Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 17:18 - ಕನ್ನಡ ಸತ್ಯವೇದವು C.L. Bible (BSI)

18 ನೀವು ನನ್ನನ್ನು ಲೋಕಕ್ಕೆ ಕಳಿಸಿದಂತೆ ನಾನು ಇವರನ್ನು ಲೋಕಕ್ಕೆ ಕಳಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನೀನು ನನ್ನನ್ನು ಲೋಕಕ್ಕೆ ಕಳುಹಿಸಿದಂತೆಯೇ, ನಾನು ಸಹ ಇವರನ್ನು ಲೋಕಕ್ಕೆ ಕಳುಹಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನೀನು ನನ್ನನ್ನು ಲೋಕಕ್ಕೆ ಕಳುಹಿಸಿಕೊಟ್ಟಂತೆ ನಾನೂ ಇವರನ್ನು ಲೋಕಕ್ಕೆ ಕಳುಹಿಸಿಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನೀನು ನನ್ನನ್ನು ಈ ಲೋಕಕ್ಕೆ ಕಳುಹಿಸಿದಂತೆ ನಾನೂ ಇವರನ್ನು ಈ ಲೋಕಕ್ಕೆ ಕಳುಹಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನೀವು ನನ್ನನ್ನು ಲೋಕಕ್ಕೆ ಕಳುಹಿಸಿದಂತೆಯೇ ನಾನು ಸಹ ಇವರನ್ನು ಲೋಕಕ್ಕೆ ಕಳುಹಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಕಶೆ ತಿಯಾ ಮಾಕಾ ಜಗಾತ್ ಧಾಡುನ್ ದಿಲೆಯ್, ತಸೆಚ್ ಮಿಯಾ ತೆಂಕಾ ಜಗಾತ್ ಧಾಡುನ್ ದಿಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 17:18
13 ತಿಳಿವುಗಳ ಹೋಲಿಕೆ  

ಯೇಸು ಪುನಃ, “ನಿಮಗೆ ಶಾಂತಿ, ಪಿತನು ನನ್ನನ್ನು ಕಳುಹಿಸಿದಂತೆಯೇ ನಾನೂ ನಿಮ್ಮನ್ನು ಕಳುಹಿಸುತ್ತೇನೆ,” ಎಂದರು.


ಆದ್ದರಿಂದಲೇ ನಾವು ಕ್ರಿಸ್ತಯೇಸುವಿನ ರಾಯಭಾರಿಗಳು. ದೇವರೇ ನಮ್ಮ ಮುಖಾಂತರ ಕರೆ ನೀಡುತ್ತಿದ್ದಾರೆ. ಅವರೊಡನೆ ಸಂಧಾನಮಾಡಿಕೊಳ್ಳಿರೆಂದು ಕ್ರಿಸ್ತಯೇಸುವಿನ ಹೆಸರಿನಲ್ಲಿ ನಾವು ನಿಮ್ಮನ್ನು ವಿನಂತಿಸುತ್ತೇವೆ.


ಏಕೈಕ ನಿಜದೇವರಾದ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅರಿತುಕೊಳ್ಳುವುದೇ ನಿತ್ಯಜೀವ.


ನೀವು ದುಡಿಯದ ಎಡೆಯಲ್ಲಿ ಕೊಯ್ಲುಮಾಡಲು ನಾನು ನಿಮ್ಮನ್ನು ಕಳುಹಿಸಿದ್ದೇನೆ. ದುಡಿದವರು ಬೇರೆ, ಅವರ ದುಡಿಮೆಯ ಫಲ ಬರುವುದು ನಿಮ್ಮ ಪಾಲಿಗೆ,” ಎಂದು ಹೇಳಿದರು.


ಆ ಹನ್ನೆರಡುಮಂದಿಯ ನಿಯೋಗವನ್ನು ಕಳುಹಿಸುವಾಗ ಯೇಸುಸ್ವಾಮಿ ಅವರಿಗೆ ಕೊಟ್ಟ ಆದೇಶ ಇದು: “ಪರಕೀಯರತ್ತ ಹೋಗಲೇಬೇಡಿ; ಸಮಾರಿಯದವರ ಯಾವ ಊರಿಗೂ ಕಾಲಿಡಬೇಡಿ.


ಈ ಶುಭಸಂದೇಶಕ್ಕೆ ದಾಸನನ್ನಾಗಿ ದೇವರು ನನ್ನನ್ನು ನೇಮಿಸಿದ್ದಾರೆ. ತಮ್ಮ ಪ್ರಭಾವಮಯ ಶಕ್ತಿಯಿಂದ ಈ ವಿಶೇಷ ವರವನ್ನು ಉಚಿತವಾಗಿ ನನಗೆ ದಯಪಾಲಿಸಿದ್ದಾರೆ.


ನಾನು ಇವರಲ್ಲಿಯೂ ನೀವು ನನ್ನಲ್ಲಿಯೂ ಇದ್ದು, ಇವರ ಐಕ್ಯಮತ್ಯವು ಪೂರ್ಣಸಿದ್ಧಿಗೆ ಬರಲಿ. ಆಗ ನೀವೇ ನನ್ನನ್ನು ಕಳುಹಿಸಿರುವಿರಿ ಎಂದೂ ನನ್ನನ್ನು ಪ್ರೀತಿಸಿದಂತೆಯೇ ಇವರನ್ನು ನೀವು ಪ್ರೀತಿಸಿರುವಿರಿ ಎಂದೂ ಲೋಕಕ್ಕೆ ಮನವರಿಕೆ ಆಗುವುದು.


ಪಿತನೇ, ಇವರೆಲ್ಲಾ ಒಂದಾಗಿರಲಿ. ನೀವು ನನ್ನಲ್ಲಿ, ನಾನು ನಿಮ್ಮಲ್ಲಿ ಇರುವಂತೆಯೇ ಇವರೂ ನಮ್ಮಲ್ಲಿ ಒಂದಾಗಿರಲಿ. ಹೀಗೆ, ನನ್ನನ್ನು ಕಳುಹಿಸಿದವರು ನೀವೇ ಎಂದು ಲೋಕವು ವಿಶ್ವಾಸಿಸುವಂತಾಗಲಿ.


ನಿಮ್ಮಿಂದ ನಾನು ಕಲಿತುದೆಲ್ಲವನ್ನೂ ಇವರಿಗೆ ತಿಳಿಯಪಡಿಸಿದ್ದೇನೆ. ಅವುಗಳನ್ನು ಇವರು ಅಂಗೀಕರಿಸಿ ನಿಮ್ಮಿಂದಲೇ ನಾನು ಬಂದುದು ನಿಜವೆಂದು ಅರಿತುಕೊಂಡಿದ್ದಾರೆ. ನನ್ನನ್ನು ಕಳುಹಿಸಿದ್ದು ನೀವೇ ಎಂದು ವಿಶ್ವಾಸಿಸಿದ್ದಾರೆ.


ಅವರಲ್ಲಿ ಕೆಲವರನ್ನು ಕೊಲೆಮಾಡುವಿರಿ, ಶಿಲುಬೆಗೆ ಏರಿಸುವಿರಿ, ಮತ್ತೆ ಕೆಲವರನ್ನು ನಿಮ್ಮ ಪ್ರಾರ್ಥನಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆಯುವಿರಿ. ಊರಿಂದೂರಿಗೆ ಅಟ್ಟಿ ಅವರನ್ನು ಪೀಡಿಸುವಿರಿ.


ನೀತಿಸ್ವರೂಪಿಯಾದ ಪಿತನೇ, ಲೋಕವು ನಿಮ್ಮನ್ನು ಅರಿತುಕೊಳ್ಳಲಿಲ್ಲ. ಆದರೆ ನಾನು ಅರಿತಿದ್ದೇನೆ. ನನ್ನನ್ನು ಕಳುಹಿಸಿದವರು ನೀವೆಂದು ಇವರು ತಿಳಿದುಕೊಂಡಿದ್ದಾರೆ.


ದೇವರು ತಮ್ಮ ಪುತ್ರನನ್ನು ಈ ಲೋಕಕ್ಕೆ ಕಳುಹಿಸಿದ್ದು ಲೋಕವನ್ನು ತೀರ್ಪಿಗೆ ಗುರಿಮಾಡಲೆಂದಲ್ಲ; ಪುತ್ರನ ಮುಖಾಂತರ ಲೋಕ ಉದ್ಧಾರವಾಗಲೆಂದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು