Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:5 - ಕನ್ನಡ ಸತ್ಯವೇದವು C.L. Bible (BSI)

5 ಆಗ ಯೇಸು ಮುಳ್ಳಿನ ಕಿರೀಟವನ್ನೂ ಕೆನ್ನೇರಳೆ ಬಣ್ಣದ ಅಂಗಿಯನ್ನೂ ಧರಿಸಿದವರಾಗಿ ಹೊರಕ್ಕೆ ಬಂದರು. ಪಿಲಾತನು, “ಇಗೋ, ಈ ಮನುಷ್ಯ !” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೇಸು ಮುಳ್ಳಿನ ಕಿರೀಟವನ್ನು ಮತ್ತು ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ಧರಿಸಿದವನಾಗಿ ಹೊರಗೆ ಬಂದನು. ಆಗ ಪಿಲಾತನು ಅವರಿಗೆ, “ಇಗೋ, ಈ ಮನುಷ್ಯನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಯೇಸು ಮುಳ್ಳಿನ ಕಿರೀಟವನ್ನೂ ಕೆಂಪು ಒಲ್ಲಿಯನ್ನೂ ಧರಿಸಿದವನಾಗಿ ಹೊರಕ್ಕೆ ಬಂದನು. ಪಿಲಾತನು ಅವರಿಗೆ - ಇಗೋ, ಈ ಮನುಷ್ಯನು! ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಯೇಸು ಹೊರಗೆ ಬಂದನು. ಆತನ ತಲೆಯ ಮೇಲೆ ಮುಳ್ಳಿನ ಕಿರೀಟವನ್ನು ಇಟ್ಟಿದ್ದರು ಮತ್ತು ಕೆಂಪು ಅಂಗಿಯನ್ನು ಆತನಿಗೆ ತೊಡಿಸಿದ್ದರು. ಪಿಲಾತನು ಯೆಹೂದ್ಯರಿಗೆ, “ಇಗೋ, ಈ ಮನುಷ್ಯನು!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೇಸು ಮುಳ್ಳಿನ ಕಿರೀಟವನ್ನು ಮತ್ತು ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ಧರಿಸಿಕೊಂಡವರಾಗಿ ಹೊರಗೆ ಬಂದರು. ಪಿಲಾತನು ಅವರಿಗೆ, “ಇಗೋ, ಆ ಮನುಷ್ಯನು ಇವನೇ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಅಶೆ ಕಾಟ್ಯಾಂಚೆ ಕಿರಿಟ್ ಅನಿ ಜಾಂಬ್ಳೊ ಝಗೊ ನೆಸಲ್ಲೊ ಜೆಜು ಭಾಯ್ರ್ ಯೆಲೊ. ತನ್ನಾ ಪಿಲಾತಾನ್ ತೆಂಕಾ “ಬಗಾ! ಹ್ಯಾ ಮಾನ್ಸಾಕ್!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:5
8 ತಿಳಿವುಗಳ ಹೋಲಿಕೆ  

ಸೈನಿಕರೋ ಮುಳ್ಳಿನ ಕಿರೀಟವನ್ನು ಹೆಣೆದು ಅವರ ತಲೆಗೆ ಮುಡಿಸಿ, ಕೆನ್ನೇರಳೆ ಬಣ್ಣದ ಅಂಗಿಯನ್ನು ಅವರಿಗೆ ಉಡಿಸಿ, ಹತ್ತಿರ ಬಂದು,


ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ.


ಮರುದಿನ ಯೊವಾನ್ನನು, ತಾನಿದ್ದಲ್ಲಿಗೇ ಯೇಸು ಬರುತ್ತಿರುವುದನ್ನು ಕಂಡು, “ಇಗೋ ನೋಡಿ, ಬಲಿಯರ್ಪಣೆಗಾಗಿ ದೇವರು ನೇಮಿಸಿರುವ ಕುರಿಮರಿ; ಲೋಕದ ಪಾಪಗಳನ್ನು ಪರಿಹರಿಸುವವರು ಇವರೇ.


ಆಗಲಿ, ಸರ್ವೇಶ್ವರ ನಿಮಗೊಂದು ಗುರುತನ್ನು ಕೊಡುವರು. ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು. ಇಮ್ಮಾನುವೇಲ್ ಎಂದು ಆತನಿಗೆ ಹೆಸರಿಡುವಳು.


ಈಗಲಾದರೋ ಯಕೋಬ ವಂಶವೇ, ಇಸ್ರಯೇಲ್ ಸಂತಾನವೇ ಕೇಳು : ನಿನ್ನನ್ನು ಸೃಷ್ಟಿಸಿದ, ರೂಪಿಸಿದ ಸರ್ವೇಶ್ವರನ ನುಡಿಯನ್ನು ಕೇಳು; “ಭಯಪಡಬೇಡ, ನಿನ್ನನ್ನು ರಕ್ಷಿಸಿದಾತ ನಾನಲ್ಲವೆ? ನಿನ್ನನ್ನು ಹೆಸರು ಹಿಡಿದು ಕರೆದಾತ ನಾನಲ್ಲವೆ? ನೀನು ನನ್ನವನೇ ಅಲ್ಲವೆ?


ಪರ್ವತವನ್ನೇರು ಶುಭಸಂದೇಶಕಳಾದ ಸಿಯೋನೇ, ಧ್ವನಿಯೇರಿಸು, ಶುಭವಾರ್ತೆ ಸಾರಬಲ್ಲ ಜೆರುಸಲೇಮೇ, ಧ್ವನಿಯೇರಿಸು, ನಿರ್ಭಯದಿಂದ ಏರಿಸು ‘ಇಗೋ, ನಿಮ್ಮ ದೇವರು’ ಎಂದು ಜೂದ ನಗರಗಳಿಗೆ ಸಾರು.


ಹಾದುಹೋಗುವವರೇ, ನಿಮಗಿಲ್ಲವೆ ನನ್ನ ಚಿಂತೆ? ಸರ್ವೇಶ್ವರ ಸಿಟ್ಟುಗೊಂಡು ನನಗಿತ್ತಿರುವನು ಈ ವ್ಯಥೆ ! ಈ ಪರಿ ಸಂಕಟವನ್ನು ನೀವೆಲ್ಲಾದರು ನೋಡಿದ್ದುಂಟೆ?”


ಮುಳ್ಳಿನಿಂದ ಒಂದು ಕಿರೀಟವನ್ನು ಹೆಣೆದು, ಅವರ ತಲೆಯ ಮೇಲೆ ಇರಿಸಿದರು. ಕೈಗೆ ಒಂದು ಕೋಲನ್ನು ಕೊಟ್ಟರು. ಆಮೇಲೆ ಅವರ ಮುಂದೆ ಮೊಣಕಾಲೂರಿ, “ಯೆಹೂದ್ಯರ ಅರಸನಿಗೆ ಜಯವಾಗಲಿ!” ಎಂದು ಹೇಳಿ ಪರಿಹಾಸ್ಯಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು