Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:41 - ಕನ್ನಡ ಸತ್ಯವೇದವು C.L. Bible (BSI)

41 ಯೇಸುವನ್ನು ಶಿಲುಬೆಗೇರಿಸಿದ ಸ್ಥಳದಲ್ಲಿ ಒಂದು ತೋಟವಿತ್ತು. ಆ ತೋಟದಲ್ಲಿ ಅದುವರೆಗೆ ಯಾರ ಶವವನ್ನೂ ಇಡದ ಹೊಸ ಸಮಾಧಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಆತನನ್ನು ಶಿಲುಬೆಗೆ ಹಾಕಿದ ಸ್ಥಳದಲ್ಲಿ ಒಂದು ತೋಟವಿತ್ತು ಮತ್ತು ಆ ತೋಟದಲ್ಲಿ ಒಂದು ಹೊಸ ಸಮಾಧಿ ಇತ್ತು. ಅದರಲ್ಲಿ ಅದುವರೆಗೂ ಯಾರನ್ನೂ ಇಟ್ಟಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಆತನನ್ನು ಶಿಲುಬೆಗೆ ಹಾಕಿದ ಸ್ಥಳದಲ್ಲಿ ಒಂದು ತೋಟವಿತ್ತು; ಆ ತೋಟದಲ್ಲಿ ಒಂದು ಹೊಸ ಸಮಾಧಿ ಇತ್ತು; ಅದರಲ್ಲಿ ಅದುವರೆಗೆ ಯಾರನ್ನೂ ಇಟ್ಟಿದ್ದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಯೇಸುವನ್ನು ಶಿಲುಬೆಯ ಮೇಲೆ ಕೊಂದ ಸ್ಥಳದಲ್ಲೇ ಒಂದು ತೋಟವಿತ್ತು. ಆ ತೋಟದಲ್ಲಿ ಒಂದು ಹೊಸ ಸಮಾಧಿಯಿತ್ತು. ಅದರಲ್ಲಿ ಹಿಂದೆಂದೂ ಯಾರನ್ನೂ ಸಮಾಧಿ ಮಾಡಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಯೇಸು ಶಿಲುಬೆಗೇರಿಸಿದ ಸ್ಥಳದಲ್ಲಿ ಒಂದು ತೋಟವಿತ್ತು. ಆ ತೋಟದಲ್ಲಿ ಯಾರನ್ನೂ ಇಡದೆ ಇದ್ದ ಒಂದು ಹೊಸ ಸಮಾಧಿಯಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ಜೆಜುಕ್ ಜಿವಾನಿ ಮಾರಲ್ಲ್ಯಾ ಜಾಗ್ಯಾಚ್ಯಾ ಜಗ್ಗೊಳ್ ಎಕ್ ಮ್ಹಳೊ ಹೊತ್ತೊ. ತ್ಯಾ ಮಳ್ಯಾತ್ ಅಜುನ್ ಪತರ್ ಕೊನಾಕ್ಬಿ ಮಾಟಿ ದಿ ನಸಲ್ಲಿ ಎಕ್ ಸಮಾದಿ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:41
7 ತಿಳಿವುಗಳ ಹೋಲಿಕೆ  

ತರುವಾಯ ಶರೀರವನ್ನು ಶಿಲುಬೆಯಿಂದ ಇಳಿಸಿ, ನಾರುಮಡಿವಸ್ತ್ರದಲ್ಲಿ ಸುತ್ತಿ ಸಮಾಧಿಯಲ್ಲಿ ಇಟ್ಟನು. ಬಂಡೆಯೊಂದರಲ್ಲಿ ಕೊರೆಯಲಾಗಿದ್ದ ಈ ಸಮಾಧಿಯಲ್ಲಿ ಅದುವರೆಗೆ ಯಾರನ್ನೂ ಭೂಸ್ಥಾಪನೆ ಮಾಡಿರಲಿಲ್ಲ.


ತನಗೆಂದು ಬಂಡೆಯಲ್ಲಿ ಕೊರೆಯಲಾಗಿದ್ದ ಹೊಸ ಸಮಾಧಿಯಲ್ಲಿ ಅದನ್ನು ಇರಿಸಿದನು. ಆ ಸಮಾಧಿಯ ದ್ವಾರಕ್ಕೆ ಒಂದು ದೊಡ್ಡ ಕಲ್ಲನ್ನು ಉರುಳಿಸಿ ಹೊರಟುಹೋದನು.


ಯೇಸು, “ಏಕಮ್ಮಾ ಅಳುತ್ತಿರುವೇ? ಏನನ್ನು ಹುಡುಕುತ್ತಿರುವೇ?’ ಎಂದು ಕೇಳಿದಾಗಲೂ ಮರಿಯಳು ಅವರು ತೋಟಗಾರನೆಂದು ಭಾವಿಸಿ, “ಅಯ್ಯಾ, ನೀವೇನಾದರೂ ಅವರನ್ನು ಕೊಂಡೊಯ್ದಿದ್ದರೆ ಎಲ್ಲಿ ಇಟ್ಟಿರುವಿರಿ, ಹೇಳಿ; ನಾನು ತೆಗೆದುಕೊಂಡು ಹೋಗುತ್ತೇನೆ,” ಎಂದು ಹೇಳಿದಳು.


ನಿನಗೇನು ಕೆಲಸವಿಲ್ಲಿ? ನಿನಗಾರಿಹರಿಲ್ಲಿ? ತೋಡಿಸಿಕೊಂಡಿರುವೆಯಾ ಗೂಡನ್ನಿಲ್ಲಿ? ಗೋರಿಯನ್ನು ಕೊರೆಯಿಸಿಕೊಂಡಿರುವೆಯಾ ಎತ್ತರದ ಬಂಡೆಯಲ್ಲಿ? ಕೆತ್ತಿಸಿಕೊಂಡಿರುವೆಯಾ ನಿನಗೊಂದು ನಿವಾಸವನಿಲ್ಲಿ?


ಅವನ ಸೇವಕರು ಅವನ ಶವವನ್ನು ರಥದಲ್ಲಿ ಹಾಕಿಕೊಂಡು ಮೆಗಿದ್ದೋವಿನಿಂದ ಜೆರುಸಲೇಮಿಗೆ ತಂದು ಅವನ ಸ್ವಂತ ಸಮಾಧಿಯಲ್ಲಿ ಇಟ್ಟರು. ಜನರು ಅವನ ಸ್ಥಾನದಲ್ಲಿ ಅವನ ಮಗ ಯೆಹೋವಾಹಾಜನನ್ನು ಅಭಿಷೇಕಿಸಿ ಅರಸನನ್ನಾಗಿ ಮಾಡಿದರು.


ಸಮಾಧಿಯು ಹತ್ತಿರದಲ್ಲೇ ಇದ್ದುದರಿಂದ ಹಾಗೂ ಮರುದಿನ ಪಾಸ್ಕಹಬ್ಬವಾದುದರಿಂದ ಯೇಸುವಿನ ಪಾರ್ಥಿವ ಶರೀರವನ್ನು ಅಲ್ಲೇ ಸಮಾಧಿಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು