Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 18:25 - ಕನ್ನಡ ಸತ್ಯವೇದವು C.L. Bible (BSI)

25 ಇತ್ತ ಪೇತ್ರನು ನಿಂತು ಚಳಿಕಾಯಿಸಿಕೊಳ್ಳುತ್ತಾ ಇದ್ದನು. ಅಲ್ಲಿದ್ದವರು, “ನೀನು ಯೇಸುವಿನ ಶಿಷ್ಯರಲ್ಲಿ ಒಬ್ಬನಲ್ಲವೇ?’ ಎಂದು ಕೇಳಿದರು. ಪೇತ್ರನು, “ಇಲ್ಲ, ನಾನು ಶಿಷ್ಯನಲ್ಲ,” ಎಂದು ನಿರಾಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇತ್ತ, ಸೀಮೋನ್ ಪೇತ್ರನು ನಿಂತುಕೊಂಡು ಚಳಿ ಕಾಯಿಸಿಕೊಳ್ಳುತ್ತಾ ಇದ್ದನು. ಆಗ ಅಲ್ಲಿದ್ದವರು ಅವನನ್ನು, “ನೀನು ಸಹ ಆತನ ಶಿಷ್ಯರಲ್ಲಿ ಒಬ್ಬನಲ್ಲವೇ?” ಎಂದು ಕೇಳಲು, ಅವನು ಅದನ್ನು ನಿರಾಕರಿಸಿ, “ನಾನಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಇತ್ತಲಾಗಿ ಸೀಮೋನ ಪೇತ್ರನು ನಿಂತುಕೊಂಡು ಚಳಿಕಾಸಿಕೊಳ್ಳುತ್ತಾ ಇದ್ದನು. ಆಗ ಅಲ್ಲಿದ್ದವರು ಅವನನ್ನು - ನೀನು ಅವನ ಶಿಷ್ಯರಲ್ಲಿ ಒಬ್ಬನೇನು? ಎಂದು ಕೇಳಲು ಅವನು - ಅಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಸೀಮೋನ್ ಪೇತ್ರನು ತನ್ನನ್ನು ಬೆಚ್ಚಗೆ ಮಾಡಿಕೊಳ್ಳುತ್ತಾ ಬೆಂಕಿಯ ಸಮೀಪದಲ್ಲಿ ನಿಂತುಕೊಂಡಿದ್ದನು. ಅಲ್ಲಿದ್ದವರು ಪೇತ್ರನಿಗೆ, “ಆ ಮನುಷ್ಯನ ಶಿಷ್ಯರಲ್ಲಿ ನೀನೂ ಒಬ್ಬನಲ್ಲವೇ?” ಎಂದು ಕೇಳಿದರು. ಆದರೆ ಪೇತ್ರನು, “ಇಲ್ಲ, ನಾನಲ್ಲ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಇತ್ತ ಸೀಮೋನ ಪೇತ್ರನು ಚಳಿಕಾಯಿಸಿಕೊಳ್ಳುತ್ತಾ ನಿಂತಿರುವಾಗ, ಒಬ್ಬನು ಅವನಿಗೆ, “ನೀನು ಸಹ ಆತನ ಶಿಷ್ಯನಲ್ಲವೇ?” ಎಂದು ಕೇಳಿದರು. ಅದಕ್ಕೆ ಅವನು ಅದನ್ನು ನಿರಾಕರಿಸಿ, “ನಾನಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಸಿಮಾವ್ ಪೆದ್ರು ಅಜುನ್‍ಬಿ ಥೈ ಇಬೆ ರ್‍ಹಾವ್ನ್ ಆಗ್ ಶೆಕುಲಾಗಲ್ಲೊ, ತನ್ನಾ ಥೈತ್ಲ್ಯಾನಿ ತೆಕಾ “ತಿಯಾಬಿ ತ್ಯಾ ಮಾನ್ಸಾಚ್ಯಾ ಶಿಸಾನಿತ್ಲೊ ಎಕ್ಲೊ ಕಾಯ್ಕಿ ನ್ಹಯ್?” ಮಟ್ಲ್ಯಾನಿ. ಖರೆ ಪೆದ್ರುನ್, “ನಾ, ಮಿಯಾ ನ್ಹಯ್” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 18:25
13 ತಿಳಿವುಗಳ ಹೋಲಿಕೆ  

ಮಾನವರಿಗೆ ಹೆದರಿ ನಡೆವವನು ಬಲೆಗೆ ಸಿಕ್ಕಿಬೀಳುವನು; ಸರ್ವೇಶ್ವರನಲ್ಲಿ ನಂಬಿಕೆಯಿಟ್ಟವನು ಸಂರಕ್ಷಣೆ ಹೊಂದುವನು.


ಆಗ ಸಾರಳು ಭಯದಿಂದ, “ನಾನು ನಗಲಿಲ್ಲ” ಎಂದು ನಿರಾಕರಿಸಿದಳು. ಸರ್ವೇಶ್ವರ, "ಹಾಗನ್ನಬೇಡಮ್ಮಾ, 'ನೀನು ನಕ್ಕದ್ದು ನಿಜ' ” ಎಂದರು.


ಬೆಂಕಿಯ ಬೆಳಕಿನಲ್ಲಿ ಕುಳಿತಿದ್ದ ಆತನನ್ನು ದಾಸಿಯೊಬ್ಬಳು ದೃಷ್ಟಿಸಿ ನೋಡಿ, “ಇವನು ಕೂಡ ಯೇಸುವಿನ ಸಂಗಡ ಇದ್ದವನು,” ಎಂದಳು.


ಇತ್ತ ಪೇತ್ರನು ಹೊರಾಂಗಣದಲ್ಲಿ ಕುಳಿತು ಇದ್ದನು. ದಾಸಿಯೊಬ್ಬಳು ಆತನ ಬಳಿಗೆ ಬಂದು, “ನೀನು ಸಹ ಗಲಿಲೇಯದ ಯೇಸುವಿನೊಂದಿಗೆ ಇದ್ದವನು,” ಎಂದಳು.


ಪೇತ್ರನು ಹೊರಾಂಗಣದಲ್ಲಿ ಇದ್ದನು. ಆಗ ಪ್ರಧಾನಯಾಜಕನ ಸೇವಕಿಯೊಬ್ಬಳು ಅಲ್ಲಿಗೆ ಬಂದಳು.


ಭವನದ ಹೊರಾಂಗಣದ ನಡುವೆ ಬೆಂಕಿಮಾಡಿ ಅದರ ಸುತ್ತಲೂ ಅವರೆಲ್ಲರು ಕುಳಿತುಕೊಂಡಾಗ, ಪೇತ್ರನು ಅವರ ಸಂಗಡ ಸೇರಿ ಕುಳಿತುಕೊಂಡನು.


ಅದಕ್ಕೆ ಆತ, “ಅವನಾರೋ ನಾನರಿಯೆನಮ್ಮಾ,” ಎಂದು ನಿರಾಕರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು