Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 17:14 - ಕನ್ನಡ ಸತ್ಯವೇದವು C.L. Bible (BSI)

14 ನಿಮ್ಮ ಸಂದೇಶವನ್ನು ಇವರಿಗೆ ತಿಳಿಸಿದ್ದೇನೆ. ನಾನು ಲೋಕಕ್ಕೆ ಸೇರಿದವನಲ್ಲ. ಅಂತೆಯೇ, ಇವರೂ ಲೋಕಕ್ಕೆ ಸೇರಿದವರಲ್ಲ. ಈ ಕಾರಣ, ಲೋಕಕ್ಕೆ ಇವರ ಮೇಲೆ ದ್ವೇಷವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾನು ನಿನ್ನ ವಾಕ್ಯವನ್ನು ಇವರಿಗೆ ಕೊಟ್ಟಿದ್ದೇನೆ, ನಾನು ಈ ಲೋಕದವನಲ್ಲದವನಾಗಿರುವ ಪ್ರಕಾರ ಇವರೂ ಈ ಲೋಕದವರಲ್ಲ. ಆದಕಾರಣ ಲೋಕವು ಇವರನ್ನು ದ್ವೇಷಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾನು ನಿನ್ನ ವಾಕ್ಯವನ್ನು ಇವರಿಗೆ ಕೊಟ್ಟಿದ್ದೇನೆ; ನಾನು ಲೋಕದವನಲ್ಲದೆ ಇರುವ ಪ್ರಕಾರ ಇವರೂ ಲೋಕದವರಲ್ಲ; ಆದಕಾರಣ ಲೋಕವು ಇವರ ಮೇಲೆ ದ್ವೇಷ ಮಾಡಿ ಅದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾನು ಇವರಿಗೆ ನಿನ್ನ ವಾಕ್ಯಗಳನ್ನು ಕೊಟ್ಟಿದ್ದೇನೆ. ಈ ಲೋಕವು ಇವರನ್ನು ದ್ವೇಷಿಸುತ್ತದೆ. ನಾನು ಈ ಲೋಕಕ್ಕೆ ಯಾವ ರೀತಿ ಸೇರಿದವನಾಗಿಲ್ಲವೋ ಅದೇ ರೀತಿ ಇವರೂ ಈ ಲೋಕಕ್ಕೆ ಸೇರಿದವರಾಗಿಲ್ಲ. ಆದ್ದರಿಂದ ಈ ಲೋಕವು ಇವರನ್ನು ದ್ವೇಷಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಾನು ನಿಮ್ಮ ವಾಕ್ಯವನ್ನು ಇವರಿಗೆ ಕೊಟ್ಟಿದ್ದೇನೆ. ಇವರು ನನ್ನಂತೆ ಲೋಕದವರಲ್ಲದ ಕಾರಣ ಲೋಕವು ಇವರನ್ನು ದ್ವೇಷಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಮಿಯಾ ತೆಂಕಾ ತುಜ್ಯಾ ಗೊಸ್ಟಿಯಾ ಶಿಕ್ವುಲೊ, ಖರೆ ಹ್ಯಾ ಜಗಾನ್ ತೆಂಕಾ ಧುರ್ ಕರ್ಲ್ಯಾನ್. ಕಶ್ಯಾಕ್ ಮಟ್ಲ್ಯಾರ್, ಕಶೆ ಮಿಯಾ ಹ್ಯಾ ಜಗಾಕ್ ಸಮಂದ್ ಪಡಲ್ಲೊ ನ್ಹಯ್, ತಶೆಚ್ ತೆನಿಬಿ ಹ್ಯಾ ಜಗಾಕ್ ಸಮಂದ್ ಪಡಲ್ಲೆ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 17:14
15 ತಿಳಿವುಗಳ ಹೋಲಿಕೆ  

ನಾನು ಲೋಕಕ್ಕೆ ಹೇಗೆ ಸೇರಿದವನಲ್ಲವೋ ಹಾಗೆಯೇ ಇವರೂ ಲೋಕಕ್ಕೆ ಸೇರಿದವರಲ್ಲ.


“ನೀವು ನರಲೋಕದವರು, ನಾನು ಪರಲೋಕದವನು. ನಿಮ್ಮಂತೆ ನಾನು ಇಹಲೋಕದವನಲ್ಲ.


ಲೋಕಕ್ಕೆ ನಿಮ್ಮ ಮೇಲೆ ಹಗೆಯಿಲ್ಲ. ಅದಕ್ಕೆ ಹಗೆಯಿರುವುದು ನನ್ನ ಮೇಲೆ. ಏಕೆಂದರೆ, ಅದರ ವರ್ತನೆ ಕೆಟ್ಟದೆಂದು ನಾನು ಯಥಾರ್ಥವಾಗಿ ಹೇಳುತ್ತಾ ಇದ್ದೇನೆ.


ಸಜ್ಜನರಿಗೆ ದುರ್ಮಾರ್ಗಿ ತಿರಸ್ಕೃತನು; ದುರ್ಜನರಿಗೆ ಸನ್ಮಾರ್ಗಿ ತಿರಸ್ಕೃತನು.


ತನ್ನ ಸಹೋದರನನ್ನೇ ಕೊಂದ ಕಾಯಿನನಂತೆ ನಾವು ಇರಬಾರದು. ಅವನು ಕಡುಕೇಡಿಗನ ಕುವರ. ಅವನು ಕೊಂದುದಾದರೂ ಏಕೆ? ತನ್ನ ಕೃತ್ಯಗಳು ದುಷ್ಟವಾಗಿದ್ದು ತನ್ನ ಸಹೋದರನ ಕೃತ್ಯಗಳು ಧರ್ಮಿಷ್ಠವಾಗಿದ್ದುದರಿಂದ ಅಲ್ಲವೇ?


ಒಂದೇ ತಿಂಗಳೊಳಗೆ ಮೂವರು ಕುರುಬರನ್ನು ಕೆಲಸದಿಂದ ತೆಗೆದುಹಾಕಿದೆ. ಅನಂತರ ನನಗೆ ಕುರಿಗಳ ಬಗ್ಗೆ ಅಸಹ್ಯವಾಯಿತು. ಕುರಿಗಳು ಸಹ ನನ್ನ ಬಗ್ಗೆ ಬೇಸರಗೊಂಡವು.


ಹಗೆತನವಿರಿಸುವೆನು ನಿನಗೂ ಈ ಮಹಿಳೆಗೂ ನಿನ್ನ ಸಂತಾನಕ್ಕೂ ಇವಳ ಸಂತಾನಕ್ಕೂ ಜಜ್ಜುವುದಿವಳ ಸಂತಾನ ನಿನ್ನ ತಲೆಯನ್ನು ಕಚ್ಚುವೆ ನೀನಾ ಸಂತಾನದ ಹಿಮ್ಮಡಿಯನ್ನು.”


ನಿಮ್ಮಿಂದ ನಾನು ಕಲಿತುದೆಲ್ಲವನ್ನೂ ಇವರಿಗೆ ತಿಳಿಯಪಡಿಸಿದ್ದೇನೆ. ಅವುಗಳನ್ನು ಇವರು ಅಂಗೀಕರಿಸಿ ನಿಮ್ಮಿಂದಲೇ ನಾನು ಬಂದುದು ನಿಜವೆಂದು ಅರಿತುಕೊಂಡಿದ್ದಾರೆ. ನನ್ನನ್ನು ಕಳುಹಿಸಿದ್ದು ನೀವೇ ಎಂದು ವಿಶ್ವಾಸಿಸಿದ್ದಾರೆ.


ಸಹೋದರರೇ, ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿ.


ಆಗ ಯೇಸು, “ನಾನು ಕುಡಿಯುವ ಪಾತ್ರೆಯಿಂದ ನೀವೂ ಕುಡಿಯುವಿರಿ; ನಾನು ಪಡೆಯಲಿರುವ ಸ್ನಾನವನ್ನು ನೀವೂ ಪಡೆಯುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು