ಯೋಹಾನ 19:31 - ಕನ್ನಡ ಸತ್ಯವೇದವು C.L. Bible (BSI)31 ಅಂದು ಪಾಸ್ಕ ಹಬ್ಬದ ಹಿಂದಿನ ದಿನ. ಮಾರನೆಯ ದಿನ ಸಬ್ಬತ್ ದಿನವೂ ದೊಡ್ಡ ಹಬ್ಬವೂ ಆಗಿತ್ತು. ಸಬ್ಬತ್ ದಿನದಂದು ಶವಗಳು ಶಿಲುಬೆಯ ಮೇಲೆ ತೂಗಾಡುವುದು ಸರಿಯಲ್ಲ ಎಂದುಕೊಂಡು ಶಿಲುಬೆಗೇರಿಸಲಾಗಿದ್ದವರ ಕಾಲುಗಳನ್ನು ಮುರಿದು ಅವರ ಶವವನ್ನು ಅಂದೇ ತೆಗೆಯಿಸಿಬಿಡಲು ಯೆಹೂದ್ಯರು ಪಿಲಾತನಿಂದ ಅಪ್ಪಣೆ ಕೇಳಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಅದು ಸಿದ್ಧತೆಯ ದಿನವಾದುದರಿಂದ ಯೆಹೂದ್ಯರು, ಸಬ್ಬತ್ ದಿನದಲ್ಲಿ ಮೃತದೇಹಗಳು ಶಿಲುಬೆಯ ಮೇಲೆ ಇರಬಾರದೆಂದು, ಪಿಲಾತನನ್ನು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಕೇಳಿಕೊಂಡರು, ಏಕೆಂದರೆ ಆ ಸಬ್ಬತ್ ದಿನವು ಬಹು ವಿಶೇಷವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಆ ಹೊತ್ತು ಸೌರಣೆಯ ದಿವಸವಾಗಿದ್ದದರಿಂದ ಯೆಹೂದ್ಯರು - ಸಬ್ಬತ್‍ದಿನದಲ್ಲಿ ಶವಗಳು ಶಿಲುಬೆಯ ಮೇಲೆ ಇರಬಾರದೆಂದು ಪಿಲಾತನನ್ನು - ಅವರ ಕಾಲುಗಳನ್ನು ಮುರಿಸಿ ಅವರನ್ನು ತೆಗೆಸಿಹಾಕಬೇಕೆಂಬದಾಗಿ ಕೇಳಿಕೊಂಡರು; ಯಾಕಂದರೆ ಆ ಸಬ್ಬತ್‍ದಿನವು ಬಹು ವಿಶೇಷವಾದದ್ದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಆ ದಿನವು ಸಿದ್ಧತೆಯ ದಿನವಾಗಿತ್ತು. ಮರುದಿನ ವಿಶೇಷವಾದ ಸಬ್ಬತ್‌ದಿನವಾಗಿತ್ತು. ಸಬ್ಬತ್‌ದಿನದಂದು ದೇಹಗಳು ಶಿಲುಬೆಯ ಮೇಲಿರುವುದು ಯೆಹೂದ್ಯರಿಗೆ ಇಷ್ಟವಿರಲಿಲ್ಲ. ಆದ್ದರಿಂದ ಅವರ ಕಾಲುಗಳನ್ನು ಮುರಿದು ಬೇಗನೆ ಸಾಯಿಸಲು ಆಜ್ಞಾಪಿಸಬೇಕೆಂಬುದಾಗಿ ಅವರು ಪಿಲಾತನನ್ನು ಕೇಳಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಅದು ಪಸ್ಕಹಬ್ಬದ ಸಿದ್ಧತೆಯ ದಿನವಾಗಿತ್ತು. ಮರುದಿನ ವಿಶೇಷ ಸಬ್ಬತ್ ದಿನದಲ್ಲಿ ದೇಹಗಳು ಶಿಲುಬೆಯ ಮೇಲೆ ಇರಬಾರದೆಂದು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಯೆಹೂದ್ಯ ನಾಯಕರು ಪಿಲಾತನನ್ನು ಕೇಳಿಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ತನ್ನಾ ಜುದೆವಾಂಚ್ಯಾ ಅದಿಕಾರ್‍ಯಾನಿ ಕುರ್ಸಾರ್ ಮಾರಲ್ಲ್ಯಾಂಚೆ ಡೊಕೆ ಮೊಡುನ್ ತೆಂಚಿ ಮಡಿ ಕುರ್ಸಾನಿ ವೈನಾ ಉತ್ರುಕ್ ಪಿಲಾತಾಕ್ನಾ ಪರ್‍ವಾನ್ಗಿ ಘೆಟ್ಲ್ಯಾನಿ. ತೆಚೆಸಾಟ್ನಿ ತೆನಿ ತೊ ದಿಸ್ ಸುಕ್ರಾರ್, ಅನಿ ಸಬ್ಬಾತಾಚಿ ದಿಸಿ ಮಡಿ ಕುರ್ಸಾ ವರ್ತಿ ಥವ್ತಲೊ ಮನ್ ತೆಂಕಾ ನತ್ತೊ, ಹಿ ಪರ್‍ವಾನ್ಗಿ ಮಾಗುನ್ ಘೆಟಲ್ಲ್ಯಾನಿ, ಅನಿ ಹ್ಯೊ ಸಬ್ಬಾತ್ ತರ್ ಲೈ ವಿಶೆಸ್ ರಿತಿಚೊ ಪವಿತ್ರ್ ಸಬ್ಬಾತ್ ಹೊತ್ತೊ. ಅಧ್ಯಾಯವನ್ನು ನೋಡಿ |