Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:1 - ಕನ್ನಡ ಸತ್ಯವೇದವು C.L. Bible (BSI)

1 ಆಮೇಲೆ ಪಿಲಾತನು ಯೇಸು ಸ್ವಾಮಿಯನ್ನು ಅಲ್ಲಿಂದ ಕರೆದೊಯ್ದು ಕೊರಡೆಗಳಿಂದ ಹೊಡೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆನಂತರ ಪಿಲಾತನು ಯೇಸುವನ್ನು ಕರೆದುಕೊಂಡು ಹೋಗಿ ಆತನನ್ನು ಕೊರಡೆಯಿಂದ ಹೊಡೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಮೇಲೆ ಪಿಲಾತನು ಯೇಸುವನ್ನು ಕೊರಡೆಯಿಂದ ಹೊಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬಳಿಕ, ಯೇಸುವನ್ನು ಕರೆದುಕೊಂಡು ಹೋಗಿ, ಕೊರಡೆಯಿಂದ ಹೊಡೆಯಬೇಕೆಂದು ಪಿಲಾತನು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ಪಿಲಾತನು ಯೇಸುವನ್ನು ತೆಗೆದುಕೊಂಡು ಕೊರಡೆಯಿಂದ ಹೊಡೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತನ್ನಾ ಪಿಲಾತಾನ್ ಜೆಜುಕ್ ಭೆಟ್ಲ್ಯಾನ್ ಅನಿ ಬಾರ್‍ಕೊಲಾನಿ ಮಾರುಕ್ ಲಾವ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:1
16 ತಿಳಿವುಗಳ ಹೋಲಿಕೆ  

ಗಾಯಗೊಂಡನಾತ ನಮ್ಮ ಪಾಪಗಳ ನಿಮಿತ್ತ ಜಜ್ಜರಿತನಾದ ನಮ್ಮ ದ್ರೋಹಗಳ ದೆಸೆಯಿಂದ. ಶಿಕ್ಷೆಗೊಳಗಾದ ನಮ್ಮ ರಕ್ಷೆಗಾಗಿ ಪೆಟ್ಟುತಿಂದ ನಮ್ಮ ಸ್ವಸ್ಥತೆಗಾಗಿ.


ಆತನು ಮರಣದಂಡನೆಗೆ ಅರ್ಹನೆಂದು ಅವರು ತೀರ್ಮಾನಿಸಿ ಪರಕೀಯರ ಕೈಗೊಪ್ಪಿಸುವರು. ಇವರು ಆತನನ್ನು ಪರಿಹಾಸ್ಯಮಾಡುವರು, ಕೊರಡೆಗಳಿಂದ ಹೊಡೆಯುವರು, ಮತ್ತು ಶಿಲುಬೆಗೇರಿಸುವರು. ಆತನಾದರೋ ಮೂರನೇ ದಿನ ಪುನರುತ್ಥಾನ ಹೊಂದುವನು,” ಎಂದರು.


ಬೆನ್ನುಕೊಟ್ಟೆನು ಹೊಡೆಯುವವರಿಗೆ ಗಡ್ಡ ಒಡ್ಡಿದೆನು ಅದನ್ನು ಕೀಳುವವರಿಗೆ ಮುಖ ಮರೆಮಾಡಲಿಲ್ಲ ಉಗುಳುಬುಗುಳಿಗೆ.


ಆದ್ದರಿಂದ ಇವನನ್ನು ದಂಡಿಸಿ ಬಿಟ್ಟುಬಿಡುತ್ತೇನೆ,” ಎಂದನು.


ಕೊರಡೆಗಳಿಂದ ಹೊಡೆಯುವರು ಮತ್ತು ಕೊಂದುಹಾಕುವರು. ಆತನಾದರೋ ಮೂರನೆಯ ದಿನ ಪುನರುತ್ಥಾನ ಹೊಂದುವನು,” ಎಂದರು.


ಆದರೂ ಅವರು ಅಧಿಕಾಧಿಕವಾಗಿ ಆರ್ಭಟಿಸುತ್ತಾ ಯೇಸುವನ್ನು ಶಿಲುಬೆಗೆ ಏರಿಸಲೇ ಬೇಕೆಂದು ಕೂಗಾಡಿದರು. ಕಟ್ಟಕಡೆಗೆ ಕೂಗಾಟಕ್ಕೇ ಗೆಲುವಾಯಿತು!


ಅವರಲ್ಲಿ ಕೆಲವರನ್ನು ಕೊಲೆಮಾಡುವಿರಿ, ಶಿಲುಬೆಗೆ ಏರಿಸುವಿರಿ, ಮತ್ತೆ ಕೆಲವರನ್ನು ನಿಮ್ಮ ಪ್ರಾರ್ಥನಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆಯುವಿರಿ. ಊರಿಂದೂರಿಗೆ ಅಟ್ಟಿ ಅವರನ್ನು ಪೀಡಿಸುವಿರಿ.


ಉಳುವವರು ಎನ್ನ ಬೆನ್ನನೆ ಉತ್ತಿರುವರು I ಆಳವಾದ ಗಾಯಗೆರೆಗಳನ್ನು ಮಾಡಿಹರು II


ನಾವು ಪಾಪದ ಪಾಲಿಗೆ ಸತ್ತು, ಸತ್ಯಕ್ಕೋಸ್ಕರ ಜೀವಿಸುವಂತೆ ಕ್ರಿಸ್ತಯೇಸು ತಮ್ಮ ದೇಹದಲ್ಲಿ ನಮ್ಮ ಪಾಪಗಳನ್ನು ಹೊತ್ತು ಶಿಲುಬೆಯ ಮರವನ್ನೇರಿದರು. ಅವರ ಗಾಯಗಳಿಂದ ನೀವು ಗುಣಹೊಂದಿದಿರಿ.


ಇನ್ನೂ ಕೆಲವರು ಹಾಸ್ಯ ಪರಿಹಾಸ್ಯ, ಏಟುಪೆಟ್ಟು, ಸೆರೆಸಂಕಲೆಗಳನ್ನು ಅನುಭವಿಸಿದರು.


ಐದು ಸಾರಿ ಯೆಹೂದ್ಯರಿಂದ ನನಗೆ ನಲವತ್ತಕ್ಕೆ ಒಂದು ಕಡಿಮೆ ಚಾಟಿ ಏಟುಗಳು ಬಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು