Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 17:15 - ಕನ್ನಡ ಸತ್ಯವೇದವು C.L. Bible (BSI)

15 ಇವರನ್ನು ಲೋಕದಿಂದ ತೆಗೆದುಬಿಡಬೇಕೆಂದು ನಾನು ನಿಮ್ಮನ್ನು ಕೇಳಿಕೊಳ್ಳುತ್ತಿಲ್ಲ. ಆದರೆ ಕೇಡಿಗನಿಂದ ಇವರನ್ನು ಕಾಪಾಡಬೇಕೆಂದು ಕೇಳಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇವರನ್ನು ಲೋಕದಿಂದ ತೆಗೆಯಬೇಕೆಂದು ನಾನು ಬೇಡಿಕೊಳ್ಳುವುದಿಲ್ಲ, ಆದರೆ ಇವರನ್ನು ಕೆಡುಕನಿಂದ ಕಾಪಾಡಬೇಕೆಂದು ನಾನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇವರನ್ನು ಲೋಕದೊಳಗಿಂದ ತೆಗೆದುಕೊಂಡು ಹೋಗಬೇಕೆಂದು ನಾನು ಕೇಳಿಕೊಳ್ಳುವದಿಲ್ಲ; ಕೆಡುಕನಿಂದ ತಪ್ಪಿಸಿ ಕಾಪಾಡಬೇಕೆಂದು ಕೇಳಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ನೀನು ಇವರನ್ನು ಈ ಲೋಕದಿಂದ ತೆಗೆದುಕೊಳ್ಳಬೇಕೆಂದು ನಾನು ಕೇಳುತ್ತಿಲ್ಲ. ಆದರೆ ಇವರನ್ನು ಕೆಡುಕನಿಂದ (ಸೈತಾನನಿಂದ) ತಪ್ಪಿಸಿ ಸುರಕ್ಷಿತವಾಗಿರಿಸಬೇಕೆಂದು ನಾನು ಕೇಳಿಕೊಳ್ಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನೀವು ಇವರನ್ನು ಲೋಕದಿಂದ ತೆಗೆಯಬೇಕೆಂದು ಬೇಡಿಕೊಳ್ಳದೆ ಇವರನ್ನು ಕೆಡುಕನಿಂದ ಕಾಪಾಡಬೇಕೆಂದು ನಾನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತೆಂಕಾ ಹ್ಯಾ ಜಗಾತ್ನಾ ಕಡೆಕ್ ಕಾಡುನ್ ಘೆ ಮನುನ್ ಮಿಯಾ ಮಾಗಿನಾ. ಖರೆ ತೆಂಕಾ ತ್ಯಾ ಬುರ್ಶ್ಯಾಚ್ಯಾ ಹಾತಾತ್ನಾ ರಾಕ್ ಮನುನ್ ಮಾಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 17:15
18 ತಿಳಿವುಗಳ ಹೋಲಿಕೆ  

ಪ್ರಭು ಕಾಯುವನು ನಿನ್ನ ಪ್ರಾಣವನು I ಸಕಲ ಕೇಡಿನಿಂದ ಕಾಪಾಡುವನು II


ನಮಗೆ ತಿಳಿದಿರುವಂತೆ ದೇವರಿಂದ ಜನಿಸಿದವನು ಪಾಪಜೀವಿಯಾಗಿರುವುದಿಲ್ಲ. ಏಕೆಂದರೆ, ದೇವರ ಪುತ್ರನ ರಕ್ಷಣೆ ಅವನಿಗಿದೆ. ಕೇಡಿಗನ ಹಿಡಿತಕ್ಕೆ ಅವನು ಸಿಗನು.


ಪ್ರಭು ವಿಶ್ವಾಸಕ್ಕೆ ಪಾತ್ರರು. ಅವರು ನಿಮ್ಮನ್ನು ಸದೃಢರನ್ನಾಗಿ ಮಾಡಿ ಕೇಡಿನಿಂದ ನಿಮ್ಮನ್ನು ಕಾಪಾಡುವರು.


ಯೇಸುಕ್ರಿಸ್ತರು, ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ, ನಮ್ಮನ್ನು ಸದ್ಯದ ದುಷ್ಟಕಾಲದಿಂದ ಬಿಡುಗಡೆ ಮಾಡುವುದಕ್ಕಾಗಿ ಹಾಗು ನಮ್ಮ ಪಾಪಗಳ ಪರಿಹಾರಕ್ಕಾಗಿ ತಮ್ಮನ್ನೇ ಬಲಿಯಾಗಿ ಅರ್ಪಿಸಿದರು.


ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ.’


ಆದರೆ ಯಾಬೇಚ, “ಸರ್ವೇಶ್ವರಾ, ನನ್ನನ್ನು ಆಶೀರ್ವದಿಸಿರಿ, ನನ್ನ ಭೂಮಿಯನ್ನು ವಿಸ್ತರಿಸಿರಿ. ನನ್ನೊಡನೆ ಇದ್ದು ನನಗೆ ನೋವನ್ನುಂಟುಮಾಡುವ ಎಲ್ಲಾ ದುಷ್ಟಶಕ್ತಿಗಳಿಂದ ನನ್ನನ್ನು ಕಾಪಾಡಿ,” ಎಂದು ಸರ್ವೇಶ್ಚರನಿಗೆ ಪ್ರಾರ್ಥಿಸಿದನು. ಸರ್ವೇಶ್ವರ ಅವನ ಪ್ರಾರ್ಥನೆಯನ್ನು ಆಲಿಸಿ, ಕೇಳಿದ್ದನ್ನು ದಯಪಾಲಿಸಿದರು.


ನಮಗೆ ತಪ್ಪು ಮಾಡಿದ ಪ್ರತಿಯೊಬ್ಬನನ್ನು ನಾವು ಕ್ಷಮಿಸುವುದರಿಂದ, ನಮ್ಮ ಪಾಪಗಳನ್ನು ಕ್ಷಮಿಸಿರಿ. ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ’.”


“ನನ್ನ ಪ್ರಾಣ ನಷ್ಟದಿಂದ ನಿನಗೇನು ಫಲ? I ಸಮಾಧಿಗೆ ನಾನಿಳಿದರೆ ನಿನಗೇನು ಲಾಭ?” II “ಸತ್ತವರ ಬೂದಿ ನಿನ್ನ ಸ್ತುತಿಸಬಲ್ಲುದೆ? I ನಿನ್ನ ಸತ್ಯತೆಯನ್ನದು ಸಾರಲು ಬಲ್ಲುದೆ?” II


ಇನ್ನು ನನಗೆ ಉಳಿದಿರುವುದು ಒಂದೇ: ಸಜ್ಜನರಿಗೆ ಸಲ್ಲುವಂಥ ಜಯಮಾಲೆ ನನಗೀಗ ಸಿದ್ಧವಾಗಿದೆ. ಅದನ್ನು ನೀತಿವಂತ ನ್ಯಾಯಾಧಿಪತಿಯಾದ ಪ್ರಭು ಆ ದಿನದಂದು ನನಗೆ ಕೊಡುವರು; ನನಗೆ ಮಾತ್ರವಲ್ಲ, ಅವರ ಪ್ರತ್ಯಕ್ಷತೆಯನ್ನು ಪ್ರೀತಿಯಿಂದ ನಿರೀಕ್ಷಿಸುತ್ತಿರುವ ಎಲ್ಲರಿಗೂ ಕೊಡುವರು.


ಸಜ್ಜನರು ಸಾಯುತ್ತಾರೆ, ಆದರೆ ಯಾರೂ ಮನಸ್ಸಿಗೆ ಹಚ್ಚಿಕೊಳ್ಳುವುದಿಲ್ಲ. ಶರಣರು ಕಣ್ಮರೆಯಾಗುತ್ತಾರೆ, ‘ಇವರು ಕೇಡಿನಿಂದ ಪಾರಾದರು’ ಎಂದು ಯಾರೂ ಅರ್ಥಮಾಡಿಕೊಳ್ಳುವುದಿಲ್ಲ.


ಸಕಲ ಆಪತ್ತು ಕೇಡುಗಳಿಂದ ನನ್ನನ್ನು ಕಾಪಾಡಿಕೊಂಡು ಬಂದ ಆ ದೂತನು, ಈ ಹುಡುಗರನ್ನು ಆಶೀರ್ವದಿಸಲಿ! ಅವರ ಮುಖಾಂತರ ನನ್ನ ಹೆಸರೂ ನನ್ನ ಪಿತೃಗಳಾದ ಅಬ್ರಹಾಮ್ - ಇಸಾಕರ ಹೆಸರೂ ಊರ್ಜಿತಗೊಳ್ಳಲಿ; ಧರೆಯಲ್ಲಿ ಇವರು ದೊಡ್ಡ ಜನಸ್ತೋಮವಾಗಿ ಬೆಳೆಯಲಿ!”


ಹೌದಾದರೆ ಹೌದೆನ್ನಿ, ಅಲ್ಲವಾದರೆ ಅಲ್ಲವೆನ್ನಿ; ಇದಕ್ಕಿಂತ ಮಿಗಿಲಾದುದು ಪಿಶಾಚಿಯಿಂದ ಪ್ರೇರಿತವಾದುದು.”


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲ ಪೂರ್ಣಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿಕ್ಕಿರುವ ಪಾತಾಳದಲ್ಲಿ ಯಾವ ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ಆದರೆ, ನಾನು ನಿನ್ನ ವಿಶ್ವಾಸವು ಕುಂದದಂತೆ ನಿನಗಾಗಿ ಪ್ರಾರ್ಥನೆ ಮಾಡಿದ್ದೇನೆ. ನೀನು ಪರಿವರ್ತನೆ ಹೊಂದಿದ ನಂತರ ನಿನ್ನ ಸಹೋದರರನ್ನು ದೃಢಪಡಿಸು,” ಎಂದರು.


ಇಡೀ ಲೋಕವು ಕೇಡಿಗನ ವಶದಲ್ಲಿ ಇದ್ದರು ಸಹ ನಾವು ದೇವರಿಗೆ ಸೇರಿದವರೆಂಬುದು ನಮಗೆ ತಿಳಿದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು