Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 17:3 - ಕನ್ನಡ ಸತ್ಯವೇದವು C.L. Bible (BSI)

3 ಏಕೈಕ ನಿಜದೇವರಾದ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅರಿತುಕೊಳ್ಳುವುದೇ ನಿತ್ಯಜೀವ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಒಬ್ಬನೇ ಸತ್ಯ ದೇವರಾಗಿರುವ ನಿನ್ನನ್ನೂ ಮತ್ತು ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವದೇ ನಿತ್ಯಜೀವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನು ಮತ್ತು ನೀನು ಕಳುಹಿಸಿದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದೇ ನಿತ್ಯಜೀವ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಏಕೈಕ ಸತ್ಯ ದೇವರಾಗಿರುವ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಕನ್ನಾಚ್ ಮರಾನ್‍ನಸಲ್ಲೆ ಜಿವನ್ ಮಟ್ಲ್ಯಾರ್ ತುಕಾ ಎಕ್ಲ್ಯಾಚ್ ಖರ್‍ಯಾ ದೆವಾಕ್ ವಳಕ್ತಲೆ ಅನಿ ತಿಯಾ ಧಾಡುನ್ ದಿಲ್ಲ್ಯಾ ಜೆಜು ಕ್ರಿಸ್ತಾಕ್ ವಳಕ್ತಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 17:3
52 ತಿಳಿವುಗಳ ಹೋಲಿಕೆ  

ದೇವರ ಪುತ್ರ ಆಗಮಿಸಿ, ಸತ್ಯಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲೆಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ. ನಿಜವಾದ ದೇವರೂ ನಿತ್ಯಜೀವವೂ ಇವರೇ.


ನೀತಿಸ್ವರೂಪಿಯಾದ ಪಿತನೇ, ಲೋಕವು ನಿಮ್ಮನ್ನು ಅರಿತುಕೊಳ್ಳಲಿಲ್ಲ. ಆದರೆ ನಾನು ಅರಿತಿದ್ದೇನೆ. ನನ್ನನ್ನು ಕಳುಹಿಸಿದವರು ನೀವೆಂದು ಇವರು ತಿಳಿದುಕೊಂಡಿದ್ದಾರೆ.


ದೇವರು ತಮ್ಮ ಪುತ್ರನನ್ನು ಈ ಲೋಕಕ್ಕೆ ಕಳುಹಿಸಿದ್ದು ಲೋಕವನ್ನು ತೀರ್ಪಿಗೆ ಗುರಿಮಾಡಲೆಂದಲ್ಲ; ಪುತ್ರನ ಮುಖಾಂತರ ಲೋಕ ಉದ್ಧಾರವಾಗಲೆಂದು.


ನಿರಂತರವಾಗಿ ಹುಡುಕಿ ಅವರನ್ನು ಕಂಡುಕೊಳ್ಳೋಣ; ಸರ್ವೇಶ್ವರಸ್ವಾಮಿಯನ್ನು ಅರಿತುಕೊಳ್ಳೋಣ; ಅವರ ಆಗಮನ ಸೂರ್ಯೋದಯದಂತೆ ನಿಶ್ಚಯ. ಭೂಮಿಯನ್ನು ತಣಿಸುವ ಮುಂಗಾರು ಹಿಂಗಾರು ಮಳೆಗಳಂತೆ ಅವರು ನಮ್ಮ ಬಳಿಗೆ ಬಂದೇ ಬರುವರು.


ನಾವಾದರೋ ದೇವರಿಗೆ ಸೇರಿದವರು. ದೇವರನ್ನು ಅರಿತವನು ನಮಗೆ ಕಿವಿಗೊಡುತ್ತಾನೆ. ದೇವರಿಗೆ ಸೇರದವನು ನಮಗೆ ಕಿವಿಗೊಡುವುದಿಲ್ಲ. ಇದರಿಂದಲೇ ಸತ್ಯವನ್ನು ಸಾರುವ ಆತ್ಮ ಯಾವುದು ಮತ್ತು ಅಸತ್ಯವನ್ನು ಸಾರುವ ಆತ್ಮ ಯಾವುದು ಎಂಬುದು ನಮಗೆ ತಿಳಿಯುತ್ತದೆ.


“ನನ್ನ ಮಗ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಪೂರ್ಣಹೃದಯದಿಂದ ಹಾಗೂ ಮನಸ್ಸಂತೋಷದಿಂದ ಅವರೊಬ್ಬರಿಗೇ ಸೇವೆ ಸಲ್ಲಿಸು. ಸರ್ವೇಶ್ವರನು ಎಲ್ಲಾ ಹೃದಯಗಳನ್ನು ಶೋಧಿಸುವವರೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವರೂ ಆಗಿದ್ದಾರೆ. ನೀನು ಅವರನ್ನು ಆರಿಸಿದರೆ ಅವರು ನಿನಗೆ ಸಿಗುವರು; ಅವರನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವರು.


ನಾನು ಇವರಲ್ಲಿಯೂ ನೀವು ನನ್ನಲ್ಲಿಯೂ ಇದ್ದು, ಇವರ ಐಕ್ಯಮತ್ಯವು ಪೂರ್ಣಸಿದ್ಧಿಗೆ ಬರಲಿ. ಆಗ ನೀವೇ ನನ್ನನ್ನು ಕಳುಹಿಸಿರುವಿರಿ ಎಂದೂ ನನ್ನನ್ನು ಪ್ರೀತಿಸಿದಂತೆಯೇ ಇವರನ್ನು ನೀವು ಪ್ರೀತಿಸಿರುವಿರಿ ಎಂದೂ ಲೋಕಕ್ಕೆ ಮನವರಿಕೆ ಆಗುವುದು.


ನನ್ನ ಮೇಲಿದೆ ಸರ್ವೇಶ್ವರ ಸ್ವಾಮಿಯ ಆತ್ಮ; ನನಗೆ ಅಭಿಷೇಕಮಾಡಿ, ಕಳುಹಿಸಿಹನು ಆತ : ದೀನದಲಿತರಿಗೆ ಶುಭಸಂದೇಶ ಬೋಧಿಸಲೆಂದೆ ಮನನೊಂದವರನು ಸಂತೈಸಿ ಗುಣಪಡಿಸಲೆಂದೆ ಬಂಧಿತರಿಗೆ ಬಿಡುಗಡೆಯನು ಪ್ರಕಟಿಸಲೆಂದೆ; ಸೆರೆಯಾಳುಗಳಿಗೆ ಬಂಧವಿಮುಕ್ತಿಯಾಗುವುದನು,


ಪಿತನೇ, ಇವರೆಲ್ಲಾ ಒಂದಾಗಿರಲಿ. ನೀವು ನನ್ನಲ್ಲಿ, ನಾನು ನಿಮ್ಮಲ್ಲಿ ಇರುವಂತೆಯೇ ಇವರೂ ನಮ್ಮಲ್ಲಿ ಒಂದಾಗಿರಲಿ. ಹೀಗೆ, ನನ್ನನ್ನು ಕಳುಹಿಸಿದವರು ನೀವೇ ಎಂದು ಲೋಕವು ವಿಶ್ವಾಸಿಸುವಂತಾಗಲಿ.


ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ. ಏಕೆಂದರೆ ದೇವರು ಆತನಿಗೆ ಪವಿತ್ರಾತ್ಮ ಅವರನ್ನು ಪೂರ್ಣವಾಗಿ ಕೊಟ್ಟಿರುತ್ತಾರೆ.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.


ನಿಮ್ಮಿಂದ ನಾನು ಕಲಿತುದೆಲ್ಲವನ್ನೂ ಇವರಿಗೆ ತಿಳಿಯಪಡಿಸಿದ್ದೇನೆ. ಅವುಗಳನ್ನು ಇವರು ಅಂಗೀಕರಿಸಿ ನಿಮ್ಮಿಂದಲೇ ನಾನು ಬಂದುದು ನಿಜವೆಂದು ಅರಿತುಕೊಂಡಿದ್ದಾರೆ. ನನ್ನನ್ನು ಕಳುಹಿಸಿದ್ದು ನೀವೇ ಎಂದು ವಿಶ್ವಾಸಿಸಿದ್ದಾರೆ.


ಆದರೆ ಪಿತನು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪೋಷಕರಾದ ಪವಿತ್ರಾತ್ಮ ನಿಮಗೆ ಎಲ್ಲವನ್ನೂ ಬೋಧಿಸಿ ನಾನು ಹೇಳಿರುವುದನ್ನೆಲ್ಲಾ ನಿಮ್ಮ ನೆನಪಿಗೆ ತರುವರು.


ಅದಕ್ಕೆ ಅವರು, “ನಿನ್ನ ಪಿತನೆಲ್ಲಿ?” ಎಂದು ಕೇಳಿದರು. ಯೇಸು, “ನೀವು ನನ್ನನ್ನು ಅರಿತಿಲ್ಲ, ನನ್ನ ಪಿತನನ್ನೂ ಅರಿತಿಲ್ಲ. ನೀವು ನನ್ನನ್ನು ಅರಿತಿದ್ದರೆ, ನನ್ನ ಪಿತನನ್ನೂ ಅರಿಯುತ್ತಿದ್ದಿರಿ,” ಎಂದರು.


ಜಾಗೃತರಾಗಿರಿ, ದುರ್ಮಾರ್ಗವನ್ನು ಬಿಟ್ಟುಬಿಡಿ, ಸನ್ಮತಿಯುಳ್ಳವರಾಗಿರಿ. ದೇವರನ್ನು ಅರಿಯದ ಮೂಢರು ನಿಮ್ಮಲ್ಲಿ ಕೆಲವರು ಇದ್ದಾರೆ. ನಿಮಗೆ ನಾಚಿಕೆ ಆಗಲೆಂದೇ ಇದನ್ನು ಹೇಳುತ್ತಿದ್ದೇನೆ.


ತೃಪ್ತನಾಗುವನಾತ ಕಂಡು ತನ್ನ ಪ್ರಾಣಯಾತನೆಯ ಫಲವನು. ಸಜ್ಜನನಾದ ಆ ನನ್ನ ದಾಸ ತರುವನು ಸನ್ಮಾರ್ಗಕೆ ಬಹುಜನರನು. ತಾನೇ ಹೊತ್ತುಕೊಳ್ಳುವನು ಅವರ ಅಪರಾಧಗಳ ಹೊರೆಯನು.


ನಾವು ನಿಮ್ಮಲ್ಲಿಗೆ ಬಂದಾಗ, ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ವಿಗ್ರಹಗಳನ್ನು ತೊರೆದು, ಸತ್ಯ ಹಾಗೂ ಜೀವಸ್ವರೂಪರಾದ ದೇವರ ಕಡೆಗೆ ಹೇಗೆ ಅಭಿಮುಖರಾದಿರಿ;


ಹೇ ಸರ್ವೇಶ್ವರಾ, ನೀವಾದರೋ ಸತ್ಯದೇವರು, ಜೀವಸ್ವರೂಪ ದೇವರು, ಶಾಶ್ವತ ರಾಜರು ನಿಮ್ಮ ಕೋಪಕ್ಕೆ ನಡುಗುತ್ತದೆ ಭೂಲೋಕ ನಿಮ್ಮ ರೋಷವನ್ನು ತಾಳಲಾರದು ಜನಾಂಗ.


ಬಂದು ಕೇಳಿ ಇದನ್ನು ಹತ್ತಿರದಿಂದ ನಾ ಮಾತಾಡಿಲ್ಲ ಗುಟ್ಟಾಗಿ ಆದಿಯಿಂದ ಪ್ರಸನ್ನನಾಗಿಹೆನು ಭುವಿ ಉಂಟಾದಂದಿನಿಂದ.” (ಕಳುಹಿಸಿದ್ದಾರೆ ದೇವರಾದ ಸರ್ವೇಶ್ವರ ನನ್ನನ್ನೀಗ ತಮ್ಮ ಪವಿತ್ರಾತ್ಮರ ಸಮೇತ).


ನಿನ್ನನು ಅರಸುವವರನು ಹೇ ಪ್ರಭು, ನೀ ಕೈ ಬಿಡುವವನಲ್ಲ I ನಿನ್ನಲ್ಲಿ ಭರವಸೆ ಇಡುವರು ನಿನ್ನ ನಾಮವನರಿತವರೆಲ್ಲ II


ಇಂತಿರುವಲ್ಲಿ, ಪಿತನೇ ಪ್ರತಿಷ್ಠಿಸಿ ಕಳುಹಿಸಿಕೊಟ್ಟವನಾದ ನಾನು, ‘ದೇವರ ಪುತ್ರನಾಗಿದ್ದೇನೆ’ ಎಂದು ಹೇಳಿಕೊಂಡಿದ್ದಕ್ಕೆ, ‘ಇವನು ದೇವದೂಷಣೆ ಮಾಡಿದ್ದಾನೆ’ ಎನ್ನುತ್ತೀರಲ್ಲಾ?


ನಾನಾದರೋ ಆತನನ್ನು ಅರಿತಿದ್ದೇನೆ. ಏಕೆಂದರೆ, ನಾನು ಬಂದುದು ಆತನಿಂದಲೇ. ಆತನೇ ನನ್ನನ್ನು ಕಳುಹಿಸಿದ್ದು,”


ಜೀವಸ್ವರೂಪಿ ಆದ ಪಿತನು ನನ್ನನ್ನು ಕಳುಹಿಸಿಕೊಟ್ಟಿರುವರು. ನಾನು ಅವರಿಂದಲೇ ಜೀವಿಸುತ್ತೇನೆ. ಅಂತೆಯೇ ನನ್ನನ್ನು ಭುಜಿಸುವವನು ನನ್ನಿಂದಲೇ ಜೀವಿಸುತ್ತಾನೆ.


ಇಸ್ರಯೇಲರಿಗೆ ಬಹುಕಾಲದವರೆಗೆ ನಿಜವಾದ ದೇವರು, ಬೋಧಿಸುವ ಯಾಜಕರು ಹಾಗೂ ಧರ್ಮಶಾಸ್ತ್ರ ಇರಲಿಲ್ಲ.


ಕಾರಣ, ದೇವರಿಂದ ಸಿಗುವಂಥ ಗೌರವವನ್ನು ಅರಸದೆ ನಿಮ್ಮ ನಿಮ್ಮಲ್ಲೇ ಪರಸ್ಪರ ಗೌರವವನ್ನು ಬಯಸುತ್ತೀರಿ. ಹೀಗಿರುವಲ್ಲಿ ನಿಮ್ಮಲ್ಲಿ ವಿಶ್ವಾಸಮೂಡಲು ಹೇಗೆ ತಾನೆ ಸಾಧ್ಯ? ಪಿತನ ಮುಂದೆ ನಾನು ನಿಮ್ಮನ್ನು ಆಪಾದಿಸುತ್ತಿರುವೆನೆಂದು ಎಣಿಸಬೇಡಿ.


ನನ್ನ ಪ್ರಾರ್ಥನೆಗೆ ನೀವು ಯಾವಾಗಲೂ ಕಿವಿಗೊಡುತ್ತೀರಿ ಎಂಬುದು ನನಗೆ ಚೆನ್ನಾಗಿ ತಿಳಿದಿದೆ. ಆದರೆ ನನ್ನನ್ನು ಕಳುಹಿಸಿದಾತ ನೀವೇ ಎಂದು ಸುತ್ತಲೂ ನೆರೆದಿರುವವರು ನಂಬುವಂತೆ ನಾನು ಹೀಗೆ ಹೇಳಿದೆನು,” ಎಂದು ನುಡಿದರು.


“ಯಾವನು ನನ್ನ ಹೆಸರಿನಲ್ಲಿ ಈ ಮಗುವನ್ನು ಸ್ವೀಕರಿಸುತ್ತಾನೋ ಅವನು ನನ್ನನ್ನೇ ಸ್ವೀಕರಿಸುತ್ತಾನೆ; ಯಾವನು ನನ್ನನ್ನು ಸ್ವೀಕರಿಸುತ್ತಾನೋ ಅವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸುತ್ತಾನೆ. ನಿಮ್ಮೆಲ್ಲರಲ್ಲಿ ಅತ್ಯಲ್ಪನಾದವನೇ ಅತ್ಯುತ್ತಮನು,” ಎಂದರು.


“ನನ್ನ ಹೆಸರಿನಲ್ಲಿ ಇಂಥ ಮಗುವೊಂದನ್ನು ಯಾರು ಬರಮಾಡಿಕೊಳ್ಳುತ್ತಾನೋ ಅವನು ನನ್ನನ್ನೇ ಬರಮಾಡಿಕೊಳ್ಳುತ್ತಾನೆ; ಯಾರು ನನ್ನನ್ನು ಬರಮಾಡಿಕೊಳ್ಳುತ್ತಾನೋ ಅವನು ನನ್ನನ್ನು ಅಲ್ಲ, ನನ್ನನ್ನು ಕಳುಹಿಸಿದಾತನನ್ನೇ ಬರಮಾಡಿಕೊಳ್ಳುತ್ತಾನೆ,” ಎಂದರು.


ವಿಗ್ರಹಗಳಿಗೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವ ಬಗ್ಗೆ ನನ್ನ ಅಭಿಪ್ರಾಯ ಹೀಗಿದೆ: ವಿಗ್ರಹಗಳಿಗೆ ನಿಜವಾದ ಅಸ್ತಿತ್ವವಿಲ್ಲ. ದೇವರು ಒಬ್ಬರೇ ಹೊರತು ಬೇರೆ ದೇವರಿಲ್ಲ. ಇದು ನಮಗೆ ತಿಳಿದ ವಿಷಯ.


ನನ್ನನ್ನು ಕಂಡುಕೊಳ್ಳುವವನು ಜೀವವನ್ನು ಕಂಡುಕೊಳ್ಳುವನು ಸರ್ವೇಶ್ವರನ ಕೃಪಾಕಟಾಕ್ಷಕ್ಕೆ ಪಾತ್ರನಾಗುವನು.


ನೀವು ನನ್ನನ್ನು ಲೋಕಕ್ಕೆ ಕಳಿಸಿದಂತೆ ನಾನು ಇವರನ್ನು ಲೋಕಕ್ಕೆ ಕಳಿಸಿದ್ದೇನೆ.


ನಿಶ್ಚಯವಾಗಿಯೂ ನನ್ನ ಪ್ರಭು ಯೇಸುಕ್ರಿಸ್ತರನ್ನು ಅರಿತುಕೊಳ್ಳುವುದೇ ಉತ್ಕೃಷ್ಟವಾದುದೆಂದು ಮನದಟ್ಟಾಗಿರುವುದರಿಂದ ಸಮಸ್ತವನ್ನೂ ವ್ಯರ್ಥವೆಂದೇ ಎಣಿಸುತ್ತೇನೆ. ಅವರನ್ನು ಲಭ್ಯವಾಗಿಸಿಕೊಳ್ಳುವ ಸಲುವಾಗಿ ಎಲ್ಲವನ್ನೂ ತೊರೆದುಬಿಟ್ಟಿದ್ದೇನೆ, ಎಲ್ಲವನ್ನೂ ಕಸವೆಂದೇ ಪರಿಗಣಿಸುತ್ತೇನೆ.


ಯೇಸುಸ್ವಾಮಿಯನ್ನು ಅರಿಯಬೇಕು; ಅವರ ಪುನರುತ್ಥಾನದ ಪ್ರಭಾವವನ್ನು ಅನುಭವಿಸಬೇಕು; ಅವರ ಯಾತನೆಗಳಲ್ಲಿ ಪಾಲುಗೊಳ್ಳಬೇಕು; ಅವರ ಮರಣದಲ್ಲಿ ಅವರಂತೆಯೇ ಆಗಬೇಕು - ಇದೇ ನನ್ನ ಹೆಬ್ಬಯಕೆ.


ಹೀಗಿರುವಲ್ಲಿ ದೇವಜನರಾದ ಸಹೋದರರೇ, ಸ್ವರ್ಗಸೌಭಾಗ್ಯದಲ್ಲಿ ಸಹಭಾಗಿಗಳಾಗಲು ಕರೆ ಹೊಂದಿದವರೇ, ದೇವರು ಕಳುಹಿಸಿದಂಥವರು ಹಾಗೂ ನಾವು ವಿಶ್ವಾಸಿಸುವ ಧರ್ಮದ ಪ್ರಧಾನಯಾಜಕರು ಆದ ಯೇಸುವನ್ನು ಭಕ್ತಿಯಿಂದ ಧ್ಯಾನಿಸಿರಿ.


ದೇವರ ಮತ್ತು ಪ್ರಭು ಯೇಸುಕ್ರಿಸ್ತರ ಬಗ್ಗೆ ನೀವು ಪಡೆಯುತ್ತಿರುವ ಜ್ಞಾನಾರ್ಜನೆಯು ನಿಮಗೆ ಕೃಪಾಶೀರ್ವಾದವನ್ನೂ ಶಾಂತಿಸಮಾಧಾನವನ್ನೂ ಅಧಿಕಾಧಿಕವಾಗಿ ತರಲಿ!


ತಮ್ಮ ಸ್ವಂತ ಮಹಿಮೆಯಲ್ಲೂ ಸೌಭಾಗ್ಯದಲ್ಲೂ ಭಾಗಿಗಳಾಗಲು ದೇವರು ನಮ್ಮನ್ನು ಕರೆದಿದ್ದಾರೆ. ಅವರನ್ನು ಅರಿತುಕೊಳ್ಳುವುದರ ಮೂಲಕ ನಾವು ಭಕ್ತಿಯುತ ಜೀವನವನ್ನು ನಡೆಸಲು ಬೇಕಾದುದೆಲ್ಲವನ್ನೂ ಆ ಯೇಸುವಿನ ದಿವ್ಯಶಕ್ತಿಯಿಂದ ಪಡೆದಿದ್ದೇವೆ.


ಈ ಗುಣಗಳು ನಿಮ್ಮಲ್ಲಿ ಬೆಳೆದು ಸಮೃದ್ಧವಾಗಿದ್ದರೆ, ನಮ್ಮ ಪ್ರಭು ಯೇಸುಕ್ರಿಸ್ತರನ್ನು ಅರಿತು ಬಾಳುವುದರಲ್ಲಿ ಇವು ನಿಮ್ಮನ್ನು ಚೈತನ್ಯಪೂರ್ಣರನ್ನಾಗಿಯೂ ಫಲಪ್ರದರನ್ನಾಗಿಯೂ ಮಾಡುತ್ತವೆ.


ಆ ಜೀವ ಪ್ರತ್ಯಕ್ಷವಾಯಿತು. ಅದನ್ನು ನಾವು ನೋಡಿದ್ದೇವೆ. ಆ ಬಗ್ಗೆ ಸಾಕ್ಷಿ ಹೇಳುತ್ತೇವೆ. ಪಿತನ ಬಳಿಯಿದ್ದು ನಮಗೆ ಪ್ರತ್ಯಕ್ಷವಾದಂಥ ನಿತ್ಯಜೀವವನ್ನು ನಿಮಗೆ ಸಾರುತ್ತೇವೆ.


ಪಿತನೊಡನೆಯೂ ಅವರ ಪುತ್ರ ಕ್ರಿಸ್ತಯೇಸುವಿನೊಡನೆಯೂ ನಮಗಿರುವಂಥ ಅನ್ಯೋನ್ಯತೆಯಲ್ಲಿ ನೀವು ಸಹ ಭಾಗಿಗಳಾಗುವಂತೆ ನಾವು ಕಂಡುಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ.


ಪುತ್ರನನ್ನು ತಿರಸ್ಕರಿಸುವವನು ಪಿತನನ್ನೂ ತಿರಸ್ಕರಿಸುತ್ತಾನೆ. ಪುತ್ರನನ್ನು ಅಂಗೀಕರಿಸುವವನು ಪಿತನನ್ನೂ ಅಂಗೀಕರಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು