Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:17 - ಕನ್ನಡ ಸತ್ಯವೇದವು C.L. Bible (BSI)

17 ಯೇಸು ಸ್ವಾಮಿ ತಮ್ಮ ಶಿಲುಬೆಯನ್ನು ತಾವೇ ಹೊತ್ತುಕೊಂಡು ‘ಕಪಾಲ’ ಎಂಬ ಸ್ಥಳಕ್ಕೆ ಹೋದರು. ಇದಕ್ಕೆ ಯೆಹೂದ್ಯರ ಭಾಷೆಯಲ್ಲಿ ‘ಗೊಲ್ಗೊಥಾ’ ಎಂದು ಹೆಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆತನು ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು “ಕಪಾಲಸ್ಥಳ” ಎಂಬ ಸ್ಥಳಕ್ಕೆ ಹೋದನು. ಇದನ್ನು ಇಬ್ರಿಯ ಭಾಷೆಯಲ್ಲಿ “ಗೊಲ್ಗೊಥಾ” ಎಂದು ಕರೆಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವರು ಯೇಸುವನ್ನು ತೆಗೆದುಕೊಂಡು ಹೋದರು; ಆತನು ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ಕಪಾಲಸ್ಥಳವೆಂಬ ಸ್ಥಾನಕ್ಕೆ ಹೋದನು. ಇದಕ್ಕೆ ಇಬ್ರಿಯ ಮಾತಿನಲ್ಲಿ ಗೊಲ್ಗೊಥಾ ಎಂದು ಹೆಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೇಸು ತನ್ನ ಸ್ವಂತ ಶಿಲುಬೆಯನ್ನು ಹೊತ್ತುಕೊಂಡು, “ಕಪಾಲ” ಎಂಬ ಸ್ಥಳಕ್ಕೆ ಹೊರಟನು. (ಯೆಹೂದ್ಯರ ಭಾಷೆಯಲ್ಲಿ ಈ ಸ್ಥಳದ ಹೆಸರು “ಗೊಲ್ಗೊಥಾ.”)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೇಸು ತಮ್ಮ ಶಿಲುಬೆಯನ್ನು ತಾವೇ ಹೊತ್ತುಕೊಂಡು “ತಲೆಬುರುಡೆಯ ಸ್ಥಳ” ಎಂಬ ಸ್ಥಳಕ್ಕೆ ಹೋದರು. ಅದು ಅರಮಾಯ ಭಾಷೆಯಲ್ಲಿ “ಗೊಲ್ಗೊಥಾ” ಎಂದು ಅರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಅಶೆ ತೆನಿ ಜೆಜುಕ್ ಘೆಟ್ಲ್ಯಾನಿ ಅನಿ ಜೆಜುನ್ ಅಪ್ನಾಚೊ ಕುರಿಸ್ ವಾವುನ್ ಘೆಟ್ಲ್ಯಾನ್, ಅನಿ ಬುರ್‍ಡ್ಯಾಚೊ ಜಾಗೊ ಮನ್ತಲ್ಯಾ ಜಾಗ್ಯಾಕ್ ಯೆವ್ನ್ ಪಾವ್ಲೊ ತಶೆ ಮಟ್ಲ್ಯಾರ್ ಹೆಬ್ರೆವ್ ಬಾಶೆತ್ ಗೊಲ್ಗೊಥಾ ಮನ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:17
23 ತಿಳಿವುಗಳ ಹೋಲಿಕೆ  

‘ಕಪಾಲ’ ಎಂಬ ಸ್ಥಳಕ್ಕೆ ಬಂದು ಸೇರಿದ ಮೇಲೆ ಯೇಸುಸ್ವಾಮಿಯನ್ನು ಶಿಲುಬೆಗೆ ಏರಿಸಿದರು. ಆ ಇಬ್ಬರು ಅಪರಾಧಿಗಳಲ್ಲಿ ಒಬ್ಬನನ್ನು ಅವರ ಬಲಗಡೆಯಲ್ಲೂ ಮತ್ತೊಬ್ಬನನ್ನು ಎಡಗಡೆಯಲ್ಲೂ ಶಿಲುಬೆಗೇರಿಸಿದರು.


ತನ್ನ ಶಿಲುಬೆಯನ್ನು ಹೊತ್ತು ನನ್ನ ಹಿಂದೆ ಬರದವನು ನನ್ನ ಶಿಷ್ಯನಾಗಲಾರನು.


ಸೈನಿಕರು ಯೇಸುಸ್ವಾಮಿಯನ್ನು ಕರೆದೊಯ್ಯುವಾಗ ಸಿರೇನ್ ಪಟ್ಟಣದ ಸಿಮೋನ ಎಂಬಾತ ಹಳ್ಳಿಯ ಕಡೆಯಿಂದ ಆ ಮಾರ್ಗವಾಗಿ ಬರುತ್ತಿದ್ದನು. ಅವನನ್ನು ಹಿಡಿದು ಶಿಲುಬೆಯನ್ನು ಹೊತ್ತು ಯೇಸುವಿನ ಹಿಂದೆ ಬರುವಂತೆ ಮಾಡಿದರು.


ಪಟ್ಟಣದಿಂದ ಹೊರಕ್ಕೆ ದಬ್ಬಿ ಅವನ ಮೇಲೆ ಕಲ್ಲು ತೂರಿದರು. ಸಾಕ್ಷಿಕೊಟ್ಟವರು ತಮ್ಮ ಬಟ್ಟೆಬರೆಗಳನ್ನು ತರುಣ ಸೌಲನ ವಶದಲ್ಲಿ ಇಟ್ಟಿದ್ದರು.


ಇಸ್ರಯೇಲರ ಅರಸನಾದ ಈ ಕ್ರಿಸ್ತನು ಶಿಲುಬೆಯಿಂದ ಇಳಿದುಬರಲಿ; ಆಗ ನೋಡಿ ನಂಬುತ್ತೇವೆ,” ಎಂದು ಪರಸ್ಪರ ಮಾತನಾಡಿಕೊಂಡರು. ಯೇಸುವಿನೊಡನೆ ಶಿಲುಬೆಗೇರಿಸಲಾಗಿದ್ದವರು ಸಹ ಅವರನ್ನು ಹಂಗಿಸುತ್ತಿದ್ದರು.


ಯೇಸುವಿನ ಶಿಲುಬೆಯ ಮೇಲ್ಗಡೆ, “ಇವನು ಯೆಹೂದ್ಯರ ಅರಸ” ಎಂಬ ಲಿಖಿತವಿತ್ತು.


ಯೇಸುಸ್ವಾಮಿ ಎಲ್ಲರನ್ನು ನೋಡಿ ಹೇಳಿದ್ದೇನೆಂದರೆ: “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ, ತನ್ನ ಶಿಲುಬೆಯನ್ನು ಅನುದಿನವೂ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ಅವರ ಮೇಲೆ ಹೊರಿಸಿದ್ದ ದೋಷಾರೋಪಣೆಯನ್ನು, ‘ಈತ ಯೆಹೂದ್ಯರ ಅರಸ’ ಎಂದು ಬರೆಯಲಾಗಿತ್ತು.


ಆಗ ಯೇಸು ಅವನನ್ನು ಮಮತೆಯಿಂದ ಈಕ್ಷಿಸಿ, “ನೀನು ಮಾಡಬೇಕಾದ ಕಾರ್ಯವೊಂದು ಬಾಕಿಯಿದೆ. ಹೋಗು, ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ, ಬಡಬಗ್ಗರಿಗೆ ದಾನಮಾಡು; ಸ್ವರ್ಗದಲ್ಲಿ ನಿನಗೆ ಸಂಪತ್ತು ಇರುತ್ತದೆ. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.


ಅನಂತರ ಯೇಸುಸ್ವಾಮಿ ತಮ್ಮ ಶಿಷ್ಯರನ್ನೂ ಜನರ ಗುಂಪನ್ನೂ ಒಟ್ಟಾಗಿ ತಮ್ಮ ಬಳಿಗೆ ಕರೆದು, “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ, ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ;


“ಈತ ಯೇಸು, ಯೆಹೂದ್ಯರ ಅರಸ” ಎಂದು ಬರೆದಿದ್ದ ದೋಷಾರೋಪಣೆಯ ಫಲಕವನ್ನು ಅವರ ಶಿರಸ್ಸಿನ ಮೇಲ್ಭಾಗದಲ್ಲಿ ಇಟ್ಟರು.


ಅನಂತರ ತಮ್ಮ ಶಿಷ್ಯರಿಗೆ ಹೀಗೆಂದರು: “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ತನ್ನ ಶಿಲುಬೆಯನ್ನು ಹೊತ್ತು ನನ್ನನ್ನು ಹಿಂಬಾಲಿಸದವನು ನನ್ನವನಾಗಲು ಯೋಗ್ಯನಲ್ಲ.


ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತರು. ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆಂಬುದಾಗಿ ಜನರ ಎದುರಿನಲ್ಲೆ ಅವನಿಗೆ ವಿರುದ್ಧ ಸಾಕ್ಷಿಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.


ಆ ದೇವದೂಷಕನನ್ನು ಪಾಳೆಯದ ಹೊರಗೆ ಒಯ್ಯಬೇಕು. ಅವನಾಡಿದ ದೂಷಣೆಯ ಮಾತುಗಳನ್ನು ಕೇಳಿದವರೆಲ್ಲರು ಅವನ ತಲೆಯ ಮೇಲೆ ಕೈಚಾಚಬೇಕು. ಅನಂತರ ಸಮಾಜದವರೆಲ್ಲರು ಅವನನ್ನು ಕಲ್ಲೆಸೆದು ಕೊಲ್ಲಬೇಕು.


ಅಬ್ರಹಾಮನು ದಹನಬಲಿಗೆ ಬೇಕಾದ ಕಟ್ಟಿಗೆಯನ್ನು ತನ್ನ ಮಗ ಇಸಾಕನ ಮೇಲೆ ಹೊರಿಸಿದನು; ಬೆಂಕಿಯನ್ನು ಹಾಗೂ ಕತ್ತಿಯನ್ನು ತನ್ನ ಕೈಯಲ್ಲೇ ತೆಗೆದುಕೊಂಡನು. ಇಬ್ಬರೂ ಅಲ್ಲಿಂದ ಮುಂದಕ್ಕೆ ಹೊರಟರು.


ಅಲ್ಲಿ, ‘ಕುರಿಬಾಗಿಲು’ ಎಂಬ ಸ್ಥಳದ ಬಳಿ ಐದು ಮಂಟಪಗಳಿಂದ ಕೂಡಿದ ಒಂದು ಕೊಳವಿದೆ. ಅದನ್ನು ಹಿಬ್ರಿಯ ಭಾಷೆಯಲ್ಲಿ ‘ಬೆತ್ಸಥ’ ಎಂದು ಕರೆಯುತ್ತಾರೆ.


ಅವರ ಆ ಕೂಗನ್ನು ಕೇಳಿ ಪಿಲಾತನು ಯೇಸುವನ್ನು ಹೊರಗೆ ಕರೆಯಿಸಿದನು. ‘ಹಾಸುಗಲ್ಲು’ ಎಂಬ ಕಟ್ಟೆಯ ಮೇಲಿದ್ದ ನ್ಯಾಯಪೀಠದ ಮೇಲೆ ಕುಳಿತುಕೊಂಡನು. ಯೆಹೂದ್ಯರ ಭಾಷೆಯಲ್ಲಿ ಆ ಸ್ಥಳಕ್ಕೆ ‘ಗಬ್ಬಥ’ ಎಂದು ಹೆಸರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು