Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 17:21 - ಕನ್ನಡ ಸತ್ಯವೇದವು C.L. Bible (BSI)

21 ಪಿತನೇ, ಇವರೆಲ್ಲಾ ಒಂದಾಗಿರಲಿ. ನೀವು ನನ್ನಲ್ಲಿ, ನಾನು ನಿಮ್ಮಲ್ಲಿ ಇರುವಂತೆಯೇ ಇವರೂ ನಮ್ಮಲ್ಲಿ ಒಂದಾಗಿರಲಿ. ಹೀಗೆ, ನನ್ನನ್ನು ಕಳುಹಿಸಿದವರು ನೀವೇ ಎಂದು ಲೋಕವು ವಿಶ್ವಾಸಿಸುವಂತಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ತಂದೆಯೇ, ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆಯೇ ಅವರು ಸಹ ಒಂದಾಗಿರಬೇಕೆಂತಲೂ ಬೇಡಿಕೊಳ್ಳುತ್ತೇನೆ. ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವುದಕ್ಕಾಗಿ, ಅವರೆಲ್ಲರೂ ನಮ್ಮಲ್ಲಿ ಒಂದಾಗಿರಲಿ ಎಂದು ನಿನ್ನನ್ನು ಕೇಳಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನೀನು ನನ್ನನ್ನು ಕಳುಹಿಸಿಕೊಟ್ಟಿದ್ದೀ ಎಂದು ಲೋಕವು ನಂಬುವದಕ್ಕಾಗಿ ಅವರೆಲ್ಲರೂ ಒಂದಾಗಿರಬೇಕೆಂತಲೂ ತಂದೆಯೇ, ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಪ್ರಕಾರ ಅವರೂ ನಮ್ಮಲ್ಲಿ ಇರಬೇಕೆಂತಲೂ ಕೇಳಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ತಂದೆಯೇ, ನನ್ನಲ್ಲಿ ನಂಬಿಕೆ ಇಡುವ ಎಲ್ಲಾ ಜನರು ಒಂದಾಗಿರಬೇಕೆಂದು ನಾನು ಪ್ರಾರ್ಥಿಸುತ್ತೇನೆ. ನೀನು ನನ್ನಲ್ಲಿ ನೆಲೆಸಿರುವೆ ಮತ್ತು ನಾನು ನಿನ್ನಲ್ಲಿ ನೆಲೆಸಿರುವೆ. ನೀನು ನನ್ನನ್ನು ಕಳುಹಿಸಿರುವೆಯೆಂದು ಈ ಲೋಕವು ನಂಬಿಕೊಳ್ಳುವುದಕ್ಕಾಗಿ ಈ ಜನರು ಸಹ ನಮ್ಮೊಂದಿಗೆ ಒಂದಾಗಿರಬೇಕೆಂದು ನಾನು ಪ್ರಾರ್ಥಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ತಂದೆಯೇ, ನೀವು ನನ್ನನ್ನು ಕಳುಹಿಸಿದ್ದೀರಿ ಎಂದು ಲೋಕವು ನಂಬುವುದಕ್ಕಾಗಿ ಅವರೆಲ್ಲರೂ ಒಂದಾಗಿರಬೇಕೆಂತಲೂ ತಂದೆಯೇ, ನೀವು ನನ್ನಲ್ಲಿಯೂ ನಾನು ನಿಮ್ಮಲ್ಲಿಯೂ ಇರುವ ಹಾಗೆಯೇ ಅವರು ಸಹ ನಮ್ಮಲ್ಲಿ ಒಂದಾಗಿರಬೇಕೆಂತಲೂ ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತೆನಿ ಸಗ್ಳಿ ಲೊಕಾ ಎಕ್ ಹೊವ್ನ್ ರ್‍ಹಾಯ್‍ ಸಾರ್ಕೆ ಹೊಂವ್ದಿತ್ ಮನುನ್ ಮಿಯಾ ಮಾಗ್ತಾ. ಬಾಬಾ! ಕಶೆ ತಿಯಾ ಮಾಜ್ಯಾ ಭುತ್ತುರ್ ಹಾಸ್, ಅನಿ ಮಿಯಾ ತುಜೆ ಭುತ್ತುರ್ ಹಾಂವ್. ತಸೆಚ್ ತೆನಿಬಿ ಅಮ್ಚ್ಯಾ ಭುತ್ತುರ್ ಎಕ್ ಹೊವ್ನ್ ರ್‍ಹಾಯ್ ಸರ್ಕೆ ಹೊಂವ್ದಿತ್. ಅಶೆ ತಿಯಾಚ್ ಮಾಕಾ ಧಾಡುನ್ ದಿಲೆ ಮನುನ್ ಹ್ಯೊ ಜಗ್ ವಿಶ್ವಾಸ್ ಕರಿ ಸರ್ಕೆ ಹೊಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 17:21
37 ತಿಳಿವುಗಳ ಹೋಲಿಕೆ  

ದೇಹ ಒಂದೇ; ಅಂಗಗಳು ಹಲವು. ಆ ಅಂಗಗಳು ಅನೇಕವಿದ್ದರೂ ಅವು ಸೇರಿ ಒಂದೇ ದೇಹವಾಗುತ್ತದೆ. ಅಂತೆಯೇ ಕ್ರಿಸ್ತಯೇಸು.


ನಾನಿನ್ನು ಲೋಕದಲ್ಲಿ ಇರುವುದಿಲ್ಲ. ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿಮ್ಮ ಬಳಿಗೆ ಬರುತ್ತಿದ್ದೇನೆ. ಪವಿತ್ರ ಪಿತನೇ, ನಾವು ಒಂದಾಗಿರುವಂತೆ ನೀವು ನನಗೆ ಕೊಟ್ಟಿರುವ ಇವರೂ ಒಂದಾಗಿರುವ ಹಾಗೆ ನಿಮ್ಮ ನಾಮದ ಶಕ್ತಿಯಿಂದ ಇವರನ್ನು ಸುರಕ್ಷಿತವಾಗಿರಿಸಿರಿ.


ಅದೇನೇ ಇರಲಿ, ನೀವು ಮಾತ್ರ ಕ್ರಿಸ್ತಯೇಸುವಿನ ಶುಭಸಂದೇಶಕ್ಕೆ ಯೋಗ್ಯರಾಗಿ ನಡೆದುಕೊಳ್ಳಿರಿ. ನಾನು ನಿಮ್ಮಲ್ಲಿಗೆ ಬಂದರೂ ಸರಿ, ಬಾರದಿದ್ದರೂ ಸರಿ, ಇದು ಮುಖ್ಯವಲ್ಲ. ಶುಭಸಂದೇಶವು ನೀಡುವ ವಿಶ್ವಾಸಕ್ಕಾಗಿ ನೀವು ಒಮ್ಮನಸ್ಸಿನಿಂದ, ಕೆಚ್ಚಿನಿಂದ ಹೋರಾಡುವುದೇ ಮುಖ್ಯ. ಇದು ನನಗೆ ತಿಳಿದುಬಂದರೆ ಅಷ್ಟೇ ಸಾಕು.


ನಿಮ್ಮ ಈ ಪರಸ್ಪರ ಪ್ರೀತಿಯನ್ನು ಕಂಡು ನೀವು ನನ್ನ ಶಿಷ್ಯರೆಂದು ಜನರೆಲ್ಲರೂ ಅರಿತುಕೊಳ್ಳುವರು.


ಭಕ್ತವಿಶ್ವಾಸಿಗಳು ಒಗ್ಗಟ್ಟಿನಿಂದಲೂ ಒಮ್ಮನಸ್ಸಿನಿಂದಲೂ ಬಾಳುತ್ತಿದ್ದರು. ಯಾರೂ ತಮ್ಮ ಸೊತ್ತನ್ನು ತನ್ನದೇ ಎಂದು ಭಾವಿಸದೆ ಹುದುವಾಗಿ ಹಂಚಿಕೊಳ್ಳುತ್ತಿದ್ದರು.


ಆಗ ಸರ್ವೇಶ್ವರ ಜಗಕ್ಕೆಲ್ಲಾ ಅರಸರಾಗಿರುವರು. ಅವರೊಬ್ಬರೇ ದೇವರೆಂದು, ಅವರ ಹೆಸರೊಂದೇ ಸ್ತುತ್ಯಾರ್ಹವೆಂದು ಎಲ್ಲರಿಗೂ ತಿಳಿದಿರುವುದು.


ನಿಮ್ಮಿಂದ ನಾನು ಕಲಿತುದೆಲ್ಲವನ್ನೂ ಇವರಿಗೆ ತಿಳಿಯಪಡಿಸಿದ್ದೇನೆ. ಅವುಗಳನ್ನು ಇವರು ಅಂಗೀಕರಿಸಿ ನಿಮ್ಮಿಂದಲೇ ನಾನು ಬಂದುದು ನಿಜವೆಂದು ಅರಿತುಕೊಂಡಿದ್ದಾರೆ. ನನ್ನನ್ನು ಕಳುಹಿಸಿದ್ದು ನೀವೇ ಎಂದು ವಿಶ್ವಾಸಿಸಿದ್ದಾರೆ.


ನಾನು ಹಾಗೆ ಮಾಡಿದ್ದೇ ಆದರೆ, ನನ್ನನ್ನು ನಂಬದೆಹೋದರೂ ನನ್ನ ಕಾರ್ಯಗಳನ್ನಾದರೂ ನಂಬಿರಿ. ಆಗ ಪಿತನು ನನ್ನಲ್ಲಿಯೂ ನಾನು ಪಿತನಲ್ಲಿಯೂ ಇರುವುದು ನಿಮಗೆ ಅರಿವಾಗುವುದು ಹಾಗೂ ಮನದಟ್ಟಾಗುವುದು,” ಎಂದರು.


ನಾನೂ ಪಿತನೂ ಒಂದೇ ಆಗಿದ್ದೇವೆ,” ಎಂದರು.


ನೀವೆಲ್ಲರೂ ಕ್ರಿಸ್ತಯೇಸುವಿನಲ್ಲಿ ಒಂದಾಗಿದ್ದೀರಿ. ಎಂದೇ, ಇನ್ನು ಮೇಲೆ ಯೆಹೂದ್ಯ-ಯೆಹೂದ್ಯನಲ್ಲದವ, ದಾಸ-ದಣಿ, ಗಂಡು-ಹೆಣ್ಣು, ಎಂಬ ಭೇದವಿಲ್ಲ.


ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ನಾನು ಕೇಳಿಕೊಳ್ಳುವುದೇನೆಂದರೆ: ವಾದವಿವಾದವಿಲ್ಲದೆ, ಭಿನ್ನಭೇದಗಳಿಲ್ಲದೆ ಒಂದೇ ಮನಸ್ಸಿನಿಂದಲೂ ಒಂದೇ ಉದ್ದೇಶದಿಂದಲೂ ನೀವು ಐಕಮತ್ಯದಿಂದ ಬಾಳಿರಿ.


ಅಂತೆಯೇ, ನಾವು ಅನೇಕ ಮಂದಿ ಇದ್ದರೂ ಕ್ರಿಸ್ತಯೇಸುವಿನಲ್ಲಿ ನಾವೆಲ್ಲರೂ ಒಂದೇ ದೇಹವಾಗಿದ್ದೇವೆ. ಒಬ್ಬರಿಗೊಬ್ಬರು ದೇಹದ ವಿವಿಧ ಅಂಗಗಳಂತೆ ಹೊಂದಿಕೊಂಡಿದ್ದೇವೆ.


ಅವರಿಗೆ ಒಂದೇ ಮನಸ್ಸನ್ನೂ ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು. ಇದರಿಂದ ಅವರು ತಮ್ಮ ಹಿತಕ್ಕಾಗಿಯೂ ತಮ್ಮ ಅನಂತರ ತಮ್ಮ ಸಂತಾನದ ಹಿತಕ್ಕಾಗಿಯೂ ನನ್ನಲ್ಲಿ ಸದಾ ಭಯಭಕ್ತಿ ಉಳ್ಳವರಾಗಿರುವರು.


ಇದಕ್ಕೆ ಪವಿತ್ರಾತ್ಮ ಸಾಕ್ಷಿ. ಏಕೆಂದರೆ, ಪವಿತ್ರಾತ್ಮ ಸತ್ಯಸ್ವರೂಪಿ.


ದಿನಂಪ್ರತಿ ಅವರು ಒಮ್ಮನಸ್ಸಿನಿಂದ ದೇವಾಲಯದಲ್ಲಿ ಸಭೆ ಸೇರುತ್ತಿದ್ದರು. ತಮ್ಮ ಮನೆಗಳಲ್ಲಿ ರೊಟ್ಟಿ ಮುರಿಯುವ ಸಹಭೋಜನವನ್ನು ಏರ್ಪಡಿಸಿ ಸಂತೋಷದಿಂದಲೂ ಸಹೃದಯದಿಂದಲೂ ಭಾಗವಹಿಸುತ್ತಿದ್ದರು.


ನೀತಿಸ್ವರೂಪಿಯಾದ ಪಿತನೇ, ಲೋಕವು ನಿಮ್ಮನ್ನು ಅರಿತುಕೊಳ್ಳಲಿಲ್ಲ. ಆದರೆ ನಾನು ಅರಿತಿದ್ದೇನೆ. ನನ್ನನ್ನು ಕಳುಹಿಸಿದವರು ನೀವೆಂದು ಇವರು ತಿಳಿದುಕೊಂಡಿದ್ದಾರೆ.


ಈ ಮಂದೆಗೆ ಸೇರದ ಬೇರೆ ಕುರಿಗಳೂ ನನಗಿವೆ. ಅವನ್ನೂ ನಾನು ಕರೆತರಬೇಕು. ಅವು ಸಹ ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಕುರಿಹಿಂಡು ಆಗುವುದು. ಒಬ್ಬನೇ ಕುರಿಗಾಹಿ ಇರುವನು.


“ಆಗ ಎಲ್ಲರೂ ಒಮ್ಮನಸ್ಸಿನಿಂದ ನನ್ನನ್ನು ಪೂಜಿಸಿ ನನ್ನ ಹೆಸರೆತ್ತಿ ಪ್ರಾರ್ಥಿಸುವಂತೆ ಜನಾಂಗಗಳ ಬಾಯನ್ನು ಪರಿವರ್ತಿಸಿ ಶುದ್ಧೀಕರಿಸುವೆನು.


ಏಕೈಕ ನಿಜದೇವರಾದ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅರಿತುಕೊಳ್ಳುವುದೇ ನಿತ್ಯಜೀವ.


ಏಕೆಂದರೆ, ತಮ್ಮನ್ನು ಗೌರವಿಸುವಂತೆಯೇ ಜನರೆಲ್ಲರು ಪುತ್ರನನ್ನು ಗೌರವಿಸಬೇಕೆಂಬುದು ಅವರ ಬಯಕೆ. ಪುತ್ರನನ್ನು ಗೌರವಿಸದವನು ಆತನನ್ನು ಕಳುಹಿಸಿದ ಪಿತನನ್ನೂ ಗೌರವಿಸುವುದಿಲ್ಲ.


ದೇವರು ತಮ್ಮ ಪುತ್ರನನ್ನು ಈ ಲೋಕಕ್ಕೆ ಕಳುಹಿಸಿದ್ದು ಲೋಕವನ್ನು ತೀರ್ಪಿಗೆ ಗುರಿಮಾಡಲೆಂದಲ್ಲ; ಪುತ್ರನ ಮುಖಾಂತರ ಲೋಕ ಉದ್ಧಾರವಾಗಲೆಂದು.


ನೀವು ನನ್ನನ್ನು ಲೋಕಕ್ಕೆ ಕಳಿಸಿದಂತೆ ನಾನು ಇವರನ್ನು ಲೋಕಕ್ಕೆ ಕಳಿಸಿದ್ದೇನೆ.


ನನ್ನ ಪ್ರಾರ್ಥನೆಗೆ ನೀವು ಯಾವಾಗಲೂ ಕಿವಿಗೊಡುತ್ತೀರಿ ಎಂಬುದು ನನಗೆ ಚೆನ್ನಾಗಿ ತಿಳಿದಿದೆ. ಆದರೆ ನನ್ನನ್ನು ಕಳುಹಿಸಿದಾತ ನೀವೇ ಎಂದು ಸುತ್ತಲೂ ನೆರೆದಿರುವವರು ನಂಬುವಂತೆ ನಾನು ಹೀಗೆ ಹೇಳಿದೆನು,” ಎಂದು ನುಡಿದರು.


“ಇವರಿಗಾಗಿ ಮಾತ್ರವಲ್ಲ, ಇವರ ಮಾತನ್ನು ಕೇಳಿ ನನ್ನಲ್ಲಿ ವಿಶ್ವಾಸವಿಡುವವರಿಗಾಗಿಯೂ ಪ್ರಾರ್ಥಿಸುತ್ತೇನೆ.


ಆದರೆ ಪ್ರಭುವಿನ ಅನ್ಯೋನ್ಯತೆಯಲ್ಲಿ ಇರುವವನು ಅವರೊಂದಿಗೆ ಆಧ್ಯಾತ್ಮಿಕವಾಗಿ ಒಂದಾಗಿರುತ್ತಾನೆ.


ಪಿತನೊಡನೆಯೂ ಅವರ ಪುತ್ರ ಕ್ರಿಸ್ತಯೇಸುವಿನೊಡನೆಯೂ ನಮಗಿರುವಂಥ ಅನ್ಯೋನ್ಯತೆಯಲ್ಲಿ ನೀವು ಸಹ ಭಾಗಿಗಳಾಗುವಂತೆ ನಾವು ಕಂಡುಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ.


ಒಂದು ರಾಜ್ಯದ ಪ್ರಜೆಗಳು ತಮ್ಮತಮ್ಮೊಳಗೆ ಕಚ್ಚಾಡುವುದಾದರೆ ಆ ರಾಜ್ಯ ಉಳಿಯದು.


ದೇವರ ಮಹಿಮೆ ಆತನಲ್ಲಿ ಪ್ರಕಟವಾದರೆ, ದೇವರೇ ನರಪುತ್ರನ ಮಹಿಮೆಯನ್ನು ತಮ್ಮಲ್ಲಿ ಪ್ರಕಟಪಡಿಸುವರು. ತಕ್ಷಣವೇ ಪ್ರಕಟಪಡಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು