Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:12 - ಕನ್ನಡ ಸತ್ಯವೇದವು C.L. Bible (BSI)

12 ಇದನ್ನು ಕೇಳಿದ ಮೇಲೆ ಪಿಲಾತನು ಯೇಸುವನ್ನು ಬಿಡುಗಡೆ ಮಾಡಲು ಪ್ರಯತ್ನಿಸಿದನು. ಯೆಹೂದ್ಯರಾದರೋ, “ಇವನನ್ನು ಬಿಡುಗಡೆ ಮಾಡಿದರೆ, ನೀವು ರೋಮ್ ಚಕ್ರವರ್ತಿಯ ಮಿತ್ರರಲ್ಲ; ತಾನೇ ಅರಸನೆಂದು ಹೇಳಿಕೊಳ್ಳುವ ಇವನು ರೋಮ್ ಚಕ್ರವರ್ತಿಗೆ ಶತ್ರು,” ಎಂದು ಕೂಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಈ ಮಾತಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಿಸಿದನು, ಆದರೆ ಯೆಹೂದ್ಯರು, “ನೀನು ಈ ಮನುಷ್ಯನನ್ನು ಬಿಡಿಸಿದರೆ, ನೀನು ಕೈಸರನಿಗೆ ಮಿತ್ರನಲ್ಲ, ತನ್ನನ್ನು ತಾನೇ ಅರಸನಾಗಿ ಮಾಡಿಕೊಳ್ಳುವವನು, ಕೈಸರನಿಗೆ ವಿರೋಧಿ” ಎಂದು ಕೂಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಈ ಮಾತಿನ ದೆಸೆಯಿಂದ ಪಿಲಾತನು ಆತನನ್ನು ಬಿಡಿಸುವದಕ್ಕೆ ಪೇಚಾಡಿದನು. ಆದರೆ ಯೆಹೂದ್ಯರು - ನೀನು ಇವನನ್ನು ಬಿಡಿಸಿದರೆ ನೀನು ಕೈಸರನಿಗೆ ವಿುತ್ರನಲ್ಲ; ತನ್ನನ್ನು ಅರಸನಾಗಿ ಮಾಡಿಕೊಳ್ಳುವವನು ಕೈಸರನಿಗೆ ವಿರೋಧಿ ಎಂದು ಕೂಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಇದಾದ ಮೇಲೆ, ಯೇಸುವನ್ನು ಬಿಡುಗಡೆ ಮಾಡಲು ಪಿಲಾತನು ಪ್ರಯತ್ನಿಸಿದನು. ಆದರೆ ಯೆಹೂದ್ಯರು, “ತನ್ನನ್ನು ರಾಜನೆಂದು ಹೇಳಿಕೊಳ್ಳುವ ಯಾವ ವ್ಯಕ್ತಿಯಾಗಲಿ ಸೀಸರನ ವಿರೋಧಿಯಾಗಿದ್ದಾನೆ. ಆದ್ದರಿಂದ ನೀನು ಈ ಮನುಷ್ಯನನ್ನು (ಯೇಸುವನ್ನು) ಬಿಡುಗಡೆ ಮಾಡಿದರೆ, ನೀನು ಸೀಸರನ ಮಿತ್ರನಲ್ಲವೆಂದೇ ಅದರ ಅರ್ಥ” ಎಂದು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇದನ್ನು ಕೇಳಿದಾಗಿಂದ ಪಿಲಾತನು ಯೇಸುವನ್ನು ಬಿಡಿಸಲು ಪ್ರಯತ್ನಿಸಿದನು. ಆದರೆ ಯೆಹೂದ್ಯ ನಾಯಕರು, “ನೀನು ಈ ಮನುಷ್ಯನನ್ನು ಬಿಡುಗಡೆ ಮಾಡಿದರೆ, ನೀನು ಕೈಸರನ ಮಿತ್ರನಲ್ಲ. ತನ್ನನ್ನು ತಾನೇ ಅರಸನನ್ನಾಗಿ ಮಾಡಿಕೊಳ್ಳುವವನು, ಕೈಸರನಿಗೆ ವಿರೋಧವಾಗಿ ಮಾತನಾಡುವವನಾಗಿದ್ದಾನೆ,” ಎಂದು ಕೂಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಹೆ ಆಯ್ಕುನ್ ಪಿಲಾತ್ ಜೆಜುಕ್ ಸೊಡ್ತಲೊ ಎಕ್ ಅವ್ಕಾಸ್ ಗಾವ್ತಾ ಕಾಯ್ ಬಗುನ್‍ಗೆತ್ ಹೊತ್ತೊ. ಖರೆ ಜುದೆವಾನಿ ಬೊಬ್ ಮಾರುನ್ಗೆತ್, ತಿಯಾ ಹ್ಯಾ ಮಾನ್ಸಾಕ್ ಸೊಡ್ಲೆ ತರ್ ತಿಯಾ ಚಕ್ರವರ್ತಿಚೊ ದೊಸ್ತ್ ನ್ಹಯ್, ಜೆ ಕೊನ್ ಅಪ್ನಾಕುಚ್ ಎಕ್ ರಾಜಾ ಮನ್ತಾ ತೊ ಚಕ್ರವರ್ತಿಚ್ಯಾ ವಿರೊದುಚ್, ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:12
9 ತಿಳಿವುಗಳ ಹೋಲಿಕೆ  

ಇದನ್ನು ಕೇಳಿದ ಅರಸ ಚಿದ್ಕೀಯನು ಯೆರೆಮೀಯನಿಗೆ, “ಬಾಬಿಲೋನಿಯದವರು ತಮ್ಮನ್ನು ಮರೆಹೊಕ್ಕಿರುವ ಯೆಹೂದ್ಯರಿಗೆ ನನ್ನನ್ನು ಒಪ್ಪಿಸಬಹುದು. ಅವರು ನನ್ನನ್ನು ಹಿಂಸಿಸಬಹುದು ಎಂಬ ಸಂಶಯ ನನಗಿದೆ,” ಎಂದು ಉತ್ತರಕೊಟ್ಟನು.


ಹೀಗಿರುವಲ್ಲಿ ರೋಮ್ ಚಕ್ರಾಧಿಪತಿಗೆ ತೆರಿಗೆಕೊಡುವುದು ಧರ್ಮಸಮ್ಮತವೋ ಅಲ್ಲವೋ, ನಿಮ್ಮ ಅಭಿಪ್ರಾಯವನ್ನು ನಮಗೆ ತಿಳಿಸುವಿರಾ?” ಎಂದು ಕೇಳಿದರು.


ನಾವಾದರೋ ಅರಮನೆಯ ಉಪ್ಪನ್ನು ತಿನ್ನುವವರು; ಅರಸರಿಗೆ ಅಪಮಾನವಾಗುವುದನ್ನು ನೋಡಿ ಸುಮ್ಮನೆ ಇರುವುದು ಉಚಿತವಲ್ಲವೆಂದು ತಿಳಿದು ತಮಗೆ ಈ ಪತ್ರದ ಮೂಲಕ ಸುದ್ದಿ ಕಳುಹಿಸಿದ್ದೇವೆ.


ಅದಕ್ಕೆ ಪಿಲಾತನು, “ನಾನು ಬರೆದುದು ಬರೆದಾಯಿತು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು