Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 18:36 - ಕನ್ನಡ ಸತ್ಯವೇದವು C.L. Bible (BSI)

36 ಅದಕ್ಕೆ ಯೇಸು, “ನನ್ನ ಸಾಮ್ರಾಜ್ಯ ಈ ಲೋಕದ್ದಲ್ಲ, ನನ್ನ ಸಾಮ್ರಾಜ್ಯ ಈ ಲೋಕದ್ದಾಗಿದ್ದರೆ, ಯೆಹೂದ್ಯರ ಕೈಗೆ ನಾನು ಬೀಳದಂತೆ ನನ್ನ ಅನುಯಾಯಿಗಳು ಕಾದಾಡುತ್ತಿದ್ದರು. ನಿಜವಾಗಿಯೂ ನನ್ನ ಸಾಮ್ರಾಜ್ಯ ಇಹಲೋಕದ್ದಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಯೇಸು, “ನನ್ನ ರಾಜ್ಯವು ಈ ಲೋಕದ್ದಲ್ಲ. ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರ ಕೈಗೆ ಒಪ್ಪಿಸಲ್ಪಡದಂತೆ ನನ್ನ ಸೇವಕರು ನನ್ನ ಪರವಾಗಿ ಹೋರಾಡುತ್ತಿದ್ದರು, ಆದರೆ ನನ್ನ ರಾಜ್ಯವು ಇಲ್ಲಿಯದಲ್ಲ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಯೇಸು - ನನ್ನ ರಾಜ್ಯವು ಈ ಲೋಕದ್ದಲ್ಲ; ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರ ಕೈಯಲ್ಲಿ ಬೀಳದಂತೆ ನನ್ನ ಪರಿವಾರದವರು ಕಾದಾಡುತ್ತಿದ್ದರು; ಆದರೆ ನನ್ನ ರಾಜ್ಯವು ಇಲ್ಲಿಯದಲ್ಲವೆಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಯೇಸು, “ನನ್ನ ರಾಜ್ಯವು ಈ ಲೋಕಕ್ಕೆ ಸೇರಿದ್ದಲ್ಲ. ಅದು ಈ ಲೋಕಕ್ಕೆ ಸೇರಿದ್ದಾಗಿದ್ದರೆ, ಯೆಹೂದ್ಯರ ಕೈಗೆ ನಾನು ಸಿಗದಂತೆ ನನ್ನ ಸೇವಕರು ಹೋರಾಡುತ್ತಿದ್ದರು. ಆದರೆ ನನ್ನ ರಾಜ್ಯವು ಮತ್ತೊಂದು ಸ್ಥಳದ್ದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಯೇಸು, “ನನ್ನ ರಾಜ್ಯವು ಈ ಲೋಕದ್ದಲ್ಲ, ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನನ್ನನ್ನು ಯೆಹೂದ್ಯರಿಗೆ ಒಪ್ಪಿಸದಂತೆ ನನ್ನ ಸೇವಕರು ಹೋರಾಡುತ್ತಿದ್ದರು; ಆದರೆ ಈಗ ನನ್ನ ರಾಜ್ಯವು ಇಲ್ಲಿಯದಲ್ಲ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ತನ್ನಾ ಜೆಜುನ್, “ಮಾಜೊ ರಾಜ್ ಹ್ಯಾ ಜಗಾಕ್ ಸಮಂದ್ ಪಡಲ್ಲೊ ನ್ಹಯ್! ಮಾಜೊ ರಾಜ್ ಹ್ಯಾ ಜಗಾಚೊ ರ್‍ಹಾಯ್ ಹೊತ್ತೊ ತರ್, ಜುದೆವ್ ಅದಿಕಾರ್‍ಯಾಂಚ್ಯಾ ತಾಬೆತ್ ಮಿಯಾ ಗಾವಿನಸಿ ಸರ್ಕೆ ಮಾಜೆ ವಾಂಗ್ಡಿ ಮಾರಾಮಾರಿ ಕರಿ ಹೊತ್ತಿ . ಮಾಜೊ ರಾಜ್ ಹ್ಯಾ ಜಗಾಕ್ ಸಮಂದ್ ಪಡಲ್ಲೊ ನ್ಹಯ್!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 18:36
14 ತಿಳಿವುಗಳ ಹೋಲಿಕೆ  

ಏಕೆಂದರೆ, ದೇವರ ಸಾಮ್ರಾಜ್ಯ ತಿನ್ನುವುದರಲ್ಲಿ, ಕುಡಿಯುವುದರಲ್ಲಿ ಅಲ್ಲ, ಪವಿತ್ರಾತ್ಮ ಅವರಿಂದ ಬರುವ ಸತ್ಸಂಬಂಧ, ಶಾಂತಿಸಮಾಧಾನ ಮತ್ತು ಸಂತೋಷ ಇವುಗಳಲ್ಲಿ ಅಡಗಿದೆ.


ಅವರೆಲ್ಲರೂ ಬಂದು ತಮ್ಮನ್ನು ಹಿಡಿದು ಅರಸನನ್ನಾಗಿ ಮಾಡುವ ಯೋಚನೆಯಲ್ಲಿದ್ದಾರೆ ಎಂಬುದನ್ನು ಅರಿತ ಯೇಸು ತಾವೊಬ್ಬರೇ ಬೆಟ್ಟದ ಕಡೆಗೆ ಹೊರಟುಬಿಟ್ಟರು.


ಸಕಲ ರಾಷ್ಟ್ರ-ಕುಲ-ಭಾಷೆಗಳವರು ಅವನಿಗೆ ಸೇವೆ ಸಲ್ಲಿಸಲೆಂದು ಅವನಿಗೆ ದೊರೆತನ, ಘನತೆ, ರಾಜ್ಯತ್ವ ಇವುಗಳನ್ನು ಕೊಡಲಾಯಿತು. ಅವನ ಆಳ್ವಿಕೆಗೆ ಅಂತ್ಯವಿಲ್ಲ, ಅದು ಶಾಶ್ವತವಾದುದು, ಅವನ ರಾಜ್ಯ ಎಂದಿಗೂ ಅಳಿಯದು!


ಆ ರಾಜರ ಕಾಲದಲ್ಲಿ ಪರಲೋಕ ದೇವರು ಒಂದು ಸಾಮ್ರಾಜ್ಯವನ್ನು ಸ್ಥಾಪಿಸುವರು. ಅದು ಎಂದಿಗೂ ಅಳಿಯದು. ಅದರ ಪ್ರಾಬಲ್ಯವು ಬೇರೆ ರಾಷ್ಟ್ರಕ್ಕೆ ಜಾರಿಹೋಗದು. ರಾಷ್ಟ್ರಗಳನ್ನೆಲ್ಲಾ ಭಂಗಪಡಿಸಿ, ನಿರ್ನಾಮಮಾಡಿ ಆ ಸಾಮ್ರಾಜ್ಯ ಶಾಶ್ವತವಾಗಿ ನಿಲ್ಲುವುದು.


ಸಕಲ ಸೃಷ್ಟಿಗೂ ಜೀವದಾತರಾದ ದೇವರ ಸನ್ನಿಧಿಯಲ್ಲಿ ಪೊಂತಿಯ ಪಿಲಾತನ ಮುಂದೆ ಸೂಕ್ತ ಸಾಕ್ಷಿ ನೀಡಿದ ಪ್ರಭು ಯೇಸುವಿನ ಸನ್ನಿಧಿಯಲ್ಲಿ ನಾನು ಆಜ್ಞಾಪಿಸುವುದೇನೆಂದರೆ:


ನಾನು ನನ್ನ ಪಿತನನ್ನು ಕೇಳಿಕೊಂಡರೆ ಅವರು ತಕ್ಷಣವೇ ಹನ್ನೆರಡು ದಳಗಳಿಗಿಂತಲೂ ಹೆಚ್ಚು ದೇವದೂತರನ್ನು ಕಳಿಸುವುದಿಲ್ಲವೆಂದುಕೊಂಡೆಯಾ?


ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


ಅದಕ್ಕೆ ಯೇಸು, “ಏನಯ್ಯಾ, ನಿಮ್ಮಿಬ್ಬರ ನ್ಯಾಯತೀರಿಸುವುದಕ್ಕೂ ನಿಮ್ಮ ಸ್ವತ್ತನ್ನು ಭಾಗಮಾಡಿಕೊಡುವುದಕ್ಕೂ ನನ್ನನ್ನು ನೇಮಿಸಿದವರು ಯಾರು?” ಎಂದು ಮರುಪ್ರಶ್ನೆ ಹಾಕಿದರು.


ನೀವು ತೀರ್ಪುಕೊಡುವುದು ಲೋಕದ ದೃಷ್ಟಿಯಿಂದ, ನಾನಾದರೋ ಯಾರ ಬಗ್ಗೆಯೂ ತೀರ್ಪುಕೊಡಲು ಹೋಗುವುದಿಲ್ಲ.


ಪಿಲಾತನು, “ನಾನೇನು ಯೆಹೂದ್ಯನೇ? ನಿನ್ನ ಸ್ವಂತ ಜನರು ಮತ್ತು ಮುಖ್ಯ ಯಾಜಕರು ನಿನ್ನನ್ನು ನನ್ನ ಕೈಗೆ ಒಪ್ಪಿಸಿದ್ದಾರೆ. ನೀನು ಏನು ಮಾಡಿದ್ದೀಯಾ?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು