Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 17:24 - ಕನ್ನಡ ಸತ್ಯವೇದವು C.L. Bible (BSI)

24 ಪಿತನೇ, ಇವರನ್ನು ನೀವು ನನಗೆ ಕೊಟ್ಟಿರುವಿರಿ. ಜಗತ್ತು ಉಂಟಾಗುವ ಮೊದಲೇ ನೀವು ನನ್ನನ್ನು ಪ್ರೀತಿಸಿ ನನಗಿತ್ತ ಮಹಿಮೆಯನ್ನು ಇವರೂ ಕಾಣುವಂತೆ ನಾನಿದ್ದಲ್ಲಿ ಇವರೂ ಇರಬೇಕೆಂದು ಆಶಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ತಂದೆಯೇ, ನೀನು ನನಗೆ ಕೊಟ್ಟವರು, ನಾನಿರುವ ಸ್ಥಳದಲ್ಲಿ ನನ್ನೊಂದಿಗೆ ಇದ್ದುಕೊಂಡು, ಜಗದುತ್ಪತ್ತಿಗೂ ಮೊದಲೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ನೋಡಬೇಕೆಂದು, ನಾನು ಆಶಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ತಂದೆಯೇ, ನೀನು ಯಾರನ್ನು ನನಗೆ ಕೊಟ್ಟಿಯೋ ಅವರು ನಾನಿರುವ ಸ್ಥಳದಲ್ಲಿ ನನ್ನ ಕೂಡ ಇದ್ದುಕೊಂಡು ಲೋಕವು ಹುಟ್ಟುವದಕ್ಕಿಂತ ಮುಂಚೆಯೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ನೋಡಬೇಕೆಂದು ಇಚ್ಫೈಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ತಂದೆಯೇ, ನೀನು ನನಗೆ ಕೊಟ್ಟಿರುವ ಇವರು, ನಾನು ಇರುವಲ್ಲೆಲ್ಲಾ ನನ್ನೊಂದಿಗೆ ಇರಬೇಕೆಂದು ಮತ್ತು ನನ್ನ ಮಹಿಮೆಯನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ. ಈ ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲೇ ನೀನು ನನ್ನನ್ನು ಪ್ರೀತಿಸಿದ್ದರಿಂದ ನೀನೇ ನನಗೆ ಈ ಮಹಿಮೆಯನ್ನು ಕೊಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ತಂದೆಯೇ, ನೀವು ನನಗೆ ಕೊಟ್ಟವರು ನಾನಿರುವಲ್ಲಿಯೇ ನನ್ನೊಂದಿಗೆ ಇದ್ದುಕೊಂಡು ಜಗದುತ್ಪತ್ತಿಗೆ ಮುಂಚೆ ನೀವು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ಕಾಣಬೇಕೆಂದು ನಾನು ಅಪೇಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಬಾಬಾ! ತಿಯಾ ತೆಂಕಾ ಮಾಜಾಕ್ಡೆ ದಿಲೆಯ್, ಅನಿ ಮಿಯಾ ಖೈ ರ್‍ಹಾತಾ ಥೈ ತೆನಿಬಿ ಹೊತ್ತೆ ಮಾಕಾ ಪಾಜೆ. ಅಶೆ ಹ್ಯೊ ಜಗ್ ರಚುಚ್ಯಾ ಅದ್ದಿಚ್ ತಿಯಾ ಮಾಜೊ ಪ್ರೆಮ್ ಕರುನ್ ಮಾಕಾ ದಿಲ್ಲಿ ಮಹಿಮಾ ತೆನಿಬಿ ಬಗಿ ಸರ್ಕೆ ಹೊಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 17:24
30 ತಿಳಿವುಗಳ ಹೋಲಿಕೆ  

ಪಿತನೇ, ಜಗತ್ತು ಉಂಟಾಗುವ ಮೊದಲೇ ನಿಮ್ಮೊಡನೆ ನನಗಿದ್ದ ಅದೇ ಮಹಿಮೆಯನ್ನು ಕೊಟ್ಟು ನನ್ನನ್ನು ಈಗ ನಿಮ್ಮ ಸನ್ನಿಧಿಯಲ್ಲಿ ಮಹಿಮೆಪಡಿಸಿರಿ.


ನನ್ನ ಸೇವೆಮಾಡಬೇಕೆಂದಿರುವವನು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕನೂ ಇರುತ್ತಾನೆ. ನನ್ನ ಸೇವೆಮಾಡುವವನು ನನ್ನ ಪಿತನಿಂದ ಸನ್ಮಾನಹೊಂದುತ್ತಾನೆ,” ಎಂದರು


ಅಣಿಗೊಳಿಸಿದ ಬಳಿಕ ಹಿಂದಿರುಗಿ ಬಂದು ನಿಮ್ಮನ್ನು ಕರೆದೊಯ್ಯುತ್ತೇನೆ. ನಾನಿರುವೆಡೆಯಲ್ಲಿಯೇ ನೀವೂ ಇರಬೇಕು.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.


ಪ್ರಿಯರೇ, ನಾವೀಗ ದೇವರ ಮಕ್ಕಳು. ಮುಂದೆ ನಾವು ಎಂಥವರಾಗುತ್ತೇವೆ ಎಂಬುದು ಇನ್ನೂ ವಿಷದವಾಗಿಲ್ಲ. ಆದರೆ ಕ್ರಿಸ್ತಯೇಸು ಪ್ರತ್ಯಕ್ಷವಾಗುವಾಗ ನಾವೂ ಅವರಂತೆಯೇ ಇರುತ್ತೇವೆಂದು ಬಲ್ಲೆವು. ಏಕೆಂದರೆ, ಅವರನ್ನು ನಾವು ಅವರ ಯಥಾರ್ಥರೂಪದಲ್ಲೇ ಕಾಣುತ್ತೇವೆ.


ಈಜಿಪ್ಟ್ ದೇಶದಲ್ಲಿ ನನಗಿರುವ ಘನತೆ ಗೌರವವನ್ನೂ ನೀವು ಕಂಡದ್ದೆಲ್ಲವನ್ನೂ ತಂದೆಗೆ ತಿಳಿಸಿ, ಬೇಗನೆ ಅವರನ್ನು ಇಲ್ಲಿಗೆ ಕರೆದುಕೊಂಡು ಬನ್ನಿ,” ಎಂದು ಹೇಳಿದನು.


ಮುಸುಕು ತೆರೆದ ಮುಖವುಳ್ಳ ನಾವೆಲ್ಲರೂ ಪ್ರಭುವಿನ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಆ ಪ್ರಭುವಿನಿಂದ ಹೊರಹೊಮ್ಮುವ ಮಹಿಮೆ ನಮ್ಮನ್ನು ಅಧಿಕಾಧಿಕವಾಗಿ ಮಾರ್ಪಡಿಸಿ ಅವರನ್ನೇ ಹೋಲುವಂತೆ ಮಾಡುತ್ತದೆ. ಇದೆಲ್ಲಾ ದೇವರಾತ್ಮವಾಗಿರುವ ಪ್ರಭುವಿನ ಕಾರ್ಯವೇ ಸರಿ.


ಅದಕ್ಕೆ ಆ ಧಣಿ, “ಭಲಾ, ನೆಚ್ಚಿನ ಸೇವಕ, ನೀನು ಪ್ರಾಮಾಣಿಕ, ಈ ಚಿಕ್ಕ ಕಾರ್ಯದಲ್ಲಿ ಪ್ರಾಮಾಣಿಕನಾಗಿದ್ದ ನಿನಗೆ ದೊಡ್ಡ ಜವಾಬ್ದಾರಿಯನ್ನೇ ವಹಿಸುತ್ತೇನೆ. ಬಾ, ನಿನ್ನ ಧಣಿಯ ಸೌಭಾಗ್ಯದಲ್ಲಿ ಭಾಗಿಯಾಗು,’ ಎಂದ.


ಆಮೇಲೆ, ಇನ್ನೂ ಬದುಕಿರುವ ನಾವು ಎದ್ದುಬಂದವರೊಡನೆ ಆಕಾಶಮಂಡಲದಲ್ಲಿ ಪ್ರಭುವನ್ನು ಎದುರುಗೊಳ್ಳಲು ಮೇಘಾರೂಢರಾಗಿ ಮೇಲಕ್ಕೆ ಒಯ್ಯಲ್ಪಡುತ್ತೇವೆ. ಹೀಗೆ ಸರ್ವದಾ ನಾವು ಪ್ರಭುವಿನೊಂದಿಗೆ ಇರುತ್ತೇವೆ.


ಯಜಮಾನನು ಬಂದು ಯಾವ ಯಾವ ಸೇವಕ ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುತ್ತಾನೋ, ಅಂಥವರು ಭಾಗ್ಯವಂತರು. ಏಕೆಂದರೆ, ಯಜಮಾನನೇ ನಡುಕಟ್ಟಿನಿಂತು, ಅವರನ್ನು ಊಟಕ್ಕೆ ಕೂರಿಸಿ, ಒಬ್ಬೊಬ್ಬನಿಗೂ ತಾನೇ ಉಪಚಾರ ಮಾಡುವನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.


ನಾನು ಜಯಗಳಿಸಿ ನನ್ನ ತಂದೆಯೊಡನೆ ಅವರ ಸಿಂಹಾಸನದಲ್ಲಿ ಕುಳಿತುಕೊಂಡಿದ್ದೇನೆ. ಅದೇ ಪ್ರಕಾರ ಜಯಹೊಂದಿದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.


ನಾವೀಗ ಕಾಂಬುದು ದರ್ಪಣದ ಬಿಂಬವನು ಮುಸುಕಾಗಿ ತರುವಾಯ ಕಾಂಬೆವು ದೇವರನು ಮುಖಾಮುಖಿಯಾಗಿ. ಈಗಿರುವುದೆನ್ನ ಅರಿವು ತುಂಡುತುಂಡಾಗಿ ನಂತರ ದೇವನೆನ್ನ ಅರಿತಂತೆ ಈ ಮೂರಲಿ ನಾನರಿವೆನು ಅಖಂಡವಾಗಿ.


ನಾನು ನನ್ನ ಪಿತನ ಸಾಮ್ರಾಜ್ಯದಲ್ಲಿ ದ್ರಾಕ್ಷಾರಸ ನಿಮ್ಮ ಸಂಗಡ ಹೊಸದಾಗಿ ಕುಡಿಯುವ ದಿನದವರೆಗೂ ಅದನ್ನು ಇನ್ನು ಕುಡಿಯುವುದಿಲ್ಲ ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.


ಆಗ ಅರಸನು ತನ್ನ ಬಲಗಡೆಯಿರುವ ಜನರಿಗೆ, ‘ನನ್ನ ಪಿತನಿಂದ ಧನ್ಯರೆನಿಸಿಕೊಂಡವರೇ, ಬನ್ನಿ. ಲೋಕಾದಿಯಿಂದ ನಿಮಗಾಗಿ ಸಿದ್ಧಮಾಡಿದ ಸಾಮ್ರಾಜ್ಯವನ್ನು ಸ್ವಾಸ್ತ್ಯವಾಗಿ ಪಡೆಯಿರಿ.


ಉಭಯ ಸಂಕಟಕ್ಕೆ ಸಿಲುಕಿದ್ದೇನೆ. ಒಂದು ಕಡೆ, ಈ ಬದುಕನ್ನು ತೊರೆದು ಕ್ರಿಸ್ತಯೇಸುವಿನೊಡನೆ ಒಂದಾಗಿರಬೇಕೆಂಬುದೇ ನನ್ನ ಬಯಕೆ. ಇದು ಎಷ್ಟೋ ಮೇಲಾದುದು.


ಆದ್ದರಿಂದ ಈ ದೇಹವನ್ನು ತ್ಯಜಿಸಿ, ಪ್ರಭುವನ್ನೇ ನೆಚ್ಚಿ ನೆಲಸುವುದು ಲೇಸೆಂದು ಧೈರ್ಯದಿಂದ ಹೇಳುತ್ತೇವೆ.


ಅವನಿಗೆ ಯೇಸು, “ಇಂದೇ ನೀನು ನನ್ನೊಡನೆ ಪರಂಧಾಮದಲ್ಲಿರುವೆ ಎಂದು ನಿಶ್ಚಯವಾಗಿ ಹೇಳುತ್ತೇನೆ,” ಎಂದರು.


ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು.


ಆ ನಗರದಲ್ಲಿ ನಾನು ದೇವಾಲಯವನ್ನು ಕಾಣಲಿಲ್ಲ; ಏಕೆಂದರೆ, ಸರ್ವಶಕ್ತ ದೇವರಾದ ಪ್ರಭುವೂ ಯಜ್ಞದ ಕುರಿಮರಿಯಾದಾತನೂ ಅದರ ದೇವಾಲಯವಾಗಿದ್ದಾರೆ.


ಧಣಿ ಅವನಿಗೂ, ‘ಭಲಾ, ನೆಚ್ಚಿನ ಸೇವಕ, ನೀನು ಪ್ರಾಮಾಣಿಕ. ಈ ಚಿಕ್ಕ ಕಾರ್ಯದಲ್ಲಿ ಪ್ರಾಮಾಣಿಕನಾಗಿದ್ದ ನಿನಗೂ ದೊಡ್ಡ ಜವಾಬ್ದಾರಿಯನ್ನೇ ವಹಿಸುತ್ತೇನೆ. ಬಾ, ನಿನ್ನ ಧಣಿಯ ಸೌಭಾಗ್ಯದಲ್ಲಿ ನೀನೂ ಭಾಗಿಯಾಗು,’ ಎಂದ.


ಪಿತನು ನನಗೆಂದು ಕೊಟ್ಟಿರುವ ಪ್ರತಿಯೊಬ್ಬನೂ ನನ್ನಲ್ಲಿಗೆ ಬರುತ್ತಾನೆ. ನನ್ನಲ್ಲಿಗೆ ಬರುವವನನ್ನು ನಾನೆಂದಿಗೂ ತಳ್ಳಿಬಿಡುವುದಿಲ್ಲ.


ಅವರ ಚಿತ್ತವೇನೆಂದರೆ: ಅವರು ನನಗೆ ಕೊಟ್ಟವರಲ್ಲಿ ಒಬ್ಬನನ್ನೂ ಕಳೆದುಕೊಳ್ಳದೆ ಅಂತಿಮ ದಿನದಂದು ಅವರೆಲ್ಲರನ್ನೂ ನಾನು ಜೀವಕ್ಕೆ ಎಬ್ಬಿಸಬೇಕು.


ಯೇಸು ಅವರಿಗೆ, “ಅಬ್ರಹಾಮನು ಹುಟ್ಟುವುದಕ್ಕೆ ಮೊದಲಿನಿಂದಲೂ ನಾನಿದ್ದೇನೆ,” ಎಂದು ಮರುನುಡಿದರು.


ಪಿತನು ನನ್ನನ್ನು ಪ್ರೀತಿಸಿದಂತೆಯೇ ನಾನೂ ನಿಮ್ಮನ್ನು ಪ್ರೀತಿಸಿದ್ದೇನೆ. ನನ್ನ ಪ್ರೀತಿಯಲ್ಲಿ ನೆಲೆಗೊಂಡು ನಿಲ್ಲಿರಿ.


ನರಮಾನವರೆಲ್ಲರ ಮೇಲೆ ನೀವು ಆತನಿಗೆ ಅಧಿಕಾರವನ್ನು ಕೊಟ್ಟಿರುವಿರಿ. ಇದರಿಂದಾಗಿ ನೀವು ಆತನಿಗೆ ಒಪ್ಪಿಸಿರುವ ಎಲ್ಲರಿಗೆ ನಿತ್ಯಜೀವವನ್ನು ಆತನು ನೀಡುವನು.


ನಾವು ಒಂದಾಗಿರುವಂತೆ ಇವರೂ ಒಂದಾಗಿರಲೆಂದು ನೀವು ನನಗಿತ್ತ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ.


ಮರಣದಿಂದ ಪುನರುತ್ಥಾನಗೊಳಿಸಿ ಮಹಿಮೆಪಡಿಸಿದ ದೇವರಲ್ಲಿ ನೀವು ವಿಶ್ವಾಸವಿಟ್ಟದ್ದು ಇವರ ಮುಖಾಂತರವೇ. ಹೀಗೆ ನಿಮ್ಮ ವಿಶ್ವಾಸವೂ ನಿರೀಕ್ಷೆಯೂ ದೇವರಲ್ಲೇ ನೆಲೆಗೊಂಡಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು