Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 17:2 - ಕನ್ನಡ ಸತ್ಯವೇದವು C.L. Bible (BSI)

2 ನರಮಾನವರೆಲ್ಲರ ಮೇಲೆ ನೀವು ಆತನಿಗೆ ಅಧಿಕಾರವನ್ನು ಕೊಟ್ಟಿರುವಿರಿ. ಇದರಿಂದಾಗಿ ನೀವು ಆತನಿಗೆ ಒಪ್ಪಿಸಿರುವ ಎಲ್ಲರಿಗೆ ನಿತ್ಯಜೀವವನ್ನು ಆತನು ನೀಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನೀನು ಯಾರಾರನ್ನು ಕೊಟ್ಟಿದ್ದೀಯೋ ಅವರೆಲ್ಲರಿಗೂ ನಿತ್ಯಜೀವವನ್ನು ಕೊಡಬೇಕೆಂದು, ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀನು ಅವನಿಗೆ ಯಾರಾರನ್ನು ಕೊಟ್ಟಿದ್ದೀಯೋ ಅವರೆಲ್ಲರಿಗೆ ಅವನು ನಿತ್ಯಜೀವವನ್ನು ಕೊಡಬೇಕೆಂದು ಅವನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನೀನು ಮಗನಿಗೆ ಯಾರ್ಯಾರನ್ನು ಕೊಟ್ಟೆಯೋ ಅವರೆಲ್ಲರಿಗೂ ಮಗನು ನಿತ್ಯಜೀವವನ್ನು ಕೊಡಬೇಕೆಂದು ನೀನು ಮಗನಿಗೆ ಅಧಿಕಾರವನ್ನು ಕೊಟ್ಟಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನೀವು ಎಲ್ಲರಿಗೂ ನಿತ್ಯಜೀವವನ್ನು ಕೊಡಬೇಕೆಂದು ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಕಶ್ಯಾಕ್ ಮಟ್ಲ್ಯಾರ್ ತಿಯಾ ತ್ಯೆಚ್ಯಾ ತಾಬೆತ್ ದಿಲ್ಲ್ಯಾ ಸಗ್ಳ್ಯಾಕ್ನಿ ಕನ್ನಾಚ್ ಮರಾನ್ ನಸಲ್ಲೆ ಜಿವನ್ ದಿವ್‍ಸಾಟ್ನಿ ಮನುನ್ ಸಗ್ಳ್ಯಾ ಲೊಕಾಂಚ್ಯಾ ವರ್ತಿ ತೆಕಾ ಅದಿಕಾರ್ ದಿಲೆಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 17:2
31 ತಿಳಿವುಗಳ ಹೋಲಿಕೆ  

ಅವರ ಚಿತ್ತವೇನೆಂದರೆ: ಅವರು ನನಗೆ ಕೊಟ್ಟವರಲ್ಲಿ ಒಬ್ಬನನ್ನೂ ಕಳೆದುಕೊಳ್ಳದೆ ಅಂತಿಮ ದಿನದಂದು ಅವರೆಲ್ಲರನ್ನೂ ನಾನು ಜೀವಕ್ಕೆ ಎಬ್ಬಿಸಬೇಕು.


ಪಿತನು ನನಗೆಂದು ಕೊಟ್ಟಿರುವ ಪ್ರತಿಯೊಬ್ಬನೂ ನನ್ನಲ್ಲಿಗೆ ಬರುತ್ತಾನೆ. ನನ್ನಲ್ಲಿಗೆ ಬರುವವನನ್ನು ನಾನೆಂದಿಗೂ ತಳ್ಳಿಬಿಡುವುದಿಲ್ಲ.


ಸಕಲ ರಾಷ್ಟ್ರ-ಕುಲ-ಭಾಷೆಗಳವರು ಅವನಿಗೆ ಸೇವೆ ಸಲ್ಲಿಸಲೆಂದು ಅವನಿಗೆ ದೊರೆತನ, ಘನತೆ, ರಾಜ್ಯತ್ವ ಇವುಗಳನ್ನು ಕೊಡಲಾಯಿತು. ಅವನ ಆಳ್ವಿಕೆಗೆ ಅಂತ್ಯವಿಲ್ಲ, ಅದು ಶಾಶ್ವತವಾದುದು, ಅವನ ರಾಜ್ಯ ಎಂದಿಗೂ ಅಳಿಯದು!


ಪಿತನೇ, ಇವರನ್ನು ನೀವು ನನಗೆ ಕೊಟ್ಟಿರುವಿರಿ. ಜಗತ್ತು ಉಂಟಾಗುವ ಮೊದಲೇ ನೀವು ನನ್ನನ್ನು ಪ್ರೀತಿಸಿ ನನಗಿತ್ತ ಮಹಿಮೆಯನ್ನು ಇವರೂ ಕಾಣುವಂತೆ ನಾನಿದ್ದಲ್ಲಿ ಇವರೂ ಇರಬೇಕೆಂದು ಆಶಿಸುತ್ತೇನೆ.


ಆಗ ಯೇಸು ಹತ್ತಿರಕ್ಕೆ ಬಂದು ಮಾತಾಡಿದರು: “ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ.


ದೇವರ ಪುತ್ರ ಆಗಮಿಸಿ, ಸತ್ಯಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲೆಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ. ನಿಜವಾದ ದೇವರೂ ನಿತ್ಯಜೀವವೂ ಇವರೇ.


“ನಾನು ಪ್ರಾರ್ಥಿಸುವುದು ಇವರಿಗಾಗಿ, ಲೋಕಕ್ಕಾಗಿ ಅಲ್ಲ. ನೀವೇ ನನಗೆ ಕೊಟ್ಟವರಿಗಾಗಿ ಪ್ರಾರ್ಥಿಸುತ್ತೇನೆ.


“ನೀವು ಲೋಕದಿಂದ ಆರಿಸಿ ನನಗೆ ಕೊಟ್ಟ ಜನರಿಗೆ ನಿಮ್ಮ ನಾಮವನ್ನು ತಿಳಿಯಪಡಿಸಿದ್ದೇನೆ. ಇವರು ನಿಮ್ಮವರಾಗಿದ್ದರು. ಆದರೂ ಇವರನ್ನು ನನಗೆ ಕೊಟ್ಟಿರಿ. ನಿಮ್ಮ ಮಾತಿಗೆ ವಿಧೇಯರಾಗಿ ಇವರು ನಡೆದಿದ್ದಾರೆ.


ಆದರೆ ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ದಾಹವಾಗದು; ಆ ನೀರು ಅವನಲ್ಲಿ ಉಕ್ಕಿ ಹರಿಯುವ ಬುಗ್ಗೆಯಾಗಿ, ನಿತ್ಯಜೀವವನ್ನು ತರುತ್ತದೆ,” ಎಂದು ಉತ್ತರಕೊಟ್ಟರು.


ಪಿತ ಪುತ್ರನನ್ನು ಪ್ರೀತಿಸಿ ಸರ್ವಸ್ವವನ್ನೂ ಆತನ ಕೈಗೆ ಕೊಟ್ಟಿದ್ದಾರೆ.


ಕ್ರಿಸ್ತಯೇಸು ನಮಗೆ ವಾಗ್ದಾನಮಾಡಿರುವ ನಿತ್ಯಜೀವ ಇದೇ.


ಯೇಸುಕ್ರಿಸ್ತರು ಸ್ವರ್ಗಕ್ಕೆ ಏರಿ, ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ; ದೂತಗಣಗಳ ಮೇಲೂ ಸ್ವರ್ಗೀಯ ಶಕ್ತರ ಹಾಗೂ ಅಧಿಕಾರಿಗಳ ಮೇಲೂ ಆಳ್ವಿಕೆ ನಡೆಸುತ್ತಿದ್ದಾರೆ.


ಆದರೆ, ಇತ್ತೀಚಿನ ಅಂತಿಮ ದಿನಗಳಲ್ಲಿ ಅವರು ತಮ್ಮ ಪುತ್ರನ ಮುಖೇನ ನಮ್ಮೊಡನೆ ಮಾತನಾಡಿದ್ದಾರೆ. ದೇವರು ಇಡೀ ವಿಶ್ವವನ್ನು ಉಂಟುಮಾಡಿದ್ದು ಇವರ ಮುಖಾಂತರವೇ; ಸಮಸ್ತಕ್ಕೂ ಬಾಧ್ಯನನ್ನಾಗಿ ನೇಮಿಸಿರುವುದು ಇವರನ್ನೇ.


“ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ; ಪುತ್ರನು ಯಾರೆಂಬುದನ್ನು ಪಿತನೇ ಹೊರತು ಬೇರಾರೂ ಅರಿಯರು. ಪಿತನು ಯಾರು ಎಂಬುದನ್ನು ಪುತ್ರನು ಮತ್ತು ಯಾವನಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ, ಅವರೇ ಹೊರತು ಮತ್ತಾರೂ ಅರಿಯರು.


ನಿತ್ಯಜೀವವನ್ನು ದಯಪಾಲಿಸುವ ಕರುಣಾಮಯ ಪ್ರಭು ಯೇಸುಕ್ರಿಸ್ತರನ್ನು ಎದುರುನೋಡುತ್ತಾ ದೇವರ ಪ್ರೀತಿಯಲ್ಲಿ ನೆಲೆಗೊಂಡಿರಿ.


ಆ ಜೀವ ಪ್ರತ್ಯಕ್ಷವಾಯಿತು. ಅದನ್ನು ನಾವು ನೋಡಿದ್ದೇವೆ. ಆ ಬಗ್ಗೆ ಸಾಕ್ಷಿ ಹೇಳುತ್ತೇವೆ. ಪಿತನ ಬಳಿಯಿದ್ದು ನಮಗೆ ಪ್ರತ್ಯಕ್ಷವಾದಂಥ ನಿತ್ಯಜೀವವನ್ನು ನಿಮಗೆ ಸಾರುತ್ತೇವೆ.


ಇದರಿಂದಾಗಿ, ಮುಂದೆ ವಿಶ್ವಾಸಿಗಳಾಗಿ ನಿತ್ಯಜೀವ ಪಡೆಯುವವರಿಗೆ ಆದರ್ಶ ದೊರಕುವಂತೆ ಕ್ರಿಸ್ತಯೇಸು ನನಗೆ ಪೂರ್ಣ ಸಹನೆ ತೋರಿದರು. ಇದು ದೇವರ ಕರುಣೆಯೇ ಸರಿ.


ಯೇಸುವಿನ ಹೆಸರಿಗೆಂದೇ ಮೊಣಕಾಲೂರಿ ಮಣಿವರು ಸ್ವರ್ಗವಾಸಿಗಳು, ಭೂನಿವಾಸಿಗಳು, ಪಾತಾಳ ಜೀವರಾಶಿಗಳು.


ಈ ಮಹಿಮಾಶಕ್ತಿಯಿಂದಲೇ ದೇವರು ಯೇಸುಕ್ರಿಸ್ತರನ್ನು ಮರಣದಿಂದ ಎಬ್ಬಿಸಿದರು; ಸಕಲ ಅಧಿಕಾರ, ಆಧಿಪತ್ಯ, ಪ್ರಭಾವ ಮತ್ತು ಪ್ರಭುತ್ವ ಇವೆಲ್ಲವುಗಳ ಮೇಲೆ ಯೆಸುಕ್ರಿಸ್ತರೇ ಆಡಳಿತ ನಡೆಸುವಂತೆ ಸ್ವರ್ಗಲೋಕದಲ್ಲಿ ಅವರನ್ನು ತಮ್ಮ ಬಲಗಡೆಯಲ್ಲಿ ಆಸೀನರಾಗಿಸಿದ್ದಾರೆ. ಹೀಗೆ ಇಹದಲ್ಲೂ ಪರದಲ್ಲೂ ಕೀರ್ತಿ ಗಳಿಸಿದವರೆಲ್ಲರಿಗಿಂತಲೂ ಯೇಸುಕ್ರಿಸ್ತರ ಮಹಿಮೆಯೇ ಸರ್ವಶ್ರೇಷ್ಠವಾದುದು.


ಶತ್ರುಗಳೆಲ್ಲರನ್ನು ತಮ್ಮ ಪಾದಪೀಠವಾಗಿಸಿಕೊಳ್ಳುವ ತನಕ ಅವರು ರಾಜ್ಯವಾಳಬೇಕಾಗಿದೆ.


ಮರಣವೇ ಪಾಪದ ವೇತನ; ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ಇರುವ ನಿತ್ಯಜೀವವೇ ದೇವರ ಉಚಿತ ವರದಾನ.


ನುಡಿದಿಹನು ಇಂತೆಂದು ಪ್ರಭು ನನ್ನೊಡೆಯನಿಗೆ I “ಆಸೀನನಾಗಿರು ನೀನು ನನ್ನ ಬಲಗಡೆಗೆ I ಹಗೆಗಳನು ನಿನಗೆ ಕಾಲ್ಮಣೆಯಾಗಿಸುವವರೆಗೆ” II


ಅಳಿದುಹೋಗುವ ಆಹಾರಕ್ಕಾಗಿ ದುಡಿಯಬೇಡಿ; ಉಳಿಯುವ ಮತ್ತು ನಿತ್ಯಜೀವವನ್ನು ಈಯುವ ಆಹಾರಕ್ಕಾಗಿ ದುಡಿಯಿರಿ. ಇಂಥ ಆಹಾರವನ್ನು ನಿಮಗೆ ನೀಡುವವನು ನರಪುತ್ರನೇ. ಏಕೆಂದರೆ, ಪಿತನಾದ ದೇವರು ತಮ್ಮ ಅಧಿಕಾರ ಮುದ್ರೆಯನ್ನು ಆತನ ಮೇಲೆ ಒತ್ತಿದ್ದಾರೆ,” ಎಂದು ಉತ್ತರಕೊಟ್ಟರು.


“ಹೀಗೆ ಈ ದುರ್ಜನರು ನಿತ್ಯಶಿಕ್ಷೆಗೂ, ಆ ಸಜ್ಜನರು ನಿತ್ಯಜೀವಕ್ಕೂ ಹೋಗುವರು,” ಎಂದು ಹೇಳಿದರು ಸ್ವಾಮಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು