ಯೋಹಾನ 17:23 - ಕನ್ನಡ ಸತ್ಯವೇದವು C.L. Bible (BSI)23 ನಾನು ಇವರಲ್ಲಿಯೂ ನೀವು ನನ್ನಲ್ಲಿಯೂ ಇದ್ದು, ಇವರ ಐಕ್ಯಮತ್ಯವು ಪೂರ್ಣಸಿದ್ಧಿಗೆ ಬರಲಿ. ಆಗ ನೀವೇ ನನ್ನನ್ನು ಕಳುಹಿಸಿರುವಿರಿ ಎಂದೂ ನನ್ನನ್ನು ಪ್ರೀತಿಸಿದಂತೆಯೇ ಇವರನ್ನು ನೀವು ಪ್ರೀತಿಸಿರುವಿರಿ ಎಂದೂ ಲೋಕಕ್ಕೆ ಮನವರಿಕೆ ಆಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ ಇರುವಂತೆ ಇವರೂ ಐಕ್ಯತೆಯಲ್ಲಿ ಪರಿಪೂರ್ಣರಾಗಿರಲಿ. ಹೀಗೆ ನೀನು ನನ್ನನ್ನು ಕಳುಹಿಸಿದ್ದೀ, ಎಂದೂ ಮತ್ತು ನೀನು ನನ್ನನ್ನು ಪ್ರೀತಿಸಿದಂತೆ, ಇವರನ್ನೂ ನೀನು ಪ್ರೀತಿಸುತ್ತೀ ಎಂದು ಲೋಕವು ತಿಳಿದುಕೊಳ್ಳುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನಾನು ಅವರಲ್ಲಿಯೂ ನೀನು ನನ್ನಲ್ಲಿಯೂ ಇರಲಾಗಿ ಅವರ ಐಕ್ಯವು ಪೂರ್ಣಸಿದ್ಧಿಗೆ ಬರುವದರಿಂದ ನೀನು ನನ್ನನ್ನು ಕಳುಹಿಸಿಕೊಟ್ಟಿದ್ದೀ ಎಂದೂ ನೀನು ನನ್ನನ್ನು ಪ್ರೀತಿಸಿದಂತೆ ಅವರನ್ನೂ ಪ್ರೀತಿಸಿದ್ದೀ ಎಂದೂ ಲೋಕಕ್ಕೆ ತಿಳಿದುಬರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ನಾನು ಅವರಲ್ಲಿ ಇರುವೆನು ಮತ್ತು ನೀನು ನನ್ನಲ್ಲಿರುವೆ. ಆದ್ದರಿಂದ ಅವರು ಸಂಪೂರ್ಣವಾಗಿ ಒಂದಾಗಿರುವರು. ನೀನೇ ನನ್ನನ್ನು ಕಳುಹಿಸಿರುವುದಾಗಿ ಮತ್ತು ನೀನು ನನ್ನನ್ನು ಪ್ರೀತಿಸಿದಂತೆಯೇ ಈ ಜನರನ್ನೂ ಪ್ರೀತಿಸಿರುವುದಾಗಿ ಈ ಲೋಕವು ಆಗ ತಿಳಿದುಕೊಳ್ಳುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಹೀಗೆ ನಾನು ಇವರಲ್ಲಿಯೂ ನೀವು ನನ್ನಲ್ಲಿಯೂ ಇರುವಂತೆ ಇವರೂ ಐಕ್ಯತೆಯಲ್ಲಿ ಪರಿಪೂರ್ಣವಾಗಿರಲಿ. ಆಗ ನೀವು ನನ್ನನ್ನು ಕಳುಹಿಸಿದ್ದೀರಿ ಎಂದೂ ನನ್ನನ್ನು ಪ್ರೀತಿಸಿದಂತೆ ಇವರನ್ನು ನೀವು ಪ್ರೀತಿಸಿದ್ದೀರಿ ಎಂದೂ ಲೋಕವು ತಿಳಿದುಕೊಳ್ಳುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಮಿಯಾ ತೆಂಚ್ಯಾ ಭುತ್ತುರ್ ಹಾಂವ್ ಅನಿ ತಿಯಾ ಮಾಜ್ಯಾ ಭುತ್ತುರ್ ಹಾಸ್ ಅಶೆ ತೆನಿ ಸಂಪುರ್ನ್ ರಿತಿನ್ ಎಕ್ ಹೊಂವ್ದಿತ್, ಹೆಕಾ ಲಾಗುನ್ ಹ್ಯೊ ಜಗ್ ಕಳ್ವುನ್ ಘೆಂವ್ದಿ ತಿಯಾಚ್ ಮಾಕಾ ಧಾಡುನ್ ದಿಲ್ಲೆ. ಅನಿ ತಿಯಾ ಕಸೊ ಮಾಜೊ ಪ್ರೆಮ್ ಕರ್‍ಲೆ ತಸೆಚ್ ತ್ಯೆಂಚೊಬಿ ಪ್ರೆಮ್ ಕರ್‍ತೆ ಮನುನ್ ತೆಂಕಾ ಕಳುಂದಿ. ಅಧ್ಯಾಯವನ್ನು ನೋಡಿ |