Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 17:20 - ಕನ್ನಡ ಸತ್ಯವೇದವು C.L. Bible (BSI)

20 “ಇವರಿಗಾಗಿ ಮಾತ್ರವಲ್ಲ, ಇವರ ಮಾತನ್ನು ಕೇಳಿ ನನ್ನಲ್ಲಿ ವಿಶ್ವಾಸವಿಡುವವರಿಗಾಗಿಯೂ ಪ್ರಾರ್ಥಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 “ಆದರೆ ಇವರಿಗೋಸ್ಕರ ಮಾತ್ರವಲ್ಲದೆ ಇವರ ವಾಕ್ಯದಿಂದ ನನ್ನನ್ನು ನಂಬುವವರಿಗೋಸ್ಕರವಾಗಿಯೂ ನಿನ್ನನ್ನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆದರೆ ಇವರಿಗೋಸ್ಕರ ಮಾತ್ರವಲ್ಲದೆ ಇವರ ವಾಕ್ಯದಿಂದ ನನ್ನನ್ನು ನಂಬುವವರಿಗೋಸ್ಕರ ಸಹ ಕೇಳಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ನಾನು ಇವರಿಗಾಗಿಯೂ ಇವರ ವಾಕ್ಯದಿಂದ ನನ್ನಲ್ಲಿ ನಂಬಿಕೆ ಇಡುವ ಎಲ್ಲರಿಗಾಗಿಯೂ ಪ್ರಾರ್ಥಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ಆದರೆ ಇವರಿಗಾಗಿ ಮಾತ್ರವಲ್ಲದೆ ಇವರ ವಾಕ್ಯದಿಂದ ನನ್ನಲ್ಲಿ ನಂಬುವವರಿಗಾಗಿಯೂ ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಖಾಲಿ ತೆಂಚೆಸಾಟ್ನಿ ಎವ್ಡೆಚ್ ಮಿಯಾ ಮಾಗಿನಾ, ತೆನಿ ಸಾಂಗಲ್ಲಿ ಬರಿ ಖಬರ್ ಆಯ್ಕುನ್ ಮಾಜೆವರ್ತಿ ವಿಶ್ವಾಸ್ ಕರ್‍ತಲ್ಯಾ ಸಗ್ಳ್ಯಾಂಚ್ಯಾ ಸಾಟ್ನಿಬಿ ಮಿಯಾ ಮಾಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 17:20
10 ತಿಳಿವುಗಳ ಹೋಲಿಕೆ  

ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನ ಪಡೆದರು. ಅಂದೇ ಸುಮಾರು ಮೂರು ಸಾವಿರ ಜನರು ಸಭೆಯನ್ನು ಸೇರಿಕೊಂಡರು.


ಆದರೆ ಪ್ರೇಷಿತರ ಬೋಧನೆಯನ್ನು ಕೇಳಿದ ಅನೇಕರು ವಿಶ್ವಾಸಿಗಳಾದರು. ಭಕ್ತವಿಶ್ವಾಸಿಗಳ ಸಂಖ್ಯೆ ಸುಮಾರು ಐದು ಸಾವಿರಕ್ಕೆ ಏರಿತು.


ಈ ವ್ಯಕ್ತಿ ನರಮಾನವರಿಗೆ ವರದಾನಗಳನ್ನಿತ್ತರು. ಕೆಲವರನ್ನು ಪ್ರೇಷಿತರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಮತ್ತು ಬೋಧಕರನ್ನಾಗಿಯೂ ನೇಮಿಸಿದರು.


ಇದನ್ನು ಬೆಳಕಿಗೆ ತರುವ ನನ್ನ ಸಂದೇಶದ ಮೂಲಕ ಮತ್ತು ಯೇಸುಕ್ರಿಸ್ತರನ್ನು ಕುರಿತ ಬೋಧನೆಯ ಮೂಲಕ ದೇವರು ನಿಮ್ಮನ್ನು ವಿಶ್ವಾಸದಲ್ಲಿ ದೃಢಪಡಿಸಲು ಶಕ್ತರು.


ಈ ಮಂದೆಗೆ ಸೇರದ ಬೇರೆ ಕುರಿಗಳೂ ನನಗಿವೆ. ಅವನ್ನೂ ನಾನು ಕರೆತರಬೇಕು. ಅವು ಸಹ ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಕುರಿಹಿಂಡು ಆಗುವುದು. ಒಬ್ಬನೇ ಕುರಿಗಾಹಿ ಇರುವನು.


ಸತ್ಯಸಂಧರಾಗಿ ಇವರು ನಿಮ್ಮ ಸೇವೆಗೆ ಮೀಸಲಾಗಬೇಕೆಂದು ನನ್ನನ್ನು ನಾನೇ ಮೀಸಲಾಗಿಸಿಕೊಂಡಿದ್ದೇನೆ.


ಪಿತನೇ, ಇವರೆಲ್ಲಾ ಒಂದಾಗಿರಲಿ. ನೀವು ನನ್ನಲ್ಲಿ, ನಾನು ನಿಮ್ಮಲ್ಲಿ ಇರುವಂತೆಯೇ ಇವರೂ ನಮ್ಮಲ್ಲಿ ಒಂದಾಗಿರಲಿ. ಹೀಗೆ, ನನ್ನನ್ನು ಕಳುಹಿಸಿದವರು ನೀವೇ ಎಂದು ಲೋಕವು ವಿಶ್ವಾಸಿಸುವಂತಾಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು