Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 18:33 - ಕನ್ನಡ ಸತ್ಯವೇದವು C.L. Bible (BSI)

33 ಆಗ ಪಿಲಾತನು ಅರಮನೆಯೊಳಗೆ ಹೋಗಿ ಯೇಸು ಸ್ವಾಮಿಯನ್ನು ಕರೆಯಿಸಿ, “ನೀನು ಯೆಹೂದ್ಯರ ಅರಸನೋ?’ ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆಗ ಪಿಲಾತನು ಪುನಃ ಅರಮನೆಯೊಳಗೆ ಹೋಗಿ ಯೇಸುವನ್ನು ಕರೆದು ಆತನಿಗೆ, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆಗ ಪಿಲಾತನು ತಿರಿಗಿ ಅರಮನೆಯೊಳಕ್ಕೆ ಹೋಗಿ ಯೇಸುವನ್ನು ಕರೆದು ಆತನನ್ನು - ನೀನು ಯೆಹೂದ್ಯರ ಅರಸನು ಹೌದೋ ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಬಳಿಕ ಪಿಲಾತನು, ಭವನದೊಳಗೆ ಹಿಂತಿರುಗಿ ಹೋಗಿ, ಯೇಸುವನ್ನು ಕರೆದು, “ನೀನು ಯೆಹೂದ್ಯರ ರಾಜನೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಆದ್ದರಿಂದ ಪಿಲಾತನು ತಿರುಗಿ ತನ್ನ ನಿವಾಸದೊಳಗೆ ಪ್ರವೇಶಿಸಿ ಯೇಸುವನ್ನು ಕರೆದು ಅವರಿಗೆ, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಪಿಲಾತ್ ಭುತ್ತುರ್ ಘರಾತ್ ಗೆಲೊ ಅನಿ ಜೆಜುಕ್ ಬಲ್ವುಲ್ಯಾನ್, ಅನಿ “ತಿಯಾ ಜುದೆವಾಚೊ ರಾಜಾ ಕಾಯ್?” ಮನುನ್ ಇಚಾರ್‍ಲ್ಯಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 18:33
25 ತಿಳಿವುಗಳ ಹೋಲಿಕೆ  

ಇದನ್ನು ಕೇಳಿದ ಮೇಲೆ ಪಿಲಾತನು ಯೇಸುವನ್ನು ಬಿಡುಗಡೆ ಮಾಡಲು ಪ್ರಯತ್ನಿಸಿದನು. ಯೆಹೂದ್ಯರಾದರೋ, “ಇವನನ್ನು ಬಿಡುಗಡೆ ಮಾಡಿದರೆ, ನೀವು ರೋಮ್ ಚಕ್ರವರ್ತಿಯ ಮಿತ್ರರಲ್ಲ; ತಾನೇ ಅರಸನೆಂದು ಹೇಳಿಕೊಳ್ಳುವ ಇವನು ರೋಮ್ ಚಕ್ರವರ್ತಿಗೆ ಶತ್ರು,” ಎಂದು ಕೂಗಿಕೊಂಡರು.


“ಯೆಹೂದ್ಯರ ಅರಸನೇ, ನಿನಗೆ ಶುಭವಾಗಲಿ,” ಎಂದು ಜರೆಯುತ್ತಾ ಅವರ ಕೆನ್ನೆಗೆ ಹೊಡೆಯತೊಡಗಿದರು.


ಪಿಲಾತನು, “ಹಾಗಾದರೆ ನೀನೊಬ್ಬ ಅರಸನೋ?’ ಎಂದು ಕೇಳಲು ಯೇಸು, “ ‘ಅರಸ’ ಎನ್ನುವುದು ನೀವು ಹೇಳುವ ಮಾತು. ಸತ್ಯವನ್ನು ಕುರಿತು ಸಾಕ್ಷಿ ಹೇಳುವುದು ನನ್ನ ಕೆಲಸ. ಅದಕ್ಕಾಗಿಯೇ ನಾನು ಹುಟ್ಟಿದುದು. ಅದಕ್ಕಾಗಿಯೇ ನಾನು ಜಗತ್ತಿಗೆ ಬಂದುದು. ಸತ್ಯಪರರೆಲ್ಲರೂ ನನ್ನ ಮಾತಿಗೆ ಕಿವಿಗೊಡುತ್ತಾರೆ,” ಎಂದು ಹೇಳಿದರು.


ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಅವರು ಯೇಸುವನ್ನು ಎದುರುಗೊಳ್ಳಲು ಹೊರಟರು. ‘ಸರ್ವೇಶ್ವರನ ನಾಮದಲ್ಲಿ ಬರುವಾತನಿಗೆ ಜಯಜಯವಾಗಲಿ ! ಇಸ್ರಯೇಲಿನ ಅರಸನಿಗೆ ಶುಭವಾಗಲಿ !’ ಎಂದು ಘೋಷಿಸುತ್ತಾ ಅವರನ್ನು ಸ್ವಾಗತಿಸಿದರು.


ಪಿಲಾತನು ಯೇಸುವನ್ನು, “ನೀನು ಯೆಹೂದ್ಯರ ಅರಸನೋ?” ಎಂದು ಪ್ರಶ್ನಿಸಿದನು. “ಅದು ನಿಮ್ಮ ಬಾಯಿಂದಲೇ ಬಂದಿದೆ,” ಎಂದು ಯೇಸು ಮರುನುಡಿದರು.


ಯೇಸುಸ್ವಾಮಿಯನ್ನು ರಾಜ್ಯಪಾಲನ ಮುಂದೆ ನಿಲ್ಲಿಸಿದರು. “ನೀನು ಯೆಹೂದ್ಯರ ಅರಸನೋ?” ಎಂದು ರಾಜ್ಯಪಾಲ ಪ್ರಶ್ನಿಸಿದನು. ಅದಕ್ಕೆ ಯೇಸು, “ಅದು ನಿಮ್ಮ ಬಾಯಿಂದಲೇ ಬಂದಿದೆ,” ಎಂದು ಮರುನುಡಿದರು.


ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


ಸಕಲ ಸೃಷ್ಟಿಗೂ ಜೀವದಾತರಾದ ದೇವರ ಸನ್ನಿಧಿಯಲ್ಲಿ ಪೊಂತಿಯ ಪಿಲಾತನ ಮುಂದೆ ಸೂಕ್ತ ಸಾಕ್ಷಿ ನೀಡಿದ ಪ್ರಭು ಯೇಸುವಿನ ಸನ್ನಿಧಿಯಲ್ಲಿ ನಾನು ಆಜ್ಞಾಪಿಸುವುದೇನೆಂದರೆ:


ಅವನು ಮತ್ತೆ ಅರಮನೆಯ ಒಳಕ್ಕೆ ಬಂದು, “ನೀನು ಎಲ್ಲಿಂದ ಬಂದವನು?” ಎಂದು ಯೇಸುವನ್ನು ಕೇಳಿದನು. ಆದರೆ ಯೇಸು ಉತ್ತರಕೊಡಲಿಲ್ಲ.


ಇದನ್ನು ಕುರಿತೇ, ‘ಸಿಯೋನ್ ನಗರಿಯೇ, ಅಂಜಬೇಡ. ಇಗೋ ನೋಡು; ಹೇಸರಗತ್ತೆಯನ್ನೇರಿ ಬರುತ್ತಿರುವನು ನಿನ್ನ ಅರಸನು’ ಎಂದಿದೆ ಪವಿತ್ರಗ್ರಂಥ.


ಅದಕ್ಕೆ ನತಾನಿಯೇಲನು, “ಗುರುದೇವಾ’ ದೇವರ ಪುತ್ರ ನೀವೇ; ಇಸ್ರಯೇಲರ ಅರಸ ನೀವೇ,” ಎಂದನು.


ತಪ್ಪಿಸಿಹನು ಸರ್ವೇಶ ನಿನಗೆ ವಿಧಿಸಿರುವ ದಂಡನೆಗಳನು ತಳ್ಳಿ ಹೊರಗಟ್ಟಿಹನು ನಿನ್ನ ಶತ್ರುಗಳನು ಇಸ್ರಯೇಲಿನ ರಾಜನಾದ ಸರ್ವೇಶ ಇಹನು ನಿನ್ನ ಮಧ್ಯೆ ನೀನಿರುವೆ ಇನ್ನೆಂದಿಗೂ ಕೇಡಿಗಂಜದೆ.


ಸರ್ವೇಶ್ವರ ಹೇಳುವುದನ್ನು ಗಮನಿಸಿರಿ: “ದಿನಗಳು ಬರಲಿವೆ; ಆಗ ನಾನು ದಾವೀದನೆಂಬ ಮೂಲದಿಂದ ಒಂದು ‘ಮೊಳಿಕೆ’ಯನ್ನು ಚಿಗುರಿಸುವೆನು. ಆತ ಸತ್ಪುರುಷ; ರಾಜನಾಗಿ ಆಳುವನು. ವಿವೇಕದಿಂದ ಕಾರ್ಯ ಸಾಧಿಸುವನು. ಧರೆಯಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು.


ರಾಜ್ಯಪಾಲನ ಸೈನಿಕರು ಯೇಸುಸ್ವಾಮಿಯನ್ನು ರಾಜಭವನದ ಒಳಕ್ಕೆ ಕರೆದೊಯ್ದರು. ಅವರ ಸೈನ್ಯಪಡೆಯೆಲ್ಲವು ಸ್ವಾಮಿಯನ್ನು ಸುತ್ತುಗಟ್ಟಿತು.


ಅಲ್ಲಿ ಆತನ ಮುಂದೆ, “ಇವನು ರೋಮ್ ಚಕ್ರವರ್ತಿಗೆ ತೆರಿಗೆ ಕೊಡುವುದನ್ನು ನಿಷೇಧಿಸುತ್ತಾನೆ. ತಾನೇ ‘ಕ್ರಿಸ್ತ, ಒಬ್ಬ ಅರಸ,’ ಎಂದು ಹೇಳಿಕೊಳ್ಳುತ್ತಾನೆ. ಹೀಗೆ ನಮ್ಮ ಜನತೆ ದಂಗೆಯೇಳುವಂತೆ ಪ್ರಚೋದಿಸುತ್ತಾನೆ. ಇದನ್ನೆಲ್ಲಾ ನಾವು ಕಂಡುಹಿಡಿದಿದ್ದೇವೆ,” ಎಂದು ದೂರತೊಡಗಿದರು.


ಅದಕ್ಕೆ ಯೇಸು, “ನೀವಾಗಿಯೇ ಇದನ್ನು ಹೇಳುತ್ತಿರುವಿರೋ ಅಥವಾ ಬೇರೆ ಯಾರಾದರೂ ನನ್ನನ್ನು ಕುರಿತು ಹೀಗೆ ಹೇಳಿದರೋ?” ಎನ್ನಲು


ಆಗ ಪಿಲಾತನು, “ಸತ್ಯ, ಸತ್ಯ ಎಂದರೆ ಏನು?” ಎಂದು ಪ್ರಶ್ನಿಸಿ ಅಲ್ಲಿ ನಿಲ್ಲದೆ ಹೊರಗೆಬಂದನು.


ಪಿಲಾತನು ಮತ್ತೆ ಹೊರಗೆ ಬಂದು ಯೆಹೂದ್ಯರಿಗೆ, “ನೋಡಿ, ನಾನು ಇವನನ್ನು ನಿಮ್ಮ ಮುಂದೆ ತರುತ್ತಿದ್ದೇನೆ. ನನಗೆ ಇವನಲ್ಲಿ ಯಾವ ಅಪರಾಧವೂ ಕಾಣಿಸುತ್ತಿಲ್ಲ ಎಂಬುದು ನಿಮಗೆ ತಿಳಿದಿರಲಿ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು