Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 17:8 - ಕನ್ನಡ ಸತ್ಯವೇದವು C.L. Bible (BSI)

8 ನಿಮ್ಮಿಂದ ನಾನು ಕಲಿತುದೆಲ್ಲವನ್ನೂ ಇವರಿಗೆ ತಿಳಿಯಪಡಿಸಿದ್ದೇನೆ. ಅವುಗಳನ್ನು ಇವರು ಅಂಗೀಕರಿಸಿ ನಿಮ್ಮಿಂದಲೇ ನಾನು ಬಂದುದು ನಿಜವೆಂದು ಅರಿತುಕೊಂಡಿದ್ದಾರೆ. ನನ್ನನ್ನು ಕಳುಹಿಸಿದ್ದು ನೀವೇ ಎಂದು ವಿಶ್ವಾಸಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹೇಗೆಂದರೆ, ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಆ ಮಾತುಗಳನ್ನು ಸ್ವೀಕರಿಸಿದ್ದಾರೆ ಮತ್ತು ನಾನು ನಿನ್ನ ಬಳಿಯಿಂದ ಬಂದವನೆಂದು ಇವರು ನಿಜವಾಗಿ ತಿಳಿದು, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ನಂಬಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹೇಗಂದರೆ ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ; ಇವರು ಆ ಮಾತುಗಳನ್ನು ಕೈಕೊಂಡು ನನ್ನನ್ನು ನಿನ್ನ ಬಳಿಯಿಂದ ಹೊರಟುಬಂದವನೆಂದು ನಿಜವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿಕೊಟ್ಟಿರುವದಾಗಿ ನಂಬಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಆ ಮಾತುಗಳನ್ನು ಸ್ವೀಕರಿಸಿಕೊಂಡಿದ್ದಾರೆ. ನಾನು ನಿಜವಾಗಿಯೂ ನಿನ್ನ ಬಳಿಯಿಂದ ಬಂದಿರುವುದಾಗಿಯೂ ನೀನೇ ನನ್ನನ್ನು ಕಳುಹಿಸಿರುವುದಾಗಿಯೂ ಇವರು ನಂಬಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಏಕೆಂದರೆ ನೀವು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ, ಇವರು ಅಂಗೀಕರಿಸಿದ್ದಾರೆ ಮತ್ತು ನಾನು ನಿಮ್ಮ ಬಳಿಯಿಂದ ಬಂದವನೆಂದು ಇವರು ನಿಶ್ಚಯವಾಗಿ ತಿಳಿದು, ನೀವೇ ನನ್ನನ್ನು ಕಳುಹಿಸಿದ್ದೀರಿ, ಎಂದು ನಂಬಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತಿಯಾ ಮಾಜ್ಯಾ ತಾಬೆತ್ ದಿಲ್ಲಿ ಖಬರ್ ಮಿಯಾ ತೆಂಕಾ ದಿಲಾ. ಅನಿ ತೆನಿ ತಿ ಸ್ವಿಕಾರ್ ಕರ್ಲ್ಯಾನಿ, ಅನಿ ಮಿಯಾ ತುಜೆಕ್ನಾಚ್ ಯೆಲಾ ಮನುನ್ ತೆಂಕಾ ಗೊತ್ತ್ ಹಾಯ್, ಅನಿ ತಿಯಾಚ್ ಮಾಕಾ ಧಾಡುನ್ ದಿಲೆ ಮನುನ್ ತೆನಿ ವಿಶ್ವಾಸ್ ಕರ್‍ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 17:8
31 ತಿಳಿವುಗಳ ಹೋಲಿಕೆ  

ನಿಮ್ಮ ಸಂದೇಶವನ್ನು ಇವರಿಗೆ ತಿಳಿಸಿದ್ದೇನೆ. ನಾನು ಲೋಕಕ್ಕೆ ಸೇರಿದವನಲ್ಲ. ಅಂತೆಯೇ, ಇವರೂ ಲೋಕಕ್ಕೆ ಸೇರಿದವರಲ್ಲ. ಈ ಕಾರಣ, ಲೋಕಕ್ಕೆ ಇವರ ಮೇಲೆ ದ್ವೇಷವಿದೆ.


ನಾನಿನ್ನು ನಿಮ್ಮನ್ನು ದಾಸರೆಂದು ಕರೆಯುವುದಿಲ್ಲ. ಧಣಿಯ ಕೆಲಸಕಾರ್ಯಗಳು ದಾಸನಿಗೆ ತಿಳಿಯವು. ನಾನಾದರೋ ಪಿತನಿಂದ ಕೇಳಿಸಿಕೊಂಡದ್ದನ್ನೆಲ್ಲಾ ನಿಮಗೆ ತಿಳಿಸಿದ್ದೇನೆ. ಈ ಕಾರಣ ನಿಮ್ಮನ್ನು ಗೆಳೆಯರೆಂದು ಕರೆದಿದ್ದೇನೆ.


ನೀವು ಎಲ್ಲವನ್ನೂ ಬಲ್ಲವರು. ಪ್ರಶ್ನೆಗಳಿಗಾಗಿ ನೀವು ಕಾಯಬೇಕಿಲ್ಲ ಎಂದು ನಮಗೀಗ ತಿಳಿಯಿತು. ಆದುದರಿಂದ ನೀವು ದೇವರಿಂದ ಬಂದವರೆಂದು ನಾವು ವಿಶ್ವಾಸಿಸುತ್ತೇವೆ,” ಎಂದರು.


ಕಾರಣ, ಪಿತನೇ ನಿಮ್ಮನ್ನು ಪ್ರೀತಿಸುತ್ತಾರೆ. ನೀವು ನನ್ನನ್ನು ಪ್ರೀತಿಸಿ ನಾನು ಅವರಿಂದ ಬಂದವನೆಂದು ವಿಶ್ವಾಸಿಸಿದ್ದರಿಂದ ಪಿತನಿಗೆ ನಿಮ್ಮ ಮೇಲೆ ಅಕ್ಕರೆಯಿದೆ.


ಇನ್ನೊಂದು ಕಾರಣಕ್ಕಾಗಿಯೂ ನಾವು ಸತತವೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ನೀವು ದೇವರ ಸಂದೇಶವನ್ನು ನಮ್ಮಿಂದ ಕೇಳಿದಾಗ, ಅದನ್ನು ಮನುಷ್ಯರ ಮಾತುಗಳೆಂದು ಪರಿಗಣಿಸದೆ, ದೇವರ ವಾಕ್ಯವೆಂದೇ ಅರಿತು ಅಂಗೀಕರಿಸಿದಿರಿ. ವಿಶ್ವಾಸಿಗಳಾದ ನಿಮ್ಮಲ್ಲಿ ಚೈತನ್ಯಪೂರ್ಣವಾಗಿರುವ ಈ ವಾಕ್ಯವು, ನಿಜವಾಗಿಯೂ ದೇವರ ಸಂದೇಶವೇ ಸರಿ.


ಪಿತನು ತಮ್ಮ ಪುತ್ರನನ್ನು ಲೋಕೋದ್ಧಾರಕನನ್ನಾಗಿ ಕಳುಹಿಸಿಕೊಟ್ಟದ್ದನ್ನು ನಾವು ಕಣ್ಣಾರೆ ಕಂಡಿದ್ದೇವೆ. ಇದರ ವಿಷಯವಾಗಿ ಸಾಕ್ಷಿ ಹೇಳುತ್ತೇವೆ.


ಪಿತನೇ, ಇವರೆಲ್ಲಾ ಒಂದಾಗಿರಲಿ. ನೀವು ನನ್ನಲ್ಲಿ, ನಾನು ನಿಮ್ಮಲ್ಲಿ ಇರುವಂತೆಯೇ ಇವರೂ ನಮ್ಮಲ್ಲಿ ಒಂದಾಗಿರಲಿ. ಹೀಗೆ, ನನ್ನನ್ನು ಕಳುಹಿಸಿದವರು ನೀವೇ ಎಂದು ಲೋಕವು ವಿಶ್ವಾಸಿಸುವಂತಾಗಲಿ.


ಯೇಸು, ಅವರಿಗೆ, “ದೇವರೇ ನಿಮ್ಮ ತಂದೆಯಾಗಿದ್ದರೆ, ನನ್ನ ಮೇಲೆ ನಿಮಗೆ ಪ್ರೀತಿಯಿರುತ್ತಿತ್ತು. ಕಾರಣ, ನಾನು ದೇವರಿಂದಲೇ ಹೊರಟು ಇಲ್ಲಿಗೆ ಬಂದವನು. ನನ್ನಷ್ಟಕ್ಕೆ ನಾನೇ ಬರಲಿಲ್ಲ. ನನ್ನನ್ನು ಕಳುಹಿಸಿದ್ದು ದೇವರೇ.


ನಾನು ಪಿತನಲ್ಲಿ ಇದ್ದೇನೆ, ಪಿತನು ನನ್ನಲ್ಲಿ ಇದ್ದಾರೆ. ಇದನ್ನು ನೀನು ವಿಶ್ವಾಸಿಸುವುದಿಲ್ಲವೇ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುತ್ತಿಲ್ಲ. ಪಿತನೇ ನನ್ನಲ್ಲಿದ್ದುಕೊಂಡು ತಮ್ಮ ಕಾರ್ಯವನ್ನು ಸಾಧಿಸುತ್ತಾರೆ.


ಅದು ಯಾವುದೆಂದರೆ ನಾನು ಆಡಿದ ಮಾತೇ. ಅಂತಿಮ ದಿನದಂದು ಅದೇ ಅವನಿಗೆ ತೀರ್ಪುಕೊಡುವುದು. ಏಕೆಂದರೆ, ನನ್ನಷ್ಟಕ್ಕೆ ನಾನೇ ಇದನ್ನೆಲ್ಲಾ ಮಾತನಾಡುತ್ತಿಲ್ಲ. ನನ್ನನ್ನು ಕಳುಹಿಸಿದ ಪಿತನೇ, ನಾನು ಏನು ಹೇಳಬೇಕು, ಯಾವ ಮಾತನ್ನು ಆಡಬೇಕು ಎಂದು ನನಗೆ ಆಜ್ಞೆಮಾಡಿದ್ದಾರೆ.


ಅದಕ್ಕೆ ಸಿಮೋನ ಪೇತ್ರನು, “ಪ್ರಭುವೇ, ನಾವು ಹೋಗುವುದಾದರೂ ಯಾರ ಬಳಿಗೆ? ನಿತ್ಯಜೀವವನ್ನು ಈಯುವ ನುಡಿ ಇರುವುದು ತಮ್ಮಲ್ಲೇ.


ವಿವೇಕ ಹಾಗೂ ನ್ಯಾಯನೀತಿಯ ಮಾರ್ಗದಲ್ಲಿ ಶಿಕ್ಷಿತರಾಗುವುದಕ್ಕೆ ಮತ್ತು


ಕಡೆಯದಾಗಿ ಸಹೋದರರೇ, ನೀವು ಹೇಗೆ ಬಾಳಬೇಕು. ದೇವರು ಮೆಚ್ಚುವಂತೆ ಹೇಗೆ ನಡೆದುಕೊಳ್ಳಬೇಕು, ಎಂಬುದನ್ನು ನಮ್ಮಿಂದ ಕಲಿತುಕೊಂಡಿರಿ. ಅಂತೆಯೇ ಜೀವಿಸುತ್ತಿದ್ದೀರಿ. ನಿಮ್ಮ ನಡತೆ ಇನ್ನೂ ಉತ್ತಮಗೊಳ್ಳಬೇಕೆಂದು ಪ್ರಭು ಯೇಸುವಿನ ಹೆಸರಿನಲ್ಲಿ ನಾವು ನಿಮ್ಮನ್ನು ಕೇಳಿಕೊಳ್ಳುತ್ತೇವೆ ಹಾಗೂ ಪ್ರಬೋಧಿಸುತ್ತೇವೆ.


ಪ್ರಿಯ ಸಹೋದರರೇ, ನಾನು ನಿಮಗೆ ಬೋಧಿಸಿದ ಶುಭಸಂದೇಶವನ್ನು ನೆನಪಿಗೆ ತಂದುಕೊಳ್ಳಿರಿ. ನೀವು ಅದನ್ನು ಸ್ವೀಕರಿಸಿದ್ದೀರಿ. ಅದರಲ್ಲಿ ನೆಲೆಯಾಗಿ ನಿಂತಿದ್ದೀರಿ.


ನಾನು ಇವರಲ್ಲಿಯೂ ನೀವು ನನ್ನಲ್ಲಿಯೂ ಇದ್ದು, ಇವರ ಐಕ್ಯಮತ್ಯವು ಪೂರ್ಣಸಿದ್ಧಿಗೆ ಬರಲಿ. ಆಗ ನೀವೇ ನನ್ನನ್ನು ಕಳುಹಿಸಿರುವಿರಿ ಎಂದೂ ನನ್ನನ್ನು ಪ್ರೀತಿಸಿದಂತೆಯೇ ಇವರನ್ನು ನೀವು ಪ್ರೀತಿಸಿರುವಿರಿ ಎಂದೂ ಲೋಕಕ್ಕೆ ಮನವರಿಕೆ ಆಗುವುದು.


ನೀವು ನನ್ನನ್ನು ಲೋಕಕ್ಕೆ ಕಳಿಸಿದಂತೆ ನಾನು ಇವರನ್ನು ಲೋಕಕ್ಕೆ ಕಳಿಸಿದ್ದೇನೆ.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸ್ವರ್ಗಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶ ಲಭಿಸಿರುವುದು ನಿಮಗೆ, ಅವರಿಗಲ್ಲ.


ಅಂಗೀಕರಿಸಿರಿ ಬೆಳ್ಳಿಗಿಂತ ಶ್ರೇಷ್ಠವಾದ ಬೋಧನೆಯನ್ನು ಅಪರಂಜಿಗಿಂತ ಅಪೂರ್ವವಾದ ಉಪದೇಶವನ್ನು.


ನಿಮಗೆ ಮಾಡಿದ ಉಪದೇಶವನ್ನು ನಾನು ಪ್ರಭುವಿನಿಂದಲೇ ಪಡೆದೆನು. ಅದೇನೆಂದರೆ: ಪ್ರಭುಯೇಸು, ತಮ್ಮನ್ನು ಹಿಡಿದುಕೊಡಲಾದ ಆ ರಾತ್ರಿ, ರೊಟ್ಟಿಯನ್ನು ತೆಗೆದುಕೊಂಡು


ಆತನ ಮಾತನ್ನು ಅಂಗೀಕರಿಸುವವನು ದೇವರು ಸತ್ಯಸ್ವರೂಪಿ ಎಂದು ಸಾದೃಶ್ಯಪಡಿಸುತ್ತಾನೆ.


ದೇವರು ತಮ್ಮ ಪುತ್ರನನ್ನು ಈ ಲೋಕಕ್ಕೆ ಕಳುಹಿಸಿದ್ದು ಲೋಕವನ್ನು ತೀರ್ಪಿಗೆ ಗುರಿಮಾಡಲೆಂದಲ್ಲ; ಪುತ್ರನ ಮುಖಾಂತರ ಲೋಕ ಉದ್ಧಾರವಾಗಲೆಂದು.


ನನ್ನ ಎಚ್ಚರಿಕೆಯ ಮಾತಿನತ್ತ ಗಮನಕೊಡಿ; ನನ್ನ ಚೈತನ್ಯವನ್ನು ನಿಮ್ಮ ಮೇಲೆ ಸುರಿಸಿ, ನನ್ನ ನುಡಿಯನ್ನು ನಿಮಗೆ ತಿಳಿಯಪಡಿಸುವೆನು.


ಮಗನೇ, ನನ್ನ ಮಾತುಗಳನ್ನು ಆಲಿಸಿ ಕೇಳು; ಕೇಳಿದೆಯಾದರೆ ಹೆಚ್ಚುವುವು ನಿನ್ನ ಜೀವನದ ವರ್ಷಗಳು.


ಮಗನೇ, ನನ್ನ ಮಾತುಗಳನ್ನು ಅಂಗೀಕರಿಸು; ನಿಧಿಯಂತೆ ನನ್ನ ವಿಧಿಗಳನ್ನು ಕಾದಿರಿಸು.


ಇವರ ಸ್ವದೇಶದವರಲ್ಲಿ ನಿನ್ನಂಥ ಪ್ರವಾದಿಯನ್ನು ಅವರಿಗೆ ಏರ್ಪಡಿಸುವೆನು; ಅವನ ಬಾಯಿಂದ ನನ್ನ ಮಾತುಗಳನ್ನು ನುಡಿಸುವೆನು; ನಾನು ಅವನಿಗೆ ಆಜ್ಞಾಪಿಸಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸುವನು.


ಏಕೈಕ ನಿಜದೇವರಾದ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅರಿತುಕೊಳ್ಳುವುದೇ ನಿತ್ಯಜೀವ.


ದೇವರು ಯೇಸುಕ್ರಿಸ್ತರಿಗಿತ್ತ ಪ್ರಕಟನೆ ಇದು. ಅತಿ ಶೀಘ್ರದಲ್ಲಿಯೇ ಸಂಭವಿಸಲಿರುವ ಘಟನೆಗಳನ್ನು ತಮ್ಮ ದಾಸರಿಗೆ ತಿಳಿಯಪಡಿಸುವುದಕ್ಕಾಗಿ ಕ್ರಿಸ್ತಯೇಸುವಿಗೆ ಈ ಪ್ರಕಟನೆಯನ್ನು ದೇವರು ದಯಪಾಲಿಸಿದರು. ಕ್ರಿಸ್ತಯೇಸು ತಮ್ಮ ದೂತನನ್ನು ಕಳುಹಿಸಿ ತಮ್ಮ ದಾಸನಾದ ಯೊವಾನ್ನನಿಗೆ ಇವುಗಳನ್ನು ಪ್ರಕಟಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು