Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:13 - ಕನ್ನಡ ಸತ್ಯವೇದವು C.L. Bible (BSI)

13 ಅವರ ಆ ಕೂಗನ್ನು ಕೇಳಿ ಪಿಲಾತನು ಯೇಸುವನ್ನು ಹೊರಗೆ ಕರೆಯಿಸಿದನು. ‘ಹಾಸುಗಲ್ಲು’ ಎಂಬ ಕಟ್ಟೆಯ ಮೇಲಿದ್ದ ನ್ಯಾಯಪೀಠದ ಮೇಲೆ ಕುಳಿತುಕೊಂಡನು. ಯೆಹೂದ್ಯರ ಭಾಷೆಯಲ್ಲಿ ಆ ಸ್ಥಳಕ್ಕೆ ‘ಗಬ್ಬಥ’ ಎಂದು ಹೆಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಈ ಮಾತುಗಳನ್ನು ಪಿಲಾತನು ಕೇಳಿ ಯೇಸುವನ್ನು ಹೊರಗೆ ಕರೆದುಕೊಂಡು ಬಂದು ಇಬ್ರಿಯ ಮಾತಿನಲ್ಲಿ, ಗಬ್ಬಥಾ ಎಂದು ಕರೆಯಲ್ಪಟ್ಟ, “ಕಲ್ಲು ಹಾಸಿದ ಕಟ್ಟೆ” ಎಂಬ ಸ್ಥಳಕ್ಕೆ ಹೋಗಿ ನ್ಯಾಯಾಸನದ ಮೇಲೆ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಈ ಮಾತುಗಳನ್ನು ಪಿಲಾತನು ಕೇಳಿ ಯೇಸುವನ್ನು ಹೊರಕ್ಕೆ ಕರತರಿಸಿ ಇಬ್ರಿಯ ಮಾತಿನಲ್ಲಿ ಗಬ್ಬಥಾಯೆನಿಸಿಕೊಳ್ಳುವ ಕಲ್ಲುಹಾಸಿದ ಕಟ್ಟೆ ಎಂಬ ಹೆಸರುಳ್ಳ ಸ್ಥಳಕ್ಕೆ ಹೋಗಿ ನ್ಯಾಯಪೀಠದ ಮೇಲೆ ಕೂತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೂದ್ಯರು ಹೇಳಿದ್ದನ್ನು ಕೇಳಿ ಪಿಲಾತನು ಯೇಸುವನ್ನು ಹೊರಗೆ ಕರೆಯಿಸಿ, “ಹಾಸುಗಲ್ಲು” ಎಂಬ ಕಟ್ಟೆಯ (ಯೆಹೂದ್ಯರ ಭಾಷೆ ಯಲ್ಲಿ ಅದರ ಹೆಸರು ಗಬ್ಬಥ.) ಮೇಲಿದ್ದ ನ್ಯಾಯಪೀಠದಲ್ಲಿ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಪಿಲಾತನು ಆ ಮಾತುಗಳನ್ನು ಕೇಳಿ ಯೇಸುವನ್ನು ಹೊರಗೆ ಕರೆದುಕೊಂಡು ಬಂದನು. ಹೀಬ್ರೂ ಭಾಷೆಯಲ್ಲಿ “ಗಬ್ಬಥಾ” ಎಂದು ಕರೆಯಲಾದ “ಕಲ್ಲು ಹಾಸಿದ ಕಟ್ಟೆ” ಎಂಬ ಕಟ್ಟೆಯ ಮೇಲಿದ್ದ ನ್ಯಾಯಾಸನದ ಮೇಲೆ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಹ್ಯಾ ಗೊಸ್ಟಿಯಾ ಆಯ್ಕಲ್ಲ್ಯಾ ತನ್ನಾ ಪಿಲಾತ್ ಜೆಜುಕ್ ಘರಾತ್ನಾ ಭಾಯ್ರ್ ಹನ್ಲ್ಯಾನ್, ಅನಿ , ಮಟ್ಲ್ಯಾರ್, ಗುಂಡ್ಯಾಚೊ ಕಟ್ಟೊ “ಹೆಬ್ರೆವ್ ಬಾಶೆನ್ ತೆಕಾ ಗಬ್ಬಾಥಾ ಮನ್ತ್ಯಾತ್” ತ್ಯಾ ಜಾಗ್ಯಾ ವರ್ತಿ ಬಸುನ್ ಝಡ್ತಿ ಕರುಕ್ ಬಸ್ತಲ್ಯಾ ಜಾಗ್ಯಾರ್ ಬಸ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:13
16 ತಿಳಿವುಗಳ ಹೋಲಿಕೆ  

ಅದೂ ಅಲ್ಲದೆ, ಪಿಲಾತನು ನ್ಯಾಯಪೀಠದಲ್ಲಿ ಕುಳಿತಿರುವಾಗ, “ನೀವು ಆ ಸತ್ಪುರುಷನ ತಂಟೆಗೆ ಹೋಗಬೇಡಿ; ಆತನ ದೆಸೆಯಿಂದ ಕಳೆದ ರಾತ್ರಿ ಕನಸಿನಲ್ಲಿ ಬಹಳ ಸಂಕಟಪಟ್ಟಿದ್ದೇನೆ,” ಎಂದು ಅವನ ಪತ್ನಿ ಹೇಳಿಕಳುಹಿಸಿದಳು.


ಆಗ ಪೇತ್ರ ಮತ್ತು ಯೊವಾನ್ನರು, “ನಾವು ದೇವರಿಗೆ ವಿಧೇಯರಾಗಬೇಕೋ? ನಿಮಗೆ ವಿಧೇಯರಾಗಬೇಕೋ? ದೇವರ ದೃಷ್ಟಿಯಲ್ಲಿ ಯಾವುದು ಸರಿ? ನೀವೇ ನಿರ್ಣಯಿಸಿರಿ.


ಇದನ್ನು ಕೇಳಿದ್ದೇ, ಪಿಲಾತನಿಗೆ ಮತ್ತಷ್ಟು ಭಯವಾಯಿತು.


ನೀವು ಯಾರಿಗೆ ಭಯಪಡಬೇಕೆಂದು ಹೇಳುತ್ತೇನೆ, ಕೇಳಿ: ಸತ್ತಮೇಲೆ ನರಕದೊಳಕ್ಕೆ ದಬ್ಬಲು ಅಧಿಕಾರವುಳ್ಳಾತನಿಗೆ ಭಯಪಡಿ. ಹೌದು, ಆತನಿಗೆ ಭಯಪಡಿರೆಂದು ನಿಮಗೆ ಒತ್ತಿಹೇಳುತ್ತೇನೆ.


“ಸುಗ್ಗಿಗೆ ಮೂರು ತಿಂಗಳಿರುವಾಗಲೂ ಮಳೆಯನ್ನು ತಡೆದವನು ನಾನೇ. ಒಂದೂರಿಗೆ ಮಳೆಯಾಗುವಂತೆಯೂ ಮತ್ತೊಂದೂರಿಗೆ ಮಳೆಯಾಗದಂತೆಯೂ ಮಾಡಿದವನು ನಾನೇ. ಒಂದು ಹೊಲಕ್ಕೆ ಮಳೆಯಾಗುವಂತೆ, ಮತ್ತೊಂದು ಹೊಲ ಮಳೆಯಿಲ್ಲದೆ ಬಾಡಿಹೋಗುವಂತೆ ಮಾಡಿದವನು ನಾನೇ.


ನೀನು ಯಾರಿಗೆ ಹೆದರಿ ಬೆದರಿ, ನನ್ನನ್ನು ಮರೆತು, ನನಗೆ ಸುಳ್ಳಾಡಿ ಮೋಸಮಾಡಿರುವೆ? ಇಂಥ ದ್ರೋಹಕ್ಕೂ ನೀನು ಹಿಂಜರಿಯಲಿಲ್ಲವಲ್ಲಾ! ಬಹುಕಾಲದಿಂದ ನಾನು ಸುಮ್ಮನೆ ಇದ್ದುದರಿಂದಲೇ ನೀನು ನನ್ನನ್ನು ಗೌರವಿಸದೆ ಇರುವುದಕ್ಕೆ ಕಾರಣವಲ್ಲವೆ?


ನಾಡಿನಲ್ಲಿ ಬಡವರ ಶೋಷಣೆಯನ್ನೂ ನ್ಯಾಯನೀತಿಯ ಉಲ್ಲಂಘನೆಯನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬ ಅಧಿಕಾರಿ ಉಸ್ತುವಾರಿ ನಡೆಸುತ್ತಾನೆ. ಆ ಇಬ್ಬರು ಅಧಿಕಾರಿಗಳ ಮೇಲೆ ಇನ್ನೂ ಉನ್ನತ ಅಧಿಕಾರಿಗಳು ಇದ್ದಾರೆ.


ಮಾನವರಿಗೆ ಹೆದರಿ ನಡೆವವನು ಬಲೆಗೆ ಸಿಕ್ಕಿಬೀಳುವನು; ಸರ್ವೇಶ್ವರನಲ್ಲಿ ನಂಬಿಕೆಯಿಟ್ಟವನು ಸಂರಕ್ಷಣೆ ಹೊಂದುವನು.


ಅಲ್ಲಿ, ‘ಕುರಿಬಾಗಿಲು’ ಎಂಬ ಸ್ಥಳದ ಬಳಿ ಐದು ಮಂಟಪಗಳಿಂದ ಕೂಡಿದ ಒಂದು ಕೊಳವಿದೆ. ಅದನ್ನು ಹಿಬ್ರಿಯ ಭಾಷೆಯಲ್ಲಿ ‘ಬೆತ್ಸಥ’ ಎಂದು ಕರೆಯುತ್ತಾರೆ.


ಇದನ್ನು ಕೇಳಿದ ಅರಸ ಚಿದ್ಕೀಯನು ಯೆರೆಮೀಯನಿಗೆ, “ಬಾಬಿಲೋನಿಯದವರು ತಮ್ಮನ್ನು ಮರೆಹೊಕ್ಕಿರುವ ಯೆಹೂದ್ಯರಿಗೆ ನನ್ನನ್ನು ಒಪ್ಪಿಸಬಹುದು. ಅವರು ನನ್ನನ್ನು ಹಿಂಸಿಸಬಹುದು ಎಂಬ ಸಂಶಯ ನನಗಿದೆ,” ಎಂದು ಉತ್ತರಕೊಟ್ಟನು.


ಯೇಸು ಸ್ವಾಮಿ ತಮ್ಮ ಶಿಲುಬೆಯನ್ನು ತಾವೇ ಹೊತ್ತುಕೊಂಡು ‘ಕಪಾಲ’ ಎಂಬ ಸ್ಥಳಕ್ಕೆ ಹೋದರು. ಇದಕ್ಕೆ ಯೆಹೂದ್ಯರ ಭಾಷೆಯಲ್ಲಿ ‘ಗೊಲ್ಗೊಥಾ’ ಎಂದು ಹೆಸರು.


ಯೇಸುವನ್ನು ಶಿಲುಬೆಗೇರಿಸಿದ ಸ್ಥಳ ನಗರಕ್ಕೆ ಸಮೀಪದಲ್ಲೇ ಇದ್ದುದರಿಂದ, ಹಲವು ಮಂದಿ ಯೆಹೂದ್ಯರು ಆ ಫಲಕವನ್ನು ಓದಿದರು. ಅದನ್ನು ಹಿಬ್ರಿಯ, ಲತೀನ್ ಮತ್ತು ಗ್ರೀಕ್ ಭಾಷೆಗಳಲ್ಲಿ ಬರೆಯಲಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು