Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 18:12 - ಕನ್ನಡ ಸತ್ಯವೇದವು C.L. Bible (BSI)

12 ಅನಂತರ ಸೈನಿಕರು, ಸಹಸ್ರಾಧಿಪತಿ ಹಾಗು ಯೆಹೂದ್ಯರು ಕಳುಹಿಸಿದ್ದ ಕಾವಲಾಳುಗಳು ಯೇಸುವನ್ನು ಹಿಡಿದು ಕಟ್ಟಿ ಮೊದಲು ಅನ್ನನ ಬಳಿಗೆ ಕೊಂಡೊಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಮೇಲೆ ಆ ಸೈನಿಕರ ಗುಂಪು ಮತ್ತು ಸಹಸ್ರಾಧಿಪತಿಯೂ, ಯೆಹೂದ್ಯರ ಓಲೇಕಾರರೂ ಯೇಸುವನ್ನು ಹಿಡಿದು ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆಮೇಲೆ ಆ ಸಿಪಾಯಿಗಳೂ ಸಹಸ್ರಾಧಿಪತಿಯೂ ಯೆಹೂದ್ಯರ ಓಲೇಕಾರರೂ ಯೇಸುವನ್ನು ಹಿಡುಕೊಂಡು ಕಟ್ಟಿ ಮೊದಲು ಅನ್ನನ ಬಳಿಗೆ ಕರಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಬಳಿಕ ಆ ಸೈನಿಕರು, ಅವರ ಸೇನಾಧಿಪತಿ ಹಾಗೂ ಯೆಹೂದ್ಯ ಕಾವಲುಗಾರರು ಯೇಸುವನ್ನು ಹಿಡಿದು ಕಟ್ಟಿ, ಅನ್ನನ ಬಳಿಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ತರುವಾಯ ಸೈನಿಕರೂ ಸೈನ್ಯಾಧಿಕಾರಿಯೂ ಯೆಹೂದ್ಯರ ಕಾವಲಾಳುಗಳೂ ಯೇಸುವನ್ನು ಹಿಡಿದು ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತನ್ನಾ ಅದಿಕಾರ್‍ಯಾನ್ ಹುಕುಮ್ ದಿಲ್ಲ್ಯಾ ತನ್ನಾ ರೊಮಾಚ್ಯಾ ಸೈನಿಕಾನಿ ಅನಿ ಜುದೆವಾನಿ ಧಾಡುನ್ ದಿಲ್ಲ್ಯಾ ರಾಕ್ವಾಲ್ಯಾನಿ. ಜೆಜುಕ್ ಧರುನ್ ಘೆಟ್ಲ್ಯಾನಿ, ಅನಿ ಭಾಂದ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 18:12
17 ತಿಳಿವುಗಳ ಹೋಲಿಕೆ  

ಆದುದರಿಂದ ಯೂದನು ಸೈನಿಕರ ಒಂದು ತಂಡವನ್ನೂ ಮುಖ್ಯಯಾಜಕರು ಮತ್ತು ಫರಿಸಾಯರು ಕಳುಹಿಸಿದ ಕಾವಲಾಳುಗಳನ್ನೂ ಕರೆದುಕೊಂಡು ದೀವಟಿಗೆ, ಪಂಜು ಮತ್ತು ಆಯುಧಗಳ ಸಮೇತ ಅಲ್ಲಿಗೆ ಬಂದನು.


ಬಳಿಕ ಯೇಸುಸ್ವಾಮಿಯನ್ನು ಬಂಧಿಸಿದ್ದವರು ಅವರನ್ನು ಪ್ರಧಾನಯಾಜಕ ಕಾಯಫನ ಬಳಿಗೆ ಕರೆದೊಯ್ದರು.


ಪೌಲನನ್ನು ಕೋಟೆಯೊಳಕ್ಕೆ ಕೊಂಡು ಒಯ್ಯುತ್ತಿದ್ದಾಗ, ಅವನು ಸೈನ್ಯಾಧಿಪತಿಗೆ, “ನಾನು ನಿಮ್ಮೊಡನೆ ಸ್ವಲ್ಪ ಮಾತಾಡಬಹುದೇ?’ ಎಂದನು. ಅದಕ್ಕೆ ಅವನು, “ನಿನಗೆ ಗ್ರೀಕ್‍ಭಾಷೆಯೂ ಗೊತ್ತಿದೆಯಾ?


ಜನರ ಗುಂಪು ಪೌಲನನ್ನು ಕೊಲ್ಲಲು ಯತ್ನಿಸುತ್ತಿದ್ದಾಗ ಜೆರುಸಲೇಮಿನಾದ್ಯಂತ ಗಲಭೆಯುಂಟಾಗಿದೆ ಎಂದು ಅಲ್ಲಿನ ರೋಮ್ ಸೈನ್ಯಾಧಿಪತಿಗೆ ವರದಿ ಬಂದಿತು.


ಅನಂತರ ಅವರು ಯೇಸುಸ್ವಾಮಿಯನ್ನು ಬಂಧಿಸಿ ಪ್ರಧಾನಯಾಜಕನ ಭವನಕ್ಕೆ ಕರೆದುಕೊಂಡು ಹೋದರು. ದೂರದಿಂದ ಪೇತ್ರನು ಹಿಂದೆಹಿಂದೆಯೇ ಹೋದನು.


ಬೆಳಗಾದ ಕೂಡಲೆ, ಮುಖ್ಯಯಾಜಕರೂ ಪ್ರಮುಖರೂ ಧರ್ಮಶಾಸ್ತ್ರಿಗಳೂ ಹಾಗು ನ್ಯಾಯಸಭೆಯ ಇತರ ಸದಸ್ಯರೂ ಒಟ್ಟುಗೂಡಿ ಸಮಾಲೋಚನೆ ನಡೆಸಿದರು. ಯೇಸುಸ್ವಾಮಿಗೆ ಬೇಡಿಹಾಕಿ ಪಿಲಾತನ ಬಳಿಗೆ ಕರೆದೊಯ್ದು ಆತನ ವಶಕ್ಕೊಪ್ಪಿಸಿದರು.


ಅನಂತರ ಆ ಜನರು ಯೇಸುಸ್ವಾಮಿಯನ್ನು ಪ್ರಧಾನ ಯಾಜಕನ ಬಳಿಗೆ ಕರೆದೊಯ್ದರು. ಅಲ್ಲಿ ಎಲ್ಲಾ ಮುಖ್ಯಯಾಜಕರು, ಪ್ರಮುಖರು ಹಾಗು ಧರ್ಮಶಾಸ್ತ್ರಿಗಳು ಸಭೆ ಸೇರಿದ್ದರು.


ಅಂತೆಯೇ ಯೇಸುವಿಗೆ ಬೇಡಿ ಹಾಕಿಸಿ, ಅವರನ್ನು ರಾಜ್ಯಪಾಲ ಪಿಲಾತನ ಬಳಿಗೆ ಕರೆದೊಯ್ದು ಅವನ ವಶಕ್ಕೆ ಒಪ್ಪಿಸಿದರು.


ಫಿಲಿಷ್ಟಿಯರು ಅವನನ್ನು ಹಿಡಿದು, ಕಣ್ಣುಗಳನ್ನು ಕಿತ್ತು, ಗಾಜಾಕ್ಕೆ ಒಯ್ದು, ಕಬ್ಬಿಣದ ಬೇಡಿಗಳನ್ನು ಹಾಕಿ, ಸೆರೆಮನೆಯಲ್ಲಿ ಬೀಸುವುದಕ್ಕೆ ಹಚ್ಚಿದರು.


ದೇವರು ಹೇಳಿದ ಸ್ಥಳಕ್ಕೆ ಬಂದು ಸೇರಿದಾಗ ಅಬ್ರಹಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿದ. ಕಟ್ಟಿಗೆಯನ್ನು ಅದರ ಮೇಲೆ ಒಟ್ಟಿ, ಮಗ ಇಸಾಕನ ಕೈಕಾಲುಗಳನ್ನು ಬಿಗಿದು, ಕಟ್ಟಿಗೆಗಳ ಮೇಲೆ ಅವನನ್ನು ಕೆಡವಿದ.


ಈ ವಾಗ್ವಾದ ವಿಕೋಪಕ್ಕೆ ಹೋದುದರಿಂದ ಪೌಲನನ್ನು ಅವರು ಖಂಡತುಂಡಾಗಿಸಬಹುದೆಂದು ಸಹಸ್ರಾಧಿಪತಿ ಹೆದರಿದನು. ಅವನು ಸೈನಿಕರನ್ನು ಕಳುಹಿಸಿ ಪೌಲನನ್ನು ಸಭೆಯ ಮಧ್ಯದಿಂದ ಎತ್ತಿಕೊಂಡು ಕೋಟೆಗೆ ತರುವಂತೆ ಆಜ್ಞಾಪಿಸಿದನು.


ಪ್ರಭುವೆ ದೇವನು, ನಮ್ಮ ಮೇಲೆ ಜ್ಯೋತಿಯನು ಬೆಳಗಿದವನು I ಪ್ರದಕ್ಷಿಣೆ ಮಾಡಿರಿ, ಬಲಿಪೀಠದ ಸುತ್ತ, ಹಿಡಿದು ರೆಂಬೆಗಳನು II


ಅವರನ್ನು ಅಂಗರಕ್ಷಕರ ದಳಪತಿಯ ವಠಾರದಲ್ಲಿದ್ದ ಸೆರೆಯಲ್ಲಿ ಹಾಕಿಸಿದ್ದನು.


ರಾಜ್ಯಪಾಲನ ಸೈನಿಕರು ಯೇಸುಸ್ವಾಮಿಯನ್ನು ರಾಜಭವನದ ಒಳಕ್ಕೆ ಕರೆದೊಯ್ದರು. ಅವರ ಸೈನ್ಯಪಡೆಯೆಲ್ಲವು ಸ್ವಾಮಿಯನ್ನು ಸುತ್ತುಗಟ್ಟಿತು.


ಸೆಜರೇಯ ಪಟ್ಟಣದಲ್ಲಿ ಕೊರ್ನೇಲಿಯ ಎಂಬವನಿದ್ದನು. ಅವನು ‘ಇಟಲಿಯ ದಳ’ದಲ್ಲಿ ಒಬ್ಬ ಶತಾಧಿಪತಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು