Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 17:9 - ಕನ್ನಡ ಸತ್ಯವೇದವು C.L. Bible (BSI)

9 “ನಾನು ಪ್ರಾರ್ಥಿಸುವುದು ಇವರಿಗಾಗಿ, ಲೋಕಕ್ಕಾಗಿ ಅಲ್ಲ. ನೀವೇ ನನಗೆ ಕೊಟ್ಟವರಿಗಾಗಿ ಪ್ರಾರ್ಥಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನು ಇವರಿಗಾಗಿಯೇ ಬೇಡಿಕೊಳ್ಳುತ್ತೇನೆ. ಲೋಕಕ್ಕೋಸ್ಕರ ಬೇಡಿಕೊಳ್ಳದೆ, ನೀನು ನನಗೆ ಕೊಟ್ಟವರಿಗಾಗಿಯೇ ಬೇಡಿಕೊಳ್ಳುತ್ತೇನೆ, ಏಕೆಂದರೆ, ಇವರು ನಿನ್ನವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಾನು ಇವರಿಗೋಸ್ಕರ ಕೇಳಿಕೊಳ್ಳುತ್ತೇನೆ; ಲೋಕಕ್ಕೋಸ್ಕರ ಕೇಳಿಕೊಳ್ಳದೆ ನೀನು ನನಗೆ ಕೊಟ್ಟವರಿಗೋಸ್ಕರವೇ ಕೇಳಿಕೊಳ್ಳುತ್ತೇನೆ; ನಿನ್ನವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಈಗ ನಾನು ಇವರಿಗಾಗಿ ಪ್ರಾರ್ಥಿಸುವೆನು. ಈ ಲೋಕದಲ್ಲಿರುವ ಜನರಿಗೋಸ್ಕರ ನಾನು ಪ್ರಾರ್ಥಿಸುತ್ತಿಲ್ಲ. ಆದರೆ ನೀನು ನನಗೆ ಕೊಟ್ಟ ಇವರಿಗಾಗಿ ಪ್ರಾರ್ಥಿಸುತ್ತಿದ್ದೇನೆ, ಏಕೆಂದರೆ ಇವರು ನಿನ್ನವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಾನು ಇವರಿಗಾಗಿಯೇ ಬೇಡಿಕೊಳ್ಳುತ್ತೇನೆ. ನೀವು ನನಗೆ ಕೊಟ್ಟವರಿಗಾಗಿಯೇ ಹೊರತು ನಾನು ಲೋಕಕ್ಕಾಗಿ ಬೇಡಿಕೊಳ್ಳುವುದಿಲ್ಲ. ಏಕೆಂದರೆ ಇವರು ನಿಮ್ಮವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಮಿಯಾ ತ್ಯೆಂಚ್ಯಾಸಾಟ್ನಿ ಮಾಗ್ನಿ ಕರ್‍ತಾ ಮಿಯಾ ಹ್ಯಾ ಜಗಾಸಾಟ್ನಿ ಮಾಗ್ನಿ ಕರಿನಾ, ತಿಯಾ ಮಾಕಾ ಮನುನ್ ಕೊನಾಕೊನಾಕ್ ದಿಲೆ ತೆಂಚೆಸಾಟ್ನಿ ಮಾಗ್ನಿ ಕರ್‍ತಾ. ತೆನಿ ತುಕಾ ಸಮಂದ್ ಪಡಲ್ಲಿ ಮಾನ್ಸಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 17:9
17 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸು ಪ್ರವೇಶಿಸಿದ್ದು ನೈಜದೇವಾಲಯದ ಛಾಯೆಯಂತಿರುವ ಮಾನವನಿರ್ಮಿತ ಗರ್ಭಗುಡಿಯನ್ನಲ್ಲ, ನಮ್ಮ ಪರವಾಗಿ ದೇವರ ಸಮ್ಮುಖದಲ್ಲಿ ಉಪಸ್ಥಿತರಾಗಲು ಸಾಕ್ಷಾತ್ ಸ್ವರ್ಗವನ್ನೇ ಅವರು ಪ್ರವೇಶಿಸಿದರು.


ನರಮಾನವರೆಲ್ಲರ ಮೇಲೆ ನೀವು ಆತನಿಗೆ ಅಧಿಕಾರವನ್ನು ಕೊಟ್ಟಿರುವಿರಿ. ಇದರಿಂದಾಗಿ ನೀವು ಆತನಿಗೆ ಒಪ್ಪಿಸಿರುವ ಎಲ್ಲರಿಗೆ ನಿತ್ಯಜೀವವನ್ನು ಆತನು ನೀಡುವನು.


“ನೀವು ಲೋಕದಿಂದ ಆರಿಸಿ ನನಗೆ ಕೊಟ್ಟ ಜನರಿಗೆ ನಿಮ್ಮ ನಾಮವನ್ನು ತಿಳಿಯಪಡಿಸಿದ್ದೇನೆ. ಇವರು ನಿಮ್ಮವರಾಗಿದ್ದರು. ಆದರೂ ಇವರನ್ನು ನನಗೆ ಕೊಟ್ಟಿರಿ. ನಿಮ್ಮ ಮಾತಿಗೆ ವಿಧೇಯರಾಗಿ ಇವರು ನಡೆದಿದ್ದಾರೆ.


“ಇವರಿಗಾಗಿ ಮಾತ್ರವಲ್ಲ, ಇವರ ಮಾತನ್ನು ಕೇಳಿ ನನ್ನಲ್ಲಿ ವಿಶ್ವಾಸವಿಡುವವರಿಗಾಗಿಯೂ ಪ್ರಾರ್ಥಿಸುತ್ತೇನೆ.


ಆದರೆ, ನಾನು ನಿನ್ನ ವಿಶ್ವಾಸವು ಕುಂದದಂತೆ ನಿನಗಾಗಿ ಪ್ರಾರ್ಥನೆ ಮಾಡಿದ್ದೇನೆ. ನೀನು ಪರಿವರ್ತನೆ ಹೊಂದಿದ ನಂತರ ನಿನ್ನ ಸಹೋದರರನ್ನು ದೃಢಪಡಿಸು,” ಎಂದರು.


ಇಡೀ ಲೋಕವು ಕೇಡಿಗನ ವಶದಲ್ಲಿ ಇದ್ದರು ಸಹ ನಾವು ದೇವರಿಗೆ ಸೇರಿದವರೆಂಬುದು ನಮಗೆ ತಿಳಿದಿದೆ.


ನಾನೂ ಪಿತನನ್ನು ಕೇಳಿಕೊಳ್ಳುವೆನು; ಅವರು ನಿಮಗೆ ಬೇರೊಬ್ಬ ಪೋಷಕರನ್ನು ಕೊಡುವರು. ಇವರು ನಿಮ್ಮೊಡನೆ ಯಾವಾಗಲೂ ಇರುವರು.


ಯಾರ ಯಾರ ಹೆಸರು ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ ಅಂಥವರನ್ನು ಅಗ್ನಿಸರೋವರಕ್ಕೆ ಎಸೆಯಲಾಯಿತು.


ಭೂನಿವಾಸಿಗಳೆಲ್ಲರೂ ಅಂದರೆ, ಜಗತ್ತು ಸೃಷ್ಟಿ ಆಗುವ ಮೊದಲೇ ಯಾರಯಾರ ಹೆಸರುಗಳು ವಧೆಯಾದ ಯಜ್ಞದ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ, ಅಂಥವರೆಲ್ಲರೂ ಆ ಮೃಗವನ್ನು ಆರಾಧಿಸುವರು.


ಆದಕಾರಣ, ತಮ್ಮ ಮುಖಾಂತರ ದೇವರನ್ನು ಅರಸುವವರನ್ನು ಯೇಸು ಸಂಪೂರ್ಣವಾಗಿ ಉದ್ಧಾರಮಾಡಬಲ್ಲರು. ಅಂಥವರ ಪರವಾಗಿ ವಿಜ್ಞಾಪಿಸಲೆಂದೇ ಯೇಸು ಸದಾ ಬದುಕಿರುವರು.


ಸಮಸ್ತ ಜಗತ್ತನ್ನೂ ವಂಚಿಸುತ್ತಿದ್ದ ಆ ಮಹಾಘಟಸರ್ಪವನ್ನು ಭೂಮಿಗೆ ತಳ್ಳಲಾಯಿತು. ಈ ಪುರಾತನ ಸರ್ಪಕ್ಕೆ ‘ಪಿಶಾಚಿ’ ಎಂತಲೂ ‘ಸೈತಾನ’ ಎಂತಲೂ ಹೆಸರು. ಅದರ ದೂತರನ್ನು ಅದರೊಡನೆ ತಳ್ಳಲಾಯಿತು.


ಇದನ್ನು ನೋಡಿದೊಡನೆಯೇ, ಹಂದಿ ಮೇಯಿಸುತ್ತಿದ್ದವರು ಓಡಿಹೋಗಿ ನಡೆದ ಈ ಘಟನೆಯನ್ನು ಪಟ್ಟಣದಲ್ಲೂ ಹಳ್ಳಿಯಲ್ಲೂ ತಿಳಿಸಿದರು.


ಆಗ ಯೇಸು, “ಪಿತನೇ, ಇವರನ್ನು ಕ್ಷಮಿಸಿ; ತಾವೇನು ಮಾಡುತ್ತಿರುವರೆಂದು ಇವರು ಅರಿಯರು,” ಎಂದರು. ಸೈನಿಕರಾದರೋ ಯೇಸುವಿನ ಬಟ್ಟೆಗಳನ್ನು ಚೀಟುಹಾಕಿ ಹಂಚಿಕೊಂಡರು.


ಪಿತನು ನನಗೆಂದು ಕೊಟ್ಟಿರುವ ಪ್ರತಿಯೊಬ್ಬನೂ ನನ್ನಲ್ಲಿಗೆ ಬರುತ್ತಾನೆ. ನನ್ನಲ್ಲಿಗೆ ಬರುವವನನ್ನು ನಾನೆಂದಿಗೂ ತಳ್ಳಿಬಿಡುವುದಿಲ್ಲ.


ಅವರ ಚಿತ್ತವೇನೆಂದರೆ: ಅವರು ನನಗೆ ಕೊಟ್ಟವರಲ್ಲಿ ಒಬ್ಬನನ್ನೂ ಕಳೆದುಕೊಳ್ಳದೆ ಅಂತಿಮ ದಿನದಂದು ಅವರೆಲ್ಲರನ್ನೂ ನಾನು ಜೀವಕ್ಕೆ ಎಬ್ಬಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು