ್ನು ಕುದಿಸುವ ಬೆಂಕಿಯಂತೆ ನೀವು ಪ್ರತ್ಯಕ್ಷರಾಗಲಾರಿರಾ?


ದೇವಾ, ಮುಕ್ತಿದಾತ, ನೆರವಾಗು ನಿನ್ನ ನಾಮಮಹಿಮೆಯ ನಿಮಿತ್ತ I ಪಾಪಗಳನು ಅಳಿಸಿ ನಮ್ಮನುದ್ಧರಿಸು ನಿನ್ನ ನಾಮದ ಪ್ರಯುಕ್ತ II


ಆ ನಾಲ್ಕು ಜೀವಿಗಳಲ್ಲಿ ಪ್ರತಿಯೊಂದಕ್ಕೂ ಆರು ರೆಕ್ಕೆಗಳಿದ್ದವು. ಅವುಗಳ ಸುತ್ತಲು ಮತ್ತು ಒಳಗು ಅನೇಕ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳೂ : “ಪರಿಶುದ್ಧರು, ಪರಿಶುದ್ಧರು, ಪರಿಶುದ್ಧರು! ಸರ್ವಶಕ್ತರಾದ ಪ್ರಭು ದೇವರು ವರ್ತಮಾನಕಾಲದಲ್ಲಿ ಇರುವವರೂ ಭೂತಕಾಲದಲ್ಲಿ ಇದ್ದವರೂ ಭವಿಷ್ಯತ್‍ಕಾಲದಲ್ಲಿ ಬರುವವರೂ ಆಗಿದ್ದಾರೆ,” ಎಂದು ಹಾಡುತ್ತಿದ್ದವು.


ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗಲಿರುವ ಜೀವೋದ್ಧಾರವು ವಿಶ್ವಾಸಿಗಳಾದ ನಿಮಗೆ ಲಭಿಸುವಂತೆ ದೇವರು ತಮ್ಮ ಶಕ್ತಿಯಿಂದ ನಿಮ್ಮನ್ನು ಕಾಪಾಡುತ್ತಾರೆ.


ನೀವೆಲ್ಲರೂ ಕ್ರಿಸ್ತಯೇಸುವಿನಲ್ಲಿ ಒಂದಾಗಿದ್ದೀರಿ. ಎಂದೇ, ಇನ್ನು ಮೇಲೆ ಯೆಹೂದ್ಯ-ಯೆಹೂದ್ಯನಲ್ಲದವ, ದಾಸ-ದಣಿ, ಗಂಡು-ಹೆಣ್ಣು, ಎಂಬ ಭೇದವಿಲ್ಲ.


ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ನಾನು ಕೇಳಿಕೊಳ್ಳುವುದೇನೆಂದರೆ: ವಾದವಿವಾದವಿಲ್ಲದೆ, ಭಿನ್ನಭೇದಗಳಿಲ್ಲದೆ ಒಂದೇ ಮನಸ್ಸಿನಿಂದಲೂ ಒಂದೇ ಉದ್ದೇಶದಿಂದಲೂ ನೀವು ಐಕಮತ್ಯದಿಂದ ಬಾಳಿರಿ.


ಅಂತೆಯೇ, ನಾವು ಅನೇಕ ಮಂದಿ ಇದ್ದರೂ ಕ್ರಿಸ್ತಯೇಸುವಿನಲ್ಲಿ ನಾವೆಲ್ಲರೂ ಒಂದೇ ದೇಹವಾಗಿದ್ದೇವೆ. ಒಬ್ಬರಿಗೊಬ್ಬರು ದೇಹದ ವಿವಿಧ ಅಂಗಗಳಂತೆ ಹೊಂದಿಕೊಂಡಿದ್ದೇವೆ.


ಪವಿತ್ರಗ್ರಂಥದಲ್ಲಿ ಫರೋಹನಿಗೆ ಹೀಗೆಂದು ಹೇಳಲಾಗಿದೆ: “ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ಪ್ರದರ್ಶಿಸುವ ಸಲುವಾಗಿ ಹಾಗು ಜಗತ್ತಿನಲ್ಲೆಲ್ಲಾ ನನ್ನ ಹೆಸರನ್ನು ಪ್ರಖ್ಯಾತಪಡಿಸಿಕೊಳ್ಳುವ ಸಲುವಾಗಿ ನಿನ್ನನ್ನು ಉನ್ನತಸ್ಥಾನಕ್ಕೆ ಏರಿಸಿದೆನು.


ಹೌದು, ನಾನು ಪಿತನಿಂದಲೇ ಹೊರಟು ಈ ಲೋಕಕ್ಕೆ ಬಂದಿದ್ದೇನೆ. ಈಗ ಈ ಲೋಕವನ್ನು ಬಿಟ್ಟು ಪಿತನಲ್ಲಿಗೆ ಹೋಗುತ್ತಿದ್ದೇನೆ,” ಎಂದರು.


ಆಗ ಯೇಸು, “ಇನ್ನು ತುಸುಕಾಲ ಮಾತ್ರ ನಾನು ನಿಮ್ಮೊಡನೆ ಇರುತ್ತೇನೆ. ಅನಂತರ ನನ್ನನ್ನು ಕಳುಹಿಸಿದಾತನ ಬಳಿಗೆ ಹೊರಟುಹೋಗುತ್ತೇನೆ.


“ಗಮನಿಸಿರಿ, ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಸೂಕ್ಷ್ಮಬುದ್ಧಿಯುಳ್ಳವರೂ ಪಾರಿವಾಳಗಳಂತೆ ಸರಳಜೀವಿಗಳೂ ಆಗಿರಿ.


ಆದುದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆ ಪರಿಪೂರ್ಣರಾಗಿರುವಂತೆ ನೀವೂ ಪರಿಪೂರ್ಣರಾಗಿರಿ.”


ಇಸ್ರಯೇಲ್ ವಂಶದವರೇ, ನಿಮ್ಮ ದುರ್ನಡತೆಗೂ ದುಷ್ಕೃತ್ಯಗಳಿಗೂ ತಕ್ಕ ಹಾಗೆ ನಾನು ನಿಮ್ಮನ್ನು ಸಹಿಸಿಕೊಂಡಿರುವಾಗ, ನಾನೇ ಸರ್ವೇಶ್ವರ ಎಂದು ನಿಮಗೆ ತಿಳಿಯುವುದು; ಇದು ಸರ್ವೇಶ್ವರನಾದ ದೇವರ ನುಡಿ.”


ಆದರೂ ನಾನು ಯಾವ ಜನಾಂಗಗಳ ಮುಂದೆ ಅವರನ್ನು ಬಿಡುಗಡೆ ಮಾಡಿದೆನೋ, ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡು, ಕೈಯನ್ನು ಹಿಂದಕ್ಕೆ ತೆಗೆದುಕೊಂಡೆ.


ಆದರೂ, ‘ನಿಮ್ಮನ್ನು ಈಜಿಪ್ಟಿನಿಂದ ಪಾರುಮಾಡುವೆನು,’ ಎಂಬುದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನಲ್ಲಾ ಎಂದು ಯೋಚಿಸಿ ಅವರ ಸುತ್ತಮುತ್ತಲಿನ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆ.


ನಿಮ್ಮ ನಾಮವನ್ನು ಮುಂದಿಟ್ಟು, ನಮಗೆ ಅವಮಾನ ಮಾಡಬೇಡಿ ನಿಮ್ಮ ಮಹಿಮೆಯ ಸಿಂಹಾಸನವನ್ನು ಅಸಡ್ಡೆ ಮಾಡಬೇಡಿ ನಮ್ಮೊಡನೆ ಮಾಡಿದ ಒಡಂಬಡಿಕೆಯನ್ನು ನೆನೆಯಿರಿ. ಅದನ್ನು ಭಂಗಪಡಿಸಬೇಡಿ.


ಸರ್ವೇಶ್ವರಾ, ನಮ್ಮ ದ್ರೋಹಗಳು ಹಲವು ನಿಮಗೆ ವಿರುದ್ಧ ಪಾಪಮಾಡಿದೆವು. ನಮ್ಮ ಅಪರಾಧಗಳೇ ನಮಗೆ ವಿರುದ್ಧ ಸಾಕ್ಷಿ ನೀಡುತ್ತಿವೆ ಆದರೂ ನಿಮ್ಮ ನಾಮದ ನಿಮಿತ್ತ ಕೈನೀಡು ನಮಗೆ.


ಸರ್ವೇಶ್ವರನಾದ ನಾನೇ ಇದರ ತೋಟಗಾರ, ಕ್ಷಣಕ್ಷಣಕ್ಕೂ ಇದಕೆ ಹೊಯ್ಯುವೆ ನೀರ, ಇದನ್ನಾದರೂ ಮುಟ್ಟದಂತೆ ಕಾಯುವೆ ನಿರಂತರ.


ಆತನ ಕಣ್ಣುಗಳು ಬೆಂಕಿಯ ಕೆಂಡಗಳಂತಿವೆ; ತಲೆಯ ಮೇಲೆ ಅನೇಕ ಕಿರೀಟಗಳಿವೆ.ಆತನ ಹೆಸರನ್ನು ಬರೆದಿಟ್ಟಿದೆ; ಅದು ಆತನಿಗೇ ಹೊರತು ಬೇರೆ ಯಾರಿಗೂ ತಿಳಿಯದು.


ಹೇ ಪ್ರಭೂ, ನಿನಗಂಜದವರಾರು? ನಿನ್ನ ನಾಮಸ್ತುತಿ ಮಾಡದವರಾರು? ಪರಮಪವಿತ್ರ ನೀನಲ್ಲದಿನ್ಯಾರು ಪ್ರಕಟವಾಗಿವೆ ನಿನ್ನ ನೀತಿಯುತ ಕಾರ್ಯಗಳು ಬಂದೆರಗಲಿವೆ ನಿನಗೆ ಸಕಲ ಜನಾಂಗಗಳು.”


ಪಾಪದಲ್ಲಿ ಎಡವಿ ಬೀಳದಂತೆ ನಿಮ್ಮನ್ನು ಕಾಪಾಡುವ ತಮ್ಮ ಮಹಿಮಾಸನ್ನಿಧಿಯಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿಯೂ ಹರ್ಷಭರಿತರನ್ನಾಗಿಯೂ ನಿಲ್ಲಿಸಲು ಶಕ್ತರಾಗಿರುವ


ತನ್ನ ಸಹೋದರನನ್ನೇ ಕೊಂದ ಕಾಯಿನನಂತೆ ನಾವು ಇರಬಾರದು. ಅವನು ಕಡುಕೇಡಿಗನ ಕುವರ. ಅವನು ಕೊಂದುದಾದರೂ ಏಕೆ? ತನ್ನ ಕೃತ್ಯಗಳು ದುಷ್ಟವಾಗಿದ್ದು ತನ್ನ ಸಹೋದರನ ಕೃತ್ಯಗಳು ಧರ್ಮಿಷ್ಠವಾಗಿದ್ದುದರಿಂದ ಅಲ್ಲವೇ?


“ನೀವು ಲೋಕದಿಂದ ಆರಿಸಿ ನನಗೆ ಕೊಟ್ಟ ಜನರಿಗೆ ನಿಮ್ಮ ನಾಮವನ್ನು ತಿಳಿಯಪಡಿಸಿದ್ದೇನೆ. ಇವರು ನಿಮ್ಮವರಾಗಿದ್ದರು. ಆದರೂ ಇವರನ್ನು ನನಗೆ ಕೊಟ್ಟಿರಿ. ನಿಮ್ಮ ಮಾತಿಗೆ ವಿಧೇಯರಾಗಿ ಇವರು ನಡೆದಿದ್ದಾರೆ.


ನಾನು ಇವರಲ್ಲಿಯೂ ನೀವು ನನ್ನಲ್ಲಿಯೂ ಇದ್ದು, ಇವರ ಐಕ್ಯಮತ್ಯವು ಪೂರ್ಣಸಿದ್ಧಿಗೆ ಬರಲಿ. ಆಗ ನೀವೇ ನನ್ನನ್ನು ಕಳುಹಿಸಿರುವಿರಿ ಎಂದೂ ನನ್ನನ್ನು ಪ್ರೀತಿಸಿದಂತೆಯೇ ಇವರನ್ನು ನೀವು ಪ್ರೀತಿಸಿರುವಿರಿ ಎಂದೂ ಲೋಕಕ್ಕೆ ಮನವರಿಕೆ ಆಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು